ಬೆಂಗಳೂರು: ಟಾಲಿವುಡ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ವಕೇಶನ್ ಮೂಡ್ನಲ್ಲಿದ್ದಾರೆ. ಅಲ್ಲಿಯ ಸುಂದರ ಪ್ರವಾಸಿ ತಾಣವನ್ನು ಅಣುಭವಿಸುತ್ತಿದ್ದಾರೆ. ಇದೀಗ ನಟಿ ಮಲೇಷ್ಯಾದ ಕೆಲವು ಅದ್ಭುತ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಮಂತಾ ಸ್ವಿಮ್ ಸೂಟ್ ಧರಿಸಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಫೋಟೊಗಳನ್ನು ನಟಿ ಇನ್ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಇನ್ಸ್ಟಾದ ಮೊದಲ ಚಿತ್ರದಲ್ಲಿ, ಸಮಂತಾ, ನೀರಿನಲ್ಲಿ ಇಳಿದು ಆಕಾಶವನ್ನು ನೋಡುವುದು ಕಾಣಬಹುದು. ಮತ್ತೊಂದು ಪೋಟೊದಲ್ಲಿ , ಸಮಂತಾ ನೀರನಲ್ಲಿ ಈಜಾಡಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಧ್ಯಾನ ಮಾಡುತ್ತಿರುವ, ಹಚ್ಚ ಹಸಿರಿನಿಂದ ಕೂಡಿದ ಸುತ್ತಮುತ್ತಲಿನ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳಿಗೆ ʻಹೈಯೆಸ್ಟ್ ಲವ್ʼ ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ.
ನಟಿ ಸಮಂತಾ ಎಷ್ಟು ಕೆ.ಜಿ ಇರಬಹುದು?
ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರು ಆಗಾಗ ತಮ್ಮ ಫಿಟ್ನೆಸ್ ಜರ್ನಿ ಬಗ್ಗೆ ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಈ ಹಿಂದೆ ನಟಿ ತಮ್ಮ ತೂಕದ ಬಗ್ಗೆ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಅವರ ದೇಹದ ತೂಕ ಈಗ 50.1 ಕೆಜಿಯಂತೆ. 36 ವರ್ಷದ ಅವರ ಮೆಟಾಬಾಲಿಕ್ ಏಜ್ 23 ಎಂಬುದನ್ನು ಕೂಡ ಅವರು ಬಹಿರಂಗಪಡಿಸಿದ್ದಾರೆ. ಅಲ್ಲದೇ ಅವರ ದೇಹದಲ್ಲಿ 12 ಕೆಜಿ ಫ್ಯಾಟ್ ಮಾಸ್ ಇದೆಯಂತೆ. ಮಸಲ್ ಮಾಸ್ 35.9 ಕೆಜಿ, ಬೋನ್ ಮಾಸ್ 2.2 ಕೆಜಿ ಎಂಬುದನ್ನು ಸಮಂತಾ ವಿವರಿಸಿದ್ದರು.
ಇದನ್ನೂ ಓದಿ: Samantha Ruth Prabhu: ನಟಿ ಸಮಂತಾ ಎಷ್ಟು ಕೆ.ಜಿ ಇರಬಹುದು ಊಹಿಸಿ!
ಸಿನಿಮಾ ವಿಚಾರಕ್ಕೆ ಬಂದರೆ, ಸಮಂತಾ ಕೊನೆಯ ಬಾರಿಗೆ ʼಖುಷಿʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಹಿಂದಿಯ ರ್ಯಾಪ್ ರಿಯಾಲಿಟಿ ಶೋ ಜಡ್ಜ್ ಹನಿ ಸಿಂಗ್ ಜತೆ ಸಮಂತಾ ವೇದಿಕೆ ಹಂಚಿಕೊಂಡಿದ್ದರು. MTV ರಿಯಾಲಿಟಿ ಶೋನಲ್ಲಿ ಸಮಂತಾ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬ್ಯಾನರ್ ‘ತ್ರಲಾಲಾ ಮೂವಿಂಗ್ ಪಿಕ್ಚರ್ಸ್’ ಪ್ರಾರಂಭಿಸುವುದರೊಂದಿಗೆ, ನಿರ್ಮಾಣ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.
ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ನಿರ್ಮಿಸುವ ಮುಂಬರುವ ಚಿತ್ರದಲ್ಲಿ ಸಮಂತಾ ರುತ್ ಪ್ರಭು ಮತ್ತು ಸಲ್ಮಾನ್ ಖಾನ್ ರೊಮ್ಯಾನ್ಸ್ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಚಿತ್ರಕ್ಕಾಗಿ ನಿರ್ದೇಶಕ ವಿಷ್ಣುವರ್ಧನ್ ಅವರೊಂದಿಗೆ ಸಮಂತಾ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ವರದಿಯ ಪ್ರಕಾರ ಈ ಸಿನಿಮಾಗೆ ಸಮಂತಾ ಜತೆಗೆ ತ್ರಿಶಾ ಮತ್ತು ಅನುಷ್ಕಾ ಶೆಟ್ಟಿ ಕೂಡ ಇರಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಕುರಿತು ಸದ್ಯಕ್ಕೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.