Samantha Ruth Prabhu: ನಾಗ ಚೈತನ್ಯ ಜತೆ ಡಿವೋರ್ಸ್‌ ಪಡೆದ ವರ್ಷ ಅತ್ಯಂತ ಕಷ್ಟಕರವಾಗಿತ್ತು ಎಂದ ಸಮಂತಾ! - Vistara News

ಟಾಲಿವುಡ್

Samantha Ruth Prabhu: ನಾಗ ಚೈತನ್ಯ ಜತೆ ಡಿವೋರ್ಸ್‌ ಪಡೆದ ವರ್ಷ ಅತ್ಯಂತ ಕಷ್ಟಕರವಾಗಿತ್ತು ಎಂದ ಸಮಂತಾ!

Samantha Ruth Prabhu : ಸಮಂತಾ ಇತ್ತೀಚೆಗೆ ಪಾಡ್‌ಕಾಸ್ಟ್‌ ಮೂಲಕ ಮತ್ತೆ ಕೆಲಸಕ್ಕೆ ಕಮ್‌ಬ್ಯಾಕ್‌ ಆಗುತ್ತೇನೆ ಎಂದಿದ್ದರು. ಅದರಂತೆ ಪಾಡ್‌ಕಾಸ್ಟ್‌ ಕಾರ್ಯಕ್ರಮ ಆರಂಭಿಸಿದ್ದಾರೆ. ಸಮಂತಾ ಯುಟ್ಯೂಬ್‌ ಚಾನೆಲ್‌ನಲ್ಲಿ ಮೊದಲ ಎಪಿಸೋಡ್‌ ಹಂಚಿಕೊಂಡಿದ್ದಾರೆ. ಅಲ್ಕೇಶ್‌ ಅವರ ಜತೆ ಮಾತು ಕತೆ ನಡೆಸಿದ್ದಾರೆ.

VISTARANEWS.COM


on

Samantha says separation with Naga Chaitanya extremely difficult
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಮಂತಾ ರುತ್ ಪ್ರಭು ಅವರು ಪಾಡ್‌ಕ್ಯಾಸ್ಟ್‌ನಲ್ಲಿ ತಮ್ಮ ಮೈಯೋಸಿಟಿಸ್ ಕಾಯಿಲೆ ಬಗ್ಗೆ ಮಾತನಾಡಿದ್ದಾರೆ. ಅಲ್ಕೇಶ್‌ ಎನ್ನುವವರೊಂದಿಗೆ ಮಾತುಕತೆ ನಡೆಸಿ ತಮಗಿರುವ ಕಾಯಿಲೆ ಬಗ್ಗೆ ಹೇಳಿಕೊಂಡಿದ್ದಾರೆ. ಈ ಸಮಸ್ಯೆಯನ್ನು ಎದುರಿಸಿದ ವರ್ಷವನ್ನು ನೆನಸಿಕೊಳ್ಳುತ್ತೇನೆ. ‘ಅತ್ಯಂತ ಕಷ್ಟಕರವಾದ ವರ್ಷʼ ಅದಾಗಿತ್ತು ಎಂದು ಹೇಳಿಕೊಂಡಿದ್ದಾರೆ. ಜತೆಗೆ ಅದೇ ವರ್ಷ ಸಮಂತಾ ಅವರು ನಾಗ ಚೈತನ್ಯ ಜತೆ ಡಿವೋರ್ಸ್‌ ಪಡೆದುಕೊಂಡಿದ್ದರು.

ಸಮಂತಾ ಇತ್ತೀಚೆಗೆ ಪಾಡ್‌ಕಾಸ್ಟ್‌ ಮೂಲಕ ಮತ್ತೆ ಕೆಲಸಕ್ಕೆ ಕಮ್‌ಬ್ಯಾಕ್‌ ಆಗುತ್ತೇನೆ ಎಂದಿದ್ದರು. ಅದರಂತೆ ಪಾಡ್‌ಕಾಸ್ಟ್‌ ಕಾರ್ಯಕ್ರಮ ಆರಂಭಿಸಿದ್ದಾರೆ. ಸಮಂತಾ ಯುಟ್ಯೂಬ್‌ ಚಾನೆಲ್‌ನಲ್ಲಿ ಮೊದಲ ಎಪಿಸೋಡ್‌ ಹಂಚಿಕೊಂಡಿದ್ದಾರೆ. ಅಲ್ಕೇಶ್‌ ಅವರ ಜತೆ ಮಾತುಕತೆ ನಡೆಸಿದ್ದಾರೆ.

