ಬೆಂಗಳೂರು: ನಟ (Sandalwood Actor) ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನ (Spandana Spandana Vijay Raghavendra) ಅವರು ಮೃತಪಟ್ಟು (Spandana Death) ಒಂದು ವರ್ಷವೇ ಕಳೆದಿದ್ದು, ಅಗಲಿದ ಪತ್ನಿಯನ್ನು ನೆನೆದುಕೊಂಡು ವಿಜಯ್ ರಾಘವೇಂದ್ರ ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ.
ಕಳೆದ ವರ್ಷ ಹೃದಯಾಘಾತದಿಂದ ನಿಧನರಾಗಿದ್ದ ಪತ್ನಿಯನ್ನು ನೆನೆದು ವಿಜಯ್ ರಾಘವೇಂದ್ರ ಇಂದು ಸೋಶಿಯಲ್ ಮೀಡಿಯಾ ಇನ್‌ಸ್ಟಾಗ್ರಾಂನಲ್ಲಿ ಪ್ರೀತಿಯ ಸಂದೇಶ ಹಾಗೂ ಫೋಟೋ ಪೋಸ್ಟ್ ಮಾಡಿದ್ದಾರೆ. ʼಐ ಲವ್ ಯು ಚಿನ್ನ.. ಮೌನದಲಿ ಅರಳಿದ ನಗು ನಿನ್ನದು.. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದುʼ ಎಂದು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.
ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಮ್ ಅವರ ಪುತ್ರಿ. ವಿಜಯ್ ರಾಘವೇಂದ್ರ ಮತ್ತು ಸ್ಪಂದನಾ ಅವರು 2007ರ ಆಗಸ್ಟ್ 26ರಂದು ಮದುವೆ ಆಗಿದ್ದರು. ಈ ದಂಪತಿಗೆ ಶೌರ್ಯ ಹೆಸರಿನ ಮಗ ಇದ್ದಾನೆ.
ಕಳೆದ ವರ್ಷ ಬ್ಯಾಂಕಾಕ್ ಪ್ರವಾಸದಲ್ಲಿದ್ದ ವೇಳೆ ಸ್ಪಂದನಾ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡುವ ಪ್ರಯತ್ನ ಮಾಡಲಾಯಿತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದರು. ಅವರ ಪಾರ್ಥಿವ ಶರೀರವನ್ನು ಆ.8ರಂದು ಬೆಂಗಳೂರಿಗೆ ತಂದು ಅತ್ಯಸಂಸ್ಕಾರಗಳನ್ನು ಮಾಡಲಾಗಿತ್ತು. ಸ್ಪಂದನಾ ಅವರ ನಿಧನ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಆಘಾತವನ್ನು ಉಂಟು ಮಾಡಿತ್ತು. ಹಲವು ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ವಿಜಯ್ ರಾಘವೇಂದ್ರಗೆ ಸಾಂತ್ವನ ಹೇಳಿದ್ದರು.
ಧರ್ಮಸ್ಥಳದಲ್ಲಿ ರಾಕಿಂಗ್ ಸ್ಟಾರ್ ಯಶ್, ಟಾಕ್ಸಿಕ್ ಶೂಟಿಂಗ್‌ಗೂ ಮುನ್ನ ಟೆಂಪಲ್ ರನ್
ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ಇಂದು ರಾಕಿಂಗ್ ಸ್ಟಾರ್ ಯಶ್ (Rocking Star, Actor Yash) ಭೇಟಿ ನೀಡಿದರು. ಹೊಸ ಚಿತ್ರ ʼಟಾಕ್ಸಿಕ್ʼನ (Toxic) ಶೂಟಿಂಗ್ ಇನ್ನು ಮೇಲೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ದರ್ಶನ ಮಾಡಿದ್ದಾರೆ ಎನ್ನಲಾಗಿದೆ.
ಮಳೆಯಿಂದ ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತಾದಿಗಳ ಜನಸಂದಣಿ ಕಡಿಮೆಯಾಗಿರುವ ಸಮಯದಲ್ಲಿ ರಾಕಿಭಾಯ್ ಟೆಂಪಲ್ ರನ್ (Temple Run) ನಡೆಸಿದ್ದಾರೆ. ಇಂದು ಧರ್ಮಸ್ಥಳದ ಶ್ರೀ ಮಂಜುನಾಥ ದೇವರ ದರ್ಶನ ಮಾಡಿದ್ದು, ನಂತರ ಬೆಳ್ತಂಗಡಿಯ ಸೂರ್ಯ ದೇವಸ್ಥಾನಕ್ಕೆ ವಿಸಿಟ್ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.
ʼಟಾಕ್ಸಿಕ್ʼ ಹೊಸಚಿತ್ರದ ಶೂಟಿಂಗ್ ಸದ್ಯದಲ್ಲೇ ಆರಂಭವಾಗುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಟ್ಟು ಮಂಜುನಾಥನ ದರ್ಶನ ಪಡೆದಿದ್ದಾರೆ. ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ (Dr Veerendra Heggade) ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದರು.
ಈ ನಡುವೆ, ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಿಸಲಾಗಿದೆ ಎಂದು ನಿರ್ಮಾಪಕರ ವಿರುದ್ಧ ದೂರು ನೀಡಲಾಗಿದ್ದು, ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಶುರುವಾಗಿದೆ. ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ.
ಇದನ್ನೂ ಓದಿ: Spandana Vijay Raghavendra: ಸ್ಪಂದನಾ ಉತ್ತರ ಕ್ರಿಯೆಗೆ ಸಿದ್ಧತೆ; ಸರ್ವರಿಗೂ ಆಹ್ವಾನಿಸಿದ ವಿಜಯ ರಾಘವೇಂದ್ರ ಕುಟುಂಬ