ಬೆಂಗಳೂರು: ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರೀಕರಣದಲ್ಲಿ ತಲ್ಲೀನರಾಗಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ, ಕಂಗುವವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೊಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದಾರೆ.
ಕೆ.ಇ.ಜ್ಞಾನವೇಲ್ ರಾಜಾ ಮಾತನಾಡಿ ʻʻ38 ಭಾಷೆಗಳಲ್ಲಿ ʼಕಂಗುವʼ ಸಿನಿಮಾ ಬಿಡುಗಡೆ ಮಾಡುತ್ತೇವೆ. ಈ ಪ್ರಯತ್ನವು ಯಶಸ್ವಿಯಾದರೆ, ತಮಿಳು ಚಿತ್ರರಂಗದಲ್ಲಿ ಒಂದು ಅದ್ಭುತ ಬೆಳವಣಿಗೆಯಾಗಲಿದೆ. ‘ಕಂಗುವ’ ಸಿನಿಮಾವನ್ನು 3ಡಿ ಹಾಗೂ ಐಮ್ಯಾಕ್ಸ್ ಮಾದರಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ನಾವು ಭಿನ್ನ ಮಾದರಿಯ ಮಾರುಕಟ್ಟೆ ಸ್ಟ್ರಾಟೆಜಿಗಳನ್ನು ಬಳಸಲಿದ್ದೇವೆ’ ಎಂದಿದ್ದಾರೆ.
ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ: Actor Suriya: ಮತ್ತೆ ಒಂದಾಯ್ತು ‘ಸೂರರೈ ಪೋಟ್ರು’ ತಂಡ; ಸೂರ್ಯ 43ನೇ ಸಿನಿಮಾಗೆ ಸುಧಾ ಕೊಂಗರ ನಿರ್ದೇಶನ
#Suriya's #Kanguva releasing in 38 languages all over the world. What's up Mate… 🔥🔥pic.twitter.com/vE0ZKoLpz5
— VCD (@VCDtweets) November 21, 2023
ಇದನ್ನೂ ಓದಿ: Actor Suriya: ಮತ್ತೆ ಒಂದಾಯ್ತು ‘ಸೂರರೈ ಪೋಟ್ರು’ ತಂಡ; ಸೂರ್ಯ 43ನೇ ಸಿನಿಮಾಗೆ ಸುಧಾ ಕೊಂಗರ ನಿರ್ದೇಶನ
ಈ ಚಿತ್ರವನ್ನು ಸಿರುತೈ ಶಿವ ನಿರ್ದೇಶಿಸಿದ್ದಾರೆ. ರಜನಿಕಾಂತ್ ನಾಯಕತ್ವದ ಆ್ಯಕ್ಷನ್ ಡ್ರಾಮಾ ʻಅಣ್ಣಾತ್ತೆʼ ಸಿನಿಮಾ ಬಳಿಕ ಈ ಸಿನಿಮಾ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸಿನಿಮಾವನ್ನು 2ಡಿ ಮತ್ತು 3ಡಿಯಲ್ಲಿ ಚಿತ್ರೀಕರಿಸಲಾಗುತ್ತಿದೆ. ಸೂರ್ಯ 42 ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ. ಈ ಚಿತ್ರವನ್ನು ಕೆ.ಇ.ಜ್ಞಾನವೇಲ್ ರಾಜಾ ಅವರ ಸ್ಟುಡಿಯೋ ಗ್ರೀನ್, ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ನಿರ್ಮಿಸಲಾಗಿದೆ.
#Kanguva will be biggest success of #Suriya cinema career and Biggest hit in Tamil Industry
— Nayanthara ❤️❤️❤️ (@Nayanthara369) November 21, 2023
Release in 38 Languages
Something big From #Siva pic.twitter.com/uLSBwncBp1
ಮೂಲಗಳ ಪ್ರಕಾರ ಅಮೆಜಾನ್ ಪ್ರೈಂ ಸಂಸ್ಥೆ ಬರೋಬ್ಬರಿ 80 ಕೋಟಿ ರೂ. ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. . ಸಿನಿಮಾಕ್ಕೆ ಸುಮಾರು 400 ರಿಂದ 500 ಕೋಟಿ ಬಜೆಟ್‌ನಲ್ಲಿ ನಿರ್ಮಾಣ ಆಗಿದೆ ಎಂತಲೂ ವರದಿಯಾಗಿದೆ. ಕಂಗುವ ಚಿತ್ರವು 2024ರ ಏಪ್ರಿಲ್ 11ರಂದು ಬೆಳ್ಳಿ ತೆರೆಗೆ ಬರುವ ಸಾಧ್ಯತೆಯಿದೆ.