Bengaluru Water Crisis: ಬೆಂಗಳೂರು ನೀರಿನ ಸಮಸ್ಯೆ; ಕನ್ನಡದಲ್ಲೇ ಪರಿಹಾರ ಕೊಟ್ಟ ಮೆಗಾಸ್ಟಾರ್ ಚಿರಂಜೀವಿ! - Vistara News

ಟಾಲಿವುಡ್

Bengaluru Water Crisis: ಬೆಂಗಳೂರು ನೀರಿನ ಸಮಸ್ಯೆ; ಕನ್ನಡದಲ್ಲೇ ಪರಿಹಾರ ಕೊಟ್ಟ ಮೆಗಾಸ್ಟಾರ್ ಚಿರಂಜೀವಿ!

Bengaluru Water Crisis: ಸಿಲಿಕಾನ್ ಸಿಟಿಯ ನೀರಿನ ಸಮಸ್ಯೆ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ ಬಹಳ ಮುಖ್ಯ ಎಂದಿದ್ದಾರೆ ನಟ ಚಿರಂಜೀವಿ.

VISTARANEWS.COM


on

Bengaluru Water Crisis chiranjeevi post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕವು ಹಿಂದೆಂದೂ (Bengaluru Water Crisis) ಕಂಡರಿಯದ ಭೀಕರ ಬರಗಾಲಕ್ಕೆ ತುತ್ತಾಗಿದೆ. ಎಲ್ಲೆಲ್ಲೂ ನೀರಿಗೆ ಹಾಹಾಕಾರ (Water Crisis) ಶುರುವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಈ ಸಮಸ್ಯೆ (Bangalore Water Problem) ಮತ್ತಷ್ಟು ಉಲ್ಬಣಿಸಿದೆ. ಇದೀಗ ಸಿಲಿಕಾನ್ ಸಿಟಿಯ ನೀರಿನ ಸಮಸ್ಯೆ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ (actor chiranjeevi) ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ ಬಹಳ ಮುಖ್ಯ ಎಂದಿದ್ದಾರೆ ನಟ ಚಿರಂಜೀವಿ.

ನಟ ಚಿರಂಜೀವಿ ಟ್ವೀಟ್‌ನಲ್ಲಿ ʻʻಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ… ಬಹಳ ಮುಖ್ಯವಾದದ್ದು. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು. ನೀರಿನ ಕೊರತೆಯು ದೈನಂದಿನ ಜೀವನವನ್ನು ಕಷ್ಟಕರವಾಗಿಸುತ್ತದೆ. ಇಂದು ಬೆಂಗಳೂರಿನಲ್ಲಿ ನೀರಿನ ಕೊರತೆ ಎದುರಾಗಿದೆ. ನಾಳೆ ಎಲ್ಲಿ ಬೇಕಾದರೂ ಈ ರೀತಿಯ ಸಮಸ್ಯೆ ಸಂಭವಿಸಬಹುದು. ಆದ್ದರಿಂದ ನೀರನ್ನು ಸಂರಕ್ಷಿಸಲು ಸಹಾಯ ಮಾಡುವ ಮನೆಗಳನ್ನು ನಿರ್ಮಿಸುವ ಅಗತ್ಯವನ್ನು ಹೇಳಲು ಬಯಸುತ್ತೇನೆ. ಬೆಂಗಳೂರಿನ ನನ್ನ ಫಾರ್ಮ್ ಹೌಸ್‌ಗಾಗಿ ನಾನು ಮಾಡಿದ್ದನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ,” ಎಂದಿದ್ದಾರೆ.

ಇದನ್ನೂ ಓದಿ: Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್, ರಾಜ್ಯದ 60 ಕಡೆ ದಾಳಿ

ಚಿರಂಜೀವಿ ಟ್ವೀಟ್‌

20-36 ಅಡಿ ಆಳದ ರೀಚಾರ್ಜ್ ಬಾವಿಗಳನ್ನು ಸೈಟ್‌ನಾದ್ಯಂತ ಆಯಕಟ್ಟಿನ ಕಡೆಗಳಲ್ಲಿ ಸ್ಥಾಪಿಸಲಾಗಿದೆ. ರೀಚಾರ್ಜ್ ಬಾವಿಗಳಿಗೆ ಮೇಲ್ಮೈ ನೀರಿನ ಹರಿವನ್ನು ನಿರ್ದೇಶಿಸಲು ಸಾಕಷ್ಟು ಇಳಿಜಾರು ದಾರಿಗಳಿವೆ. ಪ್ರತಿಯೊಂದು ಬಾವಿಯೂ ಫಿಲ್ಟರ್ ವ್ಯವಸ್ಥೆಯನ್ನು ಹೊಂದಿದೆ. ನೀರನ್ನು ಸೋಸುವ ವ್ಯವಸ್ಥೆ , ಅಂದರೆ ವಿವಿಧ ಗಾತ್ರದ ಕಲ್ಲಿನ ಲೇಯರ್‌ಗಳು ಮತ್ತು ಮರಳಿನ ಪದರಗಳ ಮೂಲಕ ನೀರಿನ ಇಂಗುವಿಕೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ.

ರೀಚಾರ್ಜ್ ಬಾವಿ- ರೀಚಾರ್ಜ್ ಪಿಟ್‌ಗೆ ಹೋಲಿಸಿದರೆ – ಹೆಚ್ಚು ನೀರನ್ನು ಸಂಗ್ರಹಿಸಬಹುದು. ಮತ್ತು ಹೆಚ್ಚು ಆಳವಾದ ನೀರಿನಲ್ಲಿ ವಾಸಿಸುವ ಜಲಚರಗಳನ್ನು ಸಾಕುತ್ತದೆ. ತಳಾಧಾರದಲ್ಲಿನ ಸರಂಧ್ರ ಪದರಗಳ ಮೂಲಕ ನೀರನ್ನು ನಿಧಾನವಾಗಿ ಹರಿಯುವಂತೆ ಮಾಡುತ್ತದೆ.

