chief minister d k shivakumar on Weekend With Ramesh Weekend With Ramesh: ವೀಕೆಂಡ್‌ ವಿತ್‌ ರಮೇಶ್‌ ಶೋದಲ್ಲಿ ಡಿ.ಕೆ ಶಿವಕುಮಾರ್; ಪ್ರಸಾರ ಯಾವಾಗ? - Vistara News

ಕಿರುತೆರೆ

Weekend With Ramesh: ವೀಕೆಂಡ್‌ ವಿತ್‌ ರಮೇಶ್‌ ಶೋದಲ್ಲಿ ಡಿ.ಕೆ ಶಿವಕುಮಾರ್; ಪ್ರಸಾರ ಯಾವಾಗ?

Weekend With Ramesh: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್‌ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

VISTARANEWS.COM


on

d k shivakumar on Weekend With Ramesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ವಾರ ವೀಕೆಂಡ್‌ ವಿತ್‌ ರಮೇಶ್‌ ಶೋದಲ್ಲಿ (Weekend With Ramesh) ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar)ಅವರು ಸಾಧಕರ ಕುರ್ಚಿ ಏರುತ್ತಿದ್ದಾರೆ. ಈ ಮೂಲಕ ರಾಜಕೀಯ ಸಾಧನೆಯ ಬಗ್ಗೆ ಅವರು ವೀಕೆಂಡ್ ಶೋನಲ್ಲಿ ಮಾತನಾಡಲಿದ್ದಾರೆ.

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್‌ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಡಿ.ಕೆ. ಶಿವಕುಮಾರ್

ಡಿ.ಕೆ. ಶಿವಕುಮಾರ್ ಅವರ ಪೂರ್ಣ ಹೆಸರು ದೊಡ್ಡಲಹಳ್ಳಿ ಕೆಂಪೇಗೌಡ ಶಿವಕುಮಾರ್ .ಯಾವುದೇ ಕುಟುಂಬ ರಾಜಕೀಯದ ಹಿನ್ನೆಲೆ ಹೊಂದಿಲ್ಲ. ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕ ಇವರು.

 • 7 ಬಾರಿ ಶಾಸಕರಾಗಿ ಆಯ್ಕೆ
 • 1985ರಲ್ಲಿ ಮೊದಲ ಬಾರಿಗೆ ಸಾತನೂರು ಕ್ಷೇತ್ರದಲ್ಲಿ ಜೆಡಿಎಸ್‌ನ ಎಚ್. ಡಿ.ದೇವೇಗೌಡರ ವಿರುದ್ಧ ಸೋಲು
 • 1987ರಲ್ಲಿ ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆ
 • 1989ರ ಸಾತನೂರು ಕ್ಷೇತ್ರದಿಂದ ಗೆಲ್ಲುವ ಮೂಲಕ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆ
 • 1991ರಲ್ಲಿ ಎಸ್.ಬಂಗಾರಪ್ಪ ಸಂಪುಟದಲ್ಲಿ ಬಂಧಿಖಾನೆ ಖಾತೆ ಸಚಿವರಾಗಿ ನೇಮಕ
 • 1994ರಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸಾತನೂರು ಕ್ಷೇತ್ರದಲ್ಲಿ ಕಣಕ್ಕಿಳಿದು ಜಯ
 • 1999ರ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಮತ್ತೆ ಆಯ್ಕೆ
 • 1999ರಲ್ಲಿ ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಹಕಾರ ಸಚಿವರಾಗಿ ಬಳಿಕ ನಗರಾಭಿವೃದ್ಧಿ ಸಚಿವರಾಗಿ ಸೇವೆ
 • 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಕನಕಪುರದಿಂದ ಸ್ಪರ್ಧಿಸಿ ಗೆಲುವು
 • 2013ರ ಚುನಾವಣೆಯಲ್ಲಿ ಗೆದ್ದ ಬಳಿಕ ಸಿದ್ದರಾಮಯ್ಯ ಸಂಪುಟದಲ್ಲಿ ಇಂಧನ ಖಾತೆ ಸಚಿವರಾಗಿ ಆಯ್ಕೆ
 • 2018ರಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಜಲಸಂಪನ್ಮೂಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಸೇವೆ
 • 2020ರ ಮಾರ್ಚ್ 11ರಂದು ಕೆಪಿಸಿಸಿಯ 23ನೇ ಅಧ್ಯಕ್ಷರಾಗಿ ನೇಮಕ

ಇದನ್ನೂ ಓದಿ: Weekend With Ramesh: ಈ ವಾರದ ವೀಕೆಂಡ್​ ವಿತ್‌ ರಮೇಶ್‌ ಅತಿಥಿಗಳು ಇವರು!

ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಚಿತ್ರೀಕರಣ ಮಾಡಲಾಗುತ್ತಿದ್ದು, ಬರುವ ಭಾನುವಾರ ( ಜೂನ್‌ 10, 11) ಮುಹೂರ್ತ ಫಿಕ್ಸ್ ಆಗಿದೆ. ಹಾಗಾಗಿ ಮುಂದಿನ ವಾರಗಳಲ್ಲಿ ಅವರ ಕಂತು ಪ್ರಸಾರವಾಗಲಿದೆ.

ಈ ನಾಯಕನ ನೈಜ ಜೀವನ ವೀಕೆಂಡ್‌ ವಿತ್‌ ರಮೇಶ್‌ ಶೋದಲ್ಲಿ ಅನಾವರಣಗೊಳ್ಳಲಿದೆ. ರಾಜಕೀಯ ಮಾತ್ರವಲ್ಲದೆ, ವೈಯಕ್ತಿಕ ಜೀವನ, ಉದ್ಯಮ, ಅನುಭವಿಸಿದ ಯಾತನೆ ಎಲ್ಲವನ್ನೂ ವೀಕೆಂಡ್‌ ಶೋದಲ್ಲಿ ಅನಾವರಣ ಮಾಡಲಿದ್ದಾರೆ ಕನಕಪುರ ಬಂಡೆ ಎಂದೇ ಕರೆಸಿಕೊಳ್ಳುವ ಡಿಕೆ ಶಿವಕುಮಾರ್.‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Divyanka Tripathi: ವಿದೇಶದಲ್ಲಿ ದರೋಡೆಗೆ ಒಳಗಾದ ಕಿರುತೆರೆ ದಂಪತಿ; ಕಾರಿನ ಗಾಜುಗಳೆಲ್ಲ ಪೀಸ್‌ ಪೀಸ್‌!

