Site icon Vistara News

Vasishta Simha: ಮಿಲ್ಕಿ ಬ್ಯೂಟಿ ಜತೆ ಮೆರವಣಿಗೆ ಹೊರಟ ಕನ್ನಡದ ಸಿಂಹ!

Tamannaah to star next in Odela 2

ಬೆಂಗಳೂರು: ಸ್ಯಾಂಡಲ್‌ವುಡ್‌ನ ಕಂಚಿನ ಕಂಠದ ನಟ ವಸಿಷ್ಠ ಸಿಂಹ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ (Vasishta Simha) ನಟಿಸುತ್ತಿದ್ದಾರೆ. ಕನ್ನಡದ ಜತೆಗೆ ಪರಭಾಷೆಯಲ್ಲಿಯೂ ಮಿಂಚುತ್ತಿದ್ದಾರೆ. ಗಾಯಕನಾಗಿ ತೆಲುಗು ಚಿತ್ರಕ್ಕೆ ಪರಿಚಿತರಾಗಿದ್ದ ವಸಿಷ್ಠ ಸಿಂಹ `ಓದೆಲಾ ರೈಲ್ವೆ ಸ್ಟೇಷನ್’ ಸಿನಿಮಾ (odela railway station) ಮೂಲಕ ನಾಯಕನಾಗಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿದ್ದಾರೆ. ಈ ಮೂಲಕ ತೆಲುಗು ನೆಲದಲ್ಲಿ ಗಾಯನದ ಜತೆಗೆ ಕಲಾ ಸೇವೆಯನ್ನೂ ಮುಂದುವರಿಸಲಿದ್ದಾರೆ.

2022ರಲ್ಲಿ ಆಹಾ ಒಟಿಟಿಯಲ್ಲಿ ಬಿಡುಗಡೆಯಾಗಿದ್ದ ʻಓದೆಲಾ ರೈಲ್ವೆ ಸ್ಟೇಷನ್ʼ ಸಿನಿಮಾಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಈ ಚಿತ್ರದಲ್ಲಿ ವಸಿಷ್ಠ ಸಿಂಹ ವಿಭಿನ್ನ ಪಾತ್ರದಲ್ಲಿ ಅಭಿನಯ ಮಾಡಿದ್ದರು. ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಇದೂವರೆಗೂ ಮಾಡಿರದಂತಹ ವಿಶಿಷ್ಟ ಪಾತ್ರದಲ್ಲಿ ವಸಿಷ್ಠ ಕಾಣಿಸಿದ್ದಾರೆ. ಇದೀಗ ʻಓದೆಲಾ ರೈಲ್ವೆ ಸ್ಟೇಷನ್‌ ಪಾರ್ಟ್ 2ʼ ತಯಾರಾಗುತ್ತಿದೆ. ಅದರ ಭಾಗವಾಗಿ ಮಾ.2ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ. ಮಿಲ್ಕ್​ ಬ್ಯೂಟಿ ತಮನ್ನಾ, ವಸಿಷ್ಠ ಸಿಂಹ ಫೋಟೋಗೆ ಪೋಸ್ ಕೊಟ್ಟಿದ್ದು, ಇದರಲ್ಲಿ ಹರಿಪ್ರಿಯ ಕೂಡ ಇದ್ದಾರೆ. ʻಓದೆಲಾ ರೈಲ್ವೆ ಸ್ಟೇಷನ್ʼ ಸೀಕ್ವೆಲ್​ನ ಶೂಟಿಂಗ್ ನಿನ್ನೆಯಿಂದನೇ ಪ್ರಾರಂಭವಾಗಿದೆ.

ʻಓದೆಲಾ ರೈಲ್ವೆ ಸ್ಟೇಷನ್ʼ ಮೊದಲ ಭಾಗದಲ್ಲಿ ನಟಿ ಹೆಬಾ ಪಟೇಲ್ (Hebah Patel) ಜತೆ ವಸಿಷ್ಠ ಸಿಂಹ ಅಭಿನಯಿಸಿದ್ದರು. ಆದರೆ ಎರಡನೇ ಭಾಗದಲ್ಲಿ ಮಿಲ್ಕ್​​ ಬ್ಯೂಟಿ ತಮನ್ನಾ ಭಾಟಿಯಾ ಜತೆ ವಸಿಷ್ಠ ಸಿಂಹ ಹೆಜ್ಜೆ ಹಾಕಲಿದ್ದಾರೆ. ಹಾಗಂತ ಹೆಬಾ ಪಟೇಲ್ ಇಲ್ಲ ಅಂತಲ್ಲ. ಅವರು ಕೂಡ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Vasishta Simha: ಯೂಟ್ಯೂಬ್‌ನಲ್ಲಿ ʼಕಾಲಚಕ್ರʼ ಸಿನಿಮಾ ರಿಲೀಸ್; ಚಿತ್ರತಂಡದ ಬಗ್ಗೆ ವಸಿಷ್ಠ ಸಿಂಹ ಬೇಸರ

ಮಧು ಕ್ರಿಯೇಷನ್ಸ್ ಮತ್ತು ಸಂಪತ್ ನಂದಿ ಟೀಂ ವರ್ಕ್ ಬ್ಯಾನರ್ ನಡಿ ಡಿ.ಮಧು ಚಿತ್ರ ನಿರ್ಮಾಣ ಮಾಡುತ್ತಿದ್ದು, ಅಶೋಕ ತೇಜ ಓದೆಲಾ ರೈಲ್ವೆ ಸ್ಟೇಷನ್ ಸೀಕ್ವೆಲ್‌ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸೌಂದರ್ ರಾಜನ್ ಎಸ್ ಛಾಯಾಗ್ರಹಣ, ಕಾಂತಾರ ಮ್ಯೂಸಿಕ್ ಮಾಂತ್ರಿಕ ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ.

Exit mobile version