ಬೆಂಗಳೂರು: ಆಗಸ್ಟ್ 16ರಂದು ಮಲ್ಲೇಶ್ವರಂ ನಿವಾಸದಲ್ಲಿ ಸ್ಪಂದನಾ (Spandana Vijay Raghavendra) 11ನೇ ದಿನದ ಪುಣ್ಯಸ್ಮರ ನೆರವೇರಿದೆ. ಸ್ಪಂದನಾ ವಿಜಯ್ ರಾಘವೇಂದ್ರ ಅವರ ತಂದೆ ಬಿ.ಕೆ ಶಿವರಾಂ ನಿವಾಸದಲ್ಲಿ ಸ್ಪಂದನಾ ಶಾಂತಿ ಹೋಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು. ವಿಜಯ ರಾಘವೇಂದ್ರ- ಪುತ್ರ ಶೌರ್ಯ ಆಗಮನದ ಬಳಿಕ ಮುರಳಿ ಕೂಡ ಭಾಗವಹಿಸಿದ್ದರು. ಶ್ರೀ ಮುರುಳಿ ಕುಂಟುತ್ತ ಕಾಲು ನೋವಿನ ಸ್ಥಿತಿಯಲ್ಲಿಯೇ ಎಂಟ್ರಿ ಕೊಟ್ಟಿದ್ದಾರೆ.
ಬೆಂಗಳೂರಿನ ರಾಕ್‌ಲೈನ್ ಸ್ಟೂಡಿಯೋದಲ್ಲಿ ಬಘೀರ ಸಿನಿಮಾದ ಫೈಟಿಂಗ್ ಸೀಕ್ವೆನ್ಸ್ ಚಿತ್ರೀಕರಿಸಲಾಗುತ್ತಿತ್ತು. ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟಾಗಿತ್ತು. ಅದಾದ ಬಳಿಕ ಚಿಕಿತ್ಸೆಯನ್ನು ನೀಡಲಾಗಿತ್ತು. ಬಳಿಕ ಚೇತರಿಸಿಕೊಂಡಿದ್ದರು. ಆದರೆ ಇದೀಗ ಅತ್ತಿಗೆ ಸ್ಪಂದನಾ ಪುಣ್ಯಸ್ಮರಣೆಯಲ್ಲಿ ಕುಂಟುತ್ತಲೇ ಶ್ರೀಮುರಳಿ (Srimurali) ಎಂಟ್ರಿ ಕೊಟ್ಟಿದ್ದಾರೆ. ಕಾಲಿನ ನೋವಿನಿಂದಲೇ ನಿಧಾನಕ್ಕೆ ಹೆಜ್ಜೆ ಇಡುತ್ತಾ ಬಂದಿದ್ದಾರೆ. ಸ್ಪಂದನಾ ಅಂತ್ಯಕ್ರಿಯೆ ಸಂದರ್ಭದಲ್ಲಿ ಚೆನ್ನಾಗಿದ್ದರು. ಈಗ ಶ್ರೀಮುರಳಿಗೆ ಏನಾಯ್ತು ಎಂದು ಫ್ಯಾನ್ಸ್ ಆತಂಕಗೊಂಡಿದ್ದಾರೆ.
ಸ್ಪಂದನಾ 11ನೇ ದಿನದ ಪುಣ್ಯಸ್ಮರಣೆ
ಹೃದಯಾಘಾತದಿಂದ ಮೃತಪಟ್ಟ ಸ್ಪಂದನಾ ವಿಜಯ ರಾಘವೇಂದ್ರ (Spandana Vijay Raghavendra) ಅವರ ಮರಣೋತ್ತರ ಸಂಸ್ಕಾರ ಕ್ರಿಯೆಗಳು ಇಂದಿನಿಂದ (ಆಗಸ್ಟ್ 16) ಮಲ್ಲೇಶ್ವರಂ ನಿವಾಸದಲ್ಲಿ ನೆರವೇರಿದೆ. ಸ್ಪಂದನಾ ಅವರ ತಂದೆ ಬಿ.ಕೆ ಶಿವರಾಂ ನಿವಾಸದಲ್ಲಿ ಸ್ಪಂದನಾ ಶಾಂತಿ ಹೋಮದಲ್ಲಿ ಶಿವ ರಾಜ್‌ಕುಮಾರ್ (Shiva rajkumar) ದಂಪತಿ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ಭಾಗಿಯಾಗಿದ್ದಾರೆ. ವಿಜಯ ಪತ್ನಿ ಸ್ಪಂದನಾ 11ನೇ ದಿನದ ಪುಣ್ಯಸ್ಮರಣೆಯಲ್ಲಿ ಅನು ಪ್ರಭಾಕರ್- ರಘು ಮುಖರ್ಜಿ ದಂಪತಿ, ಲಹರಿ ವೇಲು ಕೂಡ ಭಾಗಿಯಾಗಿದ್ದಾರೆ.
