ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ (Anchor Aparna) ಅವರು ಮೃತರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಜುಲೈ 11ರಂದು ನಿಧನರಾಗಿದ್ದಾರೆ. ಅಪರ್ಣಾ ನಿಧನಕ್ಕೆ ಇಡಿ ಸ್ಯಾಂಡಲ್‌ವುಡ್ ಸಂತಾಪ ಸೂಚಿಸಿದೆ. 2015ರ ನಂತರದಲ್ಲಿ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ʻಮಜಾ ಟಾಕೀಸ್ʼನಲ್ಲಿ ವರಲಕ್ಷ್ಮೀಯಾಗಿ ಮನೆ ಮಾತಾದರು. ಅಪರ್ಣಾ ಅವರ ಪೂರ್ತಿ ಹೆಸರು ಅಪರ್ಣಾ ವಸ್ತಾರೆ. ಅಪರ್ಣಾ ಅವರಿಗೆ ಜೀವನದಲ್ಲಿ ಒಂದು ಮಹತ್ತರ ಆಸೆಯಿತ್ತು. ಅದುವೇ ನಿರೂಪಣೆ ಶಾಲೆ ತೆರೆಯಬೇಕೆಂಬ ಆಸೆ. ಆದರೆ ಇದು ಸಾಧ್ಯವಾಗಲಿಲ್ಲ.
ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಬಿಟ್ಟು ಅಪರ್ಣಾ ಅವರು ಇಹಲೋಕ ತ್ಯಜಿಸಿದ್ದಾರೆ. ಅಪರ್ಣಾ ಅವರಿಗೆ ಒಂದು ನಿರೂಪಣೆ ಶಾಲೆಯನ್ನು ಮಾಡಬೇಕೆಂಬ ಆಸೆ ತುಂಬಾ ಇತ್ತಂತೆ. ಅದರ ಬಗ್ಗೆ ಪದೇ ಪದೇ ಮಾತನಾಡುತ್ತಿದ್ದರಂತೆ. ಆದರೆ ಅದು ಕೊನೆಗೂ ಈಡೇರಲೇ ಇಲ್ಲ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಲಿಲ್ಲ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಅವರು ಮನೆಮಾತಾಗಿದ್ದರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಹಾಗೇ ಸೃಜನ್ ಲೋಕೇಶ್ ನಡೆಸಿಕೊಡುತ್ತಿದ್ದ ‘ಮಜಾ ಟಾಕೀಸ್’ನಲ್ಲಿ ನಟಿಸಿ, ಕಿರುತೆರೆ ವೀಕ್ಷಕರನ್ನು ರಂಜಿಸಿದ್ದರು. ಇದರಲ್ಲಿ ವರಲಕ್ಷ್ಮಿ ಉರ್ಫ್ ವರು ಪಾತ್ರದಲ್ಲಿ ಮಿಂಚಿದ್ದರು. ಇವರು ಧ್ವನಿಯನ್ನು ಬಸ್ ನಿಲ್ದಾಣ ಹಾಗೂ ಮೆಟ್ರೋ ಆರಂಭದ ದಿನಗಳಲ್ಲಿ ಪ್ರಯಾಣಿಕರಿಗೆ ಮಾಹಿತಿ ನೀಡಲು ಬಳಸಿಕೊಳ್ಳಲಾಗಿತ್ತು.
ಅಪರ್ಣಾ ಅವರ ಧ್ವನಿಯನ್ನು ಮೆಟ್ರೋದಲ್ಲಿ ಮೊಳಗುವುದಕ್ಕೆ ಆರಂಭ ಆದ ಮೇಲೆ ಕನ್ನಡಿಗರು ಖುಷಿಯನ್ನು ವ್ಯಕ್ತಪಡಿಸಿದ್ದರು. ಸ್ವತ: ಅಪರ್ಣಾ ಅವರು ಮೆಟ್ರೋದಲ್ಲಿ ತಮ್ಮದೇ ಧ್ವನಿಯನ್ನು ಕೇಳುವುದಕ್ಕೆ ಹೋಗಿದ್ದರು. ಈ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.
ಇದನ್ನೂ ಓದಿ: Shiva Rajkumar: ನಾಳೆ ಶಿವ ರಾಜ್ಕುಮಾರ್ ಬರ್ತ್ಡೇ: ‘45’ ಸಿನಿಮಾದಿಂದ ಫ್ಯಾನ್ಸ್‌ಗೆ ಬಿಗ್ ಸರ್ಪ್ರೈಸ್
ʻನನಗೂ ಮೆಟ್ರೋಗೂ ಅದ್ಯಾವ ರೀತಿಯ ಸಂಬಂಧ ಅಂದರೆ, ತುಂಬ ಹೆಮ್ಮೆ ಎನಿಸುತ್ತೆ. ಒಂದು ದಿನ ನನಗೆ ಕರೆ ಬಂತು. 12 ವರ್ಷದ ಹಿಂದೆನೇ ಆಗಿರಬಹುದು. ನಿಮ್ಮದೊಂದು ವಾಯ್ಸ್ ನಮ್ಮ ಮೆಟ್ರೋಗೆ ಬೇಕು ಹೇಳಿದರು. ಆ ಮೇಲೆ ಏನಿದು ಅಂತ ಕೇಳಿದಾಗ, ನಿಮ್ಮದೊಂದು ವಾಯ್ಸ್ ಸ್ಯಾಂಪಲ್ ಕೊಡಿ ಎಂದು ಹೇಳಿದ್ದರು. ಆದರೆ ಅಪರ್ಣಾಗೆ ಹೇಗೆ ಧ್ವನಿ ಕೊಡಬೇಕು ಎಂದು ಗೊತ್ತಿರಲಿಲ್ಲ. ಬಳಿಕ ನ್ಯೂಸ್ ಪೇಪರ್ ಇಟ್ಟಕೊಂಡು ಧ್ವನಿ ನೀಡಿದ್ದರು. ಚೆನ್ನೈನಲ್ಲಿ ಈ ಎಲ್ಲ ನಿರ್ಧಾರಗಳನ್ನು ತೆಗದುಕೊಳ್ಳುತ್ತಿದ್ದರು. ಜಯನಗರ, ಈಗ ಏನೇನು ಬರುತ್ತೆ ಬಾಗಿಲನ್ನು ತೆರೆದು ಅಂತೆಲ್ಲ. ಇದೆಲ್ಲ ಯಾಕೆ? ಅವರನ್ನು ಕೇಳಿದೆ. ನನಗೆ ಐಡಿಯಾ ಇಲ್ಲ. ಇದೆಲ್ಲ ಹೆಂಗೆ ಬರುತ್ತೆ ಅಂತ ಆಗ ಅವರು ವಿವರಣೆ ಕೊಟ್ಟರು” ಎಂದು ಅಪರ್ಣಾ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.