ಬೆಂಗಳೂರು: ವಿಜಯ್ ದೇವರಕೊಂಡ (Vijay Devarakonda) ಮತ್ತು ಮೃಣಾಲ್ ಠಾಕೂರ್ (Mrinal Thakur) ಅಭಿನಯದ ಬಹುನಿರೀಕ್ಷಿತ ಫ್ಯಾಮಿಲಿ ಎಂಟರ್‌ಟೈನರ್ ʻಫ್ಯಾಮಿಲಿ ಸ್ಟಾರ್ʼ ಸಿನಿಮಾ(Family Star) ಏಪ್ರಿಲ್ 5ರಂದು ಬಿಡುಗಡೆಯಾಗುತ್ತಿದೆ. ರಶ್ಮಿಕಾ ಮಂದಣ್ಣ (Rashmika Mandanna’s birthday) ಅವರು ಏಪ್ರಿಲ್ 5ರಂದು ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅದೇ ದಿನ ವಿಜಯ್ ದೇವರಕೊಂಡ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ.
ʻಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು. ಏಪ್ರಿಲ್ 5 ರಂದು ಬಿಡುಗಡೆಯಾಗಲಿರುವ ʻಫ್ಯಾಮಿಲಿ ಸ್ಟಾರ್ʼ ಟ್ರೈಲರ್ ಮೂಲಕ ಪ್ರೆಕ್ಷಕರಿಗೆ ನಿರೀಕ್ಷೆ ಹೆಚ್ಚಿಸಿದೆ.
ಚಿತ್ರದ ಪ್ರಚಾರದ ಭಾಗವಾಗಿ, ವಿಜಯ್ ದೇವರಕೊಂಡ ಇತ್ತೀಚೆಗೆ “ಕಿಟ್ಟಿ ಪಾರ್ಟಿ” ಚಾಟ್‌ನಲ್ಲಿ ಭಾಗವಹಿಸಿದ್ದರು. ಈ ಸಂವಾದದ ಸಮಯದಲ್ಲಿ, ನಟಿ ರಶ್ಮಿಕಾ ಮಂದಣ್ಣ ಅವರ ಜನ್ಮದಿನವೇ ಸಿನಿಮಾ ರಿಲೀಸ್ ಏಕೆ? ಎಂಬ ಪ್ರಶ್ನೆ ಕೇಳಲಾಗಿತ್ತು. ಆಗ ವಿಜಯ್ ಈ ಬಗ್ಗೆ ಮಾತನಾಡಿ ʻʻ”ಹೌದು, ಅಂದು ರಶ್ಮಿಕಾ ಅವರ ಜನ್ಮದಿನ. ಇದು ನಮಗೆ ಅದೃಷ್ಟ ಎಂದು ನಾನು ಭಾವಿಸುತ್ತೇನೆ” ಎಂದು ನಗುತ್ತ ಮಾತಿಗೆ ಫುಲ್ ಸ್ಟಾಪ್ ಇಟ್ಟರು.
ಇದನ್ನೂ ಓದಿ: Vijay Devarakonda: ವಿದ್ಯಾರ್ಥಿನಿಯರಿಂದ ವಿಚಿತ್ರ ಬೇಡಿಕೆ; ಪ್ರತಿಕ್ರಿಯೆ ಕೊಟ್ಟೇ ಬಿಟ್ಟ ವಿಜಯ್ ದೇವರಕೊಂಡ!
ಸದ್ಯ ರಶ್ಮಿಕಾ ಅಬು ಧಾಬಿಯಲ್ಲಿ ಇದ್ದಾರೆ. ‘ನನ್ನ ಬರ್ತ್ಡೇ ವೀಕ್’ ಎಂದು ಅವರು ವಿಡಿಯೊಗೆ ಕ್ಯಾಪ್ಷನ್ ನೀಡಿದ್ದಾರೆ. ಏಪ್ರಿಲ್ 3ರಂದೇ ವಿಜಯ್ ಅವರು ಇಲ್ಲಿಗೆ ತೆರಳಿದ್ದಾರೆ ಎಂದು ವರದಿ ಆಗಿದೆ. ರಶ್ಮಿಕಾ ಸದ್ಯ ಅಬು ಧಾಬಿಯಲ್ಲಿರುವ ಸರ್ ಬನಿಯಾಸ್ ಐಸ್ಲ್ಯಾಂಡ್ನಲ್ಲಿದ್ದಾರೆ. ವಿಜಯ್ ದೇವರಕೊಂಡ ಕೂಡ ಇಲ್ಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.
ವದಂತಿಗಳ ಪ್ರಕಾರ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗಿತ್ತು. ಆದರೂ ಈ ಜೋಡಿ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಖಚಿತಪಡಿಸಿಲ್ಲ.
ಸಂದೀಪ್ ರೆಡ್ಡಿ ವಂಗಾ ಅವರ ರಣಬೀರ್ ಕಪೂರ್ ಅಭಿನಯದ ʻಅನಿಮಲ್ʼ (2023) ಚಿತ್ರದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ರಶ್ಮಿಕಾ ʻಫ್ಯಾಮಿಲಿ ಸ್ಟಾರ್ʼನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ, ಬಹುಶಃ ಮದುವೆಯ ಹಾಡು ʻಕಲ್ಯಾಣಿ ವಲ್ಲಾʼದಲ್ಲಿ ಕಾಣಿಸಿಕೊಳ್ಳಬಹುದು ಎಂಬ ಗುಸುಗುಸು ಇದೆ. ಆದರೆ, ಚಿತ್ರತಂಡ ಈ ಮಾಹಿತಿಯನ್ನು ರಿವೀಲ್ ಮಾಡಿಲ್ಲ.
ಇದನ್ನೂ ಓದಿ: Lok Sabha Election 2024: ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡಲೋ? ಕಿತ್ತುಕೊಳ್ಳಲೋ? ಸಿಎಂ ಪ್ರಶ್ನೆ
ʻಫ್ಯಾಮಿಲಿ ಸ್ಟಾರ್ʼ ಚಿತ್ರಕ್ಕೆ ಗೋಪಿಸುಂದರ್ ಸಂಗೀತ ನೀಡಿದ್ದು, ಇದುವರೆಗೆ ಬಿಡುಗಡೆಯಾಗಿರುವ ಮೂರು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶ್ರೀವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಷ್ ನಿರ್ಮಿಸಿರುವ ಈ ಚಿತ್ರ ಬಿಡುಗಡೆಗೆ ತಯಾರಾಗಿದೆ.