ಬೆಂಗಳೂರು: ತಮನ್ನಾ ಭಾಟಿಯಾ (Tamannaah Bhatia) ಮತ್ತು ವಿಜಯ್ ವರ್ಮಾ (Vijay Varma ) ಜೋಡಿ ಈ ವರ್ಷದ ಆರಂಭದಲ್ಲಿ ತಮ್ಮ ರಿಲೇಶನ್‌ಶಿಪ್ ಬಗ್ಗೆ ಸಾರ್ವಜನಿಕವಾಗಿ ಹೇಳಿಕೊಂಡಿತ್ತು. ಇದಾದ ಬಳಿಕ ಜೋಡಿಗೆ ಫ್ಯಾನ್ಸ್ ಮದುವೆ ಯಾವಾಗ ಎಂಬ ಪ್ರಶ್ನೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಕೇಳುತ್ತಲೇ ಇದ್ದರು. ಇತ್ತೀಚಿನ ವರದಿಗಳ ಪ್ರಕಾರ ಜೋಡಿ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದೆ ಎನ್ನಲಾಗಿದೆ. ಈಗಾಗಲೇ ಮದುವೆ ಬಗ್ಗೆ ಪೋಷಕರು ತಮನ್ನಾಗೆ ಒತ್ತಡ ಹೇರುತ್ತಿದ್ದಾರೆ ಎಂದು ವರದಿಯಾಗಿದೆ.
ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ‘ಲಸ್ಟ್ ಸ್ಟೋರೀಸ್ 2’ ಬಿಡುಗಡೆಯ ಸಮಯದಲ್ಲಿ ಸಾರ್ವಜನಿಕವಾಗಿ ರಿಲೇಶನ್‌ಶಿಪ್ ಬಗ್ಗೆ ಅಧಿಕೃತಗೊಳಿಸಿದ್ದರು. ತಮನ್ನಾ ಮದುವೆಯಾಗುವಂತೆ ಪೋಷಕರಿಂದ ಒತ್ತಡವನ್ನು ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ. ‘ಭೋಲಾ ಶಂಕರ್’ ಮತ್ತು ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರದ ‘ಕಾವಲಾ’ ಹಾಡಿನ ನಂತರ ನಟಿ ಯಾವುದೇ ಹೊಸ ಪ್ರಾಜೆಕ್ಟ್‌ಗಳನ್ನು ಕೈಗೆತ್ತಿಕೊಂಡಿಲ್ಲ. ಹೀಗಿರುವಾಗ ನಟಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವುದು ದಟ್ಟವಾದಂತಿದೆ.
ತಮನ್ನಾ (tamanna) ಈ ಹಿಂದೆ ವಿಜಯ್ ವರ್ಮಾ ಕುರಿತು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಮಾತನಾಡಿ ʻʻಅವರ ಜತೆ ಇದ್ದರೆ ನಾನು ಅತ್ಯಂತ ಸಂತೋಷವಾಗಿರುತ್ತೇನೆ. ಅವರು ಒಳ್ಳೆಯ ಮನುಷ್ಯ. ನನ್ನ ಇಕ್ವಲ್ ಪಾರ್ಟ್‌ನರ್. ಯಾರೋ ಒಬ್ಬರು ನಿಮ್ಮ ಸಹನಟರಾಗಿದ್ದ ಮಾತ್ರಕ್ಕೆ ಅವರೊಡನೆ ಆಕರ್ಷಿತರಾಗಲು ಸಾಧ್ಯವಿಲ್ಲ. ಏಕೆಂದರೆ ನಾನು ಈಗಾಗಲೇ ಹಲವಾರು ನಟರೊಡನೆ ನಟಿಸಿದ್ದೇನೆ. ಯಾರ ಕಡೆಗೂ ನಾನು ಆಕರ್ಷಿತಳಾಗಿಲ್ಲ. ಯಾರ ಬಗ್ಗೆಯಾದರೂ ನೀವು ನಿಜಕ್ಕೂ ಮನಸೋತಿರೆಂದರೆ, ಭಾವನೆಗಳು ಹುಟ್ಟಿದವೆಂದರೆ ಅದು ಬಹಳ ವೈಯಕ್ತಿಕವಾಗಿದೆ. ಯಶಸ್ವಿ ವ್ಯಕ್ತಿಯೋ ಎಂಬುದೆಲ್ಲವೂ ಗಣನೆಗೆ ಬರುವುದೇ ಇಲ್ಲ’ ಎಂದಿದ್ದರು. ಲಸ್ಟ್ ಸ್ಟೋರೀಸ್ 2 ಸೆಟ್‌ಗಳಲ್ಲಿ ವಿಜಯ್ ವರ್ಮಾ ಜತೆ ಪ್ರೀತಿ ಶುರುವಾಯಿತು ಎಂದು ನಟಿ ಹೇಳಿಕೊಂಡಿದ್ದರು.
ಇದನ್ನೂ ಓದಿ: Tamannaah Bhatia: ಬೆಂಗಳೂರಿಗೆ ಭೇಟಿ ನೀಡಿದ ತಮನ್ನಾ; ಕನ್ನಡ ಚಿತ್ರರಂಗದ ಬಗ್ಗೆ ಮೆಚ್ಚುಗೆ
ಈ ಮೊದಲು ತಮನ್ನಾ ಕರಿಯರ್ ಹಾಗೂ ಮದುವೆ ಬಗ್ಗೆ ಮಾತನಾಡಿದ್ದರು. ‘ನಾನು 18ನೇ ವಯಸ್ಸಿಗೆ ಚಿತ್ರರಂಗಕ್ಕೆ ಕಾಲಿಟ್ಟೆ. 8-10 ವರ್ಷ ಸಿನಿಮಾ ಇಂಡಸ್ಟ್ರಿಯಲ್ಲಿ ಉಳಿದುಕೊಳ್ಳಬಹುದು ಎಂದು ನಾನು ಭಾವಿಸಿದ್ದೆ. 30 ವರ್ಷಕ್ಕೆ ಮದುವೆ ಆಗಿ ಮಕ್ಕಳನ್ನು ಮಾಡಿಕೊಳ್ಳುವ ಆಲೋಚನೆ ಇತ್ತು. ಆದರೆ, ಜೀವನ ಬೇರೆಯದೇ ಪ್ಲಾನ್ ಮಾಡಿತು’ ಎಂದಿದ್ದರು ಅವರು.ನಟಿ ಕೊನೆಯದಾಗಿ ಅಭಿಷೇಕ್ ಬ್ಯಾನರ್ಜಿ ಜತೆಗೆ ‘ಆಖ್ರಿ ಸಚ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.
ವಿಜಯ್ ತಮನ್ನಾ ಅವರನ್ನು ಪ್ರೀತಿಯಿಂದ ಟೊಮ್ಯಾಟೋ ಎಂದು ಕರೆಯುತ್ತಾರೆ. ಗೋವಾದಲ್ಲಿ ನಡೆದ ಹೊಸ ವರ್ಷದ ಪಾರ್ಟಿಯಲ್ಲಿ ವಿಜಯ್ ವರ್ಮಾ ಮತ್ತು ತಮನ್ನಾ ಭಾಟಿಯಾ ಒಟ್ಟಿಗೆ ಕಾಣಿಸಿಕೊಂಡಿರುವ ವಿಡಿಯೊ ಮತ್ತು ಫೋಟೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.