Tamannaah Bhatia: ಹಿಂದಿ ವರ್ಷನ್‌ ʻಕಾವಾಲಾʼ ಸಾಂಗ್‌ಗೆ ಸ್ಟೆಪ್ಸ್‌ ಹಾಕಿದ ಮಿಲ್ಕಿ ಬ್ಯೂಟಿ ತಮನ್ನಾ! Vistara News

South Cinema

Tamannaah Bhatia: ಹಿಂದಿ ವರ್ಷನ್‌ ʻಕಾವಾಲಾʼ ಸಾಂಗ್‌ಗೆ ಸ್ಟೆಪ್ಸ್‌ ಹಾಕಿದ ಮಿಲ್ಕಿ ಬ್ಯೂಟಿ ತಮನ್ನಾ!

Tamannaah Bhatia: ಕಾವಾಲಾ ಹಾಡು ವೈರಲ್‌ ಆಗುತ್ತಿದ್ದಂತೆ ತಮನ್ನಾ ಸ್ಟೆಪ್ಸ್‌ ಖ್ಯಾತ ಪಾಪ್ ಗಾಯಕಿ ಶಕೀರಾ ಅವರ ‘ವಾಕಾ ವಾಕಾ’ ಹಾಡಿಗೆ ನೆಟ್ಟಿಗರು ಹೋಲಿಸಲು ಶುರು ಮಾಡಿದ್ದರು. ತಮಿಳು ಆವೃತ್ತಿಯನ್ನು ಶಿಲ್ಪಾ ರಾವ್ ಹಾಡಿದ್ದರೆ, ಹಿಂದಿ ಆವೃತ್ತಿಯನ್ನು ಸಿಂಧೂಜಾ ಶ್ರೀನಿವಾಸನ್ ಹಾಡಿದ್ದಾರೆ.

VISTARANEWS.COM


on

Tamannaah Bhatia
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಜನಿಕಾಂತ್ ಮುಂಬರುವ ಚಿತ್ರ ಜೈಲರ್‌ ಸಿನಿಮಾ ಬಿಡುಗಡೆಗೆ ಫ್ಯಾನ್ಸ್‌ ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ತಮನ್ನಾ ಭಾಟಿಯಾ (Tamannaah Bhatia) ಅವರ ʻಕಾವಾಲಾʼ ಹಾಡಿನ ಹುಕ್‌ ಸ್ಟೆಪ್ಸ್‌ ಈಗಾಗಲೇ ಇಂಟರ್‌ನೆಟ್‌ನಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ʻಕಾವಾಲಾʼ ಹಾಡಿನ ರೀಲ್ಸ್‌ಗಳು ವೈರಲ್‌ ಆಗುತ್ತಿವೆ. ಮುಂಬೈನಲ್ಲಿ ಚಿತ್ರತಂಡ ʻಕಾವಾಲಾʼ ಹಾಡಿನ ಹಿಂದಿ ಆವೃತ್ತಿಯ ಬಿಡುಗಡೆ ಕಾರ್ಯಮವನ್ನು ಹಮ್ಮಿಕೊಂಡಿತ್ತು. ʻತು ಆ ದಿಲ್ಬರಾʼ ಹಾಡಿನ ಹಿಂದಿ ಆವೃತ್ತಿಯ ಬಿಡುಗಡೆ ಕಾರ್ಯಕ್ರಮ ವೇಳೆ ತಮನ್ನಾ ಕಾವಾಲಾ ಹಾಡಿಗೆ ವೇದಿಕೆ ಮೆಲೆ ಸ್ಟೆಪ್ಸ್‌ ಹಾಕಿದ್ದಾರೆ. ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದೆ.

ಕಾವಾಲಾ ಹಾಡು ವೈರಲ್‌ ಆಗುತ್ತಿದ್ದಂತೆ ತಮನ್ನಾ ಸ್ಟೆಪ್ಸ್‌ ಖ್ಯಾತ ಪಾಪ್ ಗಾಯಕಿ ಶಕೀರಾ ಅವರ ‘ವಾಕಾ ವಾಕಾ’ ಹಾಡಿಗೆ ನೆಟ್ಟಿಗರು ಹೋಲಿಸಲು ಶುರು ಮಾಡಿದ್ದರು. ತಮಿಳು ಆವೃತ್ತಿಯನ್ನು ಶಿಲ್ಪಾ ರಾವ್ ಹಾಡಿದ್ದರೆ, ಹಿಂದಿ ಆವೃತ್ತಿಯನ್ನು ಸಿಂಧೂಜಾ ಶ್ರೀನಿವಾಸನ್ ಹಾಡಿದ್ದಾರೆ.

