Site icon Vistara News

Kalki 2898 AD: 1,000 ಕೋಟಿ ರೂ. ಕಲೆಕ್ಷನ್‌ ಮಾಡಿದ `ಕಲ್ಕಿ 2898 ಎಡಿ’: ಪ್ರಭಾಸ್ ಹೊಸ ದಾಖಲೆ!

Kalki 2898 AD worldwide box office collection day 1000 crore

ಬೆಂಗಳೂರು: ನಾಗ್ ಅಶ್ವಿನ್ ನಿರ್ದೇಶನ ಪ್ರಭಾಸ್‌ ಅಭಿನಯದ `ಕಲ್ಕಿ 2898 ಎಡಿ‘ (Kalki 2898 AD) ವಿಶ್ವಾದ್ಯಂತ 1000 ಕೋಟಿ ರೂ. ಗಳಿಕೆ ಕಂಡಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಬಿಡುಗಡೆಯಾದ 15 ದಿನಗಳಲ್ಲಿ ವಿಶ್ವಾದ್ಯಂತ 1000 ಬಾಕ್ಸ್ ಆಫೀಸ್‌ ಕಲೆಕ್ಷನ್‌ ಮಾಡಿ ಮುನ್ನುಗ್ಗಿದೆ.

ಚಿತ್ರ 1000 ಕೋಟಿ ರೂ. ಕಲೆಕ್ಷನ್‌ ಮಾಡಿದೆ ಎಂದು ಕಲ್ಕಿ 2898 AD ಚಿತ್ರತಂಡ ಹಂಚಿಕೊಂಡಿದೆ. ಟ್ರೇಡ್ ವಿಶ್ಲೇಷಕ ರಮೇಶ್ ಬಾಲಾ ಅವರು ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ.ಕಲ್ಕಿ 2898 ಎಡಿ ಬಾಕ್ಸ್ ಆಫೀಸ್‌ನಲ್ಲಿ 1,000 ಕೋಟಿಗಳನ್ನು ದಾಟಿದೆ” ಎಂದು ಬರೆದಿದ್ದಾರೆ. ಜುಲೈ 8 ರಂದು, ಚಿತ್ರ ವಿಶ್ವಾದ್ಯಂತ 900 ಕೋಟಿ ರೂ. ದಾಟಿದೆ ಎಂದು ಅಧಿಕೃತ ವೈಜಯಂತಿ ಮೂವೀಸ್ ಹ್ಯಾಂಡಲ್‌ನಲ್ಲಿ ತಂಡವು ಹಂಚಿಕೊಂಡಿತ್ತು.

ಕಲ್ಕಿ 2898 ಎಡಿ ಜೂನ್ 27 ರಂದು ವಿಶ್ವಾದ್ಯಂತ ಬಿಡುಗಡೆಯಾಯಿತು. ಇದೀಗ ಶಂಕರ್ ಅವರ ಇಂಡಿಯನ್ 2 ಸಿನಿಮಾ ಇದೇ ವೇಳೆ ರಿಲೀಸ್‌ ಆಗಿದ್ದು , ಚಿತ್ರದ ಕಲೆಕ್ಷನ್‌ಗಳ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ನೋಡಬೇಕಾಗಿದೆ. ಇಂಡಿಯನ್ 2 ಸಿನಿಮಾದಲ್ಲಿ ಕಮಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Kalki 2898 AD: ‘ಪಿಕೆ’, ʻಗದರ್‌ʼ ಸಿನಿಮಾಗಳ ದಾಖಲೆ ಮುರಿದ ʻಕಲ್ಕಿ 2898 ಎಡಿʼ!

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

Exit mobile version