ನಾನು ಫರ್ಮಾಕಲ್ಚರ್ ತತ್ವಗಳನ್ನು ಸಹ ಜಾರಿಗೆ ತಂದಿದ್ದೇನೆ. ಫರ್ಮಾಕಲ್ಚರ್ ಪರಿಸರವನ್ನು ಪುನರುಜ್ಜೀವನಗೊಳಿಸುವ ವೃತ್ತಾಕಾರದ ತತ್ತ್ವದ ಮೇಲೆ ಕಾರ್ಯನಿರ್ವಹಿಸುತ್ತದೆ. ಸ್ವಾವಲಂಬಿಯನ್ನಾಗಿ ಮಾಡುತ್ತದೆ. ಫರ್ಮಾಕಲ್ಚರ್‌ನ ಪ್ರಮುಖ ಫಲಿತಾಂಶವೆಂದರೆ ನೀರಿನ ಬೇಡಿಕೆಯಲ್ಲಿನ ಕಡಿತ. ಮಣ್ಣಿನಿಂದ ಆವಿಯಾಗುವ ನೀರಿನ ಪ್ರಮಾಣವನ್ನು ಕಡಿಮೆ ಮಾಡಲು ತೋಟದಲ್ಲಿ ಬಿದ್ದ ಎಲೆಗಳು ಮತ್ತು ಮರದ ತೊಗಟೆಗಳನ್ನು ಬಳಸಿ ಮಲ್ಚಿಂಗ್ ಮಾಡುವ ಮೂಲಕ ಇದನ್ನು ಸಾಧಿಸಲಾಗುತ್ತದೆ.

ಈ ಕ್ರಮಗಳನ್ನು ಕೈಗೊಳ್ಳುವ ಮೂಲಕ ನಾವು ನೀರನ್ನು ಸಂರಕ್ಷಿಸಬಹುದು ಮತ್ತು ಮಳೆ ನೀರು ಕೊಯ್ಲು ಉತ್ತಮಗೊಳಿಸಬಹುದು ಮತ್ತು ಪರಿಸರ ಸ್ನೇಹಿ ಮನೆಗಳನ್ನು ನಿರ್ಮಿಸಬಹುದು. ಆ ದೃಶ್ಯಗಳನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ.

1.05 ಲಕ್ಷ ದಂಡ ವಸೂಲಿ ಮಾಡಿದ ಜಲಮಂಡಳಿ

ಕುಡಿಯುವ ನೀರಿನ ಅಭಾವದ ಹಿನ್ನಲೆ ಕಾವೇರಿ ನೀರು ದುರುಪಯೋಗ ಮಾಡದಂತೆ ಜಲಮಂಡಳಿ ಸೂಚನೆ ನೀಡಿತ್ತು. ಆದಾಗ್ಯೂ ಹಲವೆಡೆ ನೀರಿನ ದುಂದುವೆಚ್ಚ ಮಾಡುವುದು ಕಂಡುಬರುತ್ತಿದೆ. ಕಾವೇರಿ ನೀರಿನಿಂದ ಕಾರು ತೊಳೆಯುವುದು, ಸ್ವಚ್ಛತೆ ಸೇರಿ ಅನ್ಯ ಉದ್ದೇಶಗಳಿಂದ ಕಾವೇರಿ ನೀರು ದುರುಪಯೋಗ ಮಾಡಿದವರಿಗೆ ಜುಲ್ಮಾನೆ ವಿಧಿಸಲಾಗಿದೆ.

ನೀರಿನ ದುರ್ಬಳಕೆ ಮಾಡಿದರೆ ಮೊದಲು ಕನಿಷ್ಠ 5,000 ರೂಪಾಯಿ ದಂಡವನ್ನು ವಿಧಿಸಲಾಗುವುದು. ಇದೇ ತಪ್ಪನ್ನು ಮತ್ತೆ ಮತ್ತೆ ಮಾಡಿದರೆ ಕನಿಷ್ಠ ದಂಡ ಶುಲ್ಕದ ಮೇಲೆ 500 ರೂಪಾಯಿ ಹೆಚ್ಚುವರಿ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಚ್ಚರಿಕೆ ನೀಡಿದೆ.

ಬೆಂಗಳೂರು ಜಲ ಮಂಡಳಿಯ ಎಚ್ಚರಿಕೆ ಏನು?

ಈ ಬಗ್ಗೆ ಬೆಂಗಳೂರು ಜಲ ಮಂಡಳಿ ಪ್ರಕಟಣೆಯನ್ನು ಹೊರಡಿಸಿದ್ದು, ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ. “ಬೆಂಗಳೂರು ಮಹಾನಗರದಲ್ಲಿ ಕಾಯಂ ನಿವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆ ಇದೆ ಎಂದು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯಕವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿತ ಕಂಡಿದೆ. ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Anupama Parameswaran: ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌: ನಟಿಯ ಲುಕ್‌ಗೆ ಫ್ಯಾನ್ಸ್‌ ಫಿದಾ!