ಇದೀಗ ಈ ಕಾರ್ಯಕ್ರಮದ ವಿಡಿಯೊ ವೈರಲ್‌ ಆಗುತ್ತಿದ್ದಂತೆʻʻ ಅದ್ಭುತವಾದ ನೃತ್ಯ” ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ. ತಮನ್ನಾ ಭಾಟಿಯಾ ತು ಆ ದಿಲ್ಬರಾ ಪತ್ರಿಕಾಗೋಷ್ಠಿಯಲ್ಲಿ, ಕಾವಾಲಾ ಮೂಲ ಗೀತೆಗೆ ತಾನು ಸ್ವೀಕರಿಸುತ್ತಿರುವ ಅಗಾಧ ಪ್ರತಿಕ್ರಿಯೆಗಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಪ್ರೇಕ್ಷಕರ ಪ್ರೀತಿ ಮತ್ತು ಬೆಂಬಲವೇ ಕಾವಾಲಾವನ್ನು ಇಷ್ಟು ದೊಡ್ಡ ಹಿಟ್ ಮಾಡಲು ಕಾರಣವಾಗಿದೆ ಎಂದು ಹೇಳಿದರು. ಇದೀಗ ಹಿಂದಿ ಆವೃತ್ತಿಯು ಪ್ರೇಕ್ಷಕರಿಗೆ ಅಷ್ಟೇ ಇಷ್ಟವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: Kaavaalaa Song: ಪಾಪ್ ಗಾಯಕಿ ʻಶಕೀರಾʼ ಜತೆ ಹೋಲಿಸಿದ್ರು ನೆಟ್ಟಿಗರು; ತಮನ್ನಾ ‘ಕಾವಾಲಾ’ ಸಾಂಗ್ ಸೆನ್ಸೇಷನ್‌!

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಜೈಲರ್, ರಜನಿಕಾಂತ್ ಅಭಿಮಾನಿಗಳಿಗೆ ಆಕ್ಷನ್-ಪ್ಯಾಕ್ಡ್ ಟ್ರೀಟ್ ಆಗಲಿದೆ. ಸೂಪರ್‌ಸ್ಟಾರ್ ಜೊತೆಗೆ, ಚಿತ್ರದಲ್ಲಿ ಜಾಕಿ ಶ್ರಾಫ್, ತಮನ್ನಾ ಭಾಟಿಯಾ, ರಮ್ಯಾ ಕೃಷ್ಣನ್ ಮತ್ತು ಮೋಹನ್‌ಲಾಲ್ ಅವರ ವಿಶೇಷ ಅತಿಥಿ ಪಾತ್ರವನ್ನು ಒಳಗೊಂಡಂತೆ ತಾರಾ ಬಳಗವಿದೆ. ಚಿತ್ರವು ಆಗಸ್ಟ್ 10 ರಂದು ಥಿಯೇಟರ್‌ಗಳಿಗೆ ಬರಲು ಸಿದ್ಧವಾಗಿದೆ.

ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ. ಜಾನಿ ಮಾಸ್ಟರ್ ಈ ಮ್ಯೂಸಿಕ್ ವಿಡಿಯೊಗೆ ಕೊರಿಯೋಗ್ರಫಿ ಮಾಡಿದ್ದಾರೆ. ನೆಲ್ಸನ್ ದಿಲೀಪ್‌ಕುಮಾರ್ ಬರೆದು ನಿರ್ದೇಶಿಸಿದ ‘ಜೈಲರ್’ ಸಿನಿಮಾ ಇದೇ ಆಗಸ್ಟ್ 10ರಂದು ಬಿಡುಗಡೆಯಾಗಲಿದೆ. ʻಜೈಲರ್ ಮುತ್ತುವೇಲ್ ಪಾಂಡಿಯನ್ʼ ಪಾತ್ರದಲ್ಲಿ ರಜನಿಕಾಂತ್ ಕಾಣಿಸಿಕೊಂಡಿದ್ದಾರೆ. ತಮನ್ನಾ ಭಾಟಿಯಾ ಪ್ರಮುಖ ಪಾತ್ರದಲ್ಲಿದ್ದಾರೆ.

ಜಾಕಿ ಶ್ರಾಫ್, ಶಿವರಾಜ್‌ಕುಮಾರ್, ರಮ್ಯಾ ಕೃಷ್ಣನ್, ಯೋಗಿ ಬಾಬು, ವಸಂತ ರವಿ ಮತ್ತು ವಿನಾಯಕನ್ ಕೂಡ ‘ಜೈಲರ್‌’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಜೈಲರ್ ಚಿತ್ರದಲ್ಲಿ ಜಾಫರ್ ಸಾದಿಕ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Yash 19: ಶೀಘ್ರದಲ್ಲೇ ʼಯಶ್ 19ʼ ಚಿತ್ರ ಅನೌನ್ಸ್; ಸುಳಿವು ಕೊಟ್ಟ ರಾಕಿ ಭಾಯ್