ಇದನ್ನೂ ಓದಿ: Spandana Vijay Raghavendra: ಸ್ಪಂದನಾ 11ನೇ ದಿನದ ಪುಣ್ಯಸ್ಮರಣೆ; ಶಿವಣ್ಣ ದಂಪತಿ ಸೇರಿದಂತೆ ಹಲವು ಗಣ್ಯರು ಭಾಗಿ
ಸ್ಪಂದನಾ ವಿಜಯ ರಾಘವೇಂದ್ರ (Spandana Vijay Raghavendra) ಅವರು ಆಗಸ್ಟ್ 06ರಂದು ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ (heart failure) ಇಹಲೋಕ ತ್ಯಜಿಸಿದ್ದರು. ಸಾವಿರಾರು ಜನರ ಅಂತಿಮ ದರ್ಶನದೊಂದಿಗೆ ಅವರ ಅಂತ್ಯಕ್ರಿಯೆ ನಡೆದಿತ್ತು. ಈಡಿಗ ಬಿಲ್ಲವ ಸಂಪ್ರದಾಯದಂತೆ ಉತ್ತರ ಕ್ರಿಯೆ ಪೂಜೆ ನಡೆದಿದೆ. ಮಧ್ಯಾಹ್ನ 1 ಗಂಟೆಯ ನಂತರ ಕೋದಂಡರಾಮಪುರದ ಯಂಗ್‌ಸ್ಟರ್ಸ್ ಕಬಡ್ಡಿ ಆಟದ ಮೈದಾನದಲ್ಲಿ (ಬಿಬಿಎಂಪಿ ಮೈದಾನ) ಭೋಜನ ಕೂಡ ಇತ್ತು. ಮನೆಮಗಳು ಸ್ಪಂದನಾ ಆತ್ಮಕ್ಕೆ ಚಿರಶಾಂತಿ ಕೋರಲು ಸರ್ವರಿಗೂ ಭಾಗಿಯಾಗುವಂತೆ ಬಿ.ಕೆ ಶಿವರಾಂ ಮತ್ತು ಎಸ್.ಎ ಚಿನ್ನೆಗೌಡರು ಮತ್ತು ಕುಟುಂಬಸ್ಥರು ಸರ್ವರಿಗೂ ಆಹ್ವಾನ ನೀಡಿದ್ದರು.
ಇದನ್ನೂ ಓದಿ: Spandana Vijay Raghavendra: ಲೀನವಾಯ್ತು ಸ್ಪಂದನಾ ಅಸ್ಥಿ!
ಮುಂಜಾನೆ 08 ಗಂಟೆಯಿಂದ ಹೋಮ ಹವನಗಳು ಆರಂಭವಾಗಿ ಸತತ 3 ಗಂಟೆಗಳ ಕಾಲ ಮಲ್ಲೇಶ್ವರಂ ನಿವಾಸದಲ್ಲಿ ಶಾಂತಿ ಹೋಮ ನಡೆದಿದೆ. ಸುಮಾರು 4000 ಜನರಿಗೆ ತರಹೇವಾರಿ ಸಿಹಿ ಭೋಜನವಿದ್ದು, ವಿಐಪಿಗಳಿಗೆ ಹಾಗೂ ಸಾರ್ವಜನಿಕರಿಗೆ ಒಂದೇ ಜಾಗದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ.