Sunny Leone : ಕಾನ್ಸ್‌ನಲ್ಲಿ ಹಸಿರು ಬಟ್ಟೆಯೊಂದಿಗೆ ಸನ್ನಿ ಲಿಯೋನ್ ಹೇಗೆ ಮಿಂಚಿದ್ದಾರೆ ನೋಡಿ! - Vistara News

ಸಿನಿಮಾ

Sunny Leone : ಕಾನ್ಸ್‌ನಲ್ಲಿ ಹಸಿರು ಬಟ್ಟೆಯೊಂದಿಗೆ ಸನ್ನಿ ಲಿಯೋನ್ ಹೇಗೆ ಮಿಂಚಿದ್ದಾರೆ ನೋಡಿ!

ಸನ್ನಿ ಲಿಯೋನ್ (Sunny Leone) ಅವರು ಫ್ರಾನ್ಸ್‌ನಲ್ಲಿ ಕಾನ್ಸ್‌ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅದರಲ್ಲಿ ತಾವು ಧರಿಸಿರುವ ಉಡುಪಿನ ಫೋಟೋವನ್ನು ನಟಿ ಹಂಚಿಕೊಂಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್‌: ಫ್ರಾನ್ಸ್‌ನಲ್ಲಿ ಪ್ರಸಿದ್ಧ ‌ಕಾನ್ಸ್‌ ಉತ್ಸವ ನಡೆಯುತ್ತಿದೆ. ಭಾರತದ ಹಲವು ಸೆಲೆಬ್ರಿಟಿಗಳು ಸೇರಿದಂತೆ ವಿಶ್ವದ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್‌ ಪ್ರತಿಭೆಯಾಗಿರುವ ಸನ್ನಿ ಲಿಯೋನ್ (Sunny Leone) ಅವರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಕಾರ್ಯಕ್ರಮದಲ್ಲಿನ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ.

ಸನ್ನಿ ಲಿಯೋನ್ ಅವರು ಕಾನ್ಸ್‌ನ ಮೊದಲನೇ ದಿನದಂದು ಕಡು ಹಸಿರು ಬಣ್ಣದ ದಿರಸಿನಲ್ಲಿ ಕಾಣಿಸಿಕೊಂಡಿದ್ದಾರೆ. ಅದರ ಫೋಟೋಗಳನ್ನು ಹಂಚಿಕೊಂಡಿರುವ ನಟಿ, “ಕಾನ್ಸ್‌ನಲ್ಲಿ ಅದ್ಭುತವಾದ ಮೊದಲನೇ ದಿನ. ನಮ್ಮ ಕೆನ್ನೆಡಿ ಸಿನಿಮಾಗಾಗಿ ಸಂದರ್ಶನಗಳನ್ನು ಮಾಡುತ್ತಿದ್ದೇನೆ. ನನ್ನನ್ನು ಚಂದ ಕಾಣುವಂತೆ ಮಾಡಿದ ಲಿಯಾ ಅವರಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Sunny Leone: ವೆಡ್ಡಿಂಗ್ ಲೆಹೆಂಗಾದಲ್ಲಿ ಸನ್ನಿ ಲಿಯೋನ್ ಹಾಟ್ ಫೋಟೊ ಶೂಟ್!

ಸನ್ನಿ ಅವರು ತಮ್ಮ ಪತಿ ಡೇನಿಯೆಲ್‌ ವೆಬೆರ್‌ ಅವರೊಂದಿಗೆ ಫ್ರಾನ್ಸ್‌ಗೆ ಬಂದಿಳಿದಿದ್ದಾರೆ. ಕಾರಿನಲ್ಲಿರುವ ಫೋಟೋ ಹಂಚಿಕೊಂಡಿದ್ದ ಅವರು, ಕಾರ್ಯಕ್ರಮದಲ್ಲಿ ಗೌನ್‌ಗಳು ಮತ್ತು ಡ್ರೆಸ್‌ಗಳನ್ನು ತೊಡುವುದಕ್ಕೆ ಉತ್ಸುಕರಾಗಿರುವುದಾಗಿ ತಿಳಿಸಿದ್ದರು. ಹಾಗೆಯೇ ಕಾರ್ಯಕ್ರಮದ ಸಾಕಷ್ಟು ಫೋಟೋ, ವಿಡಿಯೊಗಳನ್ನು ಹಂಚಿಕೊಳ್ಳುವುದಾಗಿ ಹೇಳಿದ್ದರು.

ಸನ್ನಿ ಲಿಯೋನ್ ಮತ್ತು ರಾಹುಲ್‌ ಭಟ್‌ ನಟಿಸರುವ ಕೆನ್ನೆಡಿ ಸಿನಿಮಾ ಕಾನ್ಸ್‌ನಲ್ಲಿ ಪ್ರದರ್ಶನಗೊಳ್ಳುತ್ತಿದೆ. ಈ ಸಿನಿಮಾವನ್ನು ಅನುರಾಗ್‌ ಕಷ್ಯಪ್‌ ಅವರು ನಿರ್ದೇಶಿಸಿದ್ದಾರೆ. ಸನ್ನಿ ಜತೆಯಲ್ಲಿ ರಾಹುಲ್‌ ಭಟ್‌, ಅನುರಾಗ್‌ ಕಷ್ಯಪ್‌ ಅವರೂ ಕೂಡ ಫ್ರಾನ್ಸ್‌ನಲ್ಲಿ ಕಾನ್ಸ್‌ ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Shiva Rajkumar: ಶಿವರಾಜ್‌ಕುಮಾರ್‌ ಅಭಿನಯದ ʻ45ʼ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ!

Shiva Rajkumar: ಭೈರತಿ ರಣಗಲ್’, ‘ಘೋಸ್ಟ್ 2’ ಇನ್ನೂ ಕೆಲವು ಸಿನಿಮಾಗಳ ಪೋಸ್ಟರ್​ಗಳನ್ನು ಹಂಚಿಕೊಂಡಿದ್ದಾರೆ. ಇದೀಗ ನಟ, ನಿರ್ದೇಶಕ ರಿಷಬ್ ಶೆಟ್ಟಿ ಶಿವಣ್ಣ ನಟನೆಯ ‘45’ ಸಿನಿಮಾದ ಪೋಸ್ಟರ್ ಟೀಸರ್ ಅನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದು ಅರ್ಜುನ್ ಜನ್ಯ ನಿರ್ದೇಶಿಸುತ್ತಿರುವ ಮೊದಲ ಸಿನಿಮಾ ಆಗಿದ್ದು, ಸಿನಿಮಾದಲ್ಲಿ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಸಹ ಇದ್ದಾರೆ.

VISTARANEWS.COM


on

Shiva Rajkumar Starrer 45 Movie Poster Released By Rishab Shetty
Koo

ಬೆಂಗಳೂರು: ರುನಾಡ ‌ಚಕ್ರವರ್ತಿ ಶಿವರಾಜಕುಮಾರ್ (Shiva Rajkumar) ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಶಿವರಾಜ್ ಕುಮಾರ್ ನಟನೆಯ ಹೊಸ ಸಿನಿಮಾ ‘45’ ಪೋಸ್ಟರ್ ಟೀಸರ್ ಅನ್ನು ನಟ, ನಿರ್ದೇಶಕ ರಿಷಬ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ. ಇದು ಅರ್ಜುನ್ ಜನ್ಯ ನಿರ್ದೇಶಿಸುತ್ತಿರುವ ಮೊದಲ ಸಿನಿಮಾ ಆಗಿದ್ದು, ಸಿನಿಮಾದಲ್ಲಿ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಸಹ ಇದ್ದಾರೆ.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ.

‘ಭೈರತಿ ರಣಗಲ್’, ‘ಘೋಸ್ಟ್ 2’ ಇನ್ನೂ ಕೆಲವು ಸಿನಿಮಾಗಳ ಪೋಸ್ಟರ್​ಗಳನ್ನು ಹಂಚಿಕೊಂಡಿದ್ದಾರೆ. ಇದೀಗ ನಟ, ನಿರ್ದೇಶಕ ರಿಷಬ್ ಶೆಟ್ಟಿ ಶಿವಣ್ಣ ನಟನೆಯ ‘45’ ಸಿನಿಮಾದ ಪೋಸ್ಟರ್ ಟೀಸರ್ ಅನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ‘ಓಜಿ (ಒರಿಜಿನಲ್ ಗ್ಯಾಂಗ್​ಸ್ಟರ್) ಮತ್ತೆ ಪರಿಚಯಿಸುತ್ತಿದ್ದೇವೆ’ ಎಂಬ ಅಡಿಬರಹದೊಂದಿಗೆ ಟೀಸರ್ ವಿಡಿಯೊ ಶಿವರಾಜ್ ಕುಮಾರ್ ಹಂಚಿಕೊಂಡಿದ್ದಾರೆ. ಶಿವಣ್ಣ ಈ ಸಿನಿಮಾದಲ್ಲಿಯೂ ಖಡಕ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Shiva Rajkumar: ಟಾಲಿವುಡ್‌ ಸ್ಟಾರ್‌ ರಾಮ್‌ಚರಣ್‌ ʻRC 16ʼ ಸಿನಿಮಾದಲ್ಲಿ ಶಿವಣ್ಣ; ಫಸ್ಟ್‌ ಲುಕ್‌ ಔಟ್‌!

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ ಮಲ್ಟಿಸ್ಟಾರರ್ ಸಿನಿಮಾ “45”.

ಕನ್ನಡ ಚಿತ್ರರಂಗದ ಮೂವರು ಹೆಸರಾಂತ ನಾಯಕನಟರ ಸಮಾಗಮದಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ‌. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ‌. ಬಹು ನಿರೀಕ್ಷಿತ ಈ ಚಿತ್ರಕ್ಕೆ ಸದ್ಯದಲ್ಲೇ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶ ಮೂವತ್ತು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ. ಇಷ್ಟು ದಿನಗಳ ಕಾಲ ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ನಡೆಯುತ್ತಿರುವುದು ಕನ್ನಡದಲ್ಲಿ ಇದೇ ಮೊದಲಿರಬಹುದು.ಇನ್ನು ಈ ಚಿತ್ರದ ನಿರ್ದೇಶಕ ಅರ್ಜುನ್ ಜನ್ಯ ಅವರು ಜನಪ್ರಿಯ ಸಂಗೀತ ನಿರ್ದೇಶಕರೇ ಆಗಿರುವುದರಿಂದ ಚಿತ್ರದ ಹಾಡುಗಳ ಬಗ್ಗೆ ಕೂಡ ಸಾಕಷ್ಟು ನಿರೀಕ್ಷೆಯಿದೆ. .

Continue Reading

ಬಾಲಿವುಡ್

Akshay Kumar:  ಅಕ್ಷಯ್ ಕುಮಾರ್‌ಗೆ ಕೋವಿಡ್‌ ಪಾಸಿಟಿವ್; ಅನಂತ್ ಅಂಬಾನಿ ಮದುವೆಗೆ ಗೈರು!

Akshay Kumar: ಸದ್ಯ ನಟ ಇತ್ತೀಚಿನ ಬಿಡುಗಡೆಯಾದ ‘ಸರ್ಫಿರಾ’ ಪ್ರಚಾರಕ್ಕಾಗಿ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ನಟ ಸ್ವತಃ ಪರೀಕ್ಷೆಗೆ ಒಳಗಾದರು. ಬಳಿಕ ಕೋವಿಡ್‌ 19 ಸೋಂಕು ಇರುವುದು ಖಚಿತವಾಗಿದೆ. ಇದೀಗ ನಟ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದಾರೆ. ವೈದ್ಯರಗಳು ಸೂಕ್ತ ಚಿಕಿತ್ಸೆಯೊಂದಿಗೆ ನಿಗಾವಹಿಸಿ ಆರೈಕೆ ಮಾಡುತ್ತಿದ್ದಾರೆ. 

VISTARANEWS.COM


on

Akshay Kumar tests positive for COVID-19 will miss Anant Ambani wedding
Koo

ಬೆಂಗಳೂರು: ನಟ ಅಕ್ಷಯ್ ಕುಮಾರ್ (Akshay Kumar) ಅವರು ತಮ್ಮ ಸಿನಿಮಾಗಳ ಬ್ಯಾಕ್-ಟು-ಬ್ಯಾಕ್ ಶೂಟಿಂಗ್ ಮಾಡುತ್ತಿದ್ದು, ಜುಲೈ 12ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಸಮಾರಂಭಕ್ಕೆ ಗೈರಾಗುತ್ತಿದ್ದಾರೆ.ಕಳೆದ ಎರಡು ದಿನಗಳಿಂದ ಅಕ್ಷಯ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೀಗ ಅಕ್ಷಯ್‌ ಕುಮಾರ್‌ಗೆ ಕೋವಿಡ್‌ 19 ಸೋಂಕು ದೃಢಪಟ್ಟಿದೆ. 

ಸದ್ಯ ನಟ ಇತ್ತೀಚಿನ ಬಿಡುಗಡೆಯಾದ ‘ಸರ್ಫಿರಾ’ ಪ್ರಚಾರಕ್ಕಾಗಿ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ನಟ ಸ್ವತಃ ಪರೀಕ್ಷೆಗೆ ಒಳಗಾದರು. ಬಳಿಕ ಕೋವಿಡ್‌ 19 ಸೋಂಕು ಇರುವುದು ಖಚಿತವಾಗಿದೆ. ಇದೀಗ ನಟ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದಾರೆ. ವೈದ್ಯರಗಳು ಸೂಕ್ತ ಚಿಕಿತ್ಸೆಯೊಂದಿಗೆ ನಿಗಾವಹಿಸಿ ಆರೈಕೆ ಮಾಡುತ್ತಿದ್ದಾರೆ. ವರದಿಯ ಪ್ರಕಾರ, ಜುಲೈ 12ರ ಬೆಳಗ್ಗೆ ಕೋವಿಡ್‌ ಇರುವುದು ಪತ್ತೆಯಾಗಿದೆ. ಹೀಗಾಗಿ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ ನಟ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಮೂರು ದಿನಗಳವರೆಗೆ ಇರುತ್ತದೆ. ಜುಲೈ 12 ರಂದು ‘ಶುಭ ವಿವಾಹ’, ಜುಲೈ 13 ರಂದು ‘ಶುಭ್ ಆಶೀರ್ವಾದ್’ ಮತ್ತು ಜುಲೈ 14 ರಂದು ʻಆರತಕ್ಷತೆ, ನಂತರ ಜುಲೈ 15 ರಂದು ಮತ್ತೊಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿವೆ.

ಜಾನ್ ಸೆನಾ, ಮೈಕ್ ಟೈಸನ್, ಜೀನ್-ಕ್ಲಾಡ್ ವ್ಯಾನ್ ಡ್ಯಾಮ್ ಮತ್ತು ಜೇ ಶೆಟ್ಟಿ, ಬೋರಿಸ್ ಜಾನ್ಸನ್, ಟೋನಿ ಬ್ಲೇರ್, ಜಾನ್ ಕೆರ್ರಿ ಮತ್ತು ಸ್ಟೀಫನ್ ಹಾರ್ಪರ್ ಅವರಂತಹ ಗಣ್ಯರು ಸೇರಿದಂತೆ ಇತರ ಸೆಲೆಬ್ರಿಟಿಗಳು ಸಮಾರಂಭದಲ್ಲಿ ಇರಲಿದ್ದಾರೆ.

ಇದನ್ನೂ ಓದಿ: Akshay Kumar: ಅಕ್ಷಯ್ ಕುಮಾರ್-ಟೈಗರ್ ಶ್ರಾಫ್ ಸಿನಿಮಾಗೆ ಹೀನಾಯ ಸೋಲು! ಕಲೆಕ್ಷನ್‌ ಎಷ್ಟು?

ಅಕ್ಷಯ್ ಕುಮಾರ್ ಅವರ ಇತ್ತೀಚಿನ ಚಿತ್ರ ‘ಸರ್ಫಿರಾ’ ಜುಲೈ 12 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ. ಈ ಚಲನಚಿತ್ರವು 2020 ರ ತಮಿಳು ಚಲನಚಿತ್ರ ‘ಸೂರರೈ ಪೊಟ್ರು’ ನ ರಿಮೇಕ್‌ ಆಗಿದೆ. ಸುಧಾ ಕೊಂಗರ ನಿರ್ದೇಶಿಸಿದ ಈ ಚಿತ್ರದಲ್ಲಿ ಪರೇಶ್ ರಾವಲ್, ರಾಧಿಕಾ ಮದನ್ ಮತ್ತು ಅತಿಥಿ ಪಾತ್ರವಿದೆ.

Continue Reading

ಸ್ಯಾಂಡಲ್ ವುಡ್

Actor Yash: ಬದಲಾಯ್ತುʻ ರಾಕಿ ಭಾಯ್ʼ ಹೇರ್ ಸ್ಟೈಲ್:  ಅಬ್ಬಾ..! ಏನ್​ ಲುಕ್‌ ಗುರು.. ಅಂದ್ರು ಫ್ಯಾನ್ಸ್‌!

Actor Yash: ಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ನಟ ಯಶ್ ಮತ್ತು ನಯನತಾರಾ ಮೊದಲ ಬಾರಿಗೆ ಜೊತೆಯಾಗುತ್ತಿದ್ದಾರೆ, ಇದರಲ್ಲಿ ಕಿಯಾರಾ ಆಡ್ವಾಣಿ, ಹುಮಾ ಖುರೇಷಿ ಮತ್ತು ಶ್ರುತಿ ಹಾಸನ್ ಕೂಡ ಇದ್ದಾರೆ.

VISTARANEWS.COM


on

Actor Yash Changed Rocky Bhai Hair Style
Koo

ಬೆಂಗಳೂರು: ʼಕೆಜಿಎಫ್‌ʼ ಚಿತ್ರದ (Actor Yash)ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ಇದೀಗ ಹೊಸ ಲುಕ್‌ನಲ್ಲಿ ರಾಕಿಭಾಯ್ ಪ್ರತ್ಯಕ್ಷವಾಗಿದ್ದಾರೆ. ಮುಂಬೈನಲ್ಲಿ ಕೆಜಿಎಫ್ ʻಕಿಂಗ್ʼ ರೌಂಡ್ಸ್ ಹಾಕುತ್ತಿದ್ದಾರೆ. ರಾಕಿಭಾಯ್ ಹೇರ್ ಸ್ಟೈಲ್ ಬದಲಾಗಿದೆ. ರಾಮಾಯಣ ಸಿನಿಮಾಗಾ? ಟಾಕ್ಸಿಕ್ ಚಿತ್ರಕ್ಕಾ? ಈ ಲುಕ್‌ ಎಂಬ ಅನುಮಾನ ಫ್ಯಾನ್ಸ್‌ಗೆ ಮೂಡಿದೆ. ಯಶ್ ಹೊಸ ಲುಕ್ ನೋಡಿ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ನಟ ಯಶ್ ಮತ್ತು ನಯನತಾರಾ ಮೊದಲ ಬಾರಿಗೆ ಜೊತೆಯಾಗುತ್ತಿದ್ದಾರೆ, ಇದರಲ್ಲಿ ಕಿಯಾರಾ ಆಡ್ವಾಣಿ, ಹುಮಾ ಖುರೇಷಿ ಮತ್ತು ಶ್ರುತಿ ಹಾಸನ್ ಕೂಡ ಇದ್ದಾರೆ. ಇದೀಗ ಸಿನಿಮಾ ಕುರಿತು ಹೊಸ ಸಂಗತಿವೊಂದು ವೈರಲ್‌ ಆಗುತ್ತಿದೆ. ಟಾಕ್ಸಿಕ್‌’ ಸಿನಿಮಾದಲ್ಲಿ ಯಶ್ ಹೀರೋ ಆಗಿರವುದು ಬಿಟ್ಟರೆ ಬೇರೆ ಯಾರೆಲ್ಲಾ ಬಣ್ಣ ಹಚ್ಚಲಿದ್ದಾರೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿರಲಿಲ್ಲ. ಸದ್ಯ ಕೇಳಿಬಂದಿರುವ ಮಾಹಿತಿ ಪ್ರಕಾರ, ‘ಲೇಡಿ ಸೂಪರ್ ಸ್ಟಾರ್‌’ ನಯತಾರಾ ಅವರು ಈ ಸಿನಿಮಾದಲ್ಲಿ ಬಹುಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚುವುದು ಕನ್ಫರ್ಮ್ ಆಗಿದೆ.

ಇದನ್ನೂ ಓದಿ: Actor Yash: ರಾಕಿಂಗ್‌ ಸ್ಟಾರ್‌ ಯಶ್‌ ʼಟಾಕ್ಸಿಕ್‌ʼ ಸಿನಿಮಾದಿಂದ ಹೊರ ಬಿತ್ತು ಬಿಗ್‌ ಅಪ್‌ಡೇಟ್‌!

ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಆರಂಭದಲ್ಲಿ ಸಾಯಿ ಪಲ್ಲವಿ, ಸಂಯುಕ್ತಾ ಮೆನನ್‌ ನಾಯಕಿಯರಾಗಿತ್ತಾರೆ ಎನ್ನಲಾಗಿತ್ತು. ಅದಾದ ಬಳಿಕ ಕರೀನಾ ಕಪೂರ್‌ ಹೆಸರು ಕೇಳಿ ಬಂದಿತ್ತು. ಇತ್ತೀಚೆಗೆ ಬಹುಭಾಷಾ ನಟಿ ಶ್ರುತಿ ಹಾಸನ್‌ ಟಾಕ್ಸಿಕ್‌ ಚಿತ್ರದಲ್ಲಿ ಮುಖ್ಯ ಪಾತ್ರ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಇದರ ಜತೆಗೆ ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಆದರೆ ಚಿತ್ರತಂಡ ಇದುವರೆಗೆ ಇದ್ಯಾವುದನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಹೀಗಾಗಿ ಸಿನಿ ಪ್ರಿಯರಲ್ಲಿ ಕುತೂಹಲ ಮನೆ ಮಾಡಿದೆ. ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್‌ನ ಈ ಯಶ್‌ (Yash) ಚಿತ್ರ ಡ್ರಗ್‌ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿವೆ. 2025ರಲ್ಲಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.

ಕಳೆದ ಡಿಸೆಂಬರ್‌ನಲ್ಲಿ ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿರಲಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಖಚಿತವಾಗಿದೆ.

Continue Reading

ಸಿನಿಮಾ

Anchor Aparna: ಸ್ವಚ್ಛ ಕನ್ನಡದ ಆ ನಿಮ್ಮ ದನಿ ನಮ್ಮ ನಡುವೆ ಸದಾ ಶಾಶ್ವತ; ಕಿಚ್ಚ ಸುದೀಪ್‌ ಭಾವುಕ!

Anchor Aparna: ಕಳೆದ ಎರಡು ವರ್ಷಗಳಿಂದ ಅವರು ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಗುರುವಾರ (ಜುಲೈ 11) ರಾತ್ರಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ. ಚಿಕ್ಕಮಗಳೂರಿನ ಪಂಚನಹಳ್ಳಿ ಗ್ರಾಮದ ಅಪರ್ಣಾ ಕನ್ನಡ ಜನರಿಗೆ ಹತತಿರವಾಗಿದ್ದರು ಎಂದರೆ ತಮ್ಮ ಸುಮಧುರ ಮಾತುಗಳಿಂದ. ಇದೀಗ ನಟಿಯ ಬಗ್ಗೆ ಕಿಚ್ಚ ಪೋಸ್ಟ್‌ ಮಾಡಿದ್ದು ಹೀಗೆ.

VISTARANEWS.COM


on

Anchor Aparna Kannada voice of yours is forever between kichcha sudeep emotional
Koo

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ (Anchor Aparna) ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಜುಲೈ 11ರಂದು ನಿಧನರಾಗಿದ್ದಾರೆ. ಅಪರ್ಣಾ ನಿಧನಕ್ಕೆ ಇಡಿ ಸ್ಯಾಂಡಲ್‌ವುಡ್‌ ಸಂತಾಪ ಸೂಚಿಸಿದೆ. ರಾಗಿಣಿ, ಬಿಗ್ ಬಾಸ್ ಸಿರಿ, ಶ್ವೇತಾ ಚೆಂಗಪ್ಪ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಇದೀಗ ಕಿಚ್ಚ ಸುದೀಪ್‌ ಅವರು ಎಕ್ಸ್‌ ಮೂಲಕ “ಸ್ವಚ್ಛ ಕನ್ನಡದ ಆ ನಿಮ್ಮ ದನಿ ನಮ್ಮ ನಡುವೆ ಸದಾ ಶಾಶ್ವತ”ಎಂದು ಬರೆದು ಸಂತಾಪ ಸೂಚಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಅವರು ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಗುರುವಾರ (ಜುಲೈ 11) ರಾತ್ರಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ. ಚಿಕ್ಕಮಗಳೂರಿನ ಪಂಚನಹಳ್ಳಿ ಗ್ರಾಮದ ಅಪರ್ಣಾ ಕನ್ನಡ ಜನರಿಗೆ ಹತತಿರವಾಗಿದ್ದರು ಎಂದರೆ ತಮ್ಮ ಸುಮಧುರ ಮಾತುಗಳಿಂದ. ಇದೀಗ ನಟಿಯ ಬಗ್ಗೆ ಕಿಚ್ಚ ಪೋಸ್ಟ್‌ ಮಾಡಿದ್ದು ಹೀಗೆ.

ʻʻಇದು ನಿಜಕ್ಕೂ ದುಃಖಕರ ಸಂಗತಿ. ಅಪರ್ಣಾ ಮೇಡಮ್‌,,ಸ್ವಚ್ಛ ಕನ್ನಡದ ಆ ನಿಮ್ಮ ದನಿ ನಮ್ಮ ನಡುವೆ ಸದಾ ಶಾಶ್ವತ”. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಆಳವಾದ ಸಂತಾಪಗಳುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Anchor Aparna: ಒನ್ ಆ್ಯಂಡ್ ಒನ್ಲಿ ವರಲಕ್ಷ್ಮಿ ‘ಮಜಾ ಟಾಕೀಸ್’ ನಿಂದ ಹೊರ ಬರಲು ನಿರ್ಧರಿಸಿದ್ದೇಕೆ?

ಕಳೆದ ಒಂದೂವರೆ ವರ್ಷಗಳಿಂದ ಅವರು ನಡೆಸಿದ ಹೋರಾಟದ ಬಗ್ಗೆಯೂ ಪತಿ ನಾಗರಾಜ್​ ಅವರೂ ತಿಳಿಸಿದ್ದಾರೆ. ಒಂದೂವರೆ ವರ್ಷ ಆಕೆ ಬದುಕಿದ್ದೇ ಹೆಚ್ಚು ಎಂದಿದ್ದಾರೆ. ಅಂದರೆ ಆಗಲೇ ಅಪರ್ಣಾ ಅವರಿಗೂ ತಿಳಿದಿತ್ತು.

ಅಪರ್ಣಾ ಕುರಿತು ಅವರ ಪತಿ ನಾಗರಾಜ್​, ʻʻವೈಯಕ್ತಿವಾಗಿ ನಾನು ಅಪರ್ಣಾ ತುಂಬಾ ಖಾಸಗಿಯಾಗಿ ಬದುಕಿದವರು. ಅಷ್ಟೇ ಖಾಸಗಿಯಾಗಿ ನಾನು ಅವಳನ್ನು ಬಿಳ್ಕೊಡಲಿಕ್ಕೆ ಇಷ್ಟಪಡ್ತೀನಿ. ಹಾಗಂತ ಆಕೆ ನನಗೆ ಸೇರೋಕೆ ಮುಂಚೆನೇ ಹೆಚ್ಚಾಗಿ ಕರ್ನಾಟಕಕ್ಕೆ ಸೇರಿದವಳು. ಅಪರ್ಣಾಗೆ ಒಂದು ಆಶಯ ಇತ್ತು. ಸಾವಿನ ಬಳಿಕ ಮಾಧ್ಯಮಗಳ ಮುಂದೆ‌ ಎಲ್ಲವನ್ನೂ ಹೇಳುವಂತೆ ತಿಳಿಸಿದ್ದಳು. ಎರಡು ವರ್ಷಗಳ ಹಿಂದೆ ಜುಲೈನಲ್ಲಿ ಶ್ವಾಸಕೋಶ ಕ್ಯಾನ್ಸರ್ ಅಂತಾ ಗೊತ್ತಾಯ್ತು. ಮೊದಲು ನೋಡಿದ ವೈದ್ಯರು ಇನ್ನೂ ಆರು ತಿಂಗಳು ಬದುಕಬಹುದು ಎಂದು ಹೇಳಿದ್ರು. ಅವರ ಛಲಗಾತಿ ನಾನು ಬದುಕ್ತಿನಿ ಎಂದು ಹೇಳ್ತಿದ್ಳು. ಅಲ್ಲಿಂದ ಜನವರಿತನಕ ಶಕ್ತಿಮೀರಿ ಕ್ಯಾನ್ಸರ್ ವಿರುದ್ಧ ಹೋರಾಟ ಮಾಡಿದ್ಳು. ಫೆಬ್ರವರಿಯಿಂದ ಕೈಚೆಲ್ಲಿದಳು. ಕ್ಯಾನ್ಸರ್ ಎಂದು ಗೊತ್ತಿದ್ದರೂ ಅವಳು ಒಂದೂವರೆ ವರ್ಷದಿಂದ ಛಲದಿಂದ ಬದುಕಿದ್ದಳು. ನಿಜಕ್ಕೂ ಅವಳು ಧೀರೆ. ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ನಾವಿಬ್ಬರೂ ಸೋತಿದ್ದೀವಿ. ಬರೋ ಅಕ್ಟೋಬರ್‌ಗೆ ಅವಳಿಗೆ 58 ವರ್ಷ ತುಂಬ್ತಿತ್ತುʼʼಎಂದು ಕಣ್ಣೀರಾಗಿದ್ದಾರೆ.

Continue Reading
Advertisement
Earthquake
ದೇಶ6 mins ago

Earthquake: ಜಮ್ಮು-ಕಾಶ್ಮೀರದಲ್ಲಿ 4.1 ತೀವ್ರತೆಯ ಭೂಕಂಪ; ಮನೆಯಿಂದ ಓಡಿಬಂದ ಜನ

ಬೆಂಗಳೂರು20 mins ago

KEA : ಜು.13,14ಕ್ಕೆ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ; ಅಕ್ರಮ ತಡೆಯಲು ಮೊದಲ ಬಾರಿಗೆ ವೆಬ್ ಕಾಸ್ಟಿಂಗ್

Prajwal Revanna Case
ಕರ್ನಾಟಕ30 mins ago

Prajwal Revanna Case: ರೇವಣ್ಣ ಜಾಮೀನು ರದ್ದು ಕೋರಿದ್ದ ಎಸ್‌ಐಟಿ ಅರ್ಜಿ ವಿಚಾರಣೆ 3 ವಾರ ಮುಂದೂಡಿಕೆ

Saina Nehwal
ಕ್ರೀಡೆ32 mins ago

Saina Nehwal: ಬ್ಯಾಡ್ಮಿಂಟನ್ ಬಿಟ್ಟು ಟೆನಿಸ್‌ ಆಡಿದ್ದರೆ ಹೆಚ್ಚಿನ ಯಶಸ್ಸು ಸಿಗುತ್ತಿತ್ತು ಎಂದ ಸೈನಾ ನೆಹ್ವಾಲ್‌

Kangana Ranaut
ದೇಶ44 mins ago

Kangana Ranaut: ನನ್ನನ್ನು ಭೇಟಿಯಾಗಲು ಬರುವವರು ಆಧಾರ್‌ ಕಾರ್ಡ್‌ ತನ್ನಿ ಎಂದ ಕಂಗನಾ ರಣಾವತ್;‌ ಏನ್‌ ದೌಲತ್ತು ನೋಡಿ!

Shiva Rajkumar Starrer 45 Movie Poster Released By Rishab Shetty
ಸ್ಯಾಂಡಲ್ ವುಡ್44 mins ago

Shiva Rajkumar: ಶಿವರಾಜ್‌ಕುಮಾರ್‌ ಅಭಿನಯದ ʻ45ʼ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ!

Anant Radhika Wedding
ವಾಣಿಜ್ಯ47 mins ago

Anant Radhika Wedding: ನಿಶ್ಚಿತಾರ್ಥದಿಂದ ಮದುವೆಯವರೆಗೆ; ಹೀಗಿತ್ತು ಅಂಬಾನಿ ಮಗನ ಮದುವೆಯ ಗತ್ತು!

Fraud Case CCB police arrest fraudster
ಕರ್ನಾಟಕ49 mins ago

Fraud Case : ‌ಸಿಸಿಬಿ ಬಲೆಗೆ ಬಿದ್ದ ಖತರ್ನಾಕ್‌ ನಯ ವಂಚಕ; ಡಿಸಿ, ಜಡ್ಜ್‌ ಹೆಸರು ಬಳಸಿ ಲಕ್ಷ ಲಕ್ಷ ಲೂಟಿ

Akshay Kumar tests positive for COVID-19 will miss Anant Ambani wedding
ಬಾಲಿವುಡ್1 hour ago

Akshay Kumar:  ಅಕ್ಷಯ್ ಕುಮಾರ್‌ಗೆ ಕೋವಿಡ್‌ ಪಾಸಿಟಿವ್; ಅನಂತ್ ಅಂಬಾನಿ ಮದುವೆಗೆ ಗೈರು!

Anant Radhika Wedding
ವಾಣಿಜ್ಯ1 hour ago

Anant Radhika Wedding: ಮಗನ ಮದುವೆ ಸಂದರ್ಭದಲ್ಲಿ ಕಾಶಿಗೆ ಗೌರವ; ನೀತಾ ಅಂಬಾನಿಯ ಈ ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effect
ಮಳೆ24 hours ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ3 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ3 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ3 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ4 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ4 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 days ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು4 days ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ5 days ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