ಬೆಂಗಳೂರು: ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಮತ್ತು ಖ್ಯಾತ ನಿರ್ದೇಶಕ ಎಸ್‌ಎಸ್ ರಾಜಮೌಳಿ ( S.S. Rajamouli) ಅಭಿನಯದ ಮುಂಬರುವ ಚಿತ್ರದ ಬಗ್ಗೆ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಸಿನಿಮಾ ಇನ್ನೂ ಶುರುವಾಗದಿದ್ದರೂ, ಮಹೇಶ್ ಬಾಬು ಈಗಾಗಲೇ ತಮ್ಮ ಪಾತ್ರಕ್ಕೆ ಸಿದ್ಧರಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಗಡ್ಡ ಮತ್ತು ಉದ್ದನೆಯ ಕೂದಲಿನೊಂದಿಗೆ ಕಾಣಿಸಿಕೊಂಡಿದ್ದಾರೆ.
ಇತ್ತೀಚೆಗೆ ಮಹೇಶ್ ಬಾಬು ಅವರು ಕುಟುಂಬದ ಜೊತೆ ಜೈಪುರ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಈ ವೇಳೆ ಅವರು ಉದ್ದ ಕೂದಲಿನ ಗೆಪಟ್ನಲ್ಲಿ ಇರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ. ಮಹೇಶ್ ಬಾಬು ಅವರ ಗಡ್ಡದ ಲುಕ್ ಕೂಡ ಗಮನ ಸೆಳೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಮತ್ತು ವಿಡಿಯೋ ವೈರಲ್ ಆಗುತ್ತಿವೆ.
ಈ ಸಿನಿಮಾಗೆ ‘ಗೋಲ್ಡ್’ ಎಂದು ಹೆಸರು ಇಟ್ಟಿದ್ದಾರೆ ಎಂಬ ಗಾಸಿಪ್ ಇದೆ. ಆದರೆ ಆ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಸದ್ಯಕ್ಕೆ ಈ ಚಿತ್ರವನ್ನು ‘ಎಸ್ಎಸ್ಎಂಬಿ 29’ ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದೆ.
ಎಸ್‌ಎಸ್ ರಾಜಮೌಳಿ (SS Rajamouli) ಅವರು ಪತ್ನಿ ರಮಾ ರಾಜಮೌಳಿ ಅವರೊಂದಿಗೆ ಮಾರ್ಚ್ 18ರಂದು ಜಪಾನ್‌ನಲ್ಲಿ ‘ಆರ್‌ಆರ್‌ಆರ್’ ಪ್ರದರ್ಶನಕ್ಕೆ ಹಾಜರಾಗಿದ್ದರು. ಮತ್ತೊಮ್ಮೆ ಸಿನಿಮಾ ಸ್ಕ್ರೀನಿಂಗ್‌ಗಾಗಿ ನಿರ್ದೇಶಕ ರಾಜಮೌಳಿ ಅಲ್ಲಿಗೆ ಹೋಗಿದ್ದರು. ಅಭಿಮಾನಿಗಳೊಂದಿಗೆ ಸಂವಾದದ ಸಮಯದಲ್ಲಿ, ಅವರು ಮಹೇಶ್ ಬಾಬು ಅವರೊಂದಿಗಿನ ತಮ್ಮ ಮುಂಬರುವ ಚಿತ್ರದ ಬಗ್ಗೆ ಮಾತನಾಡಿದ್ದರು.
ಇದನ್ನೂ ಓದಿ: Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್ ಬಾಬು!
ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, “ನಮ್ಮ ಮುಂದಿನ ಚಿತ್ರದ ಸ್ಕ್ರಿಪ್ಟ್ ಕೆಲಸ ಮಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಮುಖ್ಯ ನಾಯಕ, ಅಂದರೆ ಮಹೇಶ್ ಬಾಬು ಅವರು ಮಾತ್ರ ಫಿಕ್ಸ್ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆʼʼ ಎಂದಿದ್ದರು
2022ರಲ್ಲಿ ತೆರೆಕಂಡ ʼಆರ್.ಆರ್.ಆರ್.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್.ಆರ್.ಆರ್.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್ ಅವರೇ ʼಎಸ್.ಎಸ್.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್.ಎಸ್.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.