Vivek Dahiya: ತಮ್ಮ ವಿವಾಹ ವಾರ್ಷಿಕೋತ್ಸವಕ್ಕಾಗಿ ವಿದೇಶ ಪ್ರವಾಸದಲ್ಲಿರುವ ದಿವ್ಯಾಂಕಾ ತ್ರಿಪಾಠಿ ಮತ್ತು ವಿವೇಕ್ ದಹಿಯಾ ವಿದೇಶದಲ್ಲಿ ಸಂಕಷ್ಟದಲ್ಲಿದ್ದು, ಪೊಲೀಸರೂ ಈ ವಿಚಾರದಲ್ಲಿ ಅಸಹಾಯಕತೆ ತೋರಿದ್ದಾರೆ ಎಂದು ದಿವ್ಯಾಂಕಾ-ವಿವೇಕ್ ಆರೋಪಿಸಿದ್ದರು. ಇಟಲಿಯಲ್ಲಿ ಪ್ರಯಾಣಿಸುತ್ತಿದ್ದ ವಿವೇಕ್-ದಿವ್ಯಾಂಕಾ ಅವರ ಪಾಸ್‌ಪೋರ್ಟ್, ಕ್ರೆಡಿಟ್ ಕಾರ್ಡ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದರು.

VISTARANEWS.COM


on

Divyanka Tripathi Vivek Dahiya Share Update On Robbery Incident
Koo

ಬೆಂಗಳೂರು: ದಿವ್ಯಾಂಕಾ ತ್ರಿಪಾಠಿ (Divyanka Tripathi) ಮತ್ತು ವಿವೇಕ್ ದಹಿಯಾ (Vivek Dahiya) ಹಿಂದಿ ಕಿರುತೆರೆಯ ಪ್ರಸಿದ್ಧಿ ಪಡೆದಿರುವ ದಂಪತಿ. ತಮ್ಮ ವಿವಾಹ ವಾರ್ಷಿಕೋತ್ಸವಕ್ಕಾಗಿ ವಿದೇಶ ಪ್ರವಾಸದಲ್ಲಿರುವ ದಿವ್ಯಾಂಕಾ ತ್ರಿಪಾಠಿ ಮತ್ತು ವಿವೇಕ್ ದಹಿಯಾ ಜುಲೈ 11 ರಂದು ಇಟಲಿಯಲ್ಲಿ ಕಳ್ಳರಿಂದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು. ಈ ಬಗ್ಗೆ ಪೋಸ್ಟ್‌ ಕೂಡ ಹಂಚಿಕೊಂಡಿದ್ದರು. ಇದೀಗ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ದಿವ್ಯಾಂಕಾ ತನ್ನ ಎಲ್ಲಾ ಅಭಿಮಾನಿಗಳು ಮತ್ತು ಫ್ಯಾನ್ಸ್‌ಗಳಿಗೆ ಇಂಥಹ ಕಠಿಣ ಸಮಯದಲ್ಲಿ ಬೆಂಬಲ ಮತ್ತು ಪ್ರೀತಿಗಾಗಿ ಧನ್ಯವಾದ ಹೇಳಿದ್ದಾರೆ. ಇದೀಗ ಸ್ನೇಹಿತರ ಸಹಾಯದಿಂದ ಸಮಸ್ಯೆಗಳು ಬಗೆ ಹರಿದಿವೆ ಎಂದು ಪೋಸ್ಟ್‌ ಮಾಡಿದ್ದಾರೆ.

ತಮ್ಮ ವಿವಾಹ ವಾರ್ಷಿಕೋತ್ಸವಕ್ಕಾಗಿ ವಿದೇಶ ಪ್ರವಾಸದಲ್ಲಿರುವ ದಿವ್ಯಾಂಕಾ ತ್ರಿಪಾಠಿ ಮತ್ತು ವಿವೇಕ್ ದಹಿಯಾ ವಿದೇಶದಲ್ಲಿ ಸಂಕಷ್ಟದಲ್ಲಿದ್ದು, ಪೊಲೀಸರೂ ಈ ವಿಚಾರದಲ್ಲಿ ಅಸಹಾಯಕತೆ ತೋರಿದ್ದಾರೆ ಎಂದು ದಿವ್ಯಾಂಕಾ-ವಿವೇಕ್ ಆರೋಪಿಸಿದ್ದರು. ಇಟಲಿಯಲ್ಲಿ ಪ್ರಯಾಣಿಸುತ್ತಿದ್ದ ವಿವೇಕ್-ದಿವ್ಯಾಂಕಾ ಅವರ ಪಾಸ್‌ಪೋರ್ಟ್, ಕ್ರೆಡಿಟ್ ಕಾರ್ಡ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದರು. ದಂಪತಿಯ ಶಾಪ್ ಮಾಡಿದ ವಸ್ತುಗಳು, ವ್ಯಾಲೆಟ್‌ಗಳು, ಪಾಸ್‌ಪೋರ್ಟ್‌ಗಳು ಸೇರಿದಂತೆ ಸುಮಾರು 10 ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿತ್ತು. ದಂಪತಿಯ ಸಾಮಾನುಗಳನ್ನು ಇಟ್ಟಿದ್ದ ಕಾರಿನ ಗಾಜು ಒಡೆದ ಕಳ್ಳರು ಎಲ್ಲ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಇದೀಗ ನಟಿ ಹಣದ ಸಮಸ್ಯೆ ಬಗೆ ಹರಿದಿದೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Shiva Rajkumar: ಶಿವರಾಜ್‌ಕುಮಾರ್‌ ಅಭಿನಯದ ʻ45ʼ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ!

ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ದಿವ್ಯಾಂಕಾ ಹೀಗೆ ಬರೆದಿದ್ದಾರೆ, “ಪ್ರಿಯರೇ, ನಿಮ್ಮ ಅಪಾರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ತುಂಬಾ ಕಳೆದುಕೊಂಡ ನಂತರ, ಅದೃಷ್ಟವಶಾತ್, ಪ್ರೀತಿ ಕಳೆದುಹೋಗಿಲ್ಲ! ಪ್ರತಿಯೊಬ್ಬರಿಗೂ ವೈಯಕ್ತಿಕವಾಗಿ ಉತ್ತರಿಸಲು ನಮಗೆ ಸಾಧ್ಯವಾಗದ ಕಾರಣ ನಮ್ಮ ಪ್ರೀತಿಪಾತ್ರರಿಗೆ ಮತ್ತು ಸಂಬಂಧಪಟ್ಟ ಜನರಿಗೆ ಅಪ್‌ಡೇಟ್‌ ನೀಡುತ್ತಿದ್ದೇನೆ. ಪ್ರಸ್ತುತ ನಾವು ಸ್ನೇಹಿತನಿಂದ ಸಹಾಯವನ್ನು ಪಡೆದಿರುವುದರಿಂದ ಹಣದ ಸಮಸ್ಯೆ ಬಗೆ ಹರಿಯಿತು. ನಾವು ವರದಿ ಮಾಡಿದಂತೆ ಎಲ್ಲವನ್ನೂ ಕಳೆದುಕೊಂಡಿಲ್ಲ. ಕಾರಿನ ಬೂಟ್‌ನಲ್ಲಿದ್ದ ಕೆಲವು ವಸ್ತುಗಳು ನಮ್ಮ ಬಳಿ ಉಳಿದಿವೆʼʼಎಂದು ಹೇಳಿಕೊಂಡಿದ್ದಾರೆ.

ಜುಲೈ 11 ರಂದು ಇಟಲಿಯ ಫ್ಲಾರೆನ್ಸ್‌ನಲ್ಲಿ ದಿವ್ಯಾಂಕಾ ತ್ರಿಪಾಠಿ ಮತ್ತು ವಿವೇಕ್ ದಹಿಯಾ ಅವರ ಸಾಮಾನುಗಳನ್ನು ಇಟ್ಟಿದ್ದ ಕಾರಿನ ಗಾಜು ಒಡೆದ ಕಳ್ಳರು ಎಲ್ಲ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ದರೋಡೆಯಲ್ಲಿ ತಮ್ಮ ಪಾಸ್‌ಪೋರ್ಟ್, ನಗದು, ಕಾರ್ಡ್‌ಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕಳೆದುಕೊಡಿದ್ದರು.

Continue Reading

ಕಿರುತೆರೆ

Anchor Aparna: ಅಲ್ಪಕಾಲೀನ ಅಮೆರಿಕ ಬದುಕು ಅವಳಿಗೆ ಕಹಿ ಉಣಿಸಿತ್ತು ಎಂದು ಅಪರ್ಣಾ ನೆನೆದ ನಾಗತಿಹಳ್ಳಿ ಚಂದ್ರಶೇಖರ್!

Anchor Aparna: ಸೃಜನ್ ಲೋಕೇಶ್ ಹಾಗೂ ಕುಟುಂಬಸ್ಥರು ಅಂತ್ಯಸಂಸ್ಕಾರದ ವೇಳೆ ಭಾಗಿಯಾಗಿದ್ದರು. ಈ ವೇಳೆ ಅಪರ್ಣ ಪತಿ ನಾಗರಾಜ್‌ಗೆ ಸೃಜನ್ ಲೋಕೇಶ್ ಸಾಂತ್ವನ ಹೇಳಿದರು. ಬಳಿಕ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು. ನಂತರ ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಸಲ್ಲಿಸಿದರು. ಹೊಯ್ಸಳ ಕರ್ನಾಟಕ ಭಾಗದ ಸ್ಮಾರ್ತ ಸಂಪ್ರದಾಯದ ಪ್ರಕಾರ ಅಪರ್ಣಾ ಅಂತ್ಯಕ್ರಿಯೆ ನೆರವೇರಿತು.

