Site icon Vistara News

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Nandamuri Balakrishna touch actress anjali back

ಬೆಂಗಳೂರು: ತೆಲುಗು ಸೂಪರ್‌ಸ್ಟಾರ್ ನಂದಮೂರಿ ಬಾಲಕೃಷ್ಣ (Nandamuri Balakrishna) ಇತ್ತೀಚೆಗೆ ತಮ್ಮ ಚಿತ್ರ `ಗ್ಯಾಂಗ್ಸ್ ಆಫ್ ಗೋದಾವರಿ’ (Gangs of Godavari) ಪ್ರಚಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು. ಈ ವಿಡಿಯೊ ಭಾರಿ ವೈರಲ್‌ ಆಗಿ, ಸಖತ್‌ ಟ್ರೋಲ್‌ ಆಗಿದ್ದರು ಬಾಲಯ್ಯ. ನಟಿ ಅಂಜಲಿ “ನಾವಿಬ್ಬರು ಗ್ರೇಟ್ ಫ್ರೆಂಡ್ಸ್” ಎಂದು ಹೇಳಿ ಆ ಚರ್ಚೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದರು. . ಆದರೆ ಇದೀಗ ಅದೇ ಕಾರ್ಯಕ್ರಮದ ಮತ್ತೊಂದು ವೀಡಿಯೊ ವೈರಲ್ ಆಗಿ ಮತ್ತೆ ಬಾಲಯ್ಯ ಟ್ರೋಲ್ ಆಗುವಂತಾಗಿದೆ. ವೇದಿಕೆಗೆ ಅಂಜಲಿ ಹೊರಟು ನಿಂತಾಗ ನಟ ಬಾಲಯ್ಯ ಆಕೆಯ ಹಿಂಬದಿಯನ್ನು ನಯವಾಗಿ ತಟ್ಟಿದ್ದಾರೆ ಎನ್ನಲಾಗಿದೆ.

ಕಾರ್ಯಕ್ರಮದ ವೇದಿಕೆ ಮುಂಭಾಗದಲ್ಲಿ ಬಾಲಕೃಷ್ಣ ಕುಳಿತಿದ್ದಾಗ ಅವರ ಕಾಲ ಬಳಿ ನೀರಿನ ಬಾಟಲ್‌ನಲ್ಲಿ ಮದ್ಯದ ರೀತಿಯ ಪಾನೀಯ ಇರುವುದು ಕಂಡುಬಂದಿತ್ತು. ಇದನ್ನು ನೋಡಿ ಅವರು ಕುಡಿದು ವೇದಿಕೆಯಲ್ಲಿ ಆ ರೀತಿ ನಡೆದುಕೊಂಡಿದ್ದಾರೆ ಎಂದು ಕೆಲವರು ಆರೋಪಿಸಿದ್ದರು. ಆದರೆ ಅದೆಲ್ಲಾ ಗ್ರಾಫಿಕ್ಸ್ ಎಂದು ಕಾರ್ಯಕ್ರಮದ ಆಯೋಜಕರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Nandamuri Balakrishna: ವೇದಿಕೆ ಮೇಲೆ ತಳ್ಳಿದ್ದ ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

‘ಗ್ಯಾಂಗ್ಸ್ ಆಫ್ ಗೋದಾವರಿ’ ಯ ಪ್ರೀ-ರಿಲೀಸ್ ಸಮಾರಂಭದಲ್ಲಿ (Vishwak Sen and Neha Shetty) ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು. ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯನ್ನು ತಳ್ಳಿದ್ದರು ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿದ್ದವು.

ವೈರಲ್‌ ಆದ ವಿಡಿಯೊದಲ್ಲಿ ವೇದಿಕೆಯ ಮೇಲೆ ನೇಹಾ ಶೆಟ್ಟಿ ಮತ್ತು ಅಂಜಲಿ ಅಕ್ಕ ಪಕ್ಕ ನಿಂತಿದ್ದರು. ನೇಹಾ ಅವರಿಗೆ ನಯವಾಗಿ ಪಕ್ಕಕ್ಕೆ ಸರಿಯಲು ಕೇಳುತ್ತಾರೆ. ಕೆಲವು ಕ್ಷಣಗಳ ನಂತರ, ಬಾಲಯ್ಯ ಅವರು ಅಂಜಲಿಯನ್ನು ದೂರ ತಳ್ಳುತ್ತಾರೆ, ಬಹುತೇಕ ನಟಿ ಬಿದ್ದೇ ಬಿಡುವಂತಿದ್ದರು. ಆಗ ನೇಹಾ ಅವರು ಅಂಜಲಿ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಬಳಿಕ ನಟಿಯರು ತಮಾಷೆಯಾಗಿ ಬಾಲಯ್ಯ ನೋಡಿ ನಕ್ಕಿದ್ದರು.

ಕಾರ್ಯಕ್ರಮದ ಕ್ಲಿಪ್ ಅನ್ನು ಹಂಚಿಕೊಂಡಿರುವ ಅಂಜಲಿ ಹೀಗೆ ಬರೆದುಕೊಂಡಿದ್ದರು “ಗ್ಯಾಂಗ್ಸ್ ಆಫ್ ಗೋದಾವರಿ ಪ್ರೀ-ರಿಲೀಸ್ ಈವೆಂಟ್‌ವನ್ನು ತಮ್ಮ ಉಪಸ್ಥಿತಿಯೊಂದಿಗೆ ಅಲಂಕರಿಸಿದ್ದಕ್ಕಾಗಿ ನಾನು ಬಾಲಕೃಷ್ಣ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಬಾಲಕೃಷ್ಣ ಅವರು ಮತ್ತು ನಾನು ಯಾವಾಗಲೂ ಪರಸ್ಪರ ಗೌರವವನ್ನು ಉಳಿಸಿಕೊಂಡಿದ್ದೇವೆ. ಬಹಳ ಹಿಂದಿನಿಂದಲೂ ನಾವಿಬ್ಬರು ಪರಸ್ಪರ ಉತ್ತಮ ಸ್ನೇಹ, ಗೌರವವನ್ನು ಹಂಚಿಕೊಂಡಿದ್ದೇವೆ ಎಂದು ಹೇಳುವುದಕ್ಕೆ ನಾನು ಬಯಸುತ್ತೇನೆ. ಅವರ ಜತೆ ವೇದಿಕೆ ಹಂಚಿಕೊಂಡಿದ್ದು ಅದ್ಭುತವಾಗಿತ್ತುʼʼಎಂದು ಬರೆದುಕೊಂಡಿದ್ದರು.

Exit mobile version