ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಸಚಿವರೂ ಆದ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ (Sanatan Dharma) ಕುರಿತು ನೀಡಿದ (udhayanidhi stalin news kannada) ಹೇಳಿಕೆ ಈಗ ಭಾರಿ ವಿವಾದಕ್ಕೆ (Sanatana dharma row) ಕಾರಣವಾಗಿದೆ. “ಸನಾತನ ಧರ್ಮವು ಮಲೇರಿಯಾ, ಕೊರೊನಾ ಹಾಗೂ ಡೆಂಗ್ಯೂ ಇದ್ದಂತೆ” ಎಂದು ಉದಯನಿಧಿ (Udhayanidhi Stalin) ಸ್ಟಾಲಿನ್ ಹೇಳಿದ್ದು, ಅವರ ಹೇಳಿಕೆಗೆ ತೀವ್ರ ವಿರೋಧ, ಟೀಕೆ (Sanatan Dharma) ವ್ಯಕ್ತವಾಗಿವೆ. ಈ ನಡುವೆ, ಉದಯನಿಧಿ ಸ್ಟಾಲಿನ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (rakshit shetty) ಅಭಿನಯದ ʻಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ (sapta sagaradaache ello) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉದಯನಿಧಿ ಸ್ಟಾಲಿನ್ ತಮ್ಮ ಟ್ವೀಟ್‌ನಲ್ಲಿ ʻʻರಕ್ಷಿತ್ ಶೆಟ್ಟಿ ಅಣ್ಣ! ನಿಮ್ಮ ಇತ್ತೀಚಿನ ಚಿತ್ರ ʼಸಪ್ತಸಾಗರದಾಚೆ ಎಲ್ಲೋʼ ಇಷ್ಟವಾಯಿತು. ಸಪ್ತಸಾಗರ ಅದ್ಭುತ ಸಿನಿಮಾ ಮೇಕಿಂಗ್. ಇಡೀ ತಂಡಕ್ಕೆ ಅಭಿನಂದನೆಗಳು! ಸೈಡ್ ಬಿ ಗಾಗಿ ಕಾತುರದಿಂದ ಕಾಯುತ್ತಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Sanatan Dharma: ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಭುಗಿಲೆದ್ದ ವಿವಾದ
ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಉದಯನಿಧಿ ಸ್ಟಾಲಿನ್ ವಿವಾದಾತ್ಮಕವಾಗಿ ಮಾತನಾಡಿದ್ದರು.
“ಕೆಲವು ವಿಷಯಗಳನ್ನು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಒಳ್ಳೆಯದು. ನಾವು ಡೆಂಗ್ಯೂ, ಸೊಳ್ಳೆ, ಮಲೇರಿಯಾ ಅಥವಾ ಕೊರೊನಾದಂತಹ ಸೋಂಕನ್ನು ವಿರೋಧಿಸಬಾರದು. ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು” ಎಂದು ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ವಿರುದ್ಧ ಭಾಷಣ ಮಾಡಿದ್ದರು.
ʻʻಸನಾತನ ಧರ್ಮವನ್ನು ಅನುಸರಿಸುವ ದೇಶದ ಶೇ.80ರಷ್ಟು ಜನರ ಹತ್ಯೆಗೆ ಉದಯನಿಧಿ ಕರೆ ನೀಡಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಆಕ್ರೋಶ ವ್ಯಕ್ತಪಡಿಸಿದ್ದರು. ಮತ್ತೊಂದೆಡೆ ವಿವಾದದ ಬಳಿಕ ಪ್ರತಿಕ್ರಿಯಿಸಿರುವ ಉದಯನಿಧಿ ಸ್ಟಾಲಿನ್, “ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಕಾನೂನು ಹೋರಾಟ ಸೇರಿ ಯಾವುದೇ ಹೋರಾಟಕ್ಕೂ ನಾನು ಸಿದ್ಧನಿದ್ದೇನೆ” ಎಂದು ಹೇಳಿದ್ದರು.