Yash 19: ಸಾಮಾಜಿಕ ಜಾಲತಾಣದ ಮೂಲಕ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಮುಂದಿನ ಸಿನಿಮಾ ಬಗ್ಗೆ ಸುಳಿವು ಕೊಟ್ಟಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕೆಜಿಎಫ್‌-2 ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಭರ್ಜರಿ ಯಶಸ್ಸು ಕಂಡ ಬಳಿಕ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಮುಂದಿನ ಚಿತ್ರ ಯಾವಾಗ ತೆರೆಗೆ ಬರಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೀಘ್ರದಲ್ಲೇ ‘ಯಶ್ 19ʼ (Yash 19) ಸಿನಿಮಾ ಬಗ್ಗೆ ಘೋಷಣೆ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ನಟ ಯಶ್‌ ಅವರೇ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಹೌದು, ಸಾಮಾಜಿಕ ಜಾಲತಾಣದ ಮೂಲಕ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಯಶ್ ಇನ್‌ಸ್ಟಾಗ್ರಾಂ ಡಿಪಿ ಬದಲಾಗಿದ್ದು, ಅದರಲ್ಲಿ ಲೋಡಿಂಗ್ ಎಂಬ ಬರಹವುಳ್ಳ ಫೋಟೊ ಹಾಕಿಕೊಂಡಿದ್ದಾರೆ. ಹೀಗಾಗಿ ಈ ತಿಂಗಳಲ್ಲೇ ಮುಂದಿನ ಸಿನಿಮಾವನ್ನು ರಾಕಿಭಾಯ್ ಘೋಷಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

2022ರ ಏಪ್ರಿಲ್‌ 14ರಂದು ರಾಕಿಂಗ್‌ ಸ್ಟಾರ್‌ ಯಶ್‌ (Yash 19) ನಟನೆ, ಪ್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್‌ 2 ಸಿನಿಮಾ ಬಿಡುಗಡೆಗೊಂಡಿತ್ತು. ಮೂರು ವರ್ಷಗಳ ಕಠಿಣ ಪರಿಶ್ರಮದಿಂದ ಸಿದ್ಧವಾಗಿದ್ದ ಸಿನಿಮಾ ರಾಜ್ಯದಲ್ಲಿ ಮಾತ್ರವಲ್ಲದೆ, ದೇಶ, ವಿದೇಶದಲ್ಲಿಯೂ ತೆರೆ ಕಂಡ ದೊಡ್ಡ ಮಟ್ಟದ ಯಶಸ್ಸನ್ನು ಗಳಿಸಿಕೊಂಡಿತು. ದಾಖಲೆಗಳನ್ನು ಬರೆದ ಆ ಸಿನಿಮಾ ಬಿಡುಗಡೆಗೊಂಡು ಒಂದೂವರೆ ವರ್ಷ ಕಳೆದಿದೆ. ಇದರ ಬೆನ್ನಲ್ಲೇ ಯಶ್‌ ಅವರ ಮುಂದಿನ ಸಿನಿಮಾ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ನಿರ್ದೇಶಕರು ಯಾರು?

ಮಲಯಾಳಂ ನಟಿ-ಚಿತ್ರ ನಿರ್ದೇಶಕಿ ಗೀತು ಮೋಹನ್‌ದಾಸ್ ( Geetu Mohandas ) ಯಶ್‌ ಅವರ ಮುಂದಿನ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ನಟಿ ರಿಮಾ ಕಲ್ಲಿಂಗಲ್‌ (Rima Kallingal) ನಿರ್ದೇಶಕಿ ಗೀತು ಅವರಿಗೆ ಶುಭ ಹಾರೈಸಲು ಇತ್ತೀಚೆಗೆ ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಪೋಸ್ಟ್‌ ಹಾಕಿಕೊಂಡಿದ್ದರು. ಈ ಮೂಲಕ ಗೀತು ಮೋಹನ್‌ದಾಸ್ ಅವರು ಯಶ್‌ ಅವರ ಮುಂಬರುವ ಸಿನಿಮಾದ ನಿರ್ದೇಶಕರು ಎಂಬ ಸುಳಿವು ನೀಡಿದ್ದರು.

ಯುವನ್ ಯುವತಿ’ (uvan Yuvathi) ಮತ್ತು `ಚಿತಿರೈ ಸೆವ್ವಾನಂ’ ( Chithirai Sevvaanam) ಚಿತ್ರಗಳಲ್ಲಿ ನಟಿಸಿ ತಮಿಳು ಚಿತ್ರರಂಗದ ಅಭಿಮಾನಿಗಳಲ್ಲಿ ಚಿರಪರಿಚಿತರಾಗಿರುವ ರಿಮಾ ಕಲ್ಲಿಂಗಲ್ ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಯಶ್ 19ರ ಕುರಿತು ಪೋಸ್ಟ್ ಹಂಚಿಕೊಂಡಿದ್ದರು. ಅದರಲ್ಲಿ ಗೀತು ಮೋಹನ್‌ದಾಸ್ ಅವರನ್ನು ಟ್ಯಾಗ್‌ ಕೂಡ ಮಾಡಿದ್ದರು. ಪೋಸ್ಟ್‌ನಲ್ಲಿ ” ಬಹು ನಿರೀಕ್ಷಿತ ಯಶ್‌ 19 ಮೂವಿಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕಿ ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನ ಮಾಡಲಿದ್ದಾರೆ” ಎಂದು ಬರೆಯಲಾಗಿತ್ತು.