ಸಮಂತಾ ಮಾತನಾಡಿ, ” ಈ ಸಮಸ್ಯೆಯನ್ನು ಎದುರಿಸುವ ಹಿಂದಿನ ವರ್ಷವನ್ನು ನಾನು ಈಗ ನೆನಪಿಸಿಕೊಳ್ಳುತ್ತೇನೆ. ನನಗೆ ಅತ್ಯಂತ ಕಷ್ಟಕರವಾದ ವರ್ಷವಾಗಿತ್ತು. ಕಳೆದ ವರ್ಷದ ಜೂನ್‌ನಲ್ಲಿ ಮುಂಬೈನಿಂದ ಬರುವಾಗ ಕೊನೆಗೂ ನಾನು ನೆಮ್ಮದಿಯಾಗಿದ್ದೇನೆ ಎಂದು ನನ್ನ ಸ್ನೇಹಿತ/ನನ್ನ ಪಾರ್ಟನರ್‌/ಮ್ಯಾನೇಜರ್ ಹಿಮಾಂಕ್ ಬಳಿ ಹೇಳಿಕೊಂಡಿದ್ದೆ. ಇದಕ್ಕೂ ಮುಂಚೆ ನಾನು ಸ್ವಲ್ಪವೂ ವಿಶ್ರಾಂತಿ ಮತ್ತು ಆರಾಮದಾಯಕವನ್ನು ಅನುಭವಿಸಿರಲಿಲ್ಲ. ಈಗ ನನಗೆ ಉಸಿರಾಡಲು ಸಾಧ್ಯವಾಗಿದೆ. ಕಣ್ತುಂಬ ನಿದ್ದೆ ಮಾಡಬಹುದು, ಕೆಲಸದ ಬಗ್ಗೆ ಗಮನ ಹರಿಸಬಹುದು ಎಂದು ಅಂದಿಕೊಂಡಿದ್ದೆ. ಮೈಯೋಸಿಟಿಸ್‌ಗೆ ಒಳಗಾದೆʼʼ ಎಂದರು.

ಇದನ್ನೂ ಓದಿ: Samantha Ruth Prabhu: ಸಮಂತಾ ಮತ್ತೆ ಮದುವೆ ಆಗ್ತಾರಾ? ಅಭಿಮಾನಿಗೆ ನಟಿಯ ನೇರ ಉತ್ತರ!

ʻʻಈ ಪಾಡ್‌ಕಾಸ್ಟ್‌ ಮಾಡಲು ಬಯಸಿದ್ದು ಏಕೆಂದರೆ, ಒಂದು ಕೆಟ್ಟ ಅನುಭವವನ್ನು ಅನುಭವಿಸಿ ಹೊರಬಂದೆ. ಈ ಕಾಯಿಲೆ ಜೀವನಪರ್ಯಂತ ಇರುತ್ತದೆ. ಅದರೊಂದಿಗೆ ಬದುಕಬೇಕಿದೆ. ನನ್ನ ಅನುಭವ ಹಂಚಿಕೊಳ್ಳಲು ಆರಂಭಿಸಿದ ಕಾರ್ಯಕ್ರಮ ಇದುʼʼ ಎಂದು ಹೇಳಿಕೊಂಡಿದ್ದಾರೆ.

