ಬೆಂಗಳೂರು: ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ʻಪುಷ್ಪ 2ʼ (Pushpa 2) ಸಿನಿಮಾದ ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಸೇರಿ 6 ಭಾಷೆಯಲ್ಲಿ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಸಾಮಾನ್ಯ ಕಾರ್ಮಿಕ ಪುಷ್ಪರಾಜ್ ಶ್ರೀಮಂತನಾಗಿ ಬೆಳೆದ ರೀತಿಯನ್ನು ಹಾಡಿನಲ್ಲಿ ಕಟ್ಟಿಕೊಡಲಾಗಿದೆ.
ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ ಎಂಬ ಡೈಲಾಗ್ ಫ್ಯಾನ್ಸ್ ಗೆ ಕಿಕ್ ಕೊಡ್ತಿದೆ. ಮೈತ್ರಿ ಮೂವೀ ಮೇಕರ್ಸ್ ದುಬಾರಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣ ಮಾಡಿದೆ.
ಇದು ಪ್ಯಾನ್ ಇಂಡಿಯಾ ಸಿನಿಮಾ. ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈಗ ಈ ಎಲ್ಲ ಭಾಷೆಗಳಲ್ಲೂ ‘ಪುಷ್ಪ ಪುಷ್ಪ..’ ಹಾಡನ್ನು ಬಿಡುಗಡೆ ಮಾಡಲಾಗಿದೆ. ಆಸ್ಕರ್ ಪ್ರಶಸ್ತಿ ಪುರಸ್ಕೃತ ಚಂದ್ರಬೋಸ್ ಅವರು ತೆಲುಗಿನಲ್ಲಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಕನ್ನಡ ವರ್ಷನ್ಗೆ ವರದರಾಜ್ ಚಿಕ್ಕಬಳ್ಳಾಪುರ ಅವರ ಸಾಹಿತ್ಯವಿದೆ. ಅಲ್ಲು ಅರ್ಜುನ್ ಗೆ ಜೊತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್ , ಡಾಲಿ ಧನಂಜಯ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಪುಷ್ಪ 2: ದಿ ರೂಲ್ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಇದನ್ನೂ ಓದಿ: Pushpa The Rule: ಬಿಗ್ ಅಪ್‌ಡೇಟ್ ಹಂಚಿಕೊಂಡ ʻಪುಷ್ಪ 2ʼ: ಮೇ 1ಕ್ಕೆ ತಂಡದಿಂದ ಗುಡ್ ನ್ಯೂಸ್!
ಭೂಷಣ್ ಕುಮಾರ್ ಸಂಸ್ಥೆಯು ಎಲ್ಲಾ ಭಾಷೆಗಳ ಸಂಗೀತ ಹಕ್ಕುಗಳಿಗಾಗಿ ಸುಮಾರು 60 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ವರದಿಯಾಗಿದೆ. ಈಗ ಚಿತ್ರದ ಆಡಿಯೊ ಹಕ್ಕುಗಳು ಬರೋಬ್ಬರಿ 60 ಕೋಟಿ ರೂ . ಮಾರಟವಾಗಿದೆ ಎಂದು ವರದಿಯಾಗಿದೆ.
ತೆಲುಗಿನ ಜತೆ ಕನ್ನಡ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲೂ ಹಾಡುಗಳು ಸಿದ್ಧವಾಗುತ್ತಿವೆ. ಈ ಎಲ್ಲ ಭಾಷೆಯ ಆಡಿಯೊ ಹಕ್ಕುಗಳನ್ನು ಟಿ-ಸಿರೀಸ್ ಸಂಸ್ಥೆ ಪಡೆದುಕೊಂಡಿದೆ. ದೇವಿ ಶ್ರೀ ಪ್ರಸಾದ್ ಅವರು ‘ಪುಷ್ಪ 2’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 2021ರಲ್ಲಿ ಬಿಡುಗಡೆ ಆದ ‘ಪುಷ್ಪ 1’ ಸಿನಿಮಾದ ಎಲ್ಲ ಹಾಡುಗಳು ಸೂಪರ್ ಹಿಟ್ ಆಗಿದ್ದವು.
`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!
ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್ ರಗಡ್ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.
ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.
ಸೆಟ್ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.