ಇದನ್ನೂ ಓದಿ | Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

ಇದೀಗ ಏಕಾಏಕಿ ಯಶ್‌ ಅವರ ಇನ್‌ಸ್ಟಾಗ್ರಾಂ ಪ್ರೊಫೈಲ್‌ ಚಿತ್ರ ಬದಲಾದ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿಯೇ ʼಯಶ್ 19ʼ ಬಗ್ಗೆ ರಾಕಿಂಗ್‌ ಸ್ಟಾರ್‌ ಅಪ್‌ಡೇಟ್‌ ಕೊಡಲಿದ್ದಾರಾ ಎಂಬ ಕುತೂಹಲ ಮೂಡಿದೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading

South Cinema

Actress Leelavathi: ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

Actress Leelavathi: ಲೀಲಾವತಿ ಅವರ ಆರೋಗ್ಯ ಕುಷಲೋಪರಿ ವಿಚಾರಿಸಿದ್ದಾರೆ ಸಿಎಂ.ಸರ್ಕಾರದಿಂದ ಯಾವುದೇ ಸಹಾಯ ಬೇಕಿದ್ದರೂ ನಾವು ಕೊಡುತ್ತೇವೆ ಎಂದು ಭರವಸೆ ಕೊಟ್ಟರು.

VISTARANEWS.COM


on

Chief Minister Siddaramaiah inquired about actress Leelavati health
Koo

ಬೆಂಗಳೂರು: ಹಿರಿಯ ನಟಿ ಲೀಲಾವತಿ (Actress Leelavathi) ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರ ಸೋಲದೇವನಹಳ್ಳಿಯ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ. ಇದಕ್ಕೂ ಮುಂಚೆ ನಟ ಶಿವರಾಜಕುಮಾರ್‌ ಮತ್ತು ಗೀತಾ ದಂಪತಿ (Shivarajkumar and Geetha) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದರು. ಇದೇ ವೇಳೆ ಲೀಲಾವತಿ ಅವರ ಸ್ವಗ್ರಾಮದಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆಯನ್ನು ಡಿ.ಕೆ. ಶಿವಕುಮಾರ್‌ ಉದ್ಘಾಟಿಸಿದ್ದರು. ಇದು ಲೀಲಾವತಿ ಅವರ ಕನಸಿನ ಆಸ್ಪತ್ರೆಯಾಗಿತ್ತು.

ಲೀಲಾವತಿ ಅವರ ಆರೋಗ್ಯ ಕುಶಲೋಪರಿ ವಿಚಾರಿಸಿದ್ದಾರೆ ಸಿಎಂ. ʻʻನಾನು ನೆಲಮಂಗಲಕ್ಕೆ ಬಂದಿದ್ದೆ. ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಬಂದೆ.. ಈ ಜಮೀನಿನ ಸಮಸ್ಯೆ ಇದ್ದಾಗ ನನ್ನನ್ನು ಭೇಟಿ ಮಾಡಿದ್ದರು. ಲೀಲಾವತಿ ನೈಜ ಕಲಾವಿದೆ. ಅವರನ್ನ ಆಸ್ಪತ್ರೆಗೆ ಸೇರಿಸಿದರೆ ಎಲ್ಲಾ ಖರ್ಚುಗಳನ್ನು ನೋಡಿಕೊಳ್ಳುತ್ತೇವೆ. ಸರ್ಕಾರದಿಂದ ಯಾವುದೇ ಸಹಾಯ ಬೇಕಿದ್ದರೂ ನಾವು ಕೊಡುತ್ತೇವೆʼʼ ಎಂದು ಭರವಸೆ ಕೊಟ್ಟರು.

ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ

ಹಿರಿಯ ಕಲಾವಿದೆ ಲೀಲಾವತಿಯವರನ್ನು ಆಸ್ಪತ್ರೆಗೆ ಸೇರಿಸಿದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಲೀಲಾವತಿಯವರು ಚೆನ್ನಾಗಿದ್ದ ಸಂದರ್ಭದಲ್ಲಿ ಜಮೀನು ವಿಚಾರವಾಗಿ ಇದ್ದ ತೊಂದರೆ ಬಗೆಹರಿಸಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಆಸ್ಪತ್ರೆಗೆ ಸೇರಿಸಿದರೆ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಲೀಲಾವತಿ ಯವರು ಒಬ್ಬ ನೈಜ ಪ್ರತಿಭೆಯಿದ್ದ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ಚೆನ್ನಾಗಿ ನೋಡಿಕೊಳ್ಳಲಿ ಎಂದು ಹೇಳಿದ್ದೇನೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರೂ ಒದಗಿಸುವುದಾಗಿ ತಿಳಿಸಿದ್ದೇನೆ. ರೈತರ ಪರವಾಗಿ ಲೀಲಾವತಿ ಗಟ್ಟಿಯಾದ ನಿಲುವು ಹೊಂದಿದ್ದರು. ಈಗಾಲೂ ಅವರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಇದನ್ನೂ ಓದಿ: Actress Leelavathi: ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟಿಸಿದ ಡಿಕೆಶಿ, ಆದರೆ ನಟಿ ಪ್ರಜ್ಞಾಶೂನ್ಯ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಮಿಸಿ ಲೀಲಾವತಿ ಅವರ ಆರೋಗ್ಯವನ್ನು ವಿಚಾರಿಸಿದ್ದರು. ಬಳಿಕ, ಲೀಲಾವತಿ ಅವರ ಸ್ವಗ್ರಾಮದಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆಯನ್ನು ಡಿ.ಕೆ. ಶಿವಕುಮಾರ್‌ ಉದ್ಘಾಟಿಸಿದ್ದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ರವಿ, ನೆಲಮಂಗಲ ಶಾಸಕ ಶ್ರೀನಿವಾಸ್ ಜತೆಗಿದ್ದರು. ಲೀಲಾವತಿ ಅವರ ಕನಸಿನ ಕೂಸಾಗಿದ್ದ ಪಶು ಆಸ್ಪತ್ರೆಗೆ ಹಸುವಿನ ಪೂಜೆ ಮಾಡುವ ಮೂಲಕ ಡಿ.ಕೆ.‌ ಶಿವಕುಮಾರ್ ಉದ್ಘಾಟಿಸಿದ್ದರು. ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್‌, ಒಂದು ವಾರದ ಹಿಂದೆ ನಟಿ ಲೀಲಾವತಿ, ವಿನೋದ್ ರಾಜ್ ನಮ್ಮ ಮನೆಗೆ ಬಂದು ಪಶು ಆಸ್ಪತ್ರೆ ಉದ್ಘಾಟನೆಗೆ ಕರೆದಿದ್ದರು. ಈ ಪಶು ಆಸ್ಪತ್ರೆ ಮೂಲಕ ದೊಡ್ಡ ಸಂದೇಶ ನೀಡಿದ್ದರು. ಅವರು ಅಂತಹ ಶ್ರೀಮಂತರಲ್ಲ. ಅಂಥದ್ದರಲ್ಲಿ ಪ್ರಾಣಿಗಳಿಗೆ ಸಹಾಯ ಮಾಡಲು ಹೊರಟಿದ್ದರು. ಇದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದ್ದರು. ಈಚೆಗೆ ನಟ ದರ್ಶನ್‌, ಅರ್ಜುನ್ ಸರ್ಜಾ ಅವರು ಭೇಟಿ ನೀಡಿ ನಟಿ ಲೀಲಾವತಿ ಅವರ ಆರೋಗ್ಯವನ್ನು ವಿಚಾರಿಸಿದ್ದರು.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading

South Cinema

Santosham Awards 2023: ಚಿರಂಜೀವಿ ಪಿಆರ್‌ಒ ಸುರೇಶ್‌ರಿಂದ ಕನ್ನಡ ಸ್ಟಾರ್ಸ್‌ಗೆ ಅವಮಾನ!

Santosham Awards 2023: ಸುರೇಶ್ ಗೋವಾದಲ್ಲಿ ಬಂದಂತಹ ಅತಿಥಿಗಳಿಗೆ ಸರಿಯಾದ ಆತಿಥ್ಯ ನೀಡದೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.ಕನ್ನಡಿಗರಿಗೆ ತೆಲುಗು ಆಯೋಜಕರಿಂದ ಈ ರೀತಿ ಮೋಸವಾಗಿರುವ ಕಾರಣಗಳಿಂದಾಗಿ ಕಾರ್ಯಕ್ರಮವನ್ನು ಬಾಯ್ಕಾಟ್ ಮಾಡಿ ಬೆಂಗಳೂರಿಗೆ ಕನ್ನಡದ ಸ್ಟಾರ್ಸ್‌ ತೆರಳಿದ್ದಾರೆ.

VISTARANEWS.COM


on

Chiranjeevi PRO Suresh Kondeti Shame on Kannada Stars
Koo

ಬೆಂಗಳೂರು: ಮೆಗಾಸ್ಟಾರ್ ಚಿರಂಜೀವಿ ಪಿಆರ್‌ಒ ಸುರೇಶ್ ಕೊಂಡೇಟಿಯಿಂದ ಕನ್ನಡದ ತಾರೆಯರಿಗೆ ದೊಡ್ಡ ಅವಮಾನವಾಗಿದೆ. ಸಂತೋಷಂ ಅವಾರ್ಡ್ಸ್ (Santosham Awards 2023) ನೀಡಲು ಕನ್ನಡ ಸ್ಟಾರ್ಸ್‌ಗೆ ಗೋವಾಗೆ ಆಹ್ವಾನ ನೀಡಿದ್ದರು ಸುರೇಶ್‌. ಗೋವಾದಲ್ಲಿ ಬಂದಂತಹ ಅತಿಥಿಗಳಿಗೆ ಸರಿಯಾದ ಆತಿಥ್ಯ ನೀಡದೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕ್ರಾಂತಿ ಸಿನಿಮಾಗೆ ಅವಾರ್ಡ್ ನೀಡುತ್ತಿದ್ದಂತೆ ವೇದಿಕೆಯಲ್ಲಿ ಕರೆಂಟ್ ಆಫ್ ಕೂಡ ಆಗಿದ್ದು, ಆಯೋಜನೆಯಲ್ಲಿ ಮಹಾ ಎಡವಟ್ಟು ಸಂಭವಿಸಿದೆ.

ಕನ್ನಡಿಗರಿಗೆ ತೆಲುಗು ಆಯೋಜಕರಿಂದ ಈ ರೀತಿ ಮೋಸವಾಗಿರುವ ಕಾರಣಗಳಿಂದಾಗಿ ಕಾರ್ಯಕ್ರಮವನ್ನು ಬಾಯ್ಕಾಟ್ ಮಾಡಿ ಬೆಂಗಳೂರಿಗೆ ಕನ್ನಡದ ಸ್ಟಾರ್ಸ್‌ ತೆರಳಿದ್ದಾರೆ. ರಮೇಶ್ ಅರವಿಂದ್, ಸಪ್ತಮಿ ಗೌಡ, ರಾಜವರ್ಧನ್, ಬಿ ಸುರೇಶ್, ಶೈಲಜಾ ನಾಗ್ ಸೇರಿದಂತೆ ಸುಮಾರು 30ರಿಂದ 35 ಮಂದಿ ಕನ್ನಡದ ಸ್ಟಾರ್ಸ್‌ಗಳು ಭಾಗಿಯಾಗಿದ್ದರು ಎನ್ನಲಾಗಿದೆ.

ತಮಿಳು ತಾರೆಯರು ಕೂಡ ಸಂತೋಷಂ ಫಿಲ್ಮ್ ಅವಾರ್ಡ್ಸ್ ನಲ್ಲಿ ಭಾಗಿಯಾಗದಿರಲು ನಿರ್ಧಾರ ಮಾಡಿರುವುದಾಗಿ ತಿಳಿದು ಬಂದಿದೆ. ರಿಯಾಜ್‌ ಎನ್ನುವರು ಟ್ವೀಟ್‌ನಲ್ಲಿ, ಕಾಲಿವುಡ್‌ ತಾರೆಯರಿಗೆ ಟಿಕೆಟ್‌ವನ್ನು ಸುರೇಶ್‌ ಅವರು ಕೊಡದೇ ಇರುವ ಕಾರಣ, ಸಂತೋಷಂ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಏರ್ ಪೋರ್ಟ್‌ಗೆ ಕನ್ನಡದ ಸ್ಟಾರ್ಸ್‌ಗಳು ಆಗಮಿಸಲಿದ್ದಾರೆ.

ಇದನ್ನೂ ಓದಿ: Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

ಸುರೇಶ್ ಕೊಂಡೇಟಿ ಒಡೆತನದ ಸಂತೋಷಂ ಸೌತ್ ಇಂಡಿಯನ್ ಫಿಲ್ಮ್ ಅವಾರ್ಡ್ಸ್ ಟಾಲಿವುಡ್ ಮತ್ತು ಇತರ ಭಾರತೀಯ ಭಾಷೆಯ ಚಲನಚಿತ್ರಗಳಿಗೆ ಗೌರವ ನೀಡುವ ಪ್ರಶಸ್ತಿ ಇದಾಗಿದೆ. ನಟರಿಗೆ ಮಾತ್ರವಲ್ಲದೆ ಒಟಿಟಿ ವಿಭಾಗದಲ್ಲಿಯೂ ಪ್ರಶಸ್ತಿಗಳನ್ನು ನೀಡುತ್ತ ಬರುತ್ತಿದೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: https://vistaranews.com/tag/assembly-election-2023

Continue Reading

South Cinema

Ram Charan: ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದ ರಾಮ್​ ಚರಣ್​!

Ram Charan: ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಸಲುವಾಗಿ ಅವರು ಸಣ್ಣ ಬ್ರೇಕ್​ ಪಡೆದುಕೊಂಡಿದ್ದರು.

VISTARANEWS.COM


on

am charan visits Chamundeshwari Temple Mysuru
Koo

ಮೈಸೂರು: ಟಾಲಿವುಡ್‌ ನಟ ರಾಮ್‌ಚರಣ್‌ ಅವರು ಡಿಸೆಂಬರ್​ 3ರಂದು ಮೈಸೂರಿನ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ‘ಗೇಮ್​ ಚೇಂಜರ್​’ (Ram Charan) ಸಿನಿಮಾದ ಶೂಟಿಂಗ್​ ಸಲುವಾಗಿ ರಾಮ್​ ಚರಣ್​ ಅವರು ಹಲವು ದಿನಗಳಿಂದ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದರು. ‘ಗೇಮ್​ ಚೇಂಜರ್​’ ಸಿನಿಮಾದ ಶೂಟಿಂಗ್​ ಮೈಸೂರಿನಲ್ಲಿ ನಡೆಯುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಸಲುವಾಗಿ ಅವರು ಸಣ್ಣ ಬ್ರೇಕ್​ ಪಡೆದುಕೊಂಡಿದ್ದರು. ನವೆಂಬರ್​ 30ರಂದು ಮತದಾನ ಮಾಡಿದ ಬಳಿಕ ಅವರು ಮೈಸೂರಿಗೆ ವಾಪಸಾಗಿದ್ದರು.

ಇದೀಗ ರಾಮ್‌ಚರಣ್‌ ಅವರು ಚಿತ್ರತಂಡದೊಂದಿಗೆ ದೇವಾಲಯಕ್ಕೆ ಆಗಮಿಸಿ ನಾಡಿನ ಅಧಿದೇವತೆ ದರ್ಶನ ಪಡೆದಿದ್ದಾರೆ. ಮಾರ್ಚ್‌ 27ರ ಬೆಳಗ್ಗೆ RC 15 ಗೇಮ್ ಚೇಂಜರ್‌ ಎಂದು ಶಿರ್ಷಿಕೆ ಅನಾವರಣ ಮಾಡಿತ್ತಿ. ಚಿತ್ರತಂಡ ಟೈಟಲ್‌ ಟೀಸರ್‌ ಕೂಡ ಹಂಚಿಕೊಂಡಿತ್ತು. 2019 ರಲ್ಲಿ ಬಿಡುಗಡೆಯಾದ ವಿನಯ ವಿಧೇಯ ರಾಮ ಚಿತ್ರದ ನಂತರ ರಾಮ್ ಚರಣ್ ಮತ್ತು ಕಿಯಾರಾ ಆಡ್ವಾಣಿ ಈ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ಜಯರಾಮ್, ಅಂಜಲಿ ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್ ಥಮನ್ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ತಿರು ಮತ್ತು ಆರ್.ರತ್ನವೇಲು ಛಾಯಾಗ್ರಹಣ, ಶಮೀರ್ ಮಹಮ್ಮದ್ ಸಂಕಲನ ಚಿತ್ರಕ್ಕಿದೆ.ಈ ಪ್ರಾಜೆಕ್ಟ್ ಅನ್ನು ಪ್ಯಾನ್-ಇಂಡಿಯಾ ಬಿಡುಗಡೆಗಾಗಿ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ಮತ್ತು ಶಿರೀಶ್ ಗಾರು ಜಂಟಿಯಾಗಿ ನಿರ್ಮಿಸಿದ್ದಾರೆ. ಗೇಮ್ ಚೇಂಜರ್ ತೆಲುಗು, ತಮಿಳು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Ram Charan: ಈಜುಕೊಳದಲ್ಲಿ ರಾಮ್‌ಚರಣ್‌ ಮಗಳ ಪ್ರತಿಬಿಂಬ; ಇಟಲಿಯಲ್ಲಿದೆ ಮೆಗಾ ಕುಟುಂಬ!

ಬುಚ್ಚಿ ಬಾಬು ಸನಾ ಜತೆ ಕೈ ಜೋಡಿಸಿದ ರಾಮ್‌ಚರಣ್‌

ನಟ ರಾಮ್ ಚರಣ್ (Ram Charan) ಅವರ ಮುಂದಿನ ಚಿತ್ರ ಸೂಪರ್ ಹಿಟ್ ‘ಉಪ್ಪೆನ’ ಸಿನಿಮಾ ನೀಡಿದ್ದ ನಿರ್ದೇಶಕ (Uppena director Buchi Babu Sana) ಬುಚ್ಚಿ ಬಾಬು ಸನಾ(Buchi Babu Sana) ಅವರೊಂದಿಗೆ ಎಂಬುದು ವರದಿಯಾಗಿದೆ. ಮುಂದಿನ ವರ್ಷ ಜನವರಿಯಲ್ಲಿ ಬುಚ್ಚಿ ಬಾಬು ಸನಾ ಮತ್ತು ರಾಮ್ ಚರಣ್ ತಮ್ಮ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಚಿತ್ರದ ತಾರಾಬಳಗಕ್ಕೆ ಸಂಬಂಧಿಸಿದಂತೆ ಇನ್ನಷ್ಟು ರೋಚಕ (Ram Charan and Vijay Sethupathi) ಸುದ್ದಿ ಹೊರಬೀಳುತ್ತಿದೆ. ಚಿತ್ರದಲ್ಲಿ ವಿಜಯ್ ಸೇತುಪತಿ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ವಿಜಯ್ ಸೇತುಪತಿ ಈಗಾಗಲೇ ದೇಶದ ಪ್ರಮುಖ ಸ್ಟಾರ್ ನಟರ ಎದುರು (Ramcharan upcoming project) ಖಳನಾಗಿ ಅಬ್ಬರಿಸಿದ್ದಾರೆ. ದಳಪತಿ ವಿಜಯ್‌ನಿಂದ ಶಾರುಖ್ ಖಾನ್, ಕಮಲ್ ಹಾಸನ್, ರಜನಿಕಾಂತ್ ಈ ಎಲ್ಲಾ ಸೂಪರ್‌ಸ್ಟಾರ್‌ಗಳ ಜತೆಗೆ ಕೆಲಸ ಮಾಡಿದ್ದಾರೆ.

ಟಾಲಿವುಡ್‌ನಲ್ಲಿ ಹರಿದಾಡುತ್ತಿರುವ ವರದಿಗಳ ಪ್ರಕಾರ ನಾಯಕ ಮತ್ತು ಖಳನಾಯಕರಾಗಿ ರಾಮ್ ಚರಣ್ ಮತ್ತು ವಿಜಯ್ ಸೇತುಪತಿ ಅವರನ್ನು ನೋಡುವುದು ಸಕತ್ ಅನುಭವವೆ ಆಗಿದೆ. ಈ ಹೊಸ ಸಿನಿಮಾದ ಮತ್ತೊಂದು ಮಾಹಿತಿ ಎಂದರೆ ಚಿತ್ರಕ್ಕೆ ಎ ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುವ ನಿರೀಕ್ಷೆ ಇದೆ. ಸಿನಿಮಾಗೆ ಘಟಾನುಘಟಿಗಳ ದಂಡು ಒಂದಾಗುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುತ್ತಿದೆ.

Continue Reading
Advertisement
Kichcha Sudeep Save Snehith Gowda And Michel From Eliminations
ಬಿಗ್ ಬಾಸ್6 mins ago

BBK SEASON 10: ಬಿಗ್‌ ಬಾಸ್‌ ಇತಿಹಾಸದಲ್ಲೇ ಮೊದಲು; ಈ ವಾರ ನೋ ಎಲಿಮಿನೇಶನ್‌! ಸ್ನೇಹಿತ್- ಮೈಕಲ್‌ ಸೇಫ್‌!

Kodagu News
ಕರ್ನಾಟಕ35 mins ago

ಕೊಡಗು ಜಿಲ್ಲೆಯ ಹೊಳೆಯಲ್ಲಿ ತಾಯಿ, ಇಬ್ಬರು ಯುವತಿಯರ ಶವ ಪತ್ತೆ; ಸಾವಿಗೆ ಕಾರಣ?

Ishwar Sahu
ದೇಶ1 hour ago

ಮುಸ್ಲಿಮರಿಂದ ಹತ್ಯೆಗೀಡಾದ ಯುವಕನ ತಂದೆ 7 ಬಾರಿಯ ಕಾಂಗ್ರೆಸ್ ಶಾಸಕನನ್ನು ಸೋಲಿಸಿದರು!

Jyothi Reddy CEO of American Company
ಅಂಕಣ1 hour ago

Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

Venkataramana Reddy
ದೇಶ2 hours ago

ತೆಲಂಗಾಣದಲ್ಲಿ ಹಾಲಿ, ಭಾವಿ ಸಿಎಂಗಳನ್ನೇ ಸೋಲಿಸಿದ ಬಿಜೆಪಿಯ ವೆಂಕಟರಮಣ ರೆಡ್ಡಿ; ಯಾರಿವರು?

Complaint to CM Siddaramaiah
ಕರ್ನಾಟಕ2 hours ago

Complaint to CM : ಸಿಎಂಗೆ ದೂರು ನೀಡಬೇಕೇ? ಈ ನಂಬರ್‌ಗೆ ಕರೆ ಮಾಡಿ!

women enjoying in rain
ಉಡುಪಿ2 hours ago

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Mizoram Election Result
ದೇಶ3 hours ago

Mizoram Election Result: ಮಿಜೋರಾಂ ಫಲಿತಾಂಶಕ್ಕೆ ಕ್ಷಣಗಣನೆ; ಯಾರಿಗೆ ಗೆಲುವು?

4 state election results shows us that, freebies are not the way for win elections
ದೇಶ3 hours ago

ವಿಸ್ತಾರ ಸಂಪಾದಕೀಯ: ವಿಧಾನಸಭೆ ಚುನಾವಣೆ ಫಲಿತಾಂಶ; ‘ಗ್ಯಾರಂಟಿ’ಯೇ ಅಂತಿಮವಲ್ಲ!

ead your daily horoscope predictions for december 4th 2023
ಪ್ರಮುಖ ಸುದ್ದಿ4 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ4 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ21 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