Site icon Vistara News

Rajinikanth | ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ ಮೋಹನ್‌ಲಾಲ್!

Rajinikanth

ಬೆಂಗಳೂರು : ಸೂಪರ್‌ ಸ್ಟಾರ್‌ ರಜನಿಕಾಂತ್‌ (Rajinikanth) ನಟನೆಯ ʻಜೈಲರ್‌ʼ ಸಿನಿಮಾದಲ್ಲಿ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ಅವರು ಕಾಣಿಸಿಕೊಂಡಿದ್ದು ಅವರ ಲುಕ್‌ ರಿವೀಲ್‌ ಆಗಿತ್ತು. ಇದೀಗ ಮಾಲಿವುಡ್‌ ನಟ ಮೋಹನ್‌ಲಾಲ್ ಕೂಡ ಚಿತ್ರದಲ್ಲಿ ಇದ್ದಾರೆ ಎಂದು ವರದಿಯಾಗಿದೆ. ಜನವರಿ 8 ಮತ್ತು 9 ರಂದು ಜೈಲರ್‌ಗಾಗಿ ಮೋಹನ್‌ಲಾಲ್ ಅವರು ಚಿತ್ರೀಕರಣ ನಡೆಸಲಿದ್ದಾರೆ.

ಮೋಹನ್ ಲಾಲ್ ಮತ್ತು ರಜಿನಿ ಅಭಿಮಾನಿಗಳು ಈ ಸುದ್ದಿ ತಿಳಿದ ತಕ್ಷಣ ಸೋಷಿಯಲ್‌ ಮೀಡಿಯಾ ಮೂಲಕ ಸಂತೋಷ ವ್ಯಕ್ತಪಡಿಸಿದ್ದಾರೆ. 2022ರಲ್ಲಿ ಮೋಹನ್‌ ಲಾಲ್‌ ಅಭಿನಯದ ಸಾಕಷ್ಟು ಸಿನಿಮಾಗಳು ಸೋತವು. ಈ ಸಿನಿಮಾ ಮೂಲಕ ಮತ್ತೆ ನಟ ಮೋಹನ್‌ ಲಾಲ್‌ ಅವರ ವೃತ್ತಿಜೀವನಕ್ಕೆ ಪ್ಲಸ್‌ ಪಾಯಿಂಟ್‌ ಅನ್ನುತ್ತಿದ್ದಾರೆ ನೆಟ್ಟಿಗರು.

ಇದನ್ನೂ ಓದಿ | Rajinikanth | ಸೂಪರ್‌ ಸ್ಟಾರ್‌ ರಜನಿಕಾಂತ್‌ ನಟನೆಯ ʻಜೈಲರ್‌ʼ ಸೆಟ್‌ನಲ್ಲಿ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌!

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಜೈಲರ್ ಚಿತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸನ್ ಪಿಕ್ಚರ್ಸ್ ಬೆಂಬಲದೊಂದಿಗೆ ಮೂಡಿ ಬರುತ್ತಿರುವ ಜೈಲರ್ ಸಿನಿಮಾಗೆ ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದಾರೆ. ʻಪೆಟ್ಟಾʼ, ʻದರ್ಬಾರ್ʼ ಬಳಿಕ ಮೂರನೇ ಬಾರಿಗೆ ರಜನಿಕಾಂತ್ ಸಿನಿಮಾಕ್ಕೆ ಸಂಗೀತ ನೀಡುವ ಅವಕಾಶವನ್ನು ಅನಿರುದ್ಧ್‌ ಗಿಟ್ಟಿಸಿಕೊಂಡಿದ್ದಾರೆ.

ರಜನಿಕಾಂತ್ ಮತ್ತು ಶಿವರಾಜಕುಮಾರ್ ಅವರ ಭಾಗವಾಗಿ, ಜೈಲರ್ ಸಿನಿಮಾದಲ್ಲಿ ತಮನ್ನಾ ನಾಯಕಿಯಾಗಿ ನಟಿಸಲಿದ್ದಶಾರೆ. ವಸಂತ ರವಿ, ಯೋಗಿ ಬಾಬು, ರಮ್ಯಾ ಕೃಷ್ಣನ್ ಮತ್ತು ವಿನಾಯಕನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ರಜಿನಿಕಾಂತ್ ಪ್ರಸ್ತುತ, ಜೈಲರ್ ಮತ್ತು ಅವರ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಚಿತ್ರ ʻಲಾಲ್ ಸಲಾಮ್ʼ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ರಜನಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | ರಜನಿಕಾಂತ್​, ಶಿವಣ್ಣ ಸಿನಿಮಾದ ಪೋಸ್ಟರ್​ ರಿಲೀಸ್, ಜೈಲರ್​ ಆಗಿ ಆರ್ಭಟಿಸಲಿದ್ದಾರೆ ಸೂಪರ್​ಸ್ಟಾರ್‌

Exit mobile version