Anupama Parameswaran: ಟಿಲ್ಲು ಸ್ಕ್ವೇರ್’ನಲ್ಲಿ ಅತ್ಯಂತ ಬೋಲ್ಡ್‌ ಆಗಿ ನಟಿಸಿದ್ದ ನಟಿ ಇದೀಗ ಸಾಫ್ಟ್‌ ಲುಕ್‌ನಲ್ಲಿ ಕಂಡಿದ್ದಾರೆ. ಅನುಪಮಾ ಅವರ ಮುಂದಿನ ಸಿನಿಮಾ ಬಗ್ಗೆ ಸಮಂತಾ ರುತ್ ಪ್ರಭು ಮತ್ತು ರಾಜ್ ಮತ್ತು ಡಿಕೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ʻಪರದಾʼ ಸಿನಿಮಾದಲ್ಲಿ ಮುಂದೆ ಅನುಪಮಾ ಕಾಣಿಸಿಕೊಳ್ಳುತ್ತಿದ್ದಾರೆ. ʻಪರದಾʼ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ ಆಗಿದೆ.

VISTARANEWS.COM


on

Anupama Parameswaran Paradha next
Koo

ಬೆಂಗಳೂರು: ನಟ ಸಾರ್ವಭೌಮʼ ಚಿತ್ರದ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಅಭಿನಯದ ʻಟಿಲ್ಲು ಸ್ಕ್ವೇರ್’ ಸಿನಿಮಾ 100 ಕೋಟಿ ರೂ. ಗಳಿಕೆ ಕಂಡಿದ್ದು ಗೊತ್ತೇ ಇದೆ. 2002ರಲ್ಲಿ ಬಂದಿದ್ದ ʻಡಿಜೆ ಟಿಲ್ಲು’ ಚಿತ್ರದ ಮುಂದುವರಿದ ಭಾಗ ಈ `ಟಿಲ್ಲು ಸ್ಕ್ವೇರ್’. ಸಿದ್ದು ಜೊನ್ನಲಗಡ್ಡ ( Siddhu Jonnalagadda ) ಈ ಚಿತ್ರದ ನಾಯಕ. ಸಿದ್ದು ಜೊನ್ನಲಗಡ್ಡ ಹಾಗೂ ನಟಿ ಅನುಪಮಾ ಪರಮೇಶ್ವರನ್ ಒಟ್ಟಾಗಿ ಕಾಣಿಸಿಕೊಂಡಿರುವ ‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ನಟಿ ಮೈ ಚಳಿ ಬಿಟ್ಟು ನಟಿಸಿದ್ದಾರೆ. ಚಿತ್ರತಂಡ ಇತ್ತೀಚೆಗೆ ಯಶಸ್ಸನ್ನು ಆಚರಿಸಿಕೊಂಡಿತ್ತು. ಸಿನಿಮಾ ಒಟಿಟಿಗೆ ಲಗ್ಗೆ ಈಗಾಗಲೇ ಇಟ್ಟಿದೆ. ಇದರ ಬೆನ್ನಲ್ಲೇ ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಹೊಸ ಅವತಾರದಲ್ಲಿ ಕಂಡಿದ್ದಾರೆ ಅನುಪಮಾ ಪರಮೇಶ್ವರನ್.

‘ಟಿಲ್ಲು ಸ್ಕ್ವೇರ್’ನಲ್ಲಿ ಅತ್ಯಂತ ಬೋಲ್ಡ್‌ ಆಗಿ ನಟಿಸಿದ್ದ ನಟಿ ಇದೀಗ ಸಾಫ್ಟ್‌ ಲುಕ್‌ನಲ್ಲಿ ಕಂಡಿದ್ದಾರೆ. ಅನುಪಮಾ ಅವರ ಮುಂದಿನ ಸಿನಿಮಾ ಬಗ್ಗೆ ಸಮಂತಾ ರುತ್ ಪ್ರಭು ಮತ್ತು ರಾಜ್ ಮತ್ತು ಡಿಕೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ʻಪರದಾʼ ಸಿನಿಮಾದಲ್ಲಿ ಮುಂದೆ ಅನುಪಮಾ ಕಾಣಿಸಿಕೊಳ್ಳುತ್ತಿದ್ದಾರೆ. ʻಪರದಾʼ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ ಆಗಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಅನುಪಮಾ ಕಂಡಿದ್ದಾರೆ. ಸೆರಗನ್ನು ತಲೆ ಮೇಲೆ ಹೊತ್ತು, ಮಹಿಳೆಯರ ಸಮ್ಮುಖದಲ್ಲಿ ನಿಂತಿದ್ದಾರೆ.

ಇದನ್ನೂ ಓದಿ: Anupama Parameswaran: ಅನುಪಮಾ ಪರಮೇಶ್ವರನ್‌ಗೆ ಜ್ಯೂ.ಎನ್‌ಟಿಆರ್‌ ಫ್ಯಾನ್ಸ್‌ನಿಂದ ಅವಮಾನ!

`ಬಂಡಿ’ ಸಿನಿಮಾ ಖ್ಯಾತಿಯ ಪ್ರವೀಣ್ ಕಂಡ್ರೇಗುಲಾ ನಿರ್ದೇಶನ ಪರಧಾ ಚಿತ್ರಕ್ಕಿದೆ. ಮಲಯಾಳಂ ನಟ ಹೃದಯಂನ ʻದರ್ಶನಾ ರಾಜೇಂದ್ರನ್ʼ ಮತ್ತು ಸಂಗೀತಾ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಆನಂದ ಮೀಡಿಯಾ ಅಡಿಯಲ್ಲಿ ವಿಜಯ್ ಡೊಂಕದ, ಶ್ರೀನಿವಾಸಲು ಪಿವಿ ಮತ್ತು ಶ್ರೀಧರ್ ಮಕ್ಕುವ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಗೋಪಿ ಸುಂದರ್ ಸಂಗೀತ ಸಂಯೋಜನೆ ಮಾಡಲಿದ್ದಾರೆ. ದೆಹಲಿ, ಹಿಮಾಚಲ ಪ್ರದೇಶ ಮತ್ತು ಕೆಲವು ಹಳ್ಳಿಗಳಲ್ಲಿ ಪರಧಾ ಚಿತ್ರೀಕರಣ ಮಾಡಲಾಗಿದೆ.

