ಬೆಂಗಳೂರು: ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಶ್ರೀನಿವಾಸ್ ಬೆಲ್ಲಂಕೊಂಡ ಇತ್ತೀಚೆಗೆ ಕೆಲವು ಕಾರ್ಯಕ್ರಮಗಳಲ್ಲಿ ಮತ್ತು ಮುಂಬೈ ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇಬ್ಬರೂ ರಿಲೇಶನ್‌ಶಿಪ್‌ನಲ್ಲಿದ್ದಾರೆ ಎಂಬ ವದಂತಿಗಳು ವೈರಲ್ ಆಗುತ್ತಿದ್ದಂತೆ ಈ ಬಗ್ಗೆ ಶ್ರೀನಿವಾಸ್ ಬೆಲ್ಲಂಕೊಂಡ (Sreenivas Bellamkonda) ಪ್ರತಿಕ್ರಿಯೆ ನೀಡಿದ್ದಾರೆ. ʻಛತ್ರಪತಿʼ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಲಿರುವ ಶ್ರೀನಿವಾಸ್ ಈಗ ಡೇಟಿಂಗ್ ವಿಚಾರದ ಬಗ್ಗೆ ಶೋವೊಂದರಲ್ಲಿ ಮಾತನಾಡಿದ್ದಾರೆ.
ರಶ್ಮಿಕಾ ಮತ್ತು ಅವರ ಸಹನಟ ವಿಜಯ್ ದೇವರಕೊಂಡ ಇಬ್ಬರೂ ಡೇಟಿಂಗ್‌ನಲ್ಲಿ ಇದ್ದಾರೆ ಎಂಬ ವದಂತಿಗಳಿಗೆ ನಟಿ ನಾವು ಒಳ್ಳೆಯ ಸ್ನೇಹಿತರು ಎಂದು ಸಮರ್ಥಿಸಿಕೊಂಡಿದ್ದಾರೆ. ಸಿದ್ಧಾರ್ಥ್ ಕಣ್ಣನ್ ಅವರ ಚಾಟ್ ಶೋನಲ್ಲಿ ಮಾತನಾಡಿದ ಶ್ರೀನಿವಾಸ್ ಬೆಲ್ಲಂಕೊಂಡ, “ಈ ಗಾಸಿಪ್‌ಗಳು ಹೇಗೆ ಬಂತು ಎಂದು ನನಗೆ ತಿಳಿಯುತ್ತಿಲ್ಲ. ಇದು ಸಂಪೂರ್ಣವಾಗಿ ಬೇಸ್‌ಲೆಸ್ ಎಂದು ನಾನು ಭಾವಿಸುತ್ತೇನೆ. ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಹೈದರಾಬಾದ್‌ನಿಂದ ಮುಂಬೈಗೆ ಆಗಾಗ ಬರುತ್ತಲೇ ಇರುತ್ತೇವೆ. ಏರ್‌ಪೋರ್ಟ್‌ನಲ್ಲಿ ಆಗಾಗ ಇಬ್ಬರೂ ಸಿಗುತ್ತಿರುತ್ತೇವೆ. ನಾವು ವಿಮಾನ ನಿಲ್ದಾಣದಿಂದ ಹೊರಬರುವುದನ್ನು ಒಂದೆರಡು ಬಾರಿ ಪಾಪರಾಜಿಗಳು (ಫೋಟೊಗ್ರಾಫರ್‌ಗಳು) ನೋಡಿರಬಹುದುʼʼಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Rashmika Mandanna: ವಿದೇಶಿ ಬ್ರ್ಯಾಂಡ್‍ಗೆ ರಶ್ಮಿಕಾ ಮಂದಣ್ಣ ರಾಯಭಾರಿ, ಕನ್ನಡತಿಯ ಮತ್ತೊಂದು ಸಾಧನೆ
ರಶ್ಮಿಕಾ ಕೊನೆಯದಾಗಿ ವಿಜಯ್ ಅಭಿನಯದ ʻವಾರಿಸುʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಸಂದೀಪ್ ರೆಡ್ಡಿ ವಂಗಾ ಅವರ ಹಿಂದಿ ಚಲನಚಿತ್ರ ʻಅನಿಮಲ್ʼ ಸಿನಿಮಾದಲ್ಲೂ ನಟಿಸಿದ್ದಾರೆ. ರಣಬೀರ್ ಕಪೂರ್ ಜತೆಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಶ್ರೀನಿವಾಸ್ ಬೆಲ್ಲಂಕೊಂಡ ʻಛತ್ರಪತಿʼ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ವಿವಿ ವಿನಾಯಕ್ ನಿರ್ದೇಶಿಸಿದ್ದಾರೆ ಮತ್ತು ಎಸ್ಎಸ್ ರಾಜಮೌಳಿ ಅವರ ತಂದೆ ಮತ್ತು ಹಿರಿಯ ಬರಹಗಾರ ವಿ ವಿಜಯೇಂದ್ರ ಪ್ರಸಾದ್ ಬರೆದಿದ್ದಾರೆ. ಛತ್ರಪತಿ ಟ್ರೈಲರ್ ಮುಂಬೈನಲ್ಲಿ ಬಿಡುಗಡೆ ಮಾಡಲಾಯಿತು. ಚಿತ್ರದಲ್ಲಿ ನುಶ್ರತ್ ಭರುಚ್ಚ ಕೂಡ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ, ಪುಷ್ಪ 2, ಅನಿಮಲ್, ʻರೈನ್ಬೋʼ , ನಿತಿನ್ ಜತೆಗಿನ ಹೊಸ ಸಿನಿಮಾ, ವಿಕ್ಕಿ ಕೌಶಲ್ ಜತೆ ‘ಛವಾ’ ಸಿನಿಮಾಗಳಿವೆ.