ಬೆಂಗಳೂರು: ಮೇ 29ರಂದು ಸ್ಯಾಂಡಲ್‌ವುಡ್ ನಟ ಅಂಬರೀಶ್ ಅವರ ಜನುಮದಿನ (Ambareesh Birthday). ಈ ವಿಶೇಷ ದಿನದಂದು ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಅಂಬಿ ಹುಟ್ಟುಹಬ್ಬದ ಪ್ರಯುಕ್ತ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡಲಾಗುತ್ತಿದೆ. ಅಂಬಿ ಹುಟ್ಟು ಹಬ್ಬದ ಅಂಗವಾಗಿ ಸುಮಲತಾ ಅಂಬರೀಶ್ ಅವರು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ.
ಸುಮಲತಾ ಅಂಬರೀಶ್ ಟ್ವೀಟ್‌ನಲ್ಲಿ ʻʻನಿಮ್ಮ ಬಾಲ್ಯದ ದಿನಗಳನ್ನು ಆಗಾಗ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು.
ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು.
ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಸ್ವೀಕರಿಸಿ. ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತʼʼಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Sumalatha Ambareesh PC: ನಾನು ರಾಜಕೀಯದಲ್ಲಿ ಇರುವವರೆಗೂ ಅಭಿಷೇಕ್ ರಾಜಕೀಯ ಮಾಡಲ್ಲ: ಸುಮಲತಾ ಅಂಬರೀಶ್ ಘೋಷಣೆ
ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ.
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) May 28, 2023
ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು.
ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು.
ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ… pic.twitter.com/bYNyq4CKKt
ಕನ್ನಡ ಚಿತ್ರರಂಗದ ಅಜಾತಶತ್ರುವಾಗಿದ್ದ ಅಂಬಿ ನವೆಂಬರ್ 24, 2018ರಂದು ಹೃದಯಾಘಾತದಿಂದ ಮರಳಿ ಬಾರದ ಲೋಕಕ್ಕೆ ತೆರಳಿದರು. ಸಿನಿಮಾ ಮಾತ್ರವಲ್ಲದೆ, ರಾಜಕೀಯ ರಂಗದಲ್ಲೂ ಅಂಬರೀಶ್ ಸಾಧನೆ ಅಪಾರ. ಶಾಸಕ, ಸಂಸದ, ಸಚಿವ, ಕೇಂದ್ರ ಸಚಿವರಾಗಿಯೂ ಅವರು ಕೆಲಸ ಮಾಡಿದ್ದರು. ಚಿತ್ರರಂಗದ ಯಾವುದೇ ವಿವಾದಗಳನ್ನು ಮಾತುಕತೆಯ ಮೂಲಕ ಪರಿಹರಿಸುವ ದೊಡ್ಡಣ್ಣನಂತಿದ್ದರು.