VISTARANEWS.COM


on

Anchor Aparna Nagathihalli Chandrashekhar emotional post
Koo

ಬೆಂಗಳೂರು: ಶ್ವಾಸಕೋಶ ಕ್ಯಾನ್ಸರ್‌ನಿಂದ ನಿಧನರಾದ ಖ್ಯಾತ ನಿರೂಪಕಿ, ನಟಿ ಅಪರ್ಣಾ (Anchor Aparna) ಅವರ ಅಂತ್ಯಸಂಸ್ಕಾರ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿತು. ಕುಟುಂಬಸ್ಥರು, ಆಪ್ತರು, ಚಿತ್ರರಂಗದ ಗಣ್ಯರು ಸೇರಿ ನೂರಾರು ಜನರ ಸಮ್ಮುಖದಲ್ಲಿ ಪೊಲೀಸ್‌ ಗೌರದೊಂದಿಗೆ, ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನಡೆಯಿತು. ಇದೀಗ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಇದೀಗ  ಅಪರ್ಣಾ ಕುರಿತು ಭಾವುಕವಾಗಿ ಪೋಸ್ಟ್‌ ಮಾಡಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ ಪೋಸ್ಟ್‌ನಲ್ಲಿ ʻʻ ಇನ್ನೇನು ಕಾರ್ಯಕ್ರಮಕ್ಕೆ ಹೊರಡಬೇಕೆಂಬಂತೆ ಹಸನ್ಮುಖಿಯಾಗಿ ಮಲ್ಲಿಗೆ ಮುಡಿದು ಶವಪೆಟ್ಟಿಗೆಯೊಳಗೆ ಮಲಗಿದ್ದ ಅಪರ್ಣಾಳನ್ನು ಕಂಡಾಗ ಅಸಂಖ್ಯ ನೆನಪುಗಳು ಅಶ್ರು ರೂಪದಲ್ಲಿ ಹೊರಬರುತ್ತಿವೆ. ನನ್ನ ಬರವಣಿಗೆ ಎಂದರೆ ಆಕೆಗೆ ಅಚ್ಚುಮೆಚ್ಚು. ನನ್ನ ಕಥೆ-ಕಾದಂಬರಿಗಳ ಕೆಲ ಸಾಲುಗಳನ್ನು ಕಂಠಪಾಠ ಮಾಡಿದಂತೆ ಒಪ್ಪಿಸುತ್ತಿದ್ದಳು. ’ಚುಕ್ಕಿ ಚಂದ್ರಮರ ನಾಡಿನಲ್ಲಿ’ ಆಕೆಯ ಮೆಚ್ಚಿನ ಕಾದಂಬರಿ. ಅದನ್ನು ಯಾವುದೋ ಹುಡುಗಿ ಬರೆದು ಅದು ನನ್ನ ಹೆಸರಲ್ಲಿ ಅಚ್ಚಾಗಿದೆ ಎಂದು ಛೇಡಿಸುತ್ತಿದ್ದಳು. ಆಗ ನಾನು ಬರೆದ ಕಾಗದಗಳನ್ನು ಬಹಳ ಕಾಲ ಕಾದಿರಿಸಿದ್ದಳೆಂದು ವಸ್ತಾರೆ ಹೇಳುತ್ತಿದ್ದರು. ಅಲ್ಪಕಾಲೀನ ಅಮೆರಿಕಾ ಬದುಕು ಅವಳಿಗೆ ಕಹಿ ಉಣಿಸಿತ್ತು. ಸಾಹಿತ್ಯ, ಸಂಗೀತ, ರಂಗಭೂಮಿ, ಕಿರುತೆರೆ, ಸಿನಿಮಾ ಹೀಗೆ ಬಹುವಿಧ ಆಸಕ್ತಿಗಳಿಂದ ಅಲಂಕೃತಳಾಗಿದ್ದ ಅಪರ್ಣಾ, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಅಸ್ಖಲಿತ, ಪ್ರೌಢ ಮತ್ತು ಭಾವಪೂರ್ಣನಿರೂಪಣೆಗೆ ಮಾದರಿಯಾಗಿದ್ದಳು. ಆಕೆಯ ಅನಾರೋಗ್ಯದ ಸಂಗತಿಯನ್ನು ನೆರೆಮನೆಯಲ್ಲಿರುವ ನನಗೂ ತಿಳಿಸದ ಸ್ವಾಭಿಮಾನಿ. ಮುಂಜಾನೆಯ ನನ್ನ ಕೆಲವು ವಾಕಿಂಗ್ ನಲ್ಲಿ ಮಹಡಿಯಿಂದ ಮುಗುಳ್ನಗೆಯೊಡನೆ ಕೈ ಬೀಸುತ್ತಿದ್ದ ಈ ಸಾಹಿತ್ಯಾಭಿಮಾನಿ ಇನ್ನಿಲ್ಲ. ತನ್ನ ಬದುಕೆಂಬ ಸಮಾರಂಭದ ಕೊನೆಯ ವಂದನಾರ್ಪಣೆ ಹೇಳಿ ಹೋದ ಅಪರ್ಣಾಗೆ ನನ್ನ ಅಶ್ರುತರ್ಪಣʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Anchor Aparna: ಅಪರ್ಣಾ ಸಿಗರೇಟ್‌ ಸೇದುವವರಲ್ಲ, ಆದರೂ ಏಕೆ ಶ್ವಾಸಕೋಶದ ಕ್ಯಾನ್ಸರ್‌ಗೆ ಬಲಿಯಾದರು?

ಸೃಜನ್ ಲೋಕೇಶ್ ಹಾಗೂ ಕುಟುಂಬಸ್ಥರು ಅಂತ್ಯಸಂಸ್ಕಾರದ ವೇಳೆ ಭಾಗಿಯಾಗಿದ್ದರು. ಈ ವೇಳೆ ಅಪರ್ಣ ಪತಿ ನಾಗರಾಜ್‌ಗೆ ಸೃಜನ್ ಲೋಕೇಶ್ ಸಾಂತ್ವನ ಹೇಳಿದರು. ಬಳಿಕ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು. ನಂತರ ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ಸಲ್ಲಿಸಿದರು. ಹೊಯ್ಸಳ ಕರ್ನಾಟಕ ಭಾಗದ ಸ್ಮಾರ್ತ ಸಂಪ್ರದಾಯದ ಪ್ರಕಾರ ಅಪರ್ಣಾ ಅಂತ್ಯಕ್ರಿಯೆ ನೆರವೇರಿತು.

ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ (Kannada) ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (57) (Anchor Aparna) ಅವರು ಗುರುವಾರ ರಾತ್ರಿ ನಿಧನರಾಗಿದ್ದರು.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಲಿಲ್ಲ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಅವರು ಮನೆಮಾತಾಗಿದ್ದರು. ಅದರಲ್ಲೂ, 80 ಮತ್ತು 90ರ ದಶಕದಲ್ಲಿ ಕನ್ನಡ ಕಿರುತೆರೆ ನಿರೂಪಕಿಯಾಗಿ ಜನಪ್ರಿಯತೆ ಗಳಿಸಿದ್ದರು.

