ಬೆಂಗಳೂರು: ಎಸ್‌ಪಿಬಿ ಎಂದೇ ಖ್ಯಾತರಾಗಿದ್ದ (S. P. Balasubrahmanyam) ಎಸ್ ಪಿ ಬಾಲುಸುಬ್ರಹ್ಮಣ್ಯಂ (SPB) ಅವರು ತಮ್ಮ ಕಂಠಸಿರಿಯಿಂದಲೇ ಭಾರತೀಯ ಚಿತ್ರರಂಗದ ಶ್ರೀಮಂತಿಕೆಯನ್ನು ಹೆಚ್ಚಿಸಿದರು. ಅದರಲ್ಲೂ ದಕ್ಷಿಣ ಭಾರತದ ಚಿತ್ರರಂಗವನ್ನು ಎಸ್‌ಪಿಬಿ ಅವರನ್ನು ಹೊರಗಿಟ್ಟು ನೋಡಲು ಸಾಧ್ಯವೇ ಇಲ್ಲ. ಸುಮಾರು ಐದು ದಶಕಗಳ ಕಾಲ ಅವರು ಕೇಳುಗರನ್ನು ರಂಜಿಸಿದರು. ಸಮ್ಮೋಹನಗೊಳಿಸಿದರು. ಸಾವಿರಾರು ಹಾಡುಗಳನ್ನು ಹಾಡಿರುವ ಎಸ್‌ಪಿಬಿ 2020, ಸೆಪ್ಟೆಂಬರ್ 25ರಂದು ಇಹಲೋಕ ತ್ಯಜಿಸಿದ್ದರು. ಎಸ್‌ಪಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಕೊರೊನಾದಿಂದ ಚೇತರಿಸಿಕೊಳ್ಳಲೇ ಇಲ್ಲ. ಆದರೀಗ ತೆಲುಗಿನ ಹಿರಿಯ ನಟ ಶುಭಾಲೇಖಾ ಸುಧಾಕರ್ (subhalekha sudhakar) ಅವರು ಎಸ್‌ಪಿಬಿ ಸಾವಿಗೆ ನಾನೂ ಒಬ್ಬ ಕಾರಣವೆಂದು ಹೇಳಿದ್ದಾರೆ. ಈ ಶಾಕಿಂಗ್ ಹೇಳಿಕೆ ಕೇಳಿ ಎಸ್ ಪಿ ಬಾಲುಸುಬ್ರಹ್ಮಣ್ಯಂ ಫ್ಯಾನ್ಸ್ ಅಚ್ಚರಿಗೆ ಒಳಗಾಗಿದ್ದಾರೆ.
ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ, ತುಳು, ಪಂಜಾಬಿ, ಮರಾಠಿ ಹೀಗೆ ದೇಶದ ಎಲ್ಲ ಭಾಷೆಗಳಲ್ಲೂ ಎಸ್‌ಪಿಬಿ ಹಾಡಿದ್ದಾರೆ. ಐದು ದಶಕಗಳ ಅವಧಿಯಲ್ಲಿ 45 ಸಾವಿರ ಹಾಡುಗಳನ್ನು ಹಾಡುವುದೆಂದರೆ ಹುಡುಗಾಟವೇನಲ್ಲ. ಅದೇ ಕಾಲಕ್ಕೆ ಎಲ್ಲ ದಿಗ್ಗಜ ಸಂಗೀತ ನಿರ್ದೇಶಕರ ಜತೆ ಕೆಲಸ ಮಾಡಿದ್ದಾರೆ. ಅದರಲ್ಲೂ ತಮಿಳಿನಲ್ಲಿ ಇಳಯರಾಜಾ-ಎಸ್‌ಪಿಬಿ-ರಜಿನಿಕಾಂತ್ ಜೋಡಿ ಎಲ್ಲಡೆ ಮೋಡಿ ಮಾಡಿತ್ತು. ಕನ್ನಡದಲ್ಲೂ ಹಂಸಲೇಖ-ಎಸ್‌ಪಿಬಿ- ರವಿಚಂದ್ರನ್ ಜೋಡಿಗೆ ಇಂಥದ್ದೇ ಫ್ಯಾನ್ ಕ್ರೇಜ್ ಇತ್ತು. ಆದರೀಗ ಶುಭಾಲೇಖಾ ಸುಧಾಕರ್ ಅವರು ಎಸ್‌ಪಿಬಿ ಸಾವಿಗೆ ನಾನೂ ಒಬ್ಬ ಕಾರಣವೆಂದು ಹೇಳಿದ್ದಾರೆ.
ಇದನ್ನೂ ಓದಿ: Challenging Star Darshan: 21 ವರ್ಷದ ಬಳಿಕ ಒಂದಾದ ದರ್ಶನ್-ಪ್ರೇಮ್: ಹೊಸ ಸಿನಿಮಾ ಅನೌನ್ಸ್!
ಎಸ್‌ಪಿಬಿ ಸಹೋದರಿಯನ್ನೇ ಟಾಲಿವುಡ್‌ನ ಹಿರಿಯ ನಟ ಶುಭಾಲೇಖಾ ಸುಧಾಕರ್ ವಿವಾಹವಾಗಿದ್ದಾರೆ. ಕೊರೊನಾ ಸಮಯದಲ್ಲಿ ಶುಭಾಲೇಖಾ ಸುಧಾಕರ್ ತೆಲುಗು ಸಿನಿಮಾವೊಂದರ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ಎರಡನೇ ಅಲೆ ಇದ್ದ ಕಾರಣ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆ ಸಮಯದಲ್ಲಿ ಆದೇಶವಿತ್ತು. ಈ ಸಮಯದಲ್ಲಿ ಶುಭಾಲೇಖಾ ಸುಧಾಕರ್ ಸಿನಿಮಾವೊಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅದೇ ವೇಳೆ ಎಸ್‌ಪಿಬಿ ಇವರಿಗೆ ಫೋನ್ ಮಾಡಿದ್ದರು. ಆಗ ಕೂಡ ಶುಭಾಲೇಖಾ ಅವರಿಗೆ ಎಸ್‌ಪಿಬಿ ಅವರು ಈ ಸಮಯದಲ್ಲಿ ಚಿತ್ರೀಕರಣ ಮಾಡುತ್ತಿರುವುದು ಯಾಕೆ? ಎಂದು ಕೇಳಿದ್ದರಂತೆ.
ಈ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮಾಡುತ್ತಿರುವುದಾಗಿ ಹೇಳಿದ್ದರು. ಆ ವೇಳೆ ಎಸ್‌ಪಿಬಿ ಒಂದು ದಿನ ಶೂಟಿಂಗ್ ಸ್ಪಾಟ್‌ಗೆ ಹೋಗಿದ್ದರು. ಕೆಲವರು ಅವರ ಜತೆ ಫೋಟೊ ಕೂಡ ಕ್ಲಿಕ್ಕಿಸಿಕೊಂಡಿದ್ದಾರೆ. 96 ಫೋಟೊವರೆಗೆ ಫೋಟೊ ತೆಗಿಸಿಕೊಂಡಿದ್ದಾರೆ. ಮೂರು ದಿನಗಳಾದ ಬಳಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂಗೆ ಕೊರೊನಾ ಸೋಂಕು ತಗುಲಿತ್ತು. ಆ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಕೊರೊನಾದಿಂದ ಚೇತರಿಸಿಕೊಳ್ಳಲೇ ಇಲ್ಲ ಎಂದು ಹೇಳಿಕೊಂಡಿದ್ದಾರೆ.