ಬೆಂಗಳೂರು: ʼಕಲ್ಕಿ 2898 ಎಡಿʼ (Kalki 2898 AD) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ ಈ ಸೈನ್ಸ್ ಫಿಕ್ಷನ್ ದಾಖಲೆಯ ಕಲೆಕ್ಷನ್ ಮಾಡಿದೆ. ಜಾಗತಿಕವಾಗಿ 700 ಕೋಟಿ ರೂ. ಬಾಕ್ಸ್ ಆಫೀಸ್ ಸಂಗ್ರಹ ಮಾಡಿದೆ. ಮೊದಲ ವಾರದಲ್ಲಿ ಭಾರತದಲ್ಲಿ 393.4 ಕೋಟಿ ರೂ ಗಳಿಕೆ ಕಂಡಿದೆ.
ಭಾರತದ ಒಟ್ಟು ಕಲೆಕ್ಷನ್ ಅಂದಾಜು 441.5 ಕೋಟಿ ರೂ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಂದ 168.5 ಕೋಟಿ ರೂಪಾಯಿಗಳನ್ನು ಸಂಗ್ರಹಿಸುವುದರೊಂದಿಗೆ, ಚಿತ್ರದ 7-ದಿನಗಳ ಒಟ್ಟು ಒಟ್ಟು ಮೊತ್ತ ಸುಮಾರು 610 ಕೋಟಿ ರೂ. ಕಲೆಕ್ಷನ್ ಆಗಿದೆ ಎಂದು ಅಂದಾಜಿಸಲಾಗಿದೆ. “ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಬ್ಲಾಕ್‌ಬಸ್ಟರ್” ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ. ʻʻಈ ಚಿತ್ರ ಎಷ್ಟು ಲಾಭ ಗಳಿಸುತ್ತದೆ ಎಂದು ನೋಡೋಣ” ಎಂದು ಇನ್ನೊಬ್ಬರು ಕಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ: Kalki 2898 AD: ಕಡಿಮೆ ಆಗಿಲ್ಲ `ಕಲ್ಕಿ’ ಅಬ್ಬರ; ಚಿತ್ರದ ಒಟ್ಟೂ ಗಳಿಕೆ ಎಷ್ಟು?
ಭರ್ಜರಿ ಗಳಿಕೆ
ಮೊದಲ ದಿನ ಭರ್ಜರಿ 191 ಕೋಟಿ ರೂ. ಗಳಿಸಿದ ʼಕಲ್ಕಿʼ ಆ ಮೂಲಕ ಸ್ಯಾಂಡಲ್‌ವುಡ್‌ನ ʼಕೆಜಿಎಫ್ 2ʼ (159 ಕೋಟಿ ರೂ.), ʼಸಲಾರ್ʼ (158 ಕೋಟಿ ರೂ.), ʼಲಿಯೋʼ (142.75 ಕೋಟಿ ರೂ.), ʼಸಾಹೋʼ (130 ಕೋಟಿ ರೂ.) ಮತ್ತು ʼಜವಾನ್ʼ (129 ಕೋಟಿ ರೂ.) ದಾಖಲೆ ಮುರಿದೆ. ಅದಾಗ್ಯೂ 223 ಕೋಟಿ ರೂ. ಕಲೆಕ್ಷನ್ ಮಾಡಿದ ʼಆರ್‌ಆರ್‌ಆರ್ʼ ಮತ್ತು 217 ಕೋಟಿ ರೂ. ಗಳಿಸಿದ ʼಬಾಹುಬಲಿ 2ʼ ಈಗಲೂ ಮೊದಲ ದಿನದ ಕಲೆಕ್ಷನ್ ವಿಚಾರದಲ್ಲಿ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿವೆ.
ಬಹುತಾರಾಗಣ
ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್ ಕಟ್ ಹೇಳಿರುವ ʼಕಲ್ಕಿʼಯಲ್ಲಿ ಬಹುತಾರಾಗಣವಿದೆ. ಪ್ರಭಾಸ್ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ತಾರೆಗಳಾದ ಕಮಲ್ ಹಾಸನ್, ಶೋಭನಾ ಮತ್ತಿತರರು ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ.