ಬೆಂಗಳೂರು: ನಂದಮೂರಿ ತಾರಕ ರತ್ನ (Taraka Ratna) ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಜ್ಯೂ ಎನ್‌ಟಿಆರ್, ಕಲ್ಯಾಣ್ ರಾಮ್, ಸಚಿವ ಸುಧಾಕರ್ ಹಾಗೂ ಹ್ಯಾಟ್ರಿಕ್ ಹೀರೊ ಶಿವರಾಜಕುಮಾರ್ ಆಸ್ಪತ್ರೆಗೆ ಧಾವಿಸಿ ತಾರಕ ರತ್ನ ಆರೋಗ್ಯದ ಬಗ್ಗೆ ವೈದ್ಯರ ಜತೆ ಚರ್ಚಿಸಿದರು. ಇದೆ ವೇಳೆ ಸಚಿವ ಸುಧಾಕರ್ ಮಾತನಾಡಿ ʻʻತಾರಕ ಅವರು ಅಪಾಯದಿಂದ ಸಂಪೂರ್ಣ ಹೊರ ಬಂದಿಲ್ಲʼʼ ಎಂದು ಹೇಳಿಕೆ ನೀಡಿದರು.
ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮಾತನಾಡಿ ʻʻತೀವ್ರ ಹೃದಯಾಘಾತದಿಂದ ಅಸ್ವಸ್ಥರಾದ ತಾರಕ್ ಅವರಿಗೆ ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಗ್ರೀನ್ ಕಾರಿಡಾರ್ ಮೂಲಕ ಆಸ್ಪತ್ರೆಗೆ ಶಿಫ್ಟ್ ಮಾಡಿಸಲಾಗಿದೆ. ನಾರಾಯಣ ಹೃದಯಾಲದಲ್ಲಿ ನುರಿತ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ನ್ಯೂರಾಲಜಿ, ಕಾರ್ಡಿಯಾಲಜಿ ಸೇರಿದಂತೆ ನುರಿತ ವೈದ್ಯರ ತಂಡದಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿಮಾನ್ಸ್ ಆಸ್ಪತ್ರೆ ಮೆದುಳಿನ ತಜ್ಞ ವೈದ್ಯರ ತಂಡದಿಂದಲು ಸಹ ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಸದ್ಯ ತಾರಕ್ ಆರೋಗ್ಯದ ಸ್ಥಿತಿ ಸ್ಥಿರವಾಗಿದೆ. ಆದರೆ ಅಪಾಯದಿಂದ ಸಂಪೂರ್ಣ ಹೊರ ಬಂದಿಲ್ಲ. ಆದರೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಇದು ನಮಗೆ ಪಾಸಿಟಿವ್ ಅಂಶವಾಗಿದೆ. ಹಾಗಾಗಿ ತಾರಕ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಆಶಿಸೋಣʼʼಎಂದರು.
ಇದನ್ನೂ ಓದಿ: Taraka Ratna: ತಾರಕರತ್ನ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಹಂಚಿಕೊಂಡ ಜ್ಯೂ. ಎನ್‌ಟಿಆರ್, ಶಿವರಾಜ್‌ಕುಮಾರ್
ಜನವರಿ 27ರ ಶುಕ್ರವಾರ ತಾರಕ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿನಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಸಂಜೆ ನಂದಮೂರಿ ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಆರೋಗ್ಯ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಿರುವುದಾಗಿ ತಿಳಿಸಿದೆ. ಈಗಾಗಲೇ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಬೆಂಗಳೂರಿಗೆ ಬಂದು, ನಾರಾಯಣ ಹೃದಯಾಲಯಕ್ಕೆ ತೆರಳಿ ನಂದಮೂರಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ: Taraka Ratna: ನಂದಮೂರಿ ತಾರಕರತ್ನ ಆರೋಗ್ಯ ಸ್ಥಿತಿ ಗಂಭೀರ