1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರು ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟನೆ ಮಾಡಿದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

Continue Reading

ಕಿರುತೆರೆ

Bhagya Lakshmi Kannada Serial: ‘ಭಾಗ್ಯಲಕ್ಷ್ಮಿ’ ಧಾರಾವಾಹಿಯಿಂದ ಹೊರ ನಡೆದ ಸುನಂದಾ ಪಾತ್ರಧಾರಿ!

Bhagya Lakshmi Kannada Serial: ಇನ್ನು ಈ ಧಾರಾವಾಹಿಯಲ್ಲಿ ಭಾಗ್ಯ ಪಾತ್ರಧಾರಿ ಸುಷ್ಮಾ ಅವರು ಭಾವುಕರಾಗಿದ್ದಾರಂತೆ. ಸುನೀತಾ ಶೆಟ್ಟಿ ಹಾಗೂ ಸುಷ್ಮಾ ಕಾಂಬಿನೇಶನ್‌ನನ್ನು ಪ್ರೇಕ್ಷಕರು ಕೊಂಡಾಡುತ್ತಿದ್ದರು. ಭಾಗ್ಯಲಕ್ಷ್ಮಿ’ ಧಾರಾವಾಹಿ ಸೆಟ್‌ನಲ್ಲಿ ಕೊನೆಯ ದಿನದ ಶೂಟ್ ನಂತರ ತಂಡದವರೊಂದಿಗೆ ಕೇಕ್ ಕತ್ತರಿಸಿ ಬೀಳ್ಕೊಟ್ಟ ನಟಿ ಸುನೀತಾ ಶೆಟ್ಟಿ ಭಾವುಕರಾಗಿದ್ದಾರೆ.

VISTARANEWS.COM


on

Bhagya Lakshmi Kannada Serial sunita shetty came out of serial
Koo

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಭಾಗ್ಯಲಕ್ಷ್ಮಿ’ ಧಾರಾವಾಹಿ (Bhagya Lakshmi Kannada Serial) ಇತ್ತೀಚೆಗೆ ಟಿಆರ್‌ಪಿಯಲ್ಲಿಯೂ ಪ್ರಗತಿಯತ್ತ ಸಾಗಿದೆ. ಈಗಾಗಲೇ ಧಾರಾವಾಹಿಯಲ್ಲಿ ಕಥೆ ಒಳ್ಳೆಯದಾಗಿ ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ನಟಿ ಸುನೀತಾ ಶೆಟ್ಟಿ ಪ್ರಮುಖ ಪಾತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ‘ಭಾಗ್ಯಲಕ್ಷ್ಮಿ’ ಧಾರಾವಾಹಿಯಲ್ಲಿ ಕಥಾನಾಯಕಿಯಾದ ಭಾಗ್ಯಳ ತಾಯಿ ಪಾತ್ರವನ್ನು ನಟಿ ಸುನೀತಾ ಶೆಟ್ಟಿ ಮಾಡಿಕೊಂಡು ಬಂದಿದ್ದರು.ಈ ಪಾತ್ರ ಜನಮನ ಗೆದ್ದಿತ್ತು. ಆದರೆ ಇದೀಗ ಅವರ ಫ್ಯಾನ್ಸ್‌ಗೆ ಬೇಸರ ವಿಚಾರವೊಂದು ಇದೆ. ಈಗ ನಟಿ ಸುನೀತಾ ಶೆಟ್ಟಿ ಅವರು ದಿಢೀರ್ ಅಂತ ಧಾರಾವಾಹಿಯಿಂದ ಹೊರ ಬಂದಿದ್ದಾರೆ. ಇದಕ್ಕೆ ಅಸಲಿ ಕಾರಣ ನಟಿ ಸುನೀತಾ ಶೆಟ್ಟಿ ಅವರ ಅಮೆರಿಕ ಪ್ರವಾಸ.

ಈ ಧಾರಾವಾಹಿಯಲ್ಲಿ ಸುನಂದ ಪಾತ್ರ ಏನು ಅಂದರೆ ಮಗಳಿಗೆ ಸದಾ ಒಳಿತನ್ನು ಬಯಸುವ ತಾಯಿ ಪಾತ್ರ. ಜತೆಗೆ ಭಾಗ್ಯ ತಾಯಿ ಪಾತ್ರಕ್ಕೆ ಜೀವ ತುಂಬಿದ್ದರು. ಇನ್ನು ಧಾರಾವಾಹಿಯಲ್ಲಿ ಕೂಡ ತಾಂಡವ್‌ ಕೂಗಾಡಿದ್ದರಿಂದ ಭಾಗ್ಯ ಮನೆಯಿಂದ ಹೊರ ನಡೆದಿದ್ದಾಳೆ ಸುನಂದ ಪಾತ್ರ. ಇದೀಗ ಅಸಲಿಗೆ ಮೂರು ತಿಂಗಳ ಕಾಲ ಅಮೆರಿಕಗೆ ಹೋಗಲಿದ್ದಾರಂತೆ. ಸುನೀತಾ ಶೆಟ್ಟಿ ಅವರ ಮಗಳು ಅಮೆರಿಕದಲ್ಲೇ ನೆಲೆಸಿದ್ದು, ಮಗಳ ಮನೆಗೆ ಮೂರು ತಿಂಗಳ ಕಾಲ ವಾಸವಿದ್ದು ಬರುವ ಪ್ಲಾನ್ ಹಾಕಿಕೊಂಡಿರುವುದರಿಂದ ನಟಿ ಸುನೀತಾ ಶೆಟ್ಟಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಇನ್ನು ಈ ಧಾರಾವಾಹಿಯಲ್ಲಿ ಭಾಗ್ಯ ಪಾತ್ರಧಾರಿ ಸುಷ್ಮಾ ಅವರು ಭಾವುಕರಾಗಿದ್ದಾರಂತೆ. ಸುನೀತಾ ಶೆಟ್ಟಿ ಹಾಗೂ ಸುಷ್ಮಾ ಕಾಂಬಿನೇಶನ್‌ನನ್ನು ಪ್ರೇಕ್ಷಕರು ಕೊಂಡಾಡುತ್ತಿದ್ದರು.