2022ರಲ್ಲಿ ಸಮಂತಾ ಸಿನಿಮಾದಿಂದ ಬ್ರೇಕ್‌ ಪಡೆಯುತ್ತಿರುವುದಾಗಿ ಘೋಷಿಸಿದರು. ನಟಿ ಮುಮದೆ ನಿರ್ದೇಶಕ ರಾಜ್ ಮತ್ತು ಡಿಕೆ ಅವರ ‘ಸಿಟಾಡೆಲ್: ಇಂಡಿಯಾ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವರುಣ್ ಧವನ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

Ram Charan: ಪವನ್ ಕಲ್ಯಾಣ್ ಪರವಾಗಿ ರೋಡ್​ ಶೋಗಳಲ್ಲಿ ಭಾಗಿಯಾದರು. ರಾಮ್ ಚರಣ್ ಜೊತೆಗೆ ಅವರ ತಾಯಿ ಸಹ ಪವನ್ ಕಲ್ಯಾಣ್ ಪರವಾಗಿ ಪ್ರಚಾರ ಮಾಡಿದರು. ಹೀಗಾಗಿ ಇಬ್ಬರೂ ನಟರ ಸುತ್ತ ಅಭಿಮಾನಿಗಳ ದಂಡೇ ಇತ್ತು. ಇದೇ ವೇಳೆ ರಾಮ್‌ಚರಣ್‌ ಅವರ ಶರ್ಟ್‌ ಕೂಡ ಹರಿದು ಹಾಕಿದ್ದಾರೆ ಫ್ಯಾನ್ಸ್‌. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ,

VISTARANEWS.COM


on

Ram Charan get mobbed by fans during public appearances
Koo

ಬೆಂಗಳೂರು: ಅಲ್ಲು ಅರ್ಜುನ್ (Allu Arjun) ಮತ್ತು ರಾಮ್ ಚರಣ್ (Ram Charan) ಇಬ್ಬರೂ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇನ್ನು, ಇಬ್ಬರೂ ತಾರೆಯರು ಇತ್ತೀಚೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ನಂದ್ಯಾಲದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ರವಿಚಂದ್ರ ಕಿಶೋರ್ ರೆಡ್ಡಿ ಪರ ಪ್ರಚಾರದಲ್ಲಿ ಅಲ್ಲು ಅರ್ಜುನ್ ಪಾಲ್ಗೊಂಡಿದ್ದರೆ, ನಟ ರಾಮ್ ಚರಣ್, ತಮ್ಮ ಚಿಕ್ಕಪ್ಪ ಪವನ್ ಕಲ್ಯಾಣ್ ಪರವಾಗಿ ಚುನಾವಣೆ ಪ್ರಚಾರ ಮಾಡಲೆಂದು ಪೀಠಾಪುರಂಗೆ ತೆರಳಿದ್ದರು. ಪವನ್ ಕಲ್ಯಾಣ್ ಪರವಾಗಿ ರೋಡ್​ ಶೋಗಳಲ್ಲಿ ಭಾಗಿಯಾದರು. ರಾಮ್ ಚರಣ್ ಜೊತೆಗೆ ಅವರ ತಾಯಿ ಸಹ ಪವನ್ ಕಲ್ಯಾಣ್ ಪರವಾಗಿ ಪ್ರಚಾರ ಮಾಡಿದರು. ಹೀಗಾಗಿ ಇಬ್ಬರೂ ನಟರ ಸುತ್ತ ಅಭಿಮಾನಿಗಳ ದಂಡೇ ಇತ್ತು. ಇದೇ ವೇಳೆ ರಾಮ್‌ಚರಣ್‌ ಅವರ ಶರ್ಟ್‌ ಕೂಡ ಹರಿದು ಹಾಕಿದ್ದಾರೆ ಫ್ಯಾನ್ಸ್‌. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ,

ಟ್ರೇಡ್ ವಿಶ್ಲೇಷಕ ರಮೇಶ್ ಬಾಲಾ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ʻʻಅಲ್ಲು ಅರ್ಜುನ್ ಅವರು ಮುಂಬರುವ ಲೋಕಸಭೆ ಚುನಾವಣೆಗೆ ತಮ್ಮ ಸ್ನೇಹಿತ ರವಿಚಂದ್ರ ಕಿಶೋರ್ ರೆಡ್ಡಿ ಅವರನ್ನು ಬೆಂಬಲಿಸಲು ನಂದ್ಯಾಲಕ್ಕೆ ಭೇಟಿ ನೀಡಲು ಹೊರಟಾಗ ನೂರಾರು ಅಭಿಮಾನಿಗಳು ಸ್ವಾಗತಿಸಿರುವುದು ಕಂಡು ಬಂದಿದೆ. ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ಕೈಮುಗಿದು ಸ್ವಾಗತಿ ಅವರತ್ತ ಕೈ ಬೀಸಿದರು ಮತ್ತು ಮುಗುಳ್ನಕ್ಕರು. ಅವರ ಪಕ್ಕದಲ್ಲಿ ಸ್ನೇಹಾ ರೆಡ್ಡಿ ಕೂಡ ನಿಂತಿದ್ದರು.

