Site icon Vistara News

RCB Unbox: ರಶ್ಮಿಕಾ ಮಂದಣ್ಣ ಮಿರರ್ ಮೇಲೆ ಏನ್ ಮಾಡ್ತಿದ್ದಾರೆ ಅರ್ಥ ಆಯ್ತಾ?

RCB Unbox Rashmika Mandanna in Promo

ಬೆಂಗಳೂರು: ಆರ್‌ಸಿಬಿ ಅನ್‌ಬಾಕ್ಸ್ (RCB Unbox) ಇವೆಂಟ್ ಪ್ರೋಮೊದಲ್ಲಿ ಈಗಾಗಲೇ ಶಿರಾಜ್‌ಕುಮಾರ್‌, ಸುದೀಪ್‌, ರಿಷಬ್‌, ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಕಾಣಿಸಿಕೊಂಡಿದ್ದಾರೆ. ಕಳೆದೊಂದು ವಾರದಿಂದ ಅರ್ಥ ಆಯ್ತಾ? ಎಂದು ಆರ್‌ಸಿಬಿ ಚಮಕ್ ಕೊಡುತ್ತಲೇ ಬರುತ್ತಿದೆ. ಇದೀಗ ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಅವರ ಸರದಿ. Royal Challengers Bangalore ಎನ್ನುವ ಹೆಸರಿನಲ್ಲಿ ಬೆಂಗಳೂರು ಪದದ ಇಂಗ್ಲೀಷ್ ಅಕ್ಷರಗಳನ್ನು, ಉಚ್ಚಾರಣೆ ಬದಲಿಸಿದೆ, Bengaluru ಎಂದು ಮಾಡಲಾಗುತ್ತಿದೆ. ನಾಳೆ (ಮಾರ್ಚ್‌ 19) ನಡೆಯುವ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಇದು ಅಧಿಕೃತವಾಗುತ್ತಿದೆ.

ಆರ್​ಸಿಬಿ ತನ್ನ ಅಭಿಯಾನ ಆರಂಭಿಸುವ ಮುನ್ನ ಪೂರ್ವಭಾವಿಯಾಗಿ ಅಭಿಮಾನಿಗಳಿಗಾಗಿ ಈ ಸಲವೂ ವಿಶೇಷ ಕಾರ್ಯಕ್ರಮವೊಂದನ್ನು ಏರ್ಪಡಿಸಿದ್ದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಕಳೆದೆರಡು ವರ್ಷಗಳಿಂದ ಆರ್​ಸಿಬಿ ಅನ್​ಬಾಕ್ಸ್​(RCB’s Unbox Event) ಹೆಸರಿನಲ್ಲಿ ನಡೆಯುತ್ತ ಬಂದಿದೆ. ಅಭಿಮಾನಿಗಳಿಗಾಗಿ ನಡೆಸುವ ಈ ಕಾರ್ಯಕ್ರಮದಲ್ಲಿ ತಂಡದ ಹೊಸ ಜೆರ್ಸಿ ಅನಾವರಣ ಸೇರಿ ಹಲವು ಅಚ್ಚರಿಯನ್ನು ಘೋಷಣೆ ಮಾಡುವುದು ಈ ಕಾರ್ಯಕ್ರಮದ ವಿಶೇಷತೆ.

ಇದನ್ನೂ ಓದಿ: RCB Unbox: ಕಿಚ್ಚ ಸುದೀಪ್ ಯಾಕೆ ಆ ಇಡ್ಲಿ ಬೇಡ ಅಂದ್ರು ಅರ್ಥ ಆಯ್ತಾ?

ಈ ಬಾರಿ ಮಾರ್ಚ್ 22ರಿಂದ ಮೇ 26ರವರೆಗೆ ಐಪಿಎಲ್ ಟೂರ್ನಿ ನಡೆಯಲಿದೆ. ಮಾರ್ಚ್ 19ಕ್ಕೆ ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ವೇದಿಕೆ ಸಜ್ಜಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್‌ಬಾಕ್ಸ್ ಇವೆಂಟ್ ಕುರಿತ ಪ್ರೋಮೊದಲ್ಲಿ  ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಅವರ ಕ್ಯಾರವ್ಯಾನ್‌ನ ಕನ್ನಡಿಯಲ್ಲಿ Royal Challengers Bangalore ಎಂದು ಬರೆದಿತ್ತು. ಕ್ಯಾರವ್ಯಾನ್‌ ಒಳ ಬಂದ ಅವರು ಅದನ್ನು ನೋಡಿ Bangalore ಎನ್ನುವುದನ್ನು ಅಳಿಸಿ ಅರ್ಥ ಆಯ್ತಾ? ಎಂದು ಕೇಳಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ತಮ್ಮ ಪ್ಯಾಕ್ಡ್ ಶೆಡ್ಯೂಲ್‌ನಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಧುನುಷ್‌ ಅವರ ಜತೆ DNS (D51) ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಇದೇ ಮೊದಲ ಬಾರಿಗೆ ಧನುಷ್ ಮತ್ತು ರಶ್ಮಿಕಾ ಮಂದಣ್ಣ ಜತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ವರದಿಯ ಪ್ರಕಾರ ಇದೊಂದು ರಾಜಕೀಯ ವಸ್ತುವುಳ್ಳ ಕತೆಯಾಗಿದ್ದು, ರಾಜಕೀಯ ಕುತಂತ್ರಗಳನ್ನು ಸಾಮಾನ್ಯ ವ್ಯಕ್ತಿಯೊಬ್ಬ ಹೇಗೆ ಎದುರಿಸುತ್ತಾನೆ, ರಾಜಕೀಯದ ದೌರ್ಜನ್ಯಕ್ಕೆ ಹೇಗೆ ತುತ್ತಾಗುತ್ತಾನೆ ಅದರಿಂದ ಹೊರಗೆ ಹೇಗೆ ಬರುತ್ತಾನೆ ಎಂಬ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎನ್ನಲಾಗಿದೆ.

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಹೊರತುಪಡಿಸಿ ಬೇರೆ ಯಾವೆಲ್ಲ ಕಲಾವಿದರು ನಟಿಸುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತಾಂತ್ರಿಕ ವರ್ಗದ ಬಗ್ಗೆಯೂ ಹೆಚ್ಚಿನ ಮಾಹಿತಿ ಹೊರಬರುವುದು ಬಾಕಿ ಇದೆ.

Exit mobile version