Site icon Vistara News

Sunny Leone | ಉಪೇಂದ್ರ ಸಿನಿಮಾದ ʻಯುಐʼನಲ್ಲಿ ನಟಿಸುತ್ತಿದ್ದಾರಾ ಸನ್ನಿ ಲಿಯೋನ್‌?

Sunny Leone

ಬೆಂಗಳೂರು: ಸ್ಯಾಂಡಲ್‌ವುಡ್‌ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ‘ಯುಐ’ ಸಿನಿಮಾ (Sunny Leone ) ಚಿತ್ರೀಕರಣ ನಡೆಯುತ್ತಿದೆ. ಇದೀಗ ಈ ಸಿನಿಮಾದಲ್ಲಿ ನಟಿ ಸನ್ನಿ ಲಿಯೋನ್‌ ನಟಿಸಿದ್ದಾರೆ ಎನ್ನಲಾಗುತ್ತಿದೆ. ಅವರ ಭಾಗದ ಚಿತ್ರೀಕರಣ ಈಗಾಗಲೇ ಮುಗಿದಿದೆ ಎನ್ನಲಾಗುತ್ತಿದೆ.

ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದ್ದು, ಯುಐನಲ್ಲಿ ಪ್ರಮುಖ ಪಾತ್ರವನ್ನು ಅವರು ನಿರ್ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈವರೆಗೆ ಕನ್ನಡದಲ್ಲಿ ಸನ್ನಿ ಅವರು ಕೇವಲ ಹಾಡಿನಲ್ಲಿ ಮಾತ್ರ ಕಾಣಿಸಿಕೊಂಡಿದ್ದರು. ಇದೀಗ ಈ ಸಿನಿಮಾದಲ್ಲಿ ಸ್ಕ್ರೀನ್‌ ಮೇಲೆ ತುಂಬಾ ಹೊತ್ತು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ.

ಇದನ್ನೂ ಓದಿ | Niranjan Sudhindra | ʻಸೂಪರ್‌ ಸ್ಟಾರ್‌ʼ ನಿರ್ದೇಶಕರ ಮೇಲೆ ಕೇಸ್‌: ನಟ ಉಪೇಂದ್ರ ಕುಟುಂಬದ ಕುಡಿ ಈ ಸಿನಿಮಾ ಹೀರೊ!

ಯುಐ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದ್ದು, ಉಪ್ಪಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವರ್ಷಗಳ ನಂತರ ನಿರ್ದೇಶನದತ್ತ ಮುಖ ಮಾಡಿರುವ ಉಪ್ಪಿ, ಜತೆಗೆ ಈ ಚಿತ್ರದಲ್ಲಿ ಯುವ ತಂತ್ರಜ್ಞರು‌ ಕೆಲಸ ಮಾಡುತ್ತಿದ್ದಾರೆ. ಉಪ್ಪಿ ಕ್ಯಾಪ್‌ ಹಾಕಿ, ಮೈಕ್‌ ಹಿಡಿದು ನಿರ್ದೇಶನಕ್ಕೆ ಇಳಿದಿದ್ದು, ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಇತಿಹಾಸ ಮರುಕಳಿಸಲಿದೆಯಾ ಎಂದು ಅಭಿಮಾನಿಗಳು ಚರ್ಚೆ ನಡೆಸುತ್ತಿದ್ದಾರೆ.

ʻತರ್ಲೆ ನನ್ಮಗʼ, ʻಆಪರೇಷನ್ ಅಂತʼ, ʻಶ್ʼ..!, ʻಓಂʼ, ʻಉಪ್ಪಿ-2ʼ, ʻಸೂಪರ್ʼ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ʻಉಪ್ಪಿ 2ʼ ನಂತರ ಬುದ್ಧಿವಂತನ ನಿರ್ದೇಶನದಲ್ಲಿ ಯಾವ ಸಿನಿಮಾ ಕೂಡ ತೆರೆಗೆ ಬರಲಿಲ್ಲ. ಅದ್ಧೂರಿ ವೆಚ್ಚದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಟಗರು, ಸಲಗ ಖ್ಯಾತಿಯ ಕೆ.ಪಿ. ಶ್ರೀಕಾಂತ್ ಹಾಗೂ ಲಹರಿ ಸಂಸ್ಥೆಯವರು ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿಕೊಂಡಿದ್ದಾರೆ.

ಇದನ್ನೂ ಓದಿ | ಉಸಿರಾಟದಲ್ಲಿ ತೊಂದರೆ; ನೆಲಮಂಗಲದಲ್ಲಿ ಆಸ್ಪತ್ರೆಗೆ ದಾಖಲಾದ ರಿಯಲ್​ ಸ್ಟಾರ್ ಉಪೇಂದ್ರ

Exit mobile version