ಇದನ್ನೂ ಓದಿ: Ram Charan: ನಟ ರಾಮ್‌ಚರಣ್‌ಗೆ ಗೌರವ ಡಾಕ್ಟರೇಟ್​: ಫ್ಯಾನ್ಸ್‌ ಫುಲ್‌ ಖುಷ್‌!

ಇತ್ತ ರಾಮ್ ಚರಣ್, ತಮ್ಮ ಚಿಕ್ಕಪ್ಪ ಪವನ್ ಕಲ್ಯಾಣ್ ಪರವಾಗಿ ಚುನಾವಣೆ ಪ್ರಚಾರ ಮಾಡಲೆಂದು ಪೀಠಾಪುರಂಗೆ ತೆರಳಿದ್ದರು. ಪವನ್ ಕಲ್ಯಾಣ್ ಪರವಾಗಿ ರೋಡ್​ ಶೋಗಳಲ್ಲಿ ಭಾಗಿಯಾದರು. ರಾಮ್ ಚರಣ್ ಜತೆಗೆ ಅವರ ತಾಯಿ ಸಹ ಪವನ್ ಕಲ್ಯಾಣ್ ಪರವಾಗಿ ಪ್ರಚಾರ ಮಾಡಿದರು. ರಾಮ್ ಚರಣ್, ಪವನ್ ಕಲ್ಯಾಣ್ ಒಟ್ಟಿಗೆ ಬಂದಿದ್ದನ್ನು ನೋಡಲು ಸಾವಿರಾರು ಮಂದಿ ಅಭಿಮಾನಿಗಳು ಪೀಠಾಪುರಂನಲ್ಲಿ ನೆರೆದಿದ್ದರು.

ರೋಡ್ ಶೋ ಮಾಡುವ ವೇಳೆ ರಾಮ್ ಚರಣ್ ಅನ್ನು ಅಭಿಮಾನಿಗಳು ಮುತ್ತಿಕೊಂಡರು. ರಾಮ್ ಚರಣ್ ಅಭಿಮಾನಿಗಳಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟರು.. ಅಭಿಮಾನಿಗಳು ರಾಮ್ ಚರಣ್ ಅನ್ನು ತಳ್ಳಿದರು, ಶರ್ಟ್​ ಅನ್ನು ಹರಿದರು. . ಇಷ್ಟೆಲ್ಲ ಆದರೂ ಸಹ ರಾಮ್ ಚರಣ್ ಏನೂ ಪ್ರತಿಕ್ರಿಯೆ ನೀಡದೆ ಸಹಿಸಿಕೊಂಡು ಕಾರಿನ ಬಳಿ ಹೋಗಿ ಕುಳಿತುಕೊಂಡರು. ಈ ಘಟನೆಯ ಹಲವು ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.

ಸಿನಿಮಾ ವಿಚಾರಕ್ಕೆ ಬಂದರೆ ಅಲ್ಲು ಅರ್ಜುನ್‌ ಪುಷ್ಪ: ದಿ ರೂಲ್ ಬಿಡುಗಡೆಗಾಗಿ ಸಜ್ಜಾಗಿದ್ದಾರೆ. ಆಗಸ್ಟ್ 15 ರಂದು ಅಲ್ಲು ಅವರ ಪುಷ್ಪ: ದಿ ರೂಲ್ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಫಹಾದ್ ಫಾಸಿಲ್, ರಶ್ಮಿಕಾ ಮಂದಣ್ಣ, ಧನಂಜಯ್, ರಾವ್ ರಮೇಶ್ ಮುಂತಾದವರು ನಟಿಸಿದ್ದಾರೆ. ರಾಮ್ ಚರಣ್‌ ಪ್ರಸ್ತುತ ಕಿಯಾರಾ ಆಡ್ವಾಣಿ ಜತೆ ಶಂಕರ್ ಅವರ ಗೇಮ್ ಚೇಂಜರ್ ಚಿತ್ರೀಕರಣದಲ್ಲಿದ್ದಾರೆ.

