Site icon Vistara News

Ram Charan: ಸೆಟ್ಟೇರಿತು ರಾಮ್ ಚರಣ್ 16ನೇ ಸಿನಿಮಾ; ಶ್ರೀದೇವಿ ಪುತ್ರಿ ಹಂಗಾಮ ಶುರು!

Ram Caran with Janhvi Kapoor

ಬೆಂಗಳೂರು: ಆರ್‌ಆರ್‌ಆರ್‌ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ (Ram Charan) ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ʻಗೇಮ್ ಚೇಂಜರ್ʼ (Game Changer) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್‌ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ʻRC 16 ʼಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಸಮಾರಂಭ ಹೈದರಾಬಾದ್‌ನಲ್ಲಿ ನೆರವೇರಿದೆ.

ನಿರ್ಮಾಪಕ ಅಲ್ಲು ಅರವಿಂದ್ ಅವರು ಬೌಂಡ್ ಸ್ಕ್ರಿಪ್ಟ್ ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಹಸ್ತಾಂತರಿಸಿದರು. ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಟಾರ್ ನಿರ್ದೇಶಕ ಶಂಕರ್, ಬೋನಿ ಕಪೂರ್ ಮತ್ತು ಅನ್ಮೋಲ್ ಶರ್ಮಾ ಕ್ಯಾಮೆರಾ ಚಾಲನೆ ನೀಡಿದರು. ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಬೋರ್ಡ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

ಇದು ರಾಮ್‌ಚರಣ್ ನಟನೆಯ 16ನೇ ಸಿನಿಮಾ. ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಬುಚ್ಚಿಬಾಬು ನಿರ್ದೇಶನದ ಇನ್ನು ಹೆಸರಿಡದ ಈ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಚಿತ್ರದಲ್ಲಿ ರಾಮ್‌ಚರಣ್ ಜೋಡಿಯಾಗಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ಎ. ಆರ್ ರೆಹಮಾನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಆರ್.ರತ್ನವೇಲು ಛಾಯಾಗ್ರಹಣ, ಆಂಟೋನಿ ರುಬಿನ್ ಸಂಕಲನ ಚಿತ್ರಕ್ಕಿದೆ. ಚಂದ್ರಬೋಸ್, ಆನಂತಶ್ರೀರಾಮ್, ಬಾಲಾಜಿ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ: Ram Charan: ‘ಗೇಮ್ ಚೇಂಜರ್’ ರಾಮ್ ಚರಣ್ ಲುಕ್‌ ಲೀಕ್‌!

ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್‌ನಲ್ಲಿ RC16 ಸಿನಿಮಾ ನಿರ್ಮಾಣವಾಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸುತ್ತಿರುವುದು ವಿಶೇಷ.

‘ಗೇಮ್ ಚೇಂಜರ್’ ರಾಮ್ ಚರಣ್!

ಈ ಚಿತ್ರ ರಾಮ್ ಚರಣ್ ಅವರ ವೃತ್ತಿಜೀವನದಲ್ಲೇ ಅತಿ ದೊಡ್ಡ ಬಜೆಟ್‌ ಸಿನಿಮಾವಾಗಿರಲಿದೆ ಎಂದು ಹೇಳಲಾಗುತ್ತಿದೆ. ಶೂಟಿಂಗ್ ನಡುವೆ, ಚಿತ್ರದ ಹಾಡೊಂದು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆಯಾಗಿತ್ತು.

ಚಿತ್ರದಲ್ಲಿ ರಾಮ್ ಚರಣ್ ಹಿಂದೆಂದೂ ಕಾಣದ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಶಂಕರ್ ಷಣ್ಮುಖಂ ನಿರ್ದೇಶನದ ಈ ಚಿತ್ರದಲ್ಲಿ ಕಿಯಾರಾ ಆಡ್ವಾಣಿ ಕೂಡ ಕಾಣಿಸಿಕೊಳ್ಳಲಿದ್ದಾರೆ. ರಾಮ್ ಚರಣ್ ಅವರ ‘ಗೇಮ್ ಚೇಂಜರ್’ ಈ ವರ್ಷದ ಆರಂಭದಲ್ಲಿ ಘೋಷಣೆಯಾದಾಗಿನಿಂದ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: Ram Charan: ಅಜ್ಜನ ಜತೆ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದ ರಾಮ್ ಚರಣ್ ಪತ್ನಿ!

2023ರ ಸೆಪ್ಟೆಂಬರ್‌ನಲ್ಲಿ, ಚಿತ್ರದ ಹಾಡೊಂದರ ದೃಶ್ಯ ಆನ್‌ಲೈನ್‌ನಲ್ಲಿ ಸೋರಿಕೆಯಾದ ನಂತರ ‘ಗೇಮ್ ಚೇಂಜರ್’ ತಯಾರಕರು ದೂರು ಸಲ್ಲಿಸಿದ್ದರು. 30 ಸೆಕೆಂಡ್‌ಗಳ ಕ್ಲಿಪ್ ಆಗಿದ್ದು ವೈರಲ್ ಆಗಿತ್ತು. ತಯಾರಕರು ದೂರು ದಾಖಲಿಸಿದ ನಂತರ, ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.

Exit mobile version