ಬೆಂಗಳೂರು: ಈ ವಾರ ವೀಕೆಂಡ್ ವಿತ್ ರಮೇಶ್ ಶೋದಲ್ಲಿ (Weekend With Ramesh) ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar)ಅವರು ಸಾಧಕರ ಕುರ್ಚಿ ಏರುತ್ತಿದ್ದಾರೆ. ಈ ಮೂಲಕ ರಾಜಕೀಯ ಸಾಧನೆಯ ಬಗ್ಗೆ ಅವರು ವೀಕೆಂಡ್ ಶೋನಲ್ಲಿ ಮಾತನಾಡಲಿದ್ದಾರೆ.
ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್‌ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್ ಅವರ ಪೂರ್ಣ ಹೆಸರು ದೊಡ್ಡಲಹಳ್ಳಿ ಕೆಂಪೇಗೌಡ ಶಿವಕುಮಾರ್ .ಯಾವುದೇ ಕುಟುಂಬ ರಾಜಕೀಯದ ಹಿನ್ನೆಲೆ ಹೊಂದಿಲ್ಲ. ಒಕ್ಕಲಿಗ ಸಮುದಾಯಕ್ಕೆ ಸೇರಿದ ನಾಯಕ ಇವರು.
- 7 ಬಾರಿ ಶಾಸಕರಾಗಿ ಆಯ್ಕೆ
- 1985ರಲ್ಲಿ ಮೊದಲ ಬಾರಿಗೆ ಸಾತನೂರು ಕ್ಷೇತ್ರದಲ್ಲಿ ಜೆಡಿಎಸ್ನ ಎಚ್. ಡಿ.ದೇವೇಗೌಡರ ವಿರುದ್ಧ ಸೋಲು
- 1987ರಲ್ಲಿ ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆ
- 1989ರ ಸಾತನೂರು ಕ್ಷೇತ್ರದಿಂದ ಗೆಲ್ಲುವ ಮೂಲಕ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆ
- 1991ರಲ್ಲಿ ಎಸ್.ಬಂಗಾರಪ್ಪ ಸಂಪುಟದಲ್ಲಿ ಬಂಧಿಖಾನೆ ಖಾತೆ ಸಚಿವರಾಗಿ ನೇಮಕ
- 1994ರಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸಾತನೂರು ಕ್ಷೇತ್ರದಲ್ಲಿ ಕಣಕ್ಕಿಳಿದು ಜಯ
- 1999ರ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಮತ್ತೆ ಆಯ್ಕೆ
- 1999ರಲ್ಲಿ ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಹಕಾರ ಸಚಿವರಾಗಿ ಬಳಿಕ ನಗರಾಭಿವೃದ್ಧಿ ಸಚಿವರಾಗಿ ಸೇವೆ
- 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಕನಕಪುರದಿಂದ ಸ್ಪರ್ಧಿಸಿ ಗೆಲುವು
- 2013ರ ಚುನಾವಣೆಯಲ್ಲಿ ಗೆದ್ದ ಬಳಿಕ ಸಿದ್ದರಾಮಯ್ಯ ಸಂಪುಟದಲ್ಲಿ ಇಂಧನ ಖಾತೆ ಸಚಿವರಾಗಿ ಆಯ್ಕೆ
- 2018ರಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಜಲಸಂಪನ್ಮೂಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಸೇವೆ
- 2020ರ ಮಾರ್ಚ್ 11ರಂದು ಕೆಪಿಸಿಸಿಯ 23ನೇ ಅಧ್ಯಕ್ಷರಾಗಿ ನೇಮಕ
ಇದನ್ನೂ ಓದಿ: Weekend With Ramesh: ಈ ವಾರದ ವೀಕೆಂಡ್ ವಿತ್ ರಮೇಶ್ ಅತಿಥಿಗಳು ಇವರು!
ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಚಿತ್ರೀಕರಣ ಮಾಡಲಾಗುತ್ತಿದ್ದು, ಬರುವ ಭಾನುವಾರ ( ಜೂನ್ 10, 11) ಮುಹೂರ್ತ ಫಿಕ್ಸ್ ಆಗಿದೆ. ಹಾಗಾಗಿ ಮುಂದಿನ ವಾರಗಳಲ್ಲಿ ಅವರ ಕಂತು ಪ್ರಸಾರವಾಗಲಿದೆ.
ಈ ನಾಯಕನ ನೈಜ ಜೀವನ ವೀಕೆಂಡ್ ವಿತ್ ರಮೇಶ್ ಶೋದಲ್ಲಿ ಅನಾವರಣಗೊಳ್ಳಲಿದೆ. ರಾಜಕೀಯ ಮಾತ್ರವಲ್ಲದೆ, ವೈಯಕ್ತಿಕ ಜೀವನ, ಉದ್ಯಮ, ಅನುಭವಿಸಿದ ಯಾತನೆ ಎಲ್ಲವನ್ನೂ ವೀಕೆಂಡ್ ಶೋದಲ್ಲಿ ಅನಾವರಣ ಮಾಡಲಿದ್ದಾರೆ ಕನಕಪುರ ಬಂಡೆ ಎಂದೇ ಕರೆಸಿಕೊಳ್ಳುವ ಡಿಕೆ ಶಿವಕುಮಾರ್.