Site icon Vistara News

Rashmika Mandanna: ಜಪಾನ್‌ನಲ್ಲಿ ರಶ್ಮಿಕಾ: ವರ್ಷಗಳ ಕನಸು ನನಸಾಯ್ತು ಎಂದ ನ್ಯಾಷನಲ್‌ ಕ್ರಶ್‌!

Rashmika Mandanna in Japan

ಬೆಂಗಳೂರು: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸದ್ಯ ಜಪಾನ್‌ನಲ್ಲಿದ್ದಾರೆ. ಜಪಾನ್‌ನ ಟೋಕಿಯೊದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಕ್ರಂಚೈರೋಲ್ ಅನಿಮೆ ಅವಾರ್ಡ್ಸ್’ 2024 ರಲ್ಲಿ (Crunchyroll Anime Awards) ಭಾರತವನ್ನು ಪ್ರತಿನಿಧಿಸಿದ್ದಾರೆ. ಮಿನುಗುವ ಕಂಚಿನ ಗೌನ್‌ನಲ್ಲಿ ನಟಿ ಪೋಸ್ಟ್‌ ಹಾಕಿಕೊಂಡಿದ್ದಾರೆ. ಜತೆಗೆ ವೇದಿಕೆಯಲ್ಲಿ ನಟಿ ನಿರೂಪಣೆ ಮಾಡಿರುವ ವಿಡಿಯೊ ವೈರಲ್‌ ಆಗಿದೆ.

ರಶ್ಮಿಕಾ ಇನ್‌ಸ್ಟಾದಲ್ಲಿ “ಜಪಾನ್ ನಾನು ಹಲವಾರು ವರ್ಷಗಳಿಂದ ಹೋಗಬೇಕೆಂದು ಕನಸು ಕಂಡ ಸ್ಥಳ. ಬಾಲ್ಯದಿಂದಲೂ ಆ ಆಸೆ ಇತ್ತು. ಈಗ ಸಾಧ್ಯ ಆಗಿದೆ. ಹೀಗೆ ಆಗುತ್ತೆ ಎಂದು ಎಂದಿಗೂ ಯೋಚಿಸಿರಲಿಲ್ಲ. ಒಬ್ಬರಿಗೆ ಪ್ರಶಸ್ತಿಯನ್ನು ನೀಡುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಇದೀಗ ನಿಜವಾಗಿದೆ. ಇಲ್ಲಿ ಎಲ್ಲರನ್ನು ಭೇಟಿಯಾಗಲು ಸಾಧ್ಯವಾಗುತ್ತಿದೆ. ಒಳ್ಳೆಯ ಸ್ವಾಗತ ಸಿಕ್ಕಿದೆ. ಇಲ್ಲಿಯ ಆಹಾರ, ಹವಾಮಾನ, ಸ್ಥಳ ತುಂಬಾ ಸ್ವಚ್ಛವಾಗಿದೆ. ಧನ್ಯವಾದಗಳು ಜಪಾನ್! ನಿಜವಾಗಿಯೂ! ಪ್ರತಿ ವರ್ಷವೂ ಇಲ್ಲಿಗೆ ಬರುತ್ತೇನೆʼʼಎಂದು ಬರೆದುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ, ರಶ್ಮಿಕಾ ಜಪಾನನ್‌ನಲ್ಲಿರುವ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ: Rashmika Mandanna: ಜಪಾನ್‌ನಲ್ಲಿ ಮಿಂಚಿದ ಕಿರಿಕ್‌ ಬೆಡಗಿ ರಶ್ಮಿಕಾ ಮಂದಣ್ಣ!

ರಶ್ಮಿಕಾ ಮಂದಣ್ಣ ಅವರು ತಮ್ಮ ಪ್ಯಾಕ್ಡ್ ಶೆಡ್ಯೂಲ್‌ನಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಧುನುಷ್‌ ಅವರ ಜತೆ DNS (D51) ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಇದೇ ಮೊದಲ ಬಾರಿಗೆ ಧನುಷ್ ಮತ್ತು ರಶ್ಮಿಕಾ ಮಂದಣ್ಣ ಜತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ವರದಿಯ ಪ್ರಕಾರ ಇದೊಂದು ರಾಜಕೀಯ ವಸ್ತುವುಳ್ಳ ಕತೆಯಾಗಿದ್ದು, ರಾಜಕೀಯ ಕುತಂತ್ರಗಳನ್ನು ಸಾಮಾನ್ಯ ವ್ಯಕ್ತಿಯೊಬ್ಬ ಹೇಗೆ ಎದುರಿಸುತ್ತಾನೆ, ರಾಜಕೀಯದ ದೌರ್ಜನ್ಯಕ್ಕೆ ಹೇಗೆ ತುತ್ತಾಗುತ್ತಾನೆ ಅದರಿಂದ ಹೊರಗೆ ಹೇಗೆ ಬರುತ್ತಾನೆ ಎಂಬ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎನ್ನಲಾಗಿದೆ.

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಹೊರತುಪಡಿಸಿ ಬೇರೆ ಯಾವೆಲ್ಲ ಕಲಾವಿದರು ನಟಿಸುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತಾಂತ್ರಿಕ ವರ್ಗದ ಬಗ್ಗೆಯೂ ಹೆಚ್ಚಿನ ಮಾಹಿತಿ ಹೊರಬರುವುದು ಬಾಕಿ ಇದೆ.

Exit mobile version