Continue Reading

ಟಾಲಿವುಡ್

Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

Rashmika Mandanna: ಈದ್ ದಿನವೇ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದರು ಸಲ್ಮಾನ್ ಖಾನ್ (Salman Khan).ಎಆರ್ ಮುರುಗದಾಸ್ (AR Murugadoss) ಜತೆ ಸಲ್ಮಾನ್ ಖಾನ್ ಕೈ ಜೋಡಿಸಿದ್ದು, ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದರು. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

VISTARANEWS.COM


on

Rashmika Mandanna Signed Salman Khan Sikandar
Koo

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ರಶ್ಮಿಕಾ ಮಂದಣ್ಣ ಮೇ.8ರಂದು ಇನ್‌ಸ್ಟಾ ಮೂಲಕ ಖಚಿತಪಡಿಸಿದ್ದಾರೆ. “ನೀವು ಬಹಳ ಸಮಯದಿಂದ ಮುಂದಿನ ಅಪ್‌ಡೇಟ್‌ ಬಗ್ಗೆ ನನ್ನನ್ನು ಕೇಳುತ್ತಿದ್ದೀರಿ. ಇದೀಗ ನಿಮ್ಮ ಮುಂದೆ. ʻಸಿಕಂದರ್‌ ಸಿನಿಮಾ ಭಾಗವಾಗಿರುವುದಕ್ಕೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಮತ್ತು ಗೌರವಿಸುತ್ತೇನೆʼʼಎಂದು ಇನ್‌ಸ್ಟಾದಲ್ಲಿ ಬರೆದುಕೊಂಡಿದ್ದಾರೆ ರಶ್ಮಿಕಾ. ಚಿತ್ರದಲ್ಲಿ ರಶ್ಮಿಕಾ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ.

ಈದ್ ದಿನವೇ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದರು ಸಲ್ಮಾನ್ ಖಾನ್ (Salman Khan).ಎಆರ್ ಮುರುಗದಾಸ್ (AR Murugadoss) ಜತೆ ಸಲ್ಮಾನ್ ಖಾನ್ ಕೈ ಜೋಡಿಸಿದ್ದು, ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದರು. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ಸೊನಾಕ್ಷಿ ಸಿನ್ಹಾ ನಟನೆಯ ‘ಅಕಿರಾ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಮುರುಗದಾಸ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಸ್ಟಾಲಿನ್’ ಚಿತ್ರವನ್ನು ಹಿಂದಿಯಲ್ಲಿ ‘ಜೈ ಹೋ’ ಹೆಸರಲ್ಲಿ ರೀಮೇಕ್ ಮಾಡಲಾಗಿತ್ತು.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

Continue Reading

ಟಾಲಿವುಡ್

Samantha Ruth Prabhu: ಬೆತ್ತಲೆ ಫೋಟೊ ಅಪ್​ಲೋಡ್ ಮಾಡಿದ್ರಾ ಸಮಂತಾ?

Samantha Ruth Prabhu: ಇತ್ತೀಚೆಗಷ್ಟೇ ಸಮಂತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ‘ಫಾರ್ ಇನ್‌ಫ್ರಾರೆಡ್ ಸೌನಾ'(Far Infrared Sauna) ಉಪಯೋಗಗಳು ಎಂದು ಬರೆದು ಅರೆಬೆತ್ತಲೆ ಇರುವ ಫೋಟೊ ಶೇರ್‌ ಮಾಡಿಕೊಂಡಿದ್ದರು. ಯುವತಿ ಸಂಪೂರ್ಣ ಬೆತ್ತಲಾಗಿ ಬಾತ್‌ಟಬ್‌ನಲ್ಲಿ ಕುಳಿತಿರುವಂತೆ ಫೋಟೊ ವೈರಲ್ ಆಗುತ್ತಿದೆ. ಆದರೆ ಮುಖ ಮಾತ್ರ ಕಾಣುತ್ತಿರಲಿಲ್ಲ. .ಖುದ್ದು ಸಮಂತಾ ಈ ಫೋಟೊ ಹಾಕಿ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ವೈರಲ್ ಮಾಡುತ್ತಿದ್ದಾರೆ.

VISTARANEWS.COM


on

Samantha Ruth Prabhu Fake Viral Nude Pic
Koo

ಬೆಂಗಳೂರು: ಸಮಂತಾ (Samantha Ruth Prabhu) ಮಯೋಸಿಟಿಸ್‌ ಕಾಯಿಲೆಯಿಂದ ಬಳಲುತ್ತಿರುವುದು ಗೊತ್ತೇ ಇದೆ. ಸಮಂತಾ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಬಗ್ಗೆ ಮಾಹಿತಿ ನೀಡುತ್ತಾರೆ. ಈ ಬಗ್ಗೆ ಪಾಡ್‌ಕಾಸ್ಟ್‌ ನಡೆಸುತ್ತಾರೆ. ಈ ಮಧ್ಯೆ ಸಮಂತಾ ಅರೆಬೆತ್ತಲೆ ಫೋಟೊ ಒಂದು ವೈರಲ್ ಆಗಿದೆ. ಸಮಂತಾ ಇನ್​ಸ್ಟಾಗ್ರಾಮ್ ಸ್ಟೇಟಸ್​ಗೆ ಹಾಕಿ ನಂತರ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಆದರೆ ಈ ಫೋಟೊ ನಕಲಿ ಎಂದು ಹೇಳಲಾಗುತ್ತಿದೆ.

ಇತ್ತೀಚೆಗಷ್ಟೇ ಸಮಂತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ‘ಫಾರ್ ಇನ್‌ಫ್ರಾರೆಡ್ ಸೌನಾ'(Far Infrared Sauna) ಉಪಯೋಗಗಳು ಎಂದು ಬರೆದು ಫೋಟೊ ಹೀಗೆ ಮುಂತಾದ ವಿವಿಧ ಉದ್ದೇಶಗಳಿಗಾಗಿ ಜನರು ಬಾತ್‌ ಟಬ್‌ನಲ್ಲಿ ಸ್ವಲ್ಪ ಸಮಯ ಇರುತ್ತಾರೆ ಎಂದು ಬರೆದುಕೊಂಡಿದ್ದಾರೆ. ಆದರೆ ಈ ಫೋಟೊ ಜತಗೆ ಸಮಂತಾ ಸಂಪೂರ್ಣ ಬೆತ್ತಲಾಗಿರುವ ಫೋಟೊ ಪೋಸ್ಟ್ ಮಾಡಿ ಕೂಡಲೇ ಡಿಲೀಟ್ ಮಾಡಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ.

ಯುವತಿ ಸಂಪೂರ್ಣ ಬೆತ್ತಲಾಗಿ ಬಾತ್‌ಟಬ್‌ನಲ್ಲಿ ಕುಳಿತಿರುವಂತೆ ಫೋಟೊ ವೈರಲ್ ಆಗುತ್ತಿದೆ. ಆದರೆ ಮುಖ ಮಾತ್ರ ಕಾಣುತ್ತಿರಲಿಲ್ಲ. .ಖುದ್ದು ಸಮಂತಾ ಈ ಫೋಟೊ ಹಾಕಿ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ವೈರಲ್ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಸುಳ್ಳು. ಆಕೆಯ ಅಂತಹ ಯಾವುದೇ ಫೋಟೊ ಪೋಸ್ಟ್ ಮಾಡಿಲ್ಲ. ಕಿಡಿಗೇಡಿಗಳು ಈ ರೀತಿ ಫೋಟೊ ವೈರಲ್ ಮಾಡುತ್ತಿದ್ದಾರೆ ಎನ್ನುವ ಚರ್ಚೆಯೂ ನಡೀತಿದೆ.

ಈ ಬಗ್ಗೆ ಟ್ವಟರ್‌ನಲ್ಲಿ ಭಾರಿ ಚರ್ಚೆಗಳು ಆಗುತ್ತಿದೆ. “ದಯವಿಟ್ಟು ಈ ರೀತಿಯ ಚಟುವಟಿಕೆಗಳನ್ನು ಮಾಡುವ ಮೂಲಕ ನಿಮ್ಮ ಮೆಚ್ಚಿನ ನಟಿಯ ಹೆಸರನ್ನು ಹಾಳು ಮಾಡಬೇಡಿ! ಅವರೂಕೂ ಮಹಿಳೆ. ಅಗೌರವ ಮಾಡಬೇಡಿʼʼಎಂದು ಕಮೆಂಟ್‌ ಮಾಡುತ್ತಿದ್ದಾರೆ. ʻʻನಾವೆಲ್ಲರೂ ನಿಮ್ಮೊಂದಿಗೆ ನಿಲ್ಲುತ್ತೇವೆʼʼಎಂದು ನಟಿಗೆ ಸಾಥ್‌ ಕೊಟ್ಟಿದ್ದಾರೆ. ಈ ಪೋಸ್ಟ್ ಬಗ್ಗೆ ಸಮಂತಾ ಇನ್ನೂ ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ: Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

ನಟಿ ಇತ್ತೀಚೆಗೆ ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ತನ್ನ ಆತ್ಮೀಯ ಸ್ನೇಹಿತರೊಂದಿಗೆ ಅಥೆನ್ಸ್‌ನಲ್ಲಿ ಭರ್ಜರಿಯಾಗಿ ಜನುಮದಿನ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ʻಬಂಗಾರಂʼ ಸಿನಿಮಾವನ್ನು ನಿರ್ಮಿಸಿ ನಟಿಸಲಿದ್ದೇನೆ ಎಂದು ಅವರು ಬಹಿರಂಗಪಡಿಸಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ. ತಾವು ಕಲಿತ ಸಮರ ಕಲೆಗಳ ಪ್ರದರ್ಶನದ ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟಿ ಸಮಂತಾ (Samantha Kickboxing) ಇದಕ್ಕೆ ‘ಒನ್ ಡೇ ಎಟ್ ಅ ಟೈಮ್ ‘ ಎಂಬ ಶೀರ್ಷಿಕೆ ನೀಡಿದ್ದಾರೆ.

ನಟಿ ಸಮಂತಾ ನಟನಾ ವೃತ್ತಿಗೆ ವಿದಾಯ ಹೇಳಿಲ್ಲ, ಬದಲಾಗಿ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ ಅಷ್ಟೇ. ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Continue Reading

ಟಾಲಿವುಡ್

Bandaru Supritha Naidu: ವಿಜಯ್‌ದೇವರಕೊಂಡರನ್ನು ಮದುವೆಯಾಗುತ್ತಿದ್ದಾರಂತೆ ತೆಲುಗು ಖ್ಯಾತ ನಟಿಯ ಮಗಳು!

Bandaru Supritha Naidu: ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ ತೆಲುಗು ಮಂದಿಗೆ ಚಿರಪರಿಚಿತ. ಇತ್ತೀಚೆಗೆ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಲೈವ್‌ಗೆ ಬಂದಿದ್ದರು.ಈ ವೇಳೆ ನೀವು ಯಾವ ಅವಿವಾಹಿತ ಹೀರೊನಾ ಮದುವೆ ಆಗಲು ಬಯಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದರು. ನಟಿಯ ಉತ್ತರಕ್ಕೆ ನೆಟ್ಟಿಗರು ಶಾಕ್‌ ಆಗಿದ್ದಾರೆ.

VISTARANEWS.COM


on

Bandaru Supritha Naidu surekha vani daughter wants to marry vijay deverakonda
Koo

ತೆಲುಗಿನ ಹಿರಿಯ ನಟಿ ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ (Bandaru Supritha Naidu) ಹೆಸರು ವಿಜಯ್ ದೇವರಕೊಂಡ ಜತೆ ಕೇಳಿಬರುತ್ತಿದೆ.

ಸುರೇಖಾ ವಾಣಿ ಅವರ ಪುತ್ರಿ ಸುಪ್ರಿತಾ ತೆಲುಗು ಮಂದಿಗೆ ಚಿರಪರಿಚಿತ. ಇತ್ತೀಚೆಗೆ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಲೈವ್‌ಗೆ ಬಂದಿದ್ದರು. ತಮ್ಮನ್ನು ಫಾಲೋ ಮಾಡುವವರಿಗೆ ನಿಮ್ಮಲ್ಲಿ ಏನಾದರೂ ಪ್ರಶ್ನೆಗಳಿದ್ದರೆ ಕೇಳಿ ಎಂದಿದ್ದರು. ಈ ವೇಳೆ ನೆಟ್ಟಿಗರು ಪ್ರಶ್ನೆಗಳನ್ನು ಕೇಳಿದ್ದರು.

ಈ ವೇಳೆ ನೀವು ಯಾವ ಅವಿವಾಹಿತ ಹೀರೊನಾ ಮದುವೆ ಆಗಲು ಬಯಸುತ್ತೀರಾ? ಎಂದು ಪ್ರಶ್ನೆ ಮಾಡಿದ್ದರು.ಈ ಪ್ರಶ್ನೆಗೆ ಸುಪ್ರಿತಾ ವಿಜಯ್ ದೇವರಕೊಂಡ ಎಂದು ಹೇಳಿದ್ದಾರೆ. ವಿಜಯ್ ದೇವರಕೊಂಡ ಅವರ ಫೋಟೊವನ್ನು ಕೂಡ ಶೇರ್ ಮಾಡಿಕೊಂಡಿದ್ದರು.

ಇದನ್ನೂ ಓದಿ: MI vs KKR: ಮತ್ತೆ ಮುಂಬೈ ವಿರುದ್ಧ ಕೇಳಿಬಂದ ಟಾಸ್​ ಫಿಕ್ಸಿಂಗ್​ ಆರೋಪ

ಇದೀಗ ನೆಟ್ಟಿಗರು ವಿಜಯ್ ದೇವರಕೊಂಡ ಜೊತೆ ಸುಪ್ರಿತಾರನ್ನು ಮದುವೆ ಮಾಡಿಸುವುದಕ್ಕೆ ನಿಂತಿದ್ದಾರೆ.

ಅಮರ್ ದೀಪ್ ಚೌಧರಿ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಮೂಲಕ ಸುಪ್ರಿತಾ ನಾಯಕಿಯಾಗಿ ಪರಿಚಯವಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Continue Reading
Advertisement
Jyoti Rai seeks divine blessings at tirupathi
ಕಿರುತೆರೆ11 mins ago

Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

Kochi Tour
ಪ್ರವಾಸ32 mins ago

Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

Prajwal Revanna Case HD Revanna jailed
ಪ್ರಮುಖ ಸುದ್ದಿ40 mins ago

HD Revanna Jailed: ಇಂದು ಏನಾಗುತ್ತೆ ಎಚ್‌ಡಿ ರೇವಣ್ಣ ಭವಿಷ್ಯ? ಜಾಮೀನು ಅರ್ಜಿ ಮತ್ತೆ ವಿಚಾರಣೆ

ICMR  Good Health Guidelines
ಆರೋಗ್ಯ41 mins ago

ICMR Good Health Guidelines: ಆರೋಗ್ಯವಾಗಿರಲು ಎಷ್ಟು ಗಂಟೆ ನಿದ್ದೆ ಮಾಡಬೇಕು, ಎಷ್ಟು ಗಂಟೆ ಕೆಲಸ ಮಾಡಬೇಕು? ಆಹಾರ ಏನಿರಬೇಕು?

Lok Sabha Election
ದೇಶ1 hour ago

Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ ಆರಂಭ; ʻಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿʼ ಎಂದ ಮೋದಿ

elephant attack charmadi ghat
ವೈರಲ್ ನ್ಯೂಸ್2 hours ago

Elephant Attack: ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ; ಬೆಚ್ಚಿಬಿದ್ದ ಡ್ರೈವರ್‌ನಿಂದ ಅಪಘಾತ!

karnataka weather forecast karnataka rains
ಮಳೆ2 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ4 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case
ಕರ್ನಾಟಕ9 hours ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ9 hours ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather forecast karnataka rains
ಮಳೆ2 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ4 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ14 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ15 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ15 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ19 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ20 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

ಟ್ರೆಂಡಿಂಗ್‌