ಇದನ್ನೂ ಓದಿ: Kannada Serials TRP: ಭರ್ಜರಿ ಟಿಆರ್‌ಪಿ ಪಡೆದು ಎರಡನೇ ಸ್ಥಾನ ಪಡೆದ ‘ಸೀತಾ ರಾಮ’; ಟ್ರ್ಯಾಕ್‌ಗೆ ಮರಳಿದ ʻಅಮೃತಧಾರೆʼ!

ಭಾಗ್ಯಲಕ್ಷ್ಮಿ’ ಧಾರಾವಾಹಿ ಸೆಟ್‌ನಲ್ಲಿ ಕೊನೆಯ ದಿನದ ಶೂಟ್ ನಂತರ ತಂಡದವರೊಂದಿಗೆ ಕೇಕ್ ಕತ್ತರಿಸಿ ಬೀಳ್ಕೊಟ್ಟ ನಟಿ ಸುನೀತಾ ಶೆಟ್ಟಿ ಭಾವುಕರಾಗಿದ್ದಾರೆ.

ಇನ್ನು ಸುನೀತಾ ಶೆಟ್ಟಿ ಕೂಡ ʻʻಭಾಗ್ಯಲಕ್ಷ್ಮೀ ಯಾವತ್ತಿಗೂ ಮನಸ್ಸಿನಲ್ಲಿ ಉಳಿಯುವಂತಹ ಸಿಹಿಯಾದ ಜೇನು. ತಂಡದ ಎಲ್ಲ ಸ್ನೇಹಿತರಿಗೆ ಪ್ರೀತಿಯ ಅಪ್ಪುಗೆʼʼಎಂದು ಬರೆದುಕೊಂಡಿದ್ದಾರೆ.ಇದೀಗ ಸುನಂದಾ ಪಾತ್ರಕ್ಕೆ ಬೇರೆ ಯಾರು ಬರುತ್ತಾರೋ? ಅಥವಾ ಸುನಂದಾ ಪಾತ್ರವೇ ಅಂತ್ಯವೋ ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

ಧಾರಾವಾಹಿಗಳಿಗೆ ಮಹಿಳಾ ವೀಕ್ಷಕರ ಸಂಖ್ಯೆ ಹೆಚ್ಚು. ಬಹುತೇಕ ಎಲ್ಲಾ ಸೀರಿಯಲ್​ಗಳಲ್ಲಿಯೂ, ಭಾಷೆ ಯಾವುದೇ ಇರಲಿ ಮಹಿಳೆಯರಿಗೇ ಪ್ರಾಧಾನ್ಯತೆ ಹೆಚ್ಚು. ಇಲ್ಲಿಯವರೆಗೆ ಅಳುಮುಂಜಿಯಂತಿದ್ದ ಭಾಗ್ಯಳ ಬಾಯಲ್ಲಿ ಖಡಕ್‌ ಡೈಲಾಗ್​ಗಳನ್ನು ಹೇಳಿಸುತ್ತಿರುವ ನಿರ್ದೇಶಕರಿಗೆ ಭಾಗ್ಯ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ.

ಭಾಗ್ಯಲಕ್ಷ್ಮಿ ಧಾರಾವಾಹಿಯಲ್ಲಿ ಸುಷ್ಮಾ ರಾವ್, ಭೂಮಿಕಾ ರಮೇಶ್, ಶಮಂತ್ರ ಬ್ರೊ ಗೌಡ, ಸುದರ್ಶನ್ ರಂಗಪ್ರಸಾದ್, ಪದ್ಮಜಾ ರಾವ್, ಸುಷ್ಮಾ ನಾಣಯ್ಯ ಮುಂತಾದವರು ನಟಿಸುತ್ತಿದ್ದಾರೆ. ಇನ್ನು ಸುಷ್ಮಾ ರಾವ್ ಅವರು ಆರು ವರ್ಷಗಳ ಬಳಿಕ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರೋದು ವಿಶೇಷ.

Continue Reading

ಸ್ಯಾಂಡಲ್ ವುಡ್

Actress Aparna: ಮೆಟ್ರೋದಲ್ಲಿ ಪ್ರಯಾಣಿಸುವಾಗ ಕಣ್ಣುಮುಚ್ಚಿ ಅಪರ್ಣಾರ ಸ್ಪಷ್ಟ ಕನ್ನಡ ಸವಿಯಿರಿ ಎಂದು ಪೋಸ್ಟ್‌ ಮಾಡಿದ BMRCL!

Anchor Aparna: ಸ್ವತ: ಅಪರ್ಣಾ ಅವರು ಮೆಟ್ರೋದಲ್ಲಿ ತಮ್ಮದೇ ಧ್ವನಿಯನ್ನು ಕೇಳುವುದಕ್ಕೆ ಹೋಗಿದ್ದರು. ನಿರೂಪಕಿ ಅಪರ್ಣಾ ಅವರಿಗೆ ಬಿಎಂಆರ್​ಸಿಎಲ್​ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. ನಮ್ಮ ಮೆಟ್ರೋದಲ್ಲಿ ವಾಯ್ಸ್ ಅನೌನ್ಸ್ ಮಾಡವ ಮೂಲಕ ಗೌರವದ ಸಂತಾಪ ಸೂಚಿಸಿದ್ದಾರೆ.

VISTARANEWS.COM


on

Actress Aparna Namma Metro post on honour
Koo

ಬೆಂಗಳೂರು: ಖ್ಯಾತ ನಿರೂಪಕಿ ಅಪರ್ಣಾ ನಿಧನರಾಗಿದ್ದಾರೆ.  ಮೆಟ್ರೋ ಆರಂಭ ಆದಾಗ, ಪ್ರಯಾಣಿಕರಿಗೆ ಮಾಹಿತಿಯನ್ನು ನೀಡುವುದಕ್ಕೆ ಮೊದಲು ಇವರ ಧ್ವನಿಯನ್ನೇ ಆಯ್ಕೆ ಮಾಡಲಾಗಿತ್ತು. ನಿಜಕ್ಕೂ ಮೆಟ್ರೋಗೆ ಕಳೆ ಅಂತ ಬಂದಿದ್ದೇ ಇವರ ಧ್ವನಿಯಿಂದ. ಅಪರ್ಣಾ (Anchor Aparna) ಅವರ ಧ್ವನಿಯನ್ನು ಮೆಟ್ರೋದಲ್ಲಿ ಮೊಳಗುವುದಕ್ಕೆ ಆರಂಭ ಆದ ಮೇಲೆ ಕನ್ನಡಿಗರು ಖುಷಿಯನ್ನು ವ್ಯಕ್ತಪಡಿಸಿದ್ದರು. ಸ್ವತ: ಅಪರ್ಣಾ ಅವರು ಮೆಟ್ರೋದಲ್ಲಿ ತಮ್ಮದೇ ಧ್ವನಿಯನ್ನು ಕೇಳುವುದಕ್ಕೆ ಹೋಗಿದ್ದರು. ನಿರೂಪಕಿ ಅಪರ್ಣಾ ಅವರಿಗೆ ಬಿಎಂಆರ್​ಸಿಎಲ್​ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. ನಮ್ಮ ಮೆಟ್ರೋದಲ್ಲಿ ವಾಯ್ಸ್ ಅನೌನ್ಸ್ ಮಾಡವ ಮೂಲಕ ಗೌರವದ ಸಂತಾಪ ಸೂಚಿಸಿದ್ದಾರೆ.

“ಅದೆಷ್ಟೋ ಮೆಟ್ರೋ ಕಾರ್ಯಕ್ರಮಗಳನ್ನು ನಡೆಸಿಕೊಟ್ಟ ಹೆಗ್ಗಳಿಕೆ ಇವರದ್ದು. ಇವರಿಗೆ ಭಾಷೆಯ ಮೇಲಿನ ಹಿಡಿತ ಮತ್ತು ಉಚ್ಛಾರಣೆ ಎರಡೂ ಕರಗತವಾಗಿತ್ತು. ಇವರ ಧ್ವನಿ ನಮ್ಮ ಮೆಟ್ರೋವಿನಲ್ಲಿ ಎಂದೆಂದಿಗೂ ಜೀವಂತ. ಮುಂದಿನ ಬಾರಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವಾಗ ಕಣ್ಣು ಮುಚ್ಚಿ ಅವರ ಸ್ಪಷ್ಟ ಕನ್ನಡದ ಸವಿ ಸವಿಯಿರಿ”ಎಂದು ಬರೆದುಕೊಂಡಿದೆ .

ಇದನ್ನೂ ಓದಿ: Anchor Aparna: ಒನ್ ಆ್ಯಂಡ್ ಒನ್ಲಿ ವರಲಕ್ಷ್ಮಿ ‘ಮಜಾ ಟಾಕೀಸ್’ ನಿಂದ ಹೊರ ಬರಲು ನಿರ್ಧರಿಸಿದ್ದೇಕೆ?

ನಿರೂಪಕಿ ಅಪರ್ಣಾ ಅವರು ಕಳೆದ 13 ವರ್ಷಗಳಿಂದ ನಮ್ಮ ಮೆಟ್ರೋಗೆ ಧ್ವನಿ ನೀಡಿದ್ದಾರೆ. ಮೊದಲ ಬಾರಿಗೆ 2011ರ ಅಕ್ಟೋಬರ್ 20 ರಂದು ಎಂಜಿ ರೋಡ್​ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಆರಂಭಿಸಿದಾಗಿನಿಂದ ಇತ್ತೀಚೆಗೆ 2023ರ ಅಕ್ಟೋಬರ್​ 9 ರಂದು ಉದ್ಘಾಟನೆಗೊಂಡ ಕೆಂಗೇರಿಯಿಂದ ಚಲ್ಲಘಟ್ಟ, ಕೆ.ಆರ್ ಪುರನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ರೈಲು ಮತ್ತು ನಿಲ್ದಾಣಗಳಲ್ಲಿ ನಟಿ ಅಪರ್ಣಾ ವಾಯ್ಸ್ ನೀಡಿದ್ದರು.  ಈ ಹಿನ್ನೆಲೆಯಲ್ಲಿ ಬಿಎಂಆರ್​ಸಿಎಲ್​ ಅಧಿಕಾರಿಗಳು ಅಪರ್ಣಾ ಅವರ ಮನೆಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು. 