ಅನುಪಮಾ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಶೇರ್‌ ಮಾಡಿಕೊಂಡಿದ್ದಾರೆ, “ ಬ್ಲಾಕ್‌ಬಸ್ಟರ್ ಟಿಲ್ಲು ಸ್ಕ್ವೇರ್ ನಂತರ, ಈಗ ಪರಧಾ ಜೊತೆ ಬರುತ್ತಿದ್ದೇನೆ! ಹಿಂದೆಂದೂ ಕಾಣದಂತಹ ಅನುಭವವನ್ನು ನಿಮಗೆ ಈ ಸಿನಿಮಾ ಮೂಲಕ ಸಿಗಲಿದೆ ಎಂದು ಭರವಸೆ ನೀಡುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ಟಿಲ್ಲು ಸ್ಕ್ವೇರ್’ 2024, ಮಾರ್ಚ್ 29ರಂದು ರಿಲೀಸ್ ಆಗಿತ್ತು. ‘ಡಿಜೆ ಟಿಲ್ಲು’ 30 ಕೋಟಿ ರೂಪಾಯಿ ಲೂಟಿ ಮಾಡಿದ್ದರೆ, ‘ಟಿಲ್ಲು ಸ್ಕ್ವೇರ್’ ಬಾಕ್ಸಾಫೀಸ್‌ನಲ್ಲಿ ಬರೋಬ್ಬರು 125 ಕೋಟಿ ರೂಪಾಯಿ ದೋಚಿದೆ. ಈ ವರ್ಷದ ಟಾಲಿವುಡ್‌ನ ಮೋಸ್ಟ್ ಸಕ್ಸೆಸ್‌ಫುಲ್‌ ಸಿನಿಮಾ ಎನಿಸಿಕೊಂಡಿದೆ. ನೆಟ್‌ಫ್ಲಿಕ್ಸ್ ‘ಟಿಲ್ಲು ಸ್ಕ್ವೇರ್’ ಸಿನಿಮಾ ಖರೀದಿ ಮಾಡಿದೆ.

`ಟಿಲ್ಲು ಸ್ಕ್ವೇರ್’ ಒಳ್ಳೆಯ ಕಥಾಹಂದರ ಮತ್ತು ಆಕರ್ಷಕ ಪ್ರದರ್ಶನ ಪ್ರೇಕ್ಷಕರನ್ನು ಮೋಡಿ ಮಾಡಿತ್ತು.
ಟಿಲ್ಲು ಸ್ಕ್ವೇರ್‌ನ ನಿರ್ಮಾಪಕರ ಇತ್ತೀಚಿನ ವರದಿಗಳ ಪ್ರಕಾರ, ಚಿತ್ರವು ಈಗಾಗಲೇ ಕೇವಲ 9 ದಿನಗಳಲ್ಲಿ ವಿಶ್ವಾದ್ಯಂತ 100 ಕೋಟಿ ರೂಪಾಯಿಗಳನ್ನು ದಾಟಿದೆ. ತೆಲುಗು ಚಿತ್ರ ಟಿಲ್ಲು ಸ್ಕ್ವೇರ್ 100 ಕೋಟಿ ಗಳಿಸಿದ ಮೊದಲ ಹಾಸ್ಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ʻಜಾತಿ ರತ್ನಲುʼ ಸಿನಿಮಾ ಈ ಮುಂಚೆ ದಾಖಲೆ ಮಾಡಿತ್ತು.

ಟಿಲ್ಲು ಸ್ಕ್ವೇರ್ ಚಿತ್ರವನ್ನ ಮಲ್ಲಿಕ್ ರಾಮ್ ನಿರ್ದೇಶಿಸಿದ್ದಾರೆ. ಸೂರ್ಯದೇವರ ನಾಗ ವಂಶಿ ಹಾಗೂ ಸಾಯಿ ಸೌಜನ್ಯ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. `ಟಿಲ್ಲು ಸ್ಕ್ವೇರ್’ ಸಿನಿಮಾದಲ್ಲಿ ಸಖತ್ ಬೋಲ್ಡ್ ದೃಶ್ಯಗಳು ಇವೆ.

Continue Reading

ಟಾಲಿವುಡ್

Kalki 2898 AD: ಪ್ರಭಾಸ್, ದೀಪಿಕಾ, ಅಮಿತಾಭ್‌ ಮುಖ್ಯಭೂಮಿಕೆಯ ʻಕಲ್ಕಿ 2898 ADʼ ರಿಲೀಸ್‌ ಡೇಟ್‌ ಅನೌನ್ಸ್‌!

Kalki 2898 AD: ಪ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 AD) ಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನ್ನುವ ಖ್ಯಾತಿ ಈ ಸಿನಿಮಾಕ್ಕಿದೆ. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ.ಇತ್ತೀಚಿನ ವರದಿ ಪ್ರಕಾರ ಸಿನಿಮಾ ಬಿಡುಗಡೆ ದಿನಾಂಕವನ್ನು ರಿವೀಲ್‌ ಮಾಡುವುದಾಗಿ ವರದಿಯಾಗಿದೆ. ಜೂನ್ 27 ರಂದು ಬಿಡುಗಡೆ ದಿನಾಂಕವನ್ನು ಲಾಕ್ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರ ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು.

