Site icon Vistara News

Bigg Boss Telugu 7: ಬಿಗ್ ಬಾಸ್ ತೆಲುಗಿನಲ್ಲಿ ʻಅಗ್ನಿಸಾಕ್ಷಿʼ ಧಾರಾವಾಹಿ ನಟಿ ಎಂಟ್ರಿ?

Shobha Shetty

ಬೆಂಗಳೂರು: ಬಿಗ್ ಬಾಸ್ ತೆಲುಗು (Bigg Boss Telugu 7) ಸೀಸನ್ 7 ಶೋ ಕೆಲ ವಾರಗಳಲ್ಲಿ ಆರಂಭವಾಗುತ್ತಿದೆ. ಸೆಪ್ಟೆಂಬರ್ 3ರಂದು ಈ ಶೋ ಶುರುವಾಗಲಿದೆ ಎನ್ನಲಾಗುತ್ತಿದೆ. ನಾಗಾರ್ಜುನ ಅಕ್ಕಿನೇನಿ ಅವರು ಈ ಶೋ ನಿರೂಪಣೆ ಮಾಡುತ್ತಿದ್ದಾರೆ. ವಿಶೇಷ ಅಂದರೆ ಕನ್ನಡದ ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಗಮನ ಸೆಳೆದ ಶೋಭಾ ಶೆಟ್ಟಿ (Shobha Shetty) ಅವರು ಬಿಗ್ ಬಾಸ್ ಮನೆಗೆ ಕಾಲಿಡಲಿದ್ದಾರೆ. ಶೋಭಾ ಶೆಟ್ಟಿ ಅವರು ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಅವರ ತಂಗಿ ತನು ಪಾತ್ರವನ್ನು ನಿಭಾಯಿಸುತ್ತಿದ್ದರು.

ಈಗಾಗಲೇ ಕೆಲ ಸ್ಪರ್ಧಿಗಳು ಈ ಶೋನಲ್ಲಿ ಭಾಗವಹಿಸಲಿದ್ದಾರೆ ಎಂಬ ವದಂತಿ ಹರಡುತ್ತಿದೆ. ಇದರ ಜತೆಗೆ ಹಿಂದಿನ ಸೀಸನ್‌ನ ಕೆಲ ಸ್ಪರ್ಧಿಗಳು ಕೂಡ ಈ ಶೋನಲ್ಲಿ ಇರಲಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಶೋನಲ್ಲಿ ಭಾಗವಹಿಸುತ್ತಿರುವ ಕುರಿತಾಗಿ ಶೋಭಾ ಶೆಟ್ಟಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕನ್ನಡ ಸೀರಿಯಲ್‌ನಲ್ಲಿ ಬದುಕು ಆರಂಭಿಸಿದ ನಟಿ, ಈಗ ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ. ಸೆಪ್ಟೆಂಬರ್ 3ರಿಂದ ಬಿಗ್ ಬಾಸ್ ರಿಯಾಲಿಟಿ ಶೋ ಶುರುವಾಗಲಿದ್ದು, ಶೋಭಾ ಶೆಟ್ಟಿ (Shobha Shetty) ಜತೆ ಹಲವರ ಹೆಸರು ಕೇಳಿ ಬರುತ್ತಿದೆ. ಈ ಬಾರಿ ಸಿಂಗರ್ಸ್, ಟಿಕ್ ಟಾಕ್ ಸ್ಟಾರ್ಸ್, ಹಿರಿತೆರೆ-ಕಿರುತೆರೆ ನಟ ನಟಿಯರು ಕಾಣಿಸಿಕೊಳ್ಳಲಿದ್ದಾರಂತೆ.

ಇದನ್ನೂ ಓದಿ:Vaishnavi Gowda: ‘ಅಗ್ನಿಸಾಕ್ಷಿ’ ಖ್ಯಾತಿಯ ವೈಷ್ಣವಿ ಗೌಡ ಸ್ಟೈಲಿಷ್‌ ಫೋಟೋಶೂಟ್

ಇದನ್ನೂ ಓದಿ: Bigg Boss Telugu 6 | ತೆಲುಗು ಬಿಗ್‌ ಬಾಸ್‌ ಸೀಸನ್‌ 6ರ ವಿಜೇತ ಯಾರು?

ಶೋಭಾ ಶೆಟ್ಟಿ ವರ್ಷಗಳ ಹಿಂದೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ರುಕ್ಕು’ ಧಾರಾವಾಹಿಯಲ್ಲಿ ನಟಿಸಿ, ಅದನ್ನೂ ಅರ್ಧಕ್ಕೆ ಬಿಟ್ಟಿದ್ದರು. ‘ಪಡುವಾರಹಳ್ಳಿ ಪಡ್ಡೆಗಳು’ ಧಾರಾವಾಹಿಯೊಂದಿಗೆ ಚಿತ್ರರಂಗಕ್ಕೆ ಕಾಲಿಟ್ಟ ಶೋಭಾ ಅವರು ಕನ್ನಡದ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ಹೆಚ್ಚು ಕಾಣಿಸಿಕೊಂಡರು. ಆ ನಂತರ ಮತ್ತೆ ಅವರು ತೆಲುಗಿನಲ್ಲಿಯೇ ಬ್ಯುಸಿ ಆದರು.

Exit mobile version