ʻʻನನಗೂ ಮೆಟ್ರೋಗೂ ಅದ್ಯಾವ ರೀತಿಯ ಸಂಬಂಧ ಅಂದರೆ, ತುಂಬ ಹೆಮ್ಮೆ ಎನಿಸುತ್ತೆ. ಒಂದು ದಿನ ನನಗೆ ಕರೆ ಬಂತು. 12 ವರ್ಷದ ಹಿಂದೆನೇ ಆಗಿರಬಹುದು. ನಿಮ್ಮದೊಂದು ವಾಯ್ಸ್‌ ನಮ್ಮ ಮೆಟ್ರೋಗೆ ಬೇಕು ಹೇಳಿದರು. ಆ ಮೇಲೆ ಏನಿದು ಅಂತ ಕೇಳಿದಾಗ, ನಿಮ್ಮದೊಂದು ವಾಯ್ಸ್ ಸ್ಯಾಂಪಲ್ ಕೊಡಿ ಎಂದು ಹೇಳಿದ್ದರು. ಆದರೆ ಅಪರ್ಣಾಗೆ ಹೇಗೆ ಧ್ವನಿ ಕೊಡಬೇಕು ಎಂದು ಗೊತ್ತಿರಲಿಲ್ಲ. ಬಳಿಕ ನ್ಯೂಸ್‌ ಪೇಪರ್‌ ಇಟ್ಟಕೊಂಡು ಧ್ವನಿ ನೀಡಿದ್ದರು. ಚೆನ್ನೈನಲ್ಲಿ ಈ ಎಲ್ಲ ನಿರ್ಧಾರಗಳನ್ನು ತೆಗದುಕೊಳ್ಳುತ್ತಿದ್ದರು. ಜಯನಗರ, ಈಗ ಏನೇನು ಬರುತ್ತೆ ಬಾಗಿಲನ್ನು ತೆರೆದು ಅಂತೆಲ್ಲ. ಇದೆಲ್ಲ ಯಾಕೆ? ಅವರನ್ನು ಕೇಳಿದೆ. ನನಗೆ ಐಡಿಯಾ ಇಲ್ಲ. ಇದೆಲ್ಲ ಹೆಂಗೆ ಬರುತ್ತೆ ಅಂತ ಆಗ ಅವರು ವಿವರಣೆ ಕೊಟ್ಟರು” ಎಂದು ಅಪರ್ಣಾ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಬಳಿಕ ಇಷ್ಟಾದರೂ ಅಪರ್ನಾ ಅವರು ಮೆಟ್ರೋಗೆ ಹೋಗೇ ಇರಲಿಲ್ಲ ಅಂತೆ. ದೀಪಾವಳಿ ಹಬ್ಬದ ದಿನ ಬನಶಂಕರಿಯಿಂದ ಎಂಜಿ ರಸ್ತೆವರೆಗೂ ಹೋಗಿ, ಬೈಯಪ್ಪನಹಳ್ಳಿವರೆಗೂ ಧ್ವನಿ ಹೇಗೆ ಇರಲಿದೆ ಎಂಬ ಕುತೂಹಲ ದಿಂದ ಪ್ರಯಾಣ ಮಾಡಿರುವುದಾಗಿ ಹೇಳಿಕೊಂಡಿದ್ದರು.

Continue Reading
Advertisement
radioactive material
ದೇಶ10 mins ago

Radioactive Material: ಅಪಾಯಕಾರಿ ರಾಸಾಯನಿಕ ವಸ್ತು ತುಂಬಿದ್ದ ಬಾಕ್ಸ್‌ಗಳು ಪತ್ತೆ; ಐವರು ಅರೆಸ್ಟ್‌

Ambani Wedding Fashion
ಫ್ಯಾಷನ್18 mins ago

Ambani Wedding Fashion: ಅನಂತ್ ಅಂಬಾನಿ ಶೆರ್ವಾನಿ ಬೆಲೆಯೇ 214 ಕೋಟಿ ರೂ! ಹೇಗಿತ್ತು ನೋಡಿ ಅಂಬಾನಿ ಜೋಡಿಯ ವೆಡ್ಡಿಂಗ್ ಫ್ಯಾಷನ್!

Bagalkot news
ಕರ್ನಾಟಕ24 mins ago

Bagalkot News: ಭಕ್ತರಿಗೆ ಭಂಡಾರ ಹಚ್ಚಿ ಕೊಡಲಿ ಏಟು ನೀಡೋ ಪೂಜಾರಿ; ಮೌಢ್ಯ ನಿಷೇಧ ಕಾಯ್ದೆಯಡಿ ಬಂಧನ!

T20 World Cup 2024
ಕ್ರೀಡೆ33 mins ago

T20 World Cup 2024 : ವಿಶ್ವ ಕಪ್ ಆಯೋಜನೆಯಲ್ಲಿ ಐಸಿಸಿಗೆ ಸಿಕ್ಕಾಪಟ್ಟೆ ನಷ್ಟ ​; ತೆರೆಮರೆಯಲ್ಲಿ ಜೋರು ಚರ್ಚೆ

Anant Ambani Wedding
ಪ್ರಮುಖ ಸುದ್ದಿ54 mins ago

ಅಂಬಾನಿಯನ್ನು ಟೀಕಿಸುತ್ತಿದ್ದ ದೀದಿ, ಅಖಿಲೇಶ್‌, ಲಾಲು ಸೇರಿ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

Self Harming
ಬೆಂಗಳೂರು1 hour ago

Self Harming : ಪತಿ ಅಗಲಿಕೆಯ ನೋವು; ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ

Shiva Rajkumar 131 cinema Look out
ಸ್ಯಾಂಡಲ್ ವುಡ್1 hour ago

Shiva Rajkumar: ಶಿವರಾಜ್ ಕುಮಾರ್ ಜನುಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್!

YouTuber Dhruv Rathee
ದೇಶ1 hour ago

YouTuber Dhruv Rathee: ಸ್ಪೀಕರ್‌ ಓಂ ಬಿರ್ಲಾ ಪುತ್ರಿ ಬಗ್ಗೆ ಪೋಸ್ಟ್‌; ಯೂಟ್ಯೂಬರ್‌ ಧೃವ್‌ ರಥೀ ವಿರುದ್ಧ FIR

Kapil Dev
ಪ್ರಮುಖ ಸುದ್ದಿ1 hour ago

Kapil Dev : ಅಂಶುಮಾನ್ ಗಾಯಕ್ವಾಡ್​ಗೆ ಕ್ಯಾನ್ಸರ್​, ಬೇಸರ ವ್ಯಕ್ತಪಡಿಸಿದ ಕಪಿಲ್​ ದೇವ್​

Smriti Singh
ದೇಶ1 hour ago

Smriti Singh: ಹುತಾತ್ಮ ಯೋಧನ ಪತ್ನಿ ಬಗ್ಗೆ ಅಶ್ಲೀಲ ಕಮೆಂಟ್;‌ ಅಹ್ಮದ್‌ ವಿರುದ್ಧ ಎಫ್‌ಐಆರ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ5 hours ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ4 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ4 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ4 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ5 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ5 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ5 days ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

ಟ್ರೆಂಡಿಂಗ್‌