VISTARANEWS.COM


on

Kalki 2898 AD to release on this date
Koo

ಬೆಂಗಳೂರು: ಪ್ರಭಾಸ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ಕಲ್ಕಿ (Kalki 2898 AD) ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಈಗಾಗಲೇ ಅಮಿತಾಭ್ ಬಚ್ಚನ್ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ತಂಡ ರಿವೀಲ್ ಮಾಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchan) ಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಸಿನಿಮಾ ರಿಲೀಸ್‌ ಡೇಟ್‌ ಬಗ್ಗೆ ಸಖತ್‌ ಚರ್ಚೆಗಳು ಆಗುತ್ತಿವೆ. ಚಿತ್ರತಂಡ ಜೂನ್ 27ರಂದು ಸಿನಿಮಾ ಬಿಡುಗಡೆ ದಿನಾಂಕವನ್ನು ಲಾಕ್ ಮಾಡಿದೆ ಎಂದು ವರದಿಯಾಗಿದೆ.

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 AD) ಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನ್ನುವ ಖ್ಯಾತಿ ಈ ಸಿನಿಮಾಕ್ಕಿದೆ. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Kalki 2898 AD: ‘ಅಶ್ವತ್ಥಾಮ’ನಾಗಿ ಬಂದ ಅಮಿತಾಭ್‌: ಬಿಗ್‌ಬಿ ಲುಕ್ ಹೇಗಿದೆ?

ಏ.21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿತ್ತು. ಅಶ್ವತ್ಥಾಮನಾಗಿ ಅಮಿತಾಭ್​ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಅಮಿತಾಭ್‌ ಬಚ್ಚನ್ ಹಳದಿ ಬಟ್ಟೆಯನ್ನು ಧರಿಸಿದ್ದರು. ಗುಹೆಯಂತೆ ಕಾಣುವ ಶಿವಲಿಂಗದ ಮುಂದೆ ಪ್ರಾರ್ಥಿಸುತ್ತಿರುವುದನ್ನು ಕಾಣಬಹುದು. ಮಗುವೊಂದು ನೀನು ಯಾರು? ಎಂದು ಕೇಳಿದಾಗ ʻʻಪ್ರಾಚೀನ ಕಾಲದಿಂದಲೂ, ನಾನು ಅವತಾರದ ಆಗಮನಕ್ಕಾಗಿ ಕಾಯುತ್ತಿದ್ದೆ. ನಾನು ಗುರು ದ್ರೋಣರ ಮಗ. ಅಶ್ವತ್ಥಾಮ.”ಎಂದು ಹೇಳುತ್ತಾರೆ. ಈ ಮೂಲಕ ಅಮಿತಾಭ್‌ ಪಾತ್ರ ರಿವೀಲ್‌ ಆಗಿತ್ತು.

ಇತ್ತೀಚಿನ ವರದಿ ಪ್ರಕಾರ ಸಿನಿಮಾ ಬಿಡುಗಡೆ ದಿನಾಂಕವನ್ನು ರಿವೀಲ್‌ ಮಾಡುವುದಾಗಿ ವರದಿಯಾಗಿದೆ. ಜೂನ್ 27 ರಂದು ಬಿಡುಗಡೆ ದಿನಾಂಕವನ್ನು ಲಾಕ್ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರ ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಯಿತು.

ಇದನ್ನೂ ಓದಿ: Kalki 2898 AD: ‘ಅಶ್ವತ್ಥಾಮ’ನಾಗಿ ಬಂದ ಅಮಿತಾಭ್‌: ಬಿಗ್‌ಬಿ ಲುಕ್ ಹೇಗಿದೆ?

ಇದನ್ನೂ ಓದಿ: Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಕೆಲವು ದಿನಗಳ ಹಿಂದೆ ದೀಪಿಕಾ ಪಡುಕೋಣೆ, ಪ್ರಭಾಸ್‌, ಅಮಿತಾಬ್‌ ಬಚ್ಚನ್‌ ಅವರ ಫಸ್ಟ್‌ ಲುಕ್‌ ಅನ್ನು ರಿಲೀಸ್‌ ಮಾಡಲಾಗಿತ್ತು. ಇದು ಚಿತ್ರಪ್ರೇಮಿಗಳ ಗಮನ ಸೆಳೆದಿತ್ತು. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಪಾತ್ರ ಹೆಸರನ್ನೂ ರಿವೀಲ್‌ ಮಾಡಲಾಗಿತ್ತು. ಈ ಸಿನಿಮಾದಲ್ಲಿ ಪ್ರಭಾಸ್‌ ಭೈರವನಾಗಿ ಮಿಂಚಲಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ದುಬಾರಿ ಸಿನಿಮಾ

ʼಕಲ್ಕಿ 2898 ಎಡಿʼ ಈ ವರ್ಷದ ಅತೀ ಹೆಚ್ಚಿನ ಬಜೆಟ್‌ ಹೊಂದಿರುವ ಚಿತ್ರ ಎನಿಸಿಕೊಳ್ಳಲಿದೆ. ಈ ಚಿತ್ರದ ಬಜೆಟ್‌ ಬರೋಬ್ಬರಿ 600 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಅಂದರೆ ಇತ್ತೀಚಿನ ಬಹು ಕೋಟಿ ರೂ. ಬಜೆಟ್‌ನ ʼಸಲಾರ್‌ʼ (270 ಕೋಟಿ ರೂ.), ʼಅನಿಮಲ್‌ʼ (100 ಕೋಟಿ ರೂ.) ಮತ್ತು ʼಡಂಕಿʼ (140 ಕೋಟಿ ರೂ.) ಈ ಮೂರು ಚಿತ್ರಗಳ ಒಟ್ಟು ಬಜೆಟ್‌ಗಿಂತ ಜಾಸ್ತಿ. ಅಲ್ಲದೆ 2022ರಲ್ಲಿ ತೆರೆಕಂಡ ಬಾಲಿವುಡ್‌ ಚಿತ್ರ ʼಬಹ್ಮಾಸ್ತ್ರʼಕ್ಕಿಂತಲೂ (400 ಕೋಟಿ ರೂ.) ʼಕಲ್ಕಿʼಯ ಬಜೆಟ್‌ ಅಧಿಕ. ಹೀಗಾಗಿಯೇ ಈ ಚಿತ್ರದ ಮೇಲೆ ನಿರೀಕ್ಷೆ ಗರಿಗೆದರಿದೆ.

ಯಾವುದೇ ತೆಲುಗು ಸಿನಿಮಾ ರಿಲೀಸ್ ಆದರೂ, ಒಂದು ದಿನ ಮುಂಚಿತವಾಗಿ ಅಮೆರಿಕದಲ್ಲಿ ಪ್ರೀಮಿಯರ್ ನಡೆಯುತ್ತೆ. ‘ಕಲ್ಕಿ 2828 AD’ ಬಹುಕೋಟಿ ವೆಚ್ಚದ ಸಿನಿಮಾ ಆಗಿರುವುದರಿಂದ ಒಂದು ದಿನ ಮುಂಚಿತವಾಗಿ, ಅಂದರೆ, ಜೂನ್ 26ರಂದು ಅಮೆರಿಕದಲ್ಲಿ ತೆರೆಕಾಣಲಿದೆ ಎನ್ನಲಾಗಿದೆ.

Continue Reading

ಟಾಲಿವುಡ್

Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

Samantha Ruth Prabhu: ಸಮಂತಾ ರುತ್ ಪ್ರಭು ಅವರು ತಮ್ಮ ಮದುವೆಯ ಗೌನ್‌ಗೆ ಹೊಸ ಟಚ್‌ ಕೊಟ್ಟು ಧರಿಸಿದ್ದಾರೆ. ತನ್ನ ಬಿಳಿ ಲೇಸಿ ಮದುವೆಯ ಗೌನ್ ಕತ್ತರಿಸಿ ಹೊಸ ಟಚ್‌ ಕೊಟ್ಟು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ. ಸಮಂತಾ ಅವರ ಆಪ್ತ ಸ್ನೇಹಿತರಾದ ಡಿಸೈನರ್ ಕ್ರೇಶಾ ಬಜಾಜ್ ಅವರು ಈ ಗೌನ್‌ವನ್ನು ಸ್ಟ್ರಾಪ್‌ಲೆಸ್ ಡ್ರೆಸ್ ಆಗಿ ಪರಿವರ್ತಿಸಿದವರು. ಸಮಂತಾ ಅವರ ಮದುವೆಯ ಗೌನ್‌ ಕೂಡ ಇವರೇ ವಿನ್ಯಾಸಗೊಳಿಸಿದ್ದರು.

VISTARANEWS.COM


on

Samantha Ruth Prabhu repurposes her wedding gown
Koo

ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ ಅವರು ಶೋಭಿತಾ ಧೂಳಿಪಾಲ ಜತೆ ವೆಕೇಶನ್‌ ಮೂಡ್‌ನಲ್ಲಿರುವ ಫೋಟೊ ವೈರಲ್‌ ಆಗಿತ್ತು. ಇದೀಗ ಸಮಂತಾ ಅವರು ತಮ್ಮ ಮದುವೆಯ ಗೌನ್‌ ಹರಿದು ಕಪ್ಪು ಕಾಕ್ಟೈಲ್ ಗೌನ್ ಆಗಿ ( black strapless outfit) ಪರಿವರ್ತಿಸಿ ಧರಿಸಿದ್ದಾರೆ. ಮಾತ್ರವಲ್ಲ ಹೊಸ ಫೋಟೊ ( black cocktail gown ) ಹಂಚಿಕೊಂಡು ‘ಪ್ರೀತಿಯ ಗೌನ್’ ಎಂದು ಕ್ಯಾಪ್ಷನ್‌ ಕೂಡ ಕೊಟ್ಟಿದ್ದಾರೆ. ಈ ಹೊಸ ಗೌನ್‌ವನ್ನು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ.

ಸಮಂತಾ ರುತ್ ಪ್ರಭು ಅವರು ತಮ್ಮ ಮದುವೆಯ ಗೌನ್‌ಗೆ ಹೊಸ ಟಚ್‌ ಕೊಟ್ಟು ಧರಿಸಿದ್ದಾರೆ. ತನ್ನ ಬಿಳಿ ಲೇಸಿ ಮದುವೆಯ ಗೌನ್ ಕತ್ತರಿಸಿ ಹೊಸ ಟಚ್‌ ಕೊಟ್ಟು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ. ಈ ಹೊಸ ಉಡುಪನ್ನು ಧರಿಸಿ ಪೋಸ್‌ ಕೊಟ್ಟಿದ್ದಾರೆ ಸಮಂತಾ. ಇನ್‌ಸ್ಟಾದಲ್ಲಿ ಫೋಟೊಗಳನ್ನು ಹಂಚಿಕೊಂಡು ʻನನ್ನ ಪ್ರೀತಿಯ ಗೌನ್’ ಎಂದು ಸಮಂತಾ ಉಲ್ಲೇಖಿಸಿದ್ದಾರೆ.

ನಾಗ ಚೈತನ್ಯ ಅವರೊಂದಿಗೆ ಕ್ರಿಶ್ಚಿಯನ್ ಸಂಪ್ರದಾಯದಲ್ಲಿ (Christian wedding ceremony) ಮದುವೆಯಾಗುವಾಗ ಸಮಂತಾ ಈ ಬಿಳಿ ಗೌನ್ ಧರಿಸಿದ್ದರು. 2017 ರಲ್ಲಿ ಗೋವಾದಲ್ಲಿ ಕ್ರಿಶ್ಚಿಯನ್ ಮತ್ತು ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾಗಿದ್ದರು. ನಾಲ್ಕು ವರ್ಷಗಳ ನಂತರ, ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್‌ ಪಡೆದುಕೊಂಡರು. ಇದೀಗ ಅದೇ ಬಿಳಿ ಗೌನ್‌ ಅನ್ನು ಹೊಸ ರೂಪದಲ್ಲಿ ಮರು ಬಳಕೆ ಮಾಡಿದ್ದಾರೆ.

ಇದನ್ನೂ ಓದಿ: Samantha Ruth Prabhu: ಫಾಲೋವರ್ಸ್‌ಗಳನ್ನು ದಾರಿ ತಪ್ಪಿಸಿದ್ರಾ ಸಮಂತಾ? ವೈದ್ಯರಿಂದ ಸಖತ್‌ ಕ್ಲಾಸ್‌!

ಫೋಟೊ ಹಂಚಿಕೊಂಡ ಸಮಂತಾ ʻʻನಾನು ಇಂದು ಧರಿಸಿರುವ ಉಡುಗೆ ನನ್ನ ಪ್ರೀತಿಯ ಗೌನ್ ಆಗಿದೆ. ನನ್ನ ಹಳೆಯ ಬಟ್ಟೆಗಳನ್ನು ಮರುಬಳಕೆ ಮಾಡುವುದು ಮೊದಲಿಂದಲೂ ನನಗಿರುವ ಅಭ್ಯಾಸʼʼಎಂದು ಬರೆದುಕೊಂಡಿದ್ದಾರೆ. ಸಮಂತಾ ಅವರ ಆಪ್ತ ಸ್ನೇಹಿತರಾದ ಡಿಸೈನರ್ ಕ್ರೇಶಾ ಬಜಾಜ್ ಅವರು ಈ ಗೌನ್‌ವನ್ನು ಸ್ಟ್ರಾಪ್‌ಲೆಸ್ ಡ್ರೆಸ್ ಆಗಿ ಪರಿವರ್ತಿಸಿದವರು. ಸಮಂತಾ ಅವರ ಮದುವೆಯ ಗೌನ್‌ ಕೂಡ ಇವರೇ ವಿನ್ಯಾಸಗೊಳಿಸಿದ್ದರು.

ಸಿನಿಮಾ ವಿಚಾರಕ್ಕೆ ಬಂದರೆ, ಸಮಂತಾ ರುತ್ ಪ್ರಭು ‘ಸಿಟಾಡೆಲ್: ಹನಿ ಬನ್ನಿ’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ರಾಜ್ ಮತ್ತು ಡಿಕೆ ನಿರ್ದೇಶನದ ಈ ಸಿರೀಸ್‌ನಲ್ಲಿ ವರುಣ್ ಧವನ್ ಕೂಡ ಕಾಣಿಸಿಕೊಂಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಇದೀಗ ನಟನೆಗೆ ವಿರಾಮ ನೀಡಿ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ.

Continue Reading

South Cinema

Tamannaah Bhatia: ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ; ನಟಿ ತಮನ್ನಾಗೆ ಸಮನ್ಸ್‌!

Tamannaah Bhatia: ಏಪ್ರಿಲ್ 23ರಂದು ನಟ ಸಂಜಯ್ ದತ್ ಅವರಿಗೂ ಈ ಸಂಬಂಧ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಹಾಜರಾಗಿರಲಿಲ್ಲ. ತಾವು ಭಾರತದಲ್ಲಿ ಇಲ್ಲ ಎಂದು ವಿಚಾರಣೆಗೆ ಹಾಜಾರಾಗಲು ಹೊಸ ಡೇಟ್‌ ನೀಡಲು ಕೋರಿದ್ದರು. ಇದೀಗ ನಟಿ ತಮನ್ನಾಗೆ ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಆದೇಶ ನೀಡಲಾಗಿದೆ ಎನ್ನಲಾಗಿದೆ.

VISTARANEWS.COM


on

Tamannaah Bhatia Summoned in Illegal IPL Streaming Case
Koo

ಮುಂಬೈ: ಫೇರ್‌ಪ್ಲೇ ಆ್ಯಪ್‌ನಲ್ಲಿ ಅಕ್ರಮ ಐಪಿಎಲ್ ಪಂದ್ಯಗಳ ಸ್ಟ್ರೀಮಿಂಗ್ (Illegal IPL Streaming Case) ಪ್ರಕರಣದಲ್ಲಿ ಟಾಲಿವುಡ್‌ ನಟಿ ತಮನ್ನಾ ಭಾಟಿಯಾ (Tamannaah Bhatia) ಹೆಸರು ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯನ್ನು ಮಹಾರಾಷ್ಟ್ರ ಸೈಬರ್ ಸೆಲ್ (Maharashtra Cyber Cell ) ವಿಚಾರಣೆಗೆ ಕರೆಸಿದೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಆದೇಶ ನೀಡಲಾಗಿದೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಹೆಸರು ಕೂಡ ಈ ಮುಂಚೆ ಕೇಳಿಬಂದಿತ್ತು.

ಫೇರ್‌ಪ್ಲೇ ಆ್ಯಪ್‌ನಲ್ಲಿ (Fairplay App) ಐಪಿಎಲ್ 2023ರ ಅಕ್ರಮ ಸ್ಟ್ರೀಮಿಂಗ್‌ಗೆ ಸಂಬಂಧಿಸಿದಂತೆ ವಯಾಕಾಮ್‌ಗೆ ಕೋಟ್ಯಂತರ ರೂ. ನಷ್ಟ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸೈಬರ್ ಸೆಲ್‌ ನಟಿ ತಮನ್ನಾ ಭಾಟಿಯಾ ಅವರನ್ನು ವಿಚಾರಣೆಗೆ ಕರೆದಿದೆ. ಏಪ್ರಿಲ್ 29ರಂದು ಮಹಾರಾಷ್ಟ್ರ ಸೈಬರ್‌ಗೆ ಹಾಜರಾಗುವಂತೆ ನಟಿಗೆ ತಿಳಿಸಲಾಗಿದೆ ಎಂದು ಎಎನ್‌ಐ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಏಪ್ರಿಲ್ 23ರಂದು ನಟ ಸಂಜಯ್ ದತ್ ಅವರಿಗೂ ಈ ಸಂಬಂಧ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಹಾಜರಾಗಿರಲಿಲ್ಲ. ತಾವು ಭಾರತದಲ್ಲಿ ಇಲ್ಲ ಎಂದು ವಿಚಾರಣೆಗೆ ಹಾಜಾರಾಗಲು ಹೊಸ ಡೇಟ್‌ ನೀಡಲು ಕೋರಿದ್ದರು.

ಇದನ್ನೂ ಓದಿ: Tamannaah Bhatia : ಪಾಕ್​ ಕ್ರಿಕೆಟಿಗ ರಜಾಕ್ ಜತೆ ಚಿನ್ನದ ಮಳಿಗೆಗೆ ಹೋದ ಕಹಿ ಘಟನೆ ನೆನೆದ ತಮನ್ನಾ

ಫೇರ್ ಪ್ಲೇ ಪ್ಲಾಟ್‌ಫಾರ್ಮ್ ಬೆಟ್ಟಿಂಗ್‌ ಅಪ್ಲಿಕೇಶನ್‌ ಆಗಿದೆ. ವಯಾಕಾಮ್‌ 18 ಐಪಿಎಲ್‌ ಅಧಿಕೃತ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಬೆಟ್ಟಿಂಗ್ ಅಪ್ಲಿಕೇಶನ್ ಫೇರ್ ಪ್ಲೇ ಪ್ಲಾಟ್‌ಫಾರ್ಮ್ ಅಕ್ರಮವಾಗಿ ಪಂದ್ಯಗಳನ್ನು ಸ್ಟ್ರೀಮ್ ಮಾಡುತ್ತಿದೆ ಎಂದು ವಯಾಕಾಮ್‌ ಎಫ್‌ಐಆರ್‌ ದಾಖಲಿಸಿತ್ತು . ವಯಾಕಾಮ್‌ 18ಗೆ 100 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ವರದಿಯಾಗಿದೆ. ಎಫ್‌ಐಆರ್ ದಾಖಲಿಸಿದ ಬಳಿಕ ಬಾದ್‌ಶಾ, ಸಂಜಯ್ ದತ್, ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ತಮನ್ನಾ ಸೇರಿದಂತೆ ಹಲವಾರು ತಾರೆಯರನ್ನು ವಿಚಾರಣೆಗೆ ಕರೆಯಲಾಯಿದೆ ಎಂದು ವರದಿಯಾಗಿದೆ. ಡಿಸೆಂಬರ್ 2023 ರಲ್ಲಿ, ಬೆಟ್ಟಿಂಗ್ ಅಪ್ಲಿಕೇಶನ್‌ನ ಉದ್ಯೋಗಿಯನ್ನು ಬಂಧಿಸಲಾಯಿತ್ತು.

Continue Reading
Advertisement
Manjummel Boys
ಮಾಲಿವುಡ್13 mins ago

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

girl Saved Mother
ಪ್ರಮುಖ ಸುದ್ದಿ19 mins ago

Girl Saved Mother : ಬುದ್ಧಿವಂತ ಬಾಲಕಿ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಕಾಪಾಡಿದ 7 ವರ್ಷದ ಪುತ್ರಿ

ವಿದೇಶ32 mins ago

TikTok star: ಇರಾಕ್‌ನಲ್ಲಿ ಗುಂಡಿಕ್ಕಿ ಟಿಕ್‌ಟಾಕ್‌ ಸ್ಟಾರ್‌ನ ಭೀಕರ ಹತ್ಯೆ

Sahil Khan Arrested in Mahadev Betting App Case
ಬಾಲಿವುಡ್53 mins ago

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 hour ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ದೇಶ1 hour ago

Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

Car Accident
ಪ್ರಮುಖ ಸುದ್ದಿ1 hour ago

Car Accident : ಯಮವೇಗದಲ್ಲಿ ಬಂದ ಇನೋವಾ ಕಾರು ಪಲ್ಟಿ, ಯುವತಿ ಸಾವು

Manvita Kamath Marriage Details Future Husband Arun
ಸ್ಯಾಂಡಲ್ ವುಡ್2 hours ago

Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!

state JDS secretary R A Chabusab statement In Ripponpet
ಶಿವಮೊಗ್ಗ2 hours ago

Lok Sabha Election 2024: ಅತಿ ಹೆಚ್ಚು ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಗೆಲುವು: ಆರ್.ಎ. ಚಾಬುಸಾಬ್

Narendra Modi
ಪ್ರಮುಖ ಸುದ್ದಿ2 hours ago

Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 hour ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202418 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ22 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