ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ (Sumalatha) ಅವರಿಗೆ 59ನೇ ವರುಷದ ಜನುಮದಿನದ ಸಂಭ್ರಮ. ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಅವರ ಸ್ಮಾರಕದ ಮುಂದೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಜತೆಗೆ ಪುತ್ರ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರ ಹೊಸ ಸಿನಿಮಾದ ಫಸ್ಟ್ ಲುಕ್ ಕೂಡ ಚಿತ್ರತಂಡ ರಿಲೀಸ್ ಮಾಡಿದೆ. ಈ ಸಿನಿಮಾವನ್ನು ಮದಗಜ ಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶನ ಮಾಡಿದ್ದಾರೆ.
ಅಂಬಿ ನೆನಪಿನಲ್ಲೇ ಅಭಿಷೇಕ್ ಅಂಬರೀಶ್ ಅವರ ಚಿತ್ರಕ್ಕೆ ಕಿಕ್ ಸ್ಟಾರ್ಟ್ ಮಾಡಿದೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ನೂತನ ಚಿತ್ರ ಇದಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಮುಹೂರ್ತ ಪೂಜೆ ನೆರವೇರಿದೆ. ಬ್ಯಾಡ್ ಮ್ಯಾನರ್ಸ್ ಸಿನಿಮಾ ನಂತರ ಅಭಿಷೇಕ್ ಅವರು ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.
ಇದನ್ನೂ ಓದಿ | Young Rebel Star ಅಭಿಷೇಕ್ ಅಂಬರೀಶ್ ‘ಕಾಳಿ’ ಫಸ್ಟ್ ಲುಕ್ ರಿವೀಲ್
ಪಿರಿಯಡ್ ಡ್ರಾಮಾ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮಿಂಚಲಿದ್ದಾರೆ. ಹಾಗೂ 1000 ವರ್ಷಗಳ ಹಿಂದಿನ ಕಥೆ ಇದಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. AA04 ಎಂದು ಹೆಸರು ನೀಡಿ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿದೆ. ಶೀರ್ಷಿಕೆ ಬಗ್ಗೆ ಮಾಹಿತಿ ನೀಡಿಲ್ಲ.
ಅಭಿಷೇಕ್ ಅವರ ನಾಲ್ಕನೇ ಸಿನಿಮಾ ಇದಾಗಿದ್ದು, ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನಿರ್ದೇಶಕ ಮಹೇಶ್ ಕುಮಾರ್, ‘ಕಳೆದ ಬಾರಿ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದೆವು. ಈ ಬಾರಿ ಮೋಷನ್ ಪೋಸ್ಟರ್ ಮತ್ತು ನಿರ್ಮಾಪಕರ ಹೆಸರು ಘೋಷಣೆ ಮಾಡುತ್ತಿದ್ದೇವೆ. ಭಾರತೀಯ ಸಿನಿಮಾ ರಂಗದಲ್ಲಿ ನಾನಾ ಭಾಷೆಯ ಸಿನಿಮಾಗಳನ್ನು ಮಾಡಿರುವ ಹೆಸರಾಂತ ನಿರ್ಮಾಣ ಸಂಸ್ಥೆಯು ಈ ಚಿತ್ರವನ್ನು ತಯಾರು ಮಾಡುತ್ತಿದೆ’ ಎಂದು ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ | Varamahalakshmi Festival | ಸ್ಯಾಂಡಲ್ವುಡ್ ಪೋಸ್ಟರ್ ಧಮಾಕಾ: ತೋತಾಪುರಿ ರಿಲೀಸ್ ಡೇಟ್ ಫಿಕ್ಸ್