ಬೆಂಗಳೂರು: ಕರ್ನಾಟಕದ ಉದ್ಯಮಿ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧಾರಿತ ಸೂರರೈ ಪೊಟ್ರು ಚಿತ್ರದ ನಟನೆಗಾಗಿ ತಮಿಳು ನಟ ಸೂರ್ಯ (Suriya) 68ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪಡೆದುಕೊಂಡರು.
ದೆಹಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ನೀಡಿ ಗೌರವಿಸಿದರು.ಪತ್ನಿ ನಟಿ ಜ್ಯೋತಿಕಾ ಈ ಖುಷಿಯ ವಿಚಾರವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ರಾಷ್ಟ್ರ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ತೆಗೆದ ಫೋಟೊಗಳನ್ನು ಜ್ಯೋತಿಕಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ʻʻಇಂತಹ ಗೌರವ ಪಡೆದಿರುವುದಕ್ಕಾಗಿ ಹೆಮ್ಮೆ ಇದೆʼʼ ಎಂದು ಬರೆದುಕೊಂಡಿದ್ದಾರೆ. ಈ ಸಂಭ್ರಮವನ್ನು ಮಕ್ಕಳಾದ ದಿಯಾ ಹಾಗೂ ದೇವ್ ಜತೆ ಹಂಚಿಕೊಂಡಿದ್ದಾರೆ. ಈ ವಿಶೇಷ ಕ್ಷಣದ ಫೋಟೊವನ್ನು ಜ್ಯೋತಿಕಾ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಅಭಿನಂದನೆ ತಿಳಿಸಿದ್ದಾರೆ.
ಇದನ್ನೂ ಓದಿ | Chhello Show | ಆಸ್ಕರ್ ಸ್ಪರ್ಧೆಗೆ ಭಾರತದ ಯಾವ ಚಿತ್ರ ಆಯ್ಕೆ? ಆರ್‌ಆರ್‌ಆರ್, ಕಾಶ್ಮೀರ್ ಫೈಲ್ಸ್ ಅಲ್ಲವೇ ಅಲ್ಲ!
ಸೂರರೈ ಪೊಟ್ರು ಚಿತ್ರದಲ್ಲಿನ ನಟನೆಗಾಗಿ ನಟ ಸೂರ್ಯ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರು. ಅಪರ್ಣಾ ಬಾಲಮುರಳಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಸ್ಕ್ರೀನ್ ಪ್ಲೇ ಮತ್ತು ಅತ್ಯುತ್ತಮ ಹಿನ್ನೆಲೆ ಸಂಗೀತ ಹಾಗೂ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಸೂರರೈ ಪೊಟ್ರು ಪ್ರಶಸ್ತಿಯನ್ನು ಗೆದ್ದಿದೆ. ಸುಧಾ ಕೊಂಗರ ಪ್ರಸಾದ್ ಅವರು ಈ ಚಿತ್ರದ ನಿರ್ದೇಶಕಿಯಾಗಿದ್ದಾರೆ.
ಇದನ್ನೂ ಓದಿ | ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಅತ್ಯುತ್ತಮ ನಟ ಪ್ರಶಸ್ತಿ ಹಂಚಿಕೊಂಡ ಅಜಯ್ ದೇವಗನ್, ಸೂರ್ಯ