Site icon Vistara News

Rishab Shetty: ಕಾಂತಾರ-2ನಲ್ಲಿ ಇರಲಿದ್ದಾರಾ ಪ್ರಗತಿ ಶೆಟ್ಟಿ?

Starring Pragati Shetty in Rishab shetty kantara 2

ಬೆಂಗಳೂರು: ಕಾಂತಾರ ಚಿತ್ರದ ಎರಡನೇ ಭಾಗದ ಶೂಟಿಂಗ್‌ ಈಗಾಗಲೇ ನಡೆಯುತ್ತಿದೆ. ಇತ್ತ ಚಿತ್ರದಲ್ಲಿ ಯಾರೆಲ್ಲ ಕಲಾವಿದರು ಇರಲಿದ್ದಾರೆ? ಹೊಸಬರಾಗಿ ಯಾರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬ ಕುತೂಹಲ ಶುರುವಾಗಿದ್ದು, ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ಆಗುತ್ತಿವೆ. ರಿಷಬ್ ಶೆಟ್ಟಿ (Rishab Shetty) ನಿರ್ದೇಶನದ ಕಾಂತಾರ-1 (Kantara Movie ) ವಿಶ್ವಾದ್ಯಂತ 400 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್‌ ಮಾಡಿದೆ. ಕಾಂತಾರ ಚಿತ್ರದ ಮೂಲಕ ಪ್ಯಾನ್-ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದರು ರಿಷಬ್‌. ಪತ್ನಿ ಪ್ರಗತಿ ಶೆಟ್ಟಿ (Pragati Shetty) ಪಾತ್ರವೊಂದನ್ನು ನಿರ್ವಹಿಸಿದ್ದರು. ಕಾಂತಾರ2 ಚಿತ್ರದಲ್ಲಿ ಪ್ರಗತಿ ನಟಿಸಲಿದ್ದಾರಾ ಎಂದು ಪ್ರಶ್ನೆ ಮಾಡಿದ್ದಾರೆ ರಿಷಬ್ ಅಭಿಮಾನಿಗಳು.

ಕಾಂತಾರ-1 ಸಿಕ್ವೆಲ್‌ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್‌ (Prequel film) ಆಗಿ ಮೂಡಿಬರಲಿದೆ. ಕಾಂತಾರ-2 ಸಿನಿಮಾ ಕಾಂತಾರಕ್ಕಿಂತ ಮೊದಲಿನ ಕತೆಯಾಗಿರಲಿದೆ. ಕಾಂತಾರ ಸಿನಿಮಾದಲ್ಲಿ ಪ್ರಗತಿ ರಾಣಿಯ ಪಾತ್ರ ಮಾಡಿದ್ದರು. ಕಾಂತಾರ ಚಿತ್ರ ಶುರುವಾಗುವುದೇ ರಾಜನೊಬ್ಬನ ಕಥೆಯಿಂದ. ಈ ರಾಜನ ಪತ್ನಿಯಾಗಿ ಪ್ರಗತಿ ನಟಿಸಿದ್ದರು. ಜತೆಗೆ ರಿಷಬ್ ಅವರ ಪುತ್ರ ಕೂಡ ಇದೇ ದೃಶ್ಯದಲ್ಲಿ ಕಾಣಿಸಿಕೊಂಡಿದ್ದರು. ಈ ವಿಷಯವನ್ನು ಪ್ರಗತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಫೋಟೋಗಳನ್ನೂ ಶೇರ್ ಮಾಡಿದ್ದಾರೆ. ಇದೀಗ ಕಾಂತಾರ-2 ಸಿನಿಮಾ ಪ್ರಿಕ್ವೆಲ್‌ ಆಗಿದ್ದರಿಂದ ಪ್ರಗತಿ ನಟಿಸಲಿದ್ದಾರಾ ಎಂಬ ಕುತೂಹಲ ಸಿನಿಪ್ರಿಯರಲ್ಲಿ ಶುರುವಾಗಿದೆ. ಕಾಮೆಂಟ್‌ನಲ್ಲಿ ಈ ಬಾರಿ ಯಾವ ಪಾತ್ರದಲ್ಲಿ ನಿಮ್ಮನ್ನು ನೋಡಬಹುದು ಎಂದೂ ಹಲವರು ಪ್ರಗತಿ ಅವರಿಗೆ ಕೇಳಿದ್ದಾರೆ.

ಇದನ್ನೂ ಓದಿ: IPL 2023: ಐಪಿಎಲ್​ನಲ್ಲಿಯೂ ಸದ್ದು ಮಾಡಿದ ಕಾಂತಾರ

ಪ್ರಗತಿ ಶೆಟ್ಟಿ ಪೋಸ್ಟ್‌

ಪ್ರಿಕ್ವೆಲ್‌ ಆಗಿರಲಿದೆ ಕಾಂತಾರ-2

ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-1 ಚಿತ್ರದಲ್ಲಿ ನಾಯಕ ಶಿವ ಮತ್ತು ಅವರ ತಂದೆಯಾಗಿ ರಿಷಬ್ ಶೆಟ್ಟಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡ್, ನವೀನ್ ಡಿ ಪಡೀಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಕಾಂತಾರ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ಸು ಕಂಡಾಗ ಹಿಂದಿ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಂಡಿತು.

Exit mobile version