‘ಅಗ್ನಿಸಾಕ್ಷಿ’ (Shobha Shetty) ಹಾಗೂ ‘ನಮ್ಮ ರುಕ್ಕು’ ಧಾರಾವಾಹಿಗಳಲ್ಲಿ ನಟಿಸಿದ ಶೋಭಾ ಶೆಟ್ಟಿ ಸದ್ಯ ತೆಲುಗು ವೀಕ್ಷಕರ ಮನ ಗೆದ್ದಿದ್ದಾರೆ.
ನಟ ಯಶ್ವಂತ್ ಎಂಬುವವರನ್ನು ಪ್ರೀತಿಸಿ ಮದುವೆ ಆಗಲು ಆಕೆ ಮುಂದಾಗಿದ್ದಾರೆ. ಈಗಾಗಲೇ ಇಬ್ಬರು ಮದುವೆ ನಿಶ್ಚಯವಾಗಿದೆ.
ಶೋಭಾ ಈಗಾಗಲೇ ಹೈದರಾಬಾದ್‌ನಲ್ಲಿ ಹೊಸ ಮನೆ ಖರೀದಿಸಿದ್ದಾರೆ. ಗೃಹ ಪ್ರವೇಶ ಕೂಡ ಆಗಿದ್ದು, ಮುಂದಿನ ತಿಂಗಳು ಆ ಮನೆಗೆ ಶಿಫ್ಟ್ ಆಗಲಿದ್ದಾರೆ. ಬೀಸ್ಟ್ ಎಕ್ಸ್‌ಯುವಿ 700 ಕಾರ್ ಅನ್ನು ಈ ವರ್ಷ ಯಶ್ವಂತ್ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಆಗಿ ಕೊಟ್ಟಿದ್ದಾರೆ.
ಕನ್ನಡದಲ್ಲಿ ‘ಅಗ್ನಿಸಾಕ್ಷಿ’ ಧಾರಾವಾಹಿಯ ತನು ಪಾತ್ರ ಆಕೆಗೆ ಹೆಸರು ತಂದುಕೊಟ್ಟಿತ್ತು.
ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್ ಡೇಟ್ ಅನೌನ್ಸ್ ಮಾಡಿದ ದುನಿಯಾ ವಿಜಯ್; ಸ್ಟಾರ್ ಹಿರೋ ಸಿನಿಮಾ ಜತೆ ಕ್ಲ್ಯಾಶ್?
ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಗಮನ ಸೆಳೆದ ಶೋಭಾ ಶೆಟ್ಟಿ ವರ್ಷಗಳ ಹಿಂದೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ರುಕ್ಕು’ ಧಾರಾವಾಹಿಯಲ್ಲಿ ನಟಿಸಿ, ಅದನ್ನೂ ಅರ್ಧಕ್ಕೆ ಬಿಟ್ಟಿದ್ದರು. ‘ಪಡುವಾರಹಳ್ಳಿ ಪಡ್ಡೆಗಳು’ ಧಾರಾವಾಹಿಯೊಂದಿಗೆ ಚಿತ್ರರಂಗಕ್ಕೆ ಕಾಲಿಟ್ಟ ಶೋಭಾ ಅವರು ಕನ್ನಡದ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ಹೆಚ್ಚು ಕಾಣಿಸಿಕೊಂಡರು. ಆ ನಂತರ ಮತ್ತೆ ಅವರು ತೆಲುಗಿನಲ್ಲಿಯೇ ಬ್ಯುಸಿ ಆದರು.