Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಪೋಸ್ಟ್‌ಗೆ ಪ್ರಧಾನಿ ಮೋದಿ ಮೆಚ್ಚುಗೆ! - Vistara News

ಟಾಲಿವುಡ್

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಪೋಸ್ಟ್‌ಗೆ ಪ್ರಧಾನಿ ಮೋದಿ ಮೆಚ್ಚುಗೆ!

Rashmika Mandanna: ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮೋದಿ ಸಾಧನೆಯನ್ನು ಕೊಂಡಾಡಿದ್ದರು. ಇದೀಗ ರಶ್ಮಿಕಾ ಶೇರ್‌ ಮಾಡಿಕೊಂಡಿರುವ ಪೋಸ್ಟ್‌ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಅವರ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಸಿನಿಮಾ ವಿಚಾರಕ್ಕೆ ಬಂದರೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ.

VISTARANEWS.COM


on

Rashmika Madanna Appreciation Post PM Modi Reacts
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಈ ಬಾರಿಯ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನದ ಹೊಸ್ತಿಲಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿವೃದ್ದಿಗೆ ಮತ ನೀಡಿ ಎಂದು ಹೇಳಿದ್ದರು. ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮೋದಿ ಸಾಧನೆಯನ್ನು ಕೊಂಡಾಡಿದ್ದರು. ಇದೀಗ ರಶ್ಮಿಕಾ ಶೇರ್‌ ಮಾಡಿಕೊಂಡಿರುವ ಪೋಸ್ಟ್‌ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಅವರ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೋದಿ ಪ್ರತಿಕ್ರಿಯೆ

ರಶ್ಮಿಕಾ ಮಂದಣ್ಣ ಸೇತುವೆ ಕುರಿತು ʻʻದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ… ಪಶ್ಚಿಮ ಭಾರತದಿಂದ ಪೂರ್ವ ಭಾರತಕ್ಕೆ… ಜನರನ್ನು ಸಂಪರ್ಕಿಸುತ್ತಿದೆ, ಹೃದಯಗಳನ್ನು ಸಂಪರ್ಕಿಸುತ್ತಿದೆʼʼಎಂದು ವಿಡಿಯೊವನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಇದೀಗ ಪ್ರಧಾನಿ ಮೋದಿ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿ, “ಖಂಡಿತವಾಗಿಯೂ! ಜನರನ್ನು ಸಂಪರ್ಕಿಸುವುದು ಮತ್ತು ಅವರ ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದು ಬೇರೇನೂ ಇಲ್ಲ.”ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

ರಶ್ಮಿಕಾ ವಿಡಿಯೊದಲ್ಲಿ ಏನಿದೆ?

“ಕೇವಲ 7 ವರ್ಷಗಳಲ್ಲಿ ಈ ಭವ್ಯವಾದ ಅದ್ಭುತವನ್ನು ನಿರ್ಮಿಸಿದ್ದೇವೆ. ಅಟಲ್ ಸೇತು ಭವಿಷ್ಯದ ಬಾಗಿಲುಗಳನ್ನು ಎಷ್ಟು ಬಲವಾಗಿ ತಟ್ಟಿದ್ದಾರೆ ಎಂದರೆ ಭಾರತಕ್ಕೆ ಹೊಸ ಬಾಗಿಲುಗಳು ತೆರೆದಿವೆ. ಅಟಲ್ ಸೇತು ಸೇತುವೆ ಅಷ್ಟೇ ಅಲ್ಲ ಯುವ ಭಾರತಕ್ಕೆ ಗ್ಯಾರಂಟಿ. ನಮ್ಮ ರಾಷ್ಟ್ರವನ್ನು ಈಗ ತಡೆಯಲಾಗದು. ನೀವು ಇಂತಹ 100ರಷ್ಟು ಅಟಲ್ ಸೇತು ಸೇತುವೆಗಳನ್ನು ಪಡೆಯಲು ಬಯಸುವಿರಾ? ಎಚ್ಚೆತ್ತುಕೊಂಡು ಅಭಿವೃದ್ಧಿಗಾಗಿ ಮತ ಚಲಾಯಿಸಿ’ ಎಂದು ರಶ್ಮಿಕಾ ವಿಡಿಯೊದಲ್ಲಿ ಹೇಳಿದ್ದರು.

ರಶ್ಮಿಕಾ ಸಾಥ್‌

ಈ ಮುಂಚೆ ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿ “ಎರಡು ಗಂಟೆಗಳ ಪ್ರಯಾಣವನ್ನು 20 ನಿಮಿಷಗಳಲ್ಲಿ ಮಾಡಬಹುದು. ಹಾಗೆ, ನೀವು ಅದನ್ನು ನಂಬುವುದಿಲ್ಲ! ಈ ರೀತಿಯ ಏನಾದರೂ ಸಾಧ್ಯ ಎಂದು ಯಾರು ಭಾವಿಸಿದ್ದರು. ಮುಂಬೈಯಿಂದ ಮುಂಬೈಗೆ, ಗೋವಾದಿಂದ ಮುಂಬೈವರೆಗೆ ಹಾಗೂ ಬೆಂಗಳೂರುನಿಂದ ಮುಂಬೈವರೆಗೆ ಎಲ್ಲಾ ಪ್ರಯಾಣಗಳನ್ನು ತುಂಬಾ ಸುಲಭವಾಗಿ ಮಾಡಲಾಗಿದೆ. ಅದೂ ಕೂಡ ಅದ್ಭುತ ಮೂಲಸೌಕರ್ಯದೊಂದಿಗೆ ಇದು ನನಗೆ ಹೆಮ್ಮೆ ತರುತ್ತದೆ” ಎಂದು ರಶ್ಮಿಕಾ ಹೇಳಿದ್ದರು.

ರಶ್ಮಿಕಾ ಮಾತು ಮುಂದುವರಿಸಿ ʻʻಕಳೆದ 10 ವರ್ಷಗಳಲ್ಲಿ ನಮ್ಮ ದೇಶದ ಅಭಿವೃದ್ಧಿ ಗಮನಿಸಿದರೆ ಇನ್ನು ತಡೆಯಲು ಸಾಧ್ಯವಿಲ್ಲ. “ಈಗ ಭಾರತ ಯಾವುದಕ್ಕೂ ನೋ ಎನ್ನುವುದಿಲ್ಲ. ನಮ್ಮ ದೇಶದ ಮೂಲಸೌಕರ್ಯ, ಯೋಜನೆ, ರಸ್ತೆ ಯೋಜನೆ ಅದ್ಭುತವಾಗಿದೆ. ಈಗ ಇದು ನಮ್ಮ ಸಮಯ ಎಂದು ನಾನು ಭಾವಿಸುತ್ತೇನೆ! ಏಳು ವರ್ಷಗಳಲ್ಲಿ 20 ಕಿ.ಮೀ ಸೇತುವೆ ನಿರ್ಮಾಣವಾಗಿದೆ. ಚೆನ್ನಾಗಿಯೂ ಇದೆ. ಇದನ್ನು ನೋಡಿ ನನಗೆ ಮಾತೇ ಬರುತ್ತಿಲ್ಲ” ಎಂದು ಹೇಳಿದ್ದರು.

ಸಿನಿಮಾ ವಿಚಾರಕ್ಕೆ ಬಂದರೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Pushpa 2: ಅಗಸ್ಟ್ 15 ರಂದು ರಿಲೀಸ್‌ ಆಗ್ತಿಲ್ಲ ಪುಷ್ಪ 2; ಮತ್ತೆ ಶುರುವಾಯ್ತು ಚರ್ಚೆ!

Pushpa 2: 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ.

VISTARANEWS.COM


on

Pushpa 2 Allu Arjun postponed
Koo

ಬೆಂಗಳೂರು: ಅಗಸ್ಟ್ 15 ರಂದು ಬಿಡುಗಡೆಯಾಗಬೇಕಿದ್ದ ಅಲ್ಲು ಅರ್ಜುನ್ ಅವರ ಬಹು ನಿರೀಕ್ಷಿತ ಸೀಕ್ವೆಲ್ ‘ಪುಷ್ಪ: ದಿ ರೂಲ್’ (Pushpa 2) ಅನ್ನು ಮುಂದೂಡಲಾಗಿದೆ ಎಂದು ತೆಲು ಮಾಧ್ಯಮಗಳು ವರದಿ ಮಾಡಿವೆ. ನಿರ್ದೇಶಕ ಸುಕುಮಾರ್ ಇನ್ನೂ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ನಿರತರಾಗಿರುವುದರಿಂದ ಸಿನಿಮಾ ರಿಲೀಸ್‌ ಆಗೋದು ಕಷ್ಟ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಇನ್ನೂ ಒಂದು ತಿಂಗಳ ಶೂಟಿಂಗ್ ಬಾಕಿಯಿದ್ದು ಜುಲೈ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಗುರಿಯನ್ನು ಸುಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ. ಅಗಸ್ಟ್ 15 ರಂದು ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಕೂಡ ಬಿಡುಗಡೆಗೊಳ್ಳುತ್ತಿದೆ. ಈ ಮೊದಲು, ‘ಖೇಲ್ ಖೇಲ್ ಮೇ’ ಸೆಪ್ಟೆಂಬರ್ 6 ರಂದು ಅದ್ಧೂರಿಯಾಗಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀವ್ಸ್‌ ಪಡೆದುಕೊಂಡಿದೆ.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

ಪುಷ್ಪ 2ʼ ಸಿನಿಮಾದಲ್ಲಿ ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು.

Continue Reading

ಸಿನಿಮಾ

Viral Video: ಪುಷ್ಪ 2 ಚಿತ್ರದ ‘ಅಂಗಾರನ್’ ಹಾಡಿಗೆ ಪತ್ನಿ ಜೊತೆ ಸ್ಟೆಪ್‌ ಹಾಕಿದ ವಿಶೇಷ ಚೇತನ

Viral Video: ಅಲ್ಲು ಅರ್ಜುನ್ ಅವರ ಮುಂದಿನ ಚಿತ್ರ ‘ಪುಷ್ಪ 2’ ಹಾಡು ಈಗ ಸಖತ್ ವೈರಲ್ ಆಗಿದೆ. ಮಧ್ಯ ಪ್ರದೇಶದ ಓಂಪ್ರಕಾಶ್ ಪರಸ್ತೆ ಮತ್ತು ಅವರ ಪತ್ನಿ ರಂಬಾಯಿ ಅಂಗಾರನ್ ಹಾಡಿಗೆ ಕುಣಿದ ವಿಡಿಯೊ ಎಲ್ಲರ ಮೆಚ್ಚುಗೆ ಗಳಿಸಿದೆ. ಅಲ್ಲು ಅರ್ಜುನ್ ಅವರ ಮುಂದಿನ ಚಿತ್ರ ‘ಪುಷ್ಪ 2’ ಸದ್ಯದಲ್ಲಿಯೇ ಥಿಯೇಟರ್‌ಗೆ ಬರಲು ಸಿದ್ಧವಾಗಿದೆ. ಆಗಸ್ಟ್ 15ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಈ ಚಿತ್ರದ ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಚಿತ್ರದ ‘ಪುಷ್ಪ ಪುಷ್ಪ ಪುಷ್ಪರಾಜ್ ‘ ಹಾಡು ಜನಮೆಚ್ಚುಗೆ ಪಡೆದ ನಂತರ ಇದೀಗ ಮತ್ತೊಂದು ಹಾಡು ‘ಅಂಗಾರನ್’ ಜನರನ್ನು ಆಕರ್ಷಿಸುತ್ತಿದೆ.

VISTARANEWS.COM


on

Viral Video
Koo

ಬೆಂಗಳೂರು: ಅಲ್ಲು ಅರ್ಜುನ್ ಅವರು ಟಾಲಿವುಡ್‌ನ ನಟ. ಅವರು ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಇನ್ನು ಅವರು ಮಾಡಿದ ಚಿತ್ರ ಯಾವಾಗಲೂ ಸೂಪರ್ ಹಿಟ್ ಆಗುತ್ತದೆ. ಹಾಗೇ ಅವರ ಚಿತ್ರದಲ್ಲಿ ಬರುವ ಹಾಡುಗಳು ಕೂಡ ಸೂಪರ್ ಹಿಟ್ ಆಗುತ್ತದೆ. ಅದು ಜನರ ಮನಸ್ಸಿನಲ್ಲಿ ಸದಾ ನೆನಪಿನಲ್ಲಿರುತ್ತದೆ. ಇದೀಗ ಅವರ ‘ಪುಷ್ಪ 2’ ಚಿತ್ರವೊಂದರ ಹಾಡಿಗೆ ದಂಪತಿ ನೃತ್ಯ ಮಾಡಿದ್ದು, ಆ ವಿಡಿಯೊ ಸಖತ್ ವೈರಲ್ (Viral Video) ಆಗಿದೆ.

ಅಲ್ಲು ಅರ್ಜುನ್ ಅವರ ಮುಂದಿನ ಚಿತ್ರ ‘ಪುಷ್ಪ 2’ ಸದ್ಯದಲ್ಲಿಯೇ ಥಿಯೇಟರ್‌ಗೆ ಬರಲು ಸಿದ್ಧವಾಗಿದೆ. ಆಗಸ್ಟ್ 15ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಈ ಚಿತ್ರದ ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಚಿತ್ರದ ‘ಪುಷ್ಪ ಪುಷ್ಪ ಪುಷ್ಪರಾಜ್ ‘ ಹಾಡು ಜನಮೆಚ್ಚುಗೆ ಪಡೆದ ನಂತರ ಇದೀಗ ಮತ್ತೊಂದು ಹಾಡು ‘ಅಂಗಾರನ್’ ಜನರನ್ನು ಆಕರ್ಷಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡಿಗೆ ಸಂಬಂಧಿಸಿದ ರೀಲ್ ಗಳು ಹರಿದಾಡುತ್ತಿದೆ. ಈ ನಡುವೆ ಮಧ್ಯ ಪ್ರದೇಶದ ಗಂಡ ಮತ್ತು ಹೆಂಡಿತಿ ಇಬ್ಬರು ಈ ಹಾಡಿಗೆ ಸ್ಟೆಪ್‌ ಹಾಕಿದ ವಿಡಿಯೊ ವೈರಲ್ ಆಗುತ್ತಿದೆ.

ಓಂಪ್ರಕಾಶ್ ಪರಸ್ತೆ ಮತ್ತು ಅವರ ಪತ್ನಿ ರಂಬಾಯಿ ಅಂಗಾರನ್ ಹಾಡಿಗೆ ಕುಣಿದ ವಿಡಿಯೊ ವೈರಲ್ ಆಗಿದೆ. ಓಂಪ್ರಕಾಶ್ ಒಬ್ಬರು ದಿವ್ಯಾಂಗ ವ್ಯಕ್ತಿಯಾಗಿದ್ದು, ಅವರು ರೀಲ್-ಕಮ್-ಲೈಫ್ ಪಾರ್ಟನರ್ ರಾಂಬಾಯಿ ಜೊತೆಗೂಡಿ ನೃತ್ಯದ ಮರುಸೃಷ್ಟಿ ಮಾಡಿರುವುದು ಎಲ್ಲರ ಗಮನ ಸೆಳೆದಿದೆ.

ಬೆಂಕಿ ಕಡ್ಡಿ ಗೀಚುವುದರಿಂದ ಹಿಡಿದು ಪುಷ್ಪಾ ಸಿಗ್ನೇಚರ್ ಕೈ ಎತ್ತುವುದರವರೆಗೆ ದಂಪತಿ ಸಾಧ್ಯವಿರುವಷ್ಟು ಪ್ರತಿಯೊಂದು ಹೆಜ್ಜೆಗಳನ್ನು ಮರುಸೃಷ್ಟಿ ಮಾಡಿದ್ದಾರೆ. ಅವರ ನೃತ್ಯ ನೆಟ್ಟಿಗರ ಮನ ಮುಟ್ಟಿದೆ. ನೆಟ್ಟಿಗರು ಪೈರ್ ಎಮೋಜಿ ಹಾಕುವ ಮೂಲಕ ದಂಪತಿ ನೃತ್ಯವನ್ನು ಶ್ಲಾಘಿಸಿದ್ದಾರೆ. ಈ ದಂಪತಿ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಹಳ್ಳಿಯಿಂದ ಬಂದವರು. ಇವರು ಇನ್ ಸ್ಟಾಗ್ರಾಂನಲ್ಲಿ 6,33,000 ಫಾಲೋವರ್ಸ್ ಅನ್ನು ಹೊಂದಿದ್ದಾರೆ.

ಇದನ್ನೂ ಓದಿ:Munnar Tour: ಮನದ ಬೇಗುದಿಯನ್ನು ಕಳೆಯಲು ಮುನ್ನಾರ್‌ನ ಈ ಸ್ಥಳಗಳಿಗೆ ತಪ್ಪದೇ ಭೇಟಿ ನೀಡಿ!

ಅಲ್ಲು ಅರ್ಜುನ್ ‘ಪುಷ್ಪ 2’ ಚಿತ್ರದ ಎರಡನೇ ಹಾಡು ರಿಲೀಸ್ ಆಗಿದೆ. ಇದು ಕಪಲ್ ಸಾಂಗ್ ಆಗಿದ್ದು, ಗಣೇಶ್ ಆಚಾರ್ಯ ನೃತ್ಯ ಸಂಯೋಜನೆ ಮಾಡಿದ್ದಾರೆ, ದೇವಿಶ್ರೀ ಪ್ರಸಾದ್ ಟ್ಯೂನ್ ಹಾಕಿದ್ದಾರೆ. ಒಟ್ಟು ಆರು ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡಿದ್ದು, ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಅವರಿಗೆ ಜೋಡಿಯಾಗಿ ನಟಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

Continue Reading

ಸಿನಿಮಾ

Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

Pawan Kalyan: ನಟ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ ಅವರು ಎರಡನೇ ಮದುವೆಯಾಗಲು ರೆಡಿಯಾಗಿದ್ದಾರಂತೆ. ಮುಂದಿನ ಎರಡು ಅಥವಾ ಮೂರು ವರ್ಷದೊಳಗೆ (Renu Desai Second Marriage) ಮರು ಮದುವೆಯಾಗಲು ಯೋಜಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ.

VISTARANEWS.COM


on

Renu Desai Second Marriage
Koo

ಬೆಂಗಳೂರು: ಟಾಲಿವುಡ್ ನ ಖ್ಯಾತ ನಟರಲ್ಲಿ ಪವನ್ ಕಲ್ಯಾಣ (Pawan Kalyan) ಕೂಡ ಒಬ್ಬರು. ಇವರು ಹಲವಾರು ಚಿತ್ರದಲ್ಲಿ ನಟಿಸಿ ಜನ ಮನ್ನಣೆಯನ್ನು ಪಡೆದು ಟಾಲಿವುಡ್ ನಲ್ಲಿ ಒಬ್ಬ ಖ್ಯಾತ ನಟ ಎನಿಸಿಕೊಂಡಿದ್ದಾರೆ. ಆದರೆ ಇಂತಹ ಮಹಾನ್ ನಟ ತಮ್ಮ ವೈವಾಹಿಕ ಜೀವನದಲ್ಲಿ ಸಮಸ್ಯೆಯನ್ನು ಎದುರಿಸಿದ್ದಾರೆ. ಪವನ್‌ ಕಲ್ಯಾಣ್‌ ತಮ್ಮ ಮೊದಲ ಪತ್ನಿ (Pawan Kalyan’s ex-wife) ರೇಣು ದೇಸಾಯಿ (Renu desai) ಅವರಿಂದ ವಿಚ್ಛೇದನ ಪಡೆದು ದೂರವಾಗಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಇದೀಗ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ (Renu Desai Second Marriage) ಅವರು ಎರಡನೇ ಮದುವೆಯಾಗಲು ರೆಡಿಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ನಟಿ ರೇಣು ದೇಸಾಯಿ ಅವರು ಇತ್ತೀಚೆಗೆ ಜನಪ್ರಿಯ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ತಮ್ಮ ಎರಡನೇ ಮದುವೆಯ ಯೋಜನೆಯ ಬಗ್ಗೆ ಪ್ರಸ್ತಾಪಮಾಡಿದ್ದಾರೆ.

ಸಂದರ್ಶನದಲ್ಲಿ ನಟಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹಂಚಿಕೊಳ್ಳುತ್ತಿರುವಾಗ ಈ ವಿಚಾರ ತಿಳಿಸಿದ್ದಾರೆ. ಹಾಗೇ ಮುಂದಿನ ಎರಡು ಅಥವಾ ಮೂರು ವರ್ಷದೊಳಗೆ ಮರು ಮದುವೆಯಾಗಲು ಯೋಜಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಹಾಗಾಗಿ ಈಗಾಗಲೇ ತಂದೆಯ ಪ್ರೀತಿಯಿಂದ ವಂಚಿತರಾದ ಅವರ ಮಕ್ಕಳಿಗೆ ತಂದೆಯ ಪ್ರೀತಿ ಸಿಗಲಿದೆ ಎನ್ನಲಾಗಿದೆ.

Renu Desai Second Marriage

ನಟಿ ರೇಣು ದೇಸಾಯಿಯವರು 2012ರಲ್ಲಿ ಪವನ್ ಕಲ್ಯಾಣ್ ಅವರಿಗೆ ಡಿವೋರ್ಸ್ ನೀಡಿದ್ದರು. ಆದರೆ ಅವರು ಇಷ್ಟು ವರ್ಷಗಳ ಕಾಲ ಯಾಕೆ ಮರು ಮದುವೆಯಾಗಿಲ್ಲ ಎಂಬ ಗೊಂದಲ ಹಲವರಲ್ಲಿದೆ. ಇದಕ್ಕೆ ಉತ್ತರಿಸಿದ ನಟಿ ರೇಣು ದೇಸಾಯಿ ಅವರು, ಆ ಸಮಯದಲ್ಲಿ ಮಕ್ಕಳಿಗೆ ಆರೈಕೆಯ ಅಗತ್ಯವಿತ್ತು. ಅವರಿಗೆ ತನ್ನ ಸಹಾಯ ಬೇಕಿತ್ತು. ಆದರೆ ತಾನು ಮದುವೆಯಾದರೆ ಪತಿಯೊಂದಿಗೆ ಸಮಯ ಕಳೆಯಬೇಕಾಗುತ್ತದೆ ಆಗ ಮಕ್ಕಳಿಗೆ ಒಂಟಿತನ ಕಾಡುತ್ತದೆ. ಈಗಾಗಲೇ ತಂದೆ ಇಲ್ಲದೆ ನರಳುತ್ತಿದ್ದ ಮಕ್ಕಳಿಗೆ ತಾಯಿಯ ಪ್ರೀತಿ ಸಿಗದಿದ್ದರೆ ಅವರಿಗೆ ಅನೇಕ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಇನ್ನೆರಡು ಮೂರು ವರ್ಷಗಳಲ್ಲಿ ಅವರು ದೊಡ್ಡವರಾಗುತ್ತಾರೆ. ಕಾಲೇಜಿಗೆ ಹೋಗುತ್ತಾರೆ. ಅಲ್ಲಿ ಅವರು ಸ್ನೇಹಿತರು ಮತ್ತು ಪ್ರೇಮಿಗಳ ಹೊಸ ಪ್ರಪಂಚಕ್ಕೆ ಕಾಲಿಡುತ್ತಾರೆ. ಅವರೊಂದಿಗೆ ಹೆಚ್ಚು ಸಮಯ ಕಳೆಯುತ್ತಾರೆ. ಆಗ ಅವರು ಪೋಷಕರ ಮೇಲೆ ಅವಲಂಬಿತರಾಗಿರುವುದಿಲ್ಲ. ಹಾಗಾಗಿ ಈ ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.

Renu Desai Second Marriage

ಅಲ್ಲದೇ ಮರು ಮದುವೆಗೆ ತಮ್ಮ ಮಕ್ಕಳ ಬೆಂಬಲ ಇರುವುದಾಗಿ ತಿಳಿಸಿದ್ದಾರೆ. ಹಾಗೇ ಮರುಮದುವೆಯಿಂದ ತಾವು ಮತ್ತೆ ಸಂತೋಷವನ್ನು ಕಂಡುಕೊಳ್ಳುವ ಬಯಕೆಯನ್ನು ನಟಿ ವ್ಯಕ್ತಪಡಿಸಿದ್ದಾರೆ. ಇದು ನಟಿ ರೇಣು ದೇಸಾಯಿ ಅವರಿಗೆ ತಮ್ಮ ಮಕ್ಕಳ ಬಗ್ಗೆ ಎಷ್ಟು ಕಾಳಜಿ, ಜವಾಬ್ದಾರಿ ಇದೆ ಎಂಬುದರ ಬಗ್ಗೆ ತಿಳಿಸುತ್ತದೆ.

ಇದನ್ನೂ ಓದಿ: Viral Video: ಬಿಜೆಪಿ ಶಾಲು ಧರಿಸಿ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ! ಸೋಲೇ ಕಾರಣ!

ಇತ್ತ ನಟ ಪವನ್ ಕಲ್ಯಾಣ್ ಅವರು ಚಿತ್ರರಂಗದ ಜೊತೆಗೆ ರಾಜಕೀಯ ರಂಗಕ್ಕೂ ಪ್ರವೇಶ ಮಾಡಿದ್ದಾರೆ. ಅವರು ತಮ್ಮದೇ ಜನಸೇನಾ ಪಾರ್ಟಿ ಎಂಬ ರಾಜಕೀಯ ಪಕ್ಷವನ್ನು ಕಟ್ಟಿಕೊಂಡು 2019ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹೀನಾಯವಾಗಿ ಸೋಲನುಭವಿಸಿದ್ದರು. ಆದರೆ 2024ರಲ್ಲಿ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದಾರೆ. ಹಾಗಾಗಿ ಅವರು ಇನ್ನು ಮುಂದೆ ಚಿತ್ರರಂಗದಲ್ಲಿ ಮುಂದುವರಿಯುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

Continue Reading

ಕರ್ನಾಟಕ

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Kalki 2898 AD: ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ 2 ನಿಮಿಷ ಮತ್ತು 51 ಸೆಕೆಂಡ್‌ಗಳ ಟ್ರೈಲರ್ ಬಿಡುಗಡೆ ಆಗಿದೆ. ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

VISTARANEWS.COM


on

Kalki 2898 AD Trailer Released on Vyjayanthi Movies YouTube Channel
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ (Kalki 2898 AD) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಮೆಜಾನ್ ಪ್ರೈಮ್‌ನಲ್ಲಿ ಬಿ&ಬಿ ಬುಜ್ಜಿ ಮತ್ತು ಭೈರವ ಮುನ್ನುಡಿ ಬಿಡುಗಡೆಯಾದ ಬಳಿಕ, ಅಭಿಮಾನಿಗಳು ಈ ಚಿತ್ರದ ಟ್ರೇಲರ್‌ಗಾಗಿ ಕಾತುರದಿಂದ ಕಾದಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಟ್ರೇಲರ್‌ ರಿಲೀಸ್‌ ಆಗಿದೆ.

ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ ಎರಡು ನಿಮಿಷ ಮತ್ತು ಐವತ್ತೊಂದು ಸೆಕೆಂಡ್‌ಗಳ ಟ್ರೇಲರ್‌ ಬಿಡುಗಡೆ ಆಗಿದೆ. ವಿಎಫ್‌ಎಕ್ಸ್‌ನಿಂದಲೇ ನೋಡುಗರ ಗಮನ ಸೆಳೆದ ಈ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇದೀಗ ಟ್ರೇಲರ್‌ ಸಹ ಎಲ್ಲ ಭಾಷೆಗಳಲ್ಲಿ ಹೊರಬಂದಿದೆ.

ಚಿತ್ರದ ಟ್ರೇಲರ್ ಕುರಿತು ನಿರ್ದೇಶಕ ನಾಗ್ ಅಶ್ವಿನ್ ಮಾತನಾಡಿ, “ಇಂದು ನನ್ನ ಹೃದಯವು ಹಲವು ಮಿಕ್ಸ್‌ಡ್‌ ಭಾವನೆಗಳಿಂದ ತುಂಬಿದೆ. ಒಬ್ಬ ಚಲನಚಿತ್ರ ನಿರ್ದೇಶಕನಾಗಿ, ನಾನು ಯಾವಾಗಲೂ ಭಾರತೀಯ ಪುರಾಣ ಮತ್ತು ವೈಜ್ಞಾನಿಕ ಕಾದಂಬರಿಗಳಿಂದ ಆಕರ್ಷಿತನಾಗಿದ್ದೇನೆ. ‘ಕಲ್ಕಿ 2898 AD’ ಚಿತ್ರದಲ್ಲಿ ಈ ಎರಡು ಅಂಶಗಳನ್ನು ವಿಲೀನಗೊಳಿಸಿದ್ದೇವೆ. ನಮ್ಮ ಕಲಾವಿದರು ಮತ್ತು ತಂಡದ ಅಸಾಧಾರಣ ಪ್ರತಿಭೆ ಮತ್ತು ಸಮರ್ಪಣಾ ಮನೋಭಾವದಿಂದ ಕನಸೊಂದು ನನಸಾಗಿದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

ಇದನ್ನೂ ಓದಿ: Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

ಚಿತ್ರದಲ್ಲಿ ಪ್ರಭಾಸ್‌ ಭೈರವನಾಗಿ, ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ. ಪ್ರಭಾಸ್‌ ಮತ್ತು ಅಮಿತಾಭ್‌ ಬಚ್ಚನ್‌ ಕೂಡ ಅದ್ಭುತವಾದ ಆಕ್ಷನ್‌ ಅನ್ನು ಮಾಡಿರುವುದು ಟ್ರೇಲರ್‌ನಿಂದ ತಿಳಿಯುತ್ತದೆ. ಅತಿಥಿ ಪಾತ್ರ ಮತ್ತು ಖಳನಾಯಕನ ಪಾತ್ರವನ್ನು ನಿರ್ವಹಿಸಿರುವ ಕಮಲ್‌ ಹಾಸನ್‌ ಟ್ರೇಲರ್‌ನ ಕೊನೆಯಲ್ಲಿ ಭಯ ಪಡಬೇಡಿ ಇನ್ನೊಂದು ಲೋಕ ಬರುತ್ತಿದೆ ಎಂಬ ಡೈಲಾಗ್‌ ಹೇಳುವ ಮೂಲಕ ಗುರುತಿಸಲಾಗದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್‌ ಆಗಿರುವ ಟೀಸರ್‌ ಹಾಗೂ ಪೋಸ್ಟರ್‌ಗಳಿಂದಲೇ ಸಿನಿಮಾ ಸಂಚಲನ ಮೂಡಿಸಿದ್ದು, ಟ್ರೇಲರ್‌ ಮತ್ತಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.

Continue Reading
Advertisement
IND vs USA
ಕ್ರೀಡೆ11 mins ago

IND vs USA: ಕೊಹ್ಲಿಯ ವಿಕೆಟ್​ ಪತನ ಕಂಡು ದಂಗಾದ ರೋಹಿತ್​ ಶರ್ಮ; ವಿಡಿಯೊ ವೈರಲ್​

World Anti Child Labor Day celebration in Hosapete
ವಿಜಯನಗರ46 mins ago

Vijayanagara News: ಹೊಸಪೇಟೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

Kangana Ranaut
Latest49 mins ago

Kangana Ranaut: ಸಂಸದೆಯಾಗಿರುವ ನಟಿ ಕಂಗನಾ ರಣಾವತ್‌ಗೆ ಸಿಗುವ ಸಂಬಳ, ಇತರ ಸವಲತ್ತುಗಳು ಏನೇನು?

JP Nadda
Latest1 hour ago

JP Nadda: ವೇದಿಕೆ ಮೇಲೆ ಗುಟ್ಕಾ ತಿಂದ ಕೇಂದ್ರ ಆರೋಗ್ಯ ಸಚಿವ ನಡ್ಡಾ? ವಿಡಿಯೊ ನೋಡಿ

Actor darshan Arrested
ಪ್ರಮುಖ ಸುದ್ದಿ1 hour ago

Actor darshan Arrested : ದರ್ಶನ್‌ಗೆ ಎಣ್ಣೆ ಹೊಡೆಯಲು, ಸಿಗರೇಟ್​ ಸೇದಲು ಠಾಣೆಗೇ ಶಾಮಿಯಾನ ಹಾಕಿದರೆ ಪೊಲೀಸರು?

Hamare Baarah Release Supreme Court has imposed a stay
ಬಾಲಿವುಡ್1 hour ago

Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Stock Market
ವಾಣಿಜ್ಯ1 hour ago

Stock Market: ಷೇರುಪೇಟೆಯಲ್ಲಿ ಗೂಳಿ ಗುಟುರು; ಸೆನ್ಸೆಕ್ಸ್‌, ನಿಫ್ಟಿ ಏರಿಕೆ

Actor Darshan
ಬೆಂಗಳೂರು1 hour ago

Actor Darshan : ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

Darshan Old Case Coming Out darshan gang
ಕ್ರೈಂ1 hour ago

Actor Darshan: ಬಡಪಾಯಿ ಕಾರ್ಮಿಕರ ಮೇಲೆ ನಾಯಿ ಛೂ ಬಿಟ್ಟು ಹಿಂಸಿಸಿದ್ದ ದರ್ಶನ್‌ & ಗ್ಯಾಂಗ್‌!

IND vs USA
ಕ್ರೀಡೆ2 hours ago

IND vs USA: ಬೆಸ್ಟ್​ ಫೀಲ್ಡಿಂಗ್​ಗೆ 2ನೇ ಚಿನ್ನದ ಪದಕ ಗೆದ್ದ ಮೊಹಮ್ಮದ್ ಸಿರಾಜ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