Site icon Vistara News

Actor Nagarjuna: ವಿಶೇಷ ಚೇತನ ಅಭಿಮಾನಿಯನ್ನು ತಳ್ಳಿದ ನಾಗಾರ್ಜುನ ಬಾಡಿಗಾರ್ಡ್‌; ಕ್ಷಮೆ ಕೇಳಿದ ನಟ!

Nagarjuna apologises after bodyguard pushes differently abled fan

ಬೆಂಗಳೂರು: ನಟ ನಾಗಾರ್ಜುನ (Actor Nagarjuna) ಅವರು ತಮ್ಮ ಬಾಡಿಗಾರ್ಡ್‌ ವಿಶೇಷ ಚೇತನ ಅಭಿಮಾನಿಯನ್ನು ತಳ್ಳಿದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಕ್ಷಮೆಯಾಚಿಸಿದ್ದಾರೆ. ವೈರಲ್‌ ಆದ ವಿಡಿಯೊದಲ್ಲಿ ನಾಗಾರ್ಜುನ ಅವರು ತಮ್ಮ ಬಾಡಿಗಾರ್ಡ್‌ ಜತೆಗೆ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದರು. ಅವರ ಪಕ್ಕದಲ್ಲಿ ನಟ ಧನುಷ್ ಕೂಡ ಕಾಣಿಸಿಕೊಂಡಿದ್ದರು. ಹೀಗೆ ಬರುತ್ತಿರುವಾಗ ವಿಶೇಷ ಚೇತನ ಅಭಿಮಾನಿ ಒಮ್ಮೆಲೆ ನಾಗಾರ್ಜುನ ಕಡೆಗೆ ಸೆಲ್ಫಿ ಕೇಳಲು ಬಂದರು. ಆಗ ನಾಗಾರ್ಜುನ ಅವರ ಬಾಡಿಗಾರ್ಡ್‌ ಆತನನ್ನು ದೂರಕ್ಕೆ ತಳ್ಳಿದ್ದಾನೆ. ಆತ ಬೀಳುತ್ತಿದ್ದಂತೆ ಪಕ್ಕದಲ್ಲೇ ಇದ್ದ ಇತರೆ ಕೆಲಸಗಾರರು ಹಿಡಿದುಕೊಂಡಿದ್ದಾರೆ. ಆದರೆ ನಾಗಾರ್ಜುನ ಈ ಘಟನೆಯನ್ನು ಗಮನಿಸಿರಲಿಲ್ಲ. ಇದೀಗ ನಟ ಕ್ಷಮೆ ಕೇಳಿದ್ದಾರೆ.

“ಇದು ನನ್ನ ಗಮನಕ್ಕೆ ಬಂದಿದೆ. ಈ ರೀತಿ ಆಗಬಾರದಿತ್ತು. ಆ ವ್ಯಕ್ತಿಗೆ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಹೀಗಾಗದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆʼʼಎಂದು ಬರೆದುಕೊಂಡಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ನಾಗಾರ್ಜುನ ಅವರಿಗೆ ಸಖತ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. ವಿಡಿಯೋಗೆ ಪ್ರತಿಕ್ರಿಯಿಸಿದ ವ್ಯಕ್ತಿಯೊಬ್ಬರು, “ಆ ವ್ಯಕ್ತಿ ವಿಶೇಷ ಚೇತನ. ಅವರು ಎಷ್ಟು ಅವಮಾನ ಅನುಭವಿಸಿರಬೇಕು” ಎಂದು ಬರೆದಿದ್ದಾರೆ. ಇನ್ನೊಬ್ಬರು”ಸೆಲೆಬ್ರಿಟಿಗೆ ತುಂಬಾ ಹತ್ತಿರ ಬರುವ ಅಭಿಮಾನಿಗಳನ್ನು ನಿಭಾಯಿಸುವ ಕಲೆ ಗೊತ್ತಿರಬೇಕುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ಸಿನಿಮಾ ವಿಚಾರಕ್ಕೆ ಬಂದರೆ ಈ ವರ್ಷ ಸಂಕ್ರಾಂತಿ ಸಂಭ್ರಮದಲ್ಲಿ ನಾಗಾರ್ಜುನ ನಟನೆಯ ‘ನಾ ಸಾಮಿ ರಂಗ’ ಸಿನಿಮಾ ತೆರೆಗೆ ಬಂದಿತ್ತು. ಮೊದಲಿನಂತೆ ಈಗ ನಾಗ್ ಸಿನಿಮಾಗಳು ಸದ್ದು ಮಾಡುತ್ತಿಲ್ಲ. ಇದೀಗ ನಟ ತಮಿಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಧನುಷ್ ಜೊತೆ ‘ಕುಬೇರ’ ಎನ್ನುವ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡಕ್ಕೂ ಡಬ್ ಆಗಿ ಬಿಡುಗಡೆ ಆಗಲಿದೆ. ʻಕುಬೇರ’ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ, ಇದನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ. ಇತ್ತೀಚೆಗಷ್ಟೇ ಧನುಷ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಂಡಿತ್ತು. ಮಾತ್ರವಲ್ಲ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.ಸದ್ಯ ‘ಕುಬೇರ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಸೂಟಿಂಗ್‌ ಮುಕ್ತಾಯವಾಗುವ ನಿರೀಕ್ಷೆಯಿದೆ. ‘ಕುಬೇರ’ ತ್ರಿಭಾಷಾ ಚಿತ್ರವಾಗಿದ್ದು, ಏಕಕಾಲದಲ್ಲಿ ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರೀಕರಣವಾಗುತ್ತಿದೆ.

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯ ಸಿನಿಮಾ ಇದು.

Exit mobile version