Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​! - Vistara News

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Niveditha Gowda : ಡಿವೋರ್ಸ್‌ ಬಳಿಕ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ!

Niveditha Gowda: ಡಿವೋರ್ಸ್‌ ಅನೌನ್ಸ್‌ ಮಾಡಿದ ಬಳಿಕ ನಿವೇದಿತಾ ಬಗ್ಗೆ ಹಲವು ಗಾಸಿಪ್‌ಗಳು ಕೇಳಿ ಬಂದವು. ಮಗು ಪಡೆಯಲು ಒಪ್ಪದ್ದಕ್ಕೆ ನಿವೇದಿತಾ ವಿಚ್ಛೇದನ ಪಡೆದರು, ನಟಿಯಾಗಿ ಮುಂದುವರಿಯಬೇಕು ಎಂಬುದಕ್ಕೆ ಗಂಡನಿಂದ ದೂರ ಆಗುತ್ತಿದ್ದಾರೆ, ಹಣದ ಆಸೆಗೆ ನಿವೇದಿತಾ ಈ ರೀತಿ ನಿರ್ಧಾರ ತೆಗೆದುಕೊಂಡರು ಎಂದು ವದಂತಿಗಳು ಹಬ್ಬಿದವು. ಇದೀಗ ಸ್ವತಃ ಜೋಡಿಯೇ ಮುಂದೆ ಬಂದು ಈ ಎಲ್ಲ ವದಂತಿಗೆ ತೆರೆ ಎಳೆಯಲಿದೆ.

VISTARANEWS.COM


on

Niveditha Gowda Chandan Shetty Joint Pressmeet For The First Time
Koo

ಬೆಂಗಳೂರು: ಚಂದನ್‌ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ಡಿವೋರ್ಸ್‌ ಪಡೆದುಕೊಂಡಿರುವುದು ಗೊತ್ತೇ ಇದೆ. ಇನ್‌ಸ್ಟಾದಲ್ಲಿ ಪೋಸ್ಟ್‌ ಮೂಲಕ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಕೂಡ ಹಂಚಿಕೊಂಡಿದೆ. ಈಗ ಇಬ್ಬರೂ ಒಟ್ಟಾಗಿ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೂಲಕ ಹಲವು ವದಂತಿಗೆ ಇವರು ತೆರೆ ಎಳೆಯಲಿದ್ದಾರೆ. ಬೆಂಗಳೂರಿನ ಜಿಟಿ ಮಾಲ್​ನಲ್ಲಿರುವ ಎಂಬಿ ಲೆಗಸಿಯಲ್ಲಿ ಸುದ್ದಿಗೋಷ್ಠಿ ಆಯೋಜನೆ ಮಾಡಲಾಗಿದೆ. ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ಆರಂಭ ಆಗಲಿದೆ. ಈ ವೇಳೆ ಯಾವೆಲ್ಲ ವಿಚಾರ ಮಾತನಾಡುತ್ತಾರೆ ಎನ್ನುವ ಕುತೂಹಲ ಅವರ ಫ್ಯಾನ್ಸ್‌ನಲ್ಲಿ ಹೆಚ್ಚಾಗಿದೆ.

ಡಿವೋರ್ಸ್‌ ಅನೌನ್ಸ್‌ ಮಾಡಿದ ಬಳಿಕ ನಿವೇದಿತಾ ಬಗ್ಗೆ ಹಲವು ಗಾಸಿಪ್‌ಗಳು ಕೇಳಿ ಬಂದವು. ಮಗು ಪಡೆಯಲು ಒಪ್ಪದ್ದಕ್ಕೆ ನಿವೇದಿತಾ ವಿಚ್ಛೇದನ ಪಡೆದರು, ನಟಿಯಾಗಿ ಮುಂದುವರಿಯಬೇಕು ಎಂಬುದಕ್ಕೆ ಗಂಡನಿಂದ ದೂರ ಆಗುತ್ತಿದ್ದಾರೆ, ಹಣದ ಆಸೆಗೆ ನಿವೇದಿತಾ ಈ ರೀತಿ ನಿರ್ಧಾರ ತೆಗೆದುಕೊಂಡರು ಎಂದು ವದಂತಿಗಳು ಹಬ್ಬಿದವು. ಇದೀಗ ಸ್ವತಃ ಜೋಡಿಯೇ ಮುಂದೆ ಬಂದು ಈ ಎಲ್ಲ ವದಂತಿಗೆ ತೆರೆ ಎಳೆಯಲಿದೆ.

ದುಡ್ಡಿನ ಹಿಂದೆ ಹೋದವರು ಯಾರಂತ ಗೊತ್ತಾಗುತ್ತೆ!

ಬಿಗ್‌ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ “ಜೊತೆಯಾಗಿರಲು ಗಟ್ಟಿಯಾದ ಭರವಸೆ ಬೇಕು, ದೂರಾಗಲು ಚಿಕ್ಕದಾದ ಸಂಶಯ ಸಾಕು’ಎಂದು ಚಂದನ್‌ ಕುರಿತಾಗಿ ಬರೆದುಕೊಂಡಿದ್ದರು. ʻʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದು ಸಂದರ್ಶನದಲ್ಲಿಯೂ ಹೇಳಿದ್ದಾರೆ.

ಪ್ರಶಾಂತ್‌ ಸಂಬರಗಿ ಮಾತನಾಡಿ ʻʻʻನಿನ್ನೆ ನಗ್ತಾನೇ ಬಂದು ಹೋದರು. ಆದರೆ ಚಂದನ್‌ಗೆ ನೋವಾಗಿದೆ. ಇರುವ ಸ್ವಿಫ್ಟ್ ಕಾರು ಬಿಟ್ಟು ಬೆನ್ಜ್ ಕಾರು ಬೇಕು ಅಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ಬೆನ್ಜ್ ಹಿಂದೆ ಹೋಗಿರುವಂತವರು, ದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಅಂತ ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆ. ಚಂದನ್‌ಗೆ ನಮ್ಮ ಬ್ರದರ್ಲಿ ಸಪೋರ್ಟ್, ಎಮೋಷನಲ್ ಸಪೋರ್ಟ್ ಇದೆʼʼ ಎಂದಿದ್ದರು.

ಇದನ್ನೂ ಓದಿ: Niveditha Gowda: ದುಡ್ಡಿನ ಹಿಂದೆ ಹೋದವರು ಯಾರಂತ ಗೊತ್ತಾಗುತ್ತೆ; ಚಂದನ್‌ಗೆ ನಮ್ಮ ಸಪೋರ್ಟ್‌ ಎಂದ ಪ್ರಶಾಂತ್‌ ಸಂಬರಗಿ!

ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದ ನಿವೇದಿತಾ ಗೌಡ

ಈ ದಿನ., ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನ ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೂಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