ಬೆಂಗಳೂರು: ಮಾಜಿ ಕಾಂಗ್ರೆಸ್ ನಾಯಕ ಮತ್ತು ಕಲ್ಕಿಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಹಿಂದೂ ಧಾರ್ಮಿಕ (Kalki 2898 AD) ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬ್ಲಾಕ್ ಬಸ್ಟರ್ ಚಿತ್ರ ಕಲ್ಕಿ 2898 ಚಿತ್ರದ ನಿರ್ಮಾಪಕರು ಮತ್ತು ನಟರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಚಿತ್ರದಲ್ಲಿ ದೇವರನ್ನು ತಪ್ಪಾಗಿ ಚಿತ್ರಿಸಲಾಗಿದೆ ಮತ್ತು ಹಿಂದೂ ಪುರಾಣಗಳಿಗಿಂತ ವಿಭಿನ್ನವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ʻʻ”ನಿಮ್ಮ ಚಲನಚಿತ್ರವು ಭಗವಾನ್ ಕಲ್ಕಿಯ ಪರಿಕಲ್ಪನೆಯನ್ನು ಬದಲಾಯಿಸಿರುವಂತೆ ಇದೆ, ಹಿಂದೂ ಪುರಾಣ ಗ್ರಂಥಗಳಲ್ಲಿ ಬರೆದ ಮತ್ತು ವಿವರಿಸಿದ ಕಾರಣಗಳಿಗಾಗಿ, ಭಗವಾನ್ ಕಲ್ಕಿಯ ಕಥೆಯ ಚಿತ್ರಣ ಮತ್ತು ಚಿತ್ರಣವು ಸಂಪೂರ್ಣವಾಗಿ ತಪ್ಪಾಗಿದೆ. ಹಾಗಾಗಿ ಈ ಪವಿತ್ರ ಗ್ರಂಥಗಳಿಗೆ ಅಗೌರವವಾಗಿದೆ. ಕಲ್ಕಿಯ ಕಥೆಯನ್ನು ಸಂಪೂರ್ಣವಾಗಿ ತಪ್ಪಾಗಿ ನಿರೂಪಿಸಲಾಗಿದೆ. ಇದು ಪವಿತ್ರ ಗ್ರಂಥಗಳಿಗೆ ಅಪಮಾನ ಮಾಡಿದಂತಾಗುತ್ತದೆ.” ಎಂದು ನೋಟಿಸ್ ನೀಡಿದ್ದಾರೆ.
ಆಚಾರ್ಯ ಪ್ರಮೋದ್ ಕೃಷ್ಣಂ ಈ ಬಗ್ಗೆ ಮಾತನಾಡಿ “ಕಲ್ಕಿ ಅವತಾರವು ವಿಷ್ಣುವಿನ ಕೊನೆಯ ಅವತಾರವಾಗಿದೆ. ನಮ್ಮ ಹಲವಾರು ‘ಪುರಾಣ’ಗಳು ಆತನಿಗೆ ಸಮರ್ಪಿತವಾಗಿವೆ. ಪ್ರಧಾನಿ ಮೋದಿ ಅವರು ಫೆಬ್ರವರಿ 19 ರಂದು ಯುಪಿಯ ಸಂಭಾಲ್‌ನಲ್ಲಿ ಶ್ರೀ ಕಲ್ಕಿ ಧಾಮ್ ದೇವಾಲಯದ ಉದ್ಘಾಟನೆ ಮಾಡಿದರು. ಅಲ್ಲಿ ಭಗವಾನ್ ಕಲ್ಕಿ ಜನಿಸಲಿದ್ದಾರೆ. ಇಡೀ ಜಗತ್ತು ಅವನಿಗಾಗಿ ಕಾಯುತ್ತಿದೆ. ಆದರೆ ಈ ಚಿತ್ರವು ಜನರಿಗೆ ತಪ್ಪು ಸಂದೇಶವನ್ನು ನೀಡುತ್ತಿದೆʼʼಎಂದು ಎಂದು ಮಾಜಿ ಕಾಂಗ್ರೆಸ್ ನಾಯಕ ಹೇಳಿಕೆ ನೀಡಿದರು. ಆಚಾರ್ಯ ಪ್ರಮೋದ್ ಕೃಷ್ಣಂ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಉಜ್ಜವಲ್ ಆನಂದ್ ಶರ್ಮಾ ಅವರು ನೋಟಿಸ್ ನೀಡಿದ್ದಾರೆ.
ಇದನ್ನೂ ಓದಿ: Kalki 2898 AD: ನೀವಿಲ್ಲದೆ ನಾನು ಶೂನ್ಯ ಎಂದು ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟ ಪ್ರಭಾಸ್!
ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.
ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್ ಮಾಡಿದ ಸಿನಿಮಾವಾಗಿದೆ.