Site icon Vistara News

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

Pushpa 2 SOOSEKI Couple Song Lyrical Video out

ಬೆಂಗಳೂರು: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು. 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದೀಗ ಎರಡನೇ ಹಾಡು ಔಟ್‌ ಆಗಿದೆ. ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀವ್ಸ್‌ ಪಡೆದುಕೊಂಡಿದೆ.

ಸಾಮಿ ಹಾಡನ್ನೂ ಮೀರಿಸುವಂತಿದೆ ಸೂಸೇನೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಾಫಿ ಇದೆ.

6 ಭಾಷೆಗಳಲ್ಲಿಯೂ ಶ್ರೇಯಾ ಮೋಡಿ

ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಚಿತ್ರ ಬಿಡುಗಡೆ ಯಾವಾಗ?

ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು. ಸದ್ಯ ಅಭಿಮಾನಿಗಳು ಚಿತ್ರ ಬಿಡುಗಡೆ ದಿನಾಂಕವನ್ನು ಎದುರು ನೋಡುತ್ತಿದ್ದಾರೆ.

Exit mobile version