Site icon Vistara News

Shraddha Srinath: ವೆಂಕಟೇಶ್ ದಗ್ಗುಭಾಟಿ ನಟನೆಯ ‘ಸೈಂಧವ್ʼ ಸಿನಿಮಾಗೆ ಶ್ರದ್ಧಾ ಶ್ರೀನಾಥ್ ನಾಯಕಿ

Sraddha Srinath Upcoming Film Saindhav

ಬೆಂಗಳೂರು: ʻಯೂಟರ್ನ್ʼ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಮೂಗುತಿ ಸುಂದರಿ ಶ್ರದ್ಧಾ ಶ್ರೀನಾಥ್ (Shraddha Srinath) ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ಧಾ ಅವರ ಕೈ ತುಂಬಾ ಅವಕಾಶಗಳಿವೆ. ಇದೀಗ ಅವರು ಪ್ಯಾನ್ ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ವಿಕ್ಟರಿ ವೆಂಕಟೇಶ್‌ಗೆ ಶ್ರದ್ಧಾ ನಾಯಕಿ

ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ (Venkatesh Daggubati ) ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ (Saindhav)ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ವೈಜಾಗ್‌ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ. ನಿಹಾರಿಕಾ ಎಂಟರ್ ಟೈನ್ಮೆಂಟ್ ನಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಸಿನಿಮಾಗೆ ಕನ್ನಡತಿ ಶ್ರದ್ಧಾ ಶ್ರೀನಾಥ್ ಎಂಟ್ರಿ ಕೊಟ್ಟಿದ್ದಾರೆ.

`ಸೈಂಧವ್’ ಸಿನಿಮಾದಲ್ಲಿ ಶ್ರದ್ಧಾ ಅವರು ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಅವರ ಫಸ್ಟ್ ಲುಕ್ ನೋಡುಗರ ಗಮನಸೆಳೆಯುತ್ತಿದೆ. ಸೀರೆಯುಟ್ಟು ಹೋಮ್ಲಿ ಲುಕ್ ಕಾಣಿಸಿಕೊಂಡಿರುವ ಶ್ರದ್ಧಾ, ಕೈಯಲ್ಲಿ ಟಿಫನ್ ಬಾಕ್ಸ್ ಹಿಡಿದು ಗಂಭೀರ ಆಲೋಚನೆಯಲ್ಲಿ ತೊಡಗಿದ್ದಾರೆ. ಜೆರ್ಸಿ ಸಿನಿಮಾದಲ್ಲಿ ಅದ್ಭುತ ಅಭಿಯನದ ಪ್ರದರ್ಶಿಸಿದ್ದ ಶ್ರದ್ಧಾ ಶ್ರೀನಾಥ್, ಸೈಂಧವ್ ಸಿನಿಮಾದಲ್ಲಿ ಮತ್ತೊಮ್ಮೆ ಎಲ್ಲರ ಗಮನಸೆಳೆಯಲಿದ್ದಾರೆ.

ಇದನ್ನೂ ಓದಿ: Sandalwood Star Fashion : ಅಜೆರ್ಬೈಜಾನ್‌ನ ವಿಂಟರ್‌ ಸ್ಟ್ರೀಟ್‌ ಫ್ಯಾಷನ್‌ಗೆ ಸೈ ಎಂದ ನಟಿ ಶ್ರದ್ಧಾ ಶ್ರೀನಾಥ್‌

ಶ್ರದ್ಧಾ ಶ್ರೀನಾಥ್ ಪೋಸ್ಟ್‌

ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿರಂಗ ಪ್ರವೇಶಿಸಿದ್ದಾರೆ. ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ಇತರ ಪಾತ್ರವರ್ಗ ರಿವೀಲ್ ಮಾಡಲಿರುವ ಚಿತ್ರತಂಡ, ಸೈಂಧವ್ ಸಿನಿಮಾವನ್ನು ಡಿಸೆಂಬರ್ 22ರಂದು ಕ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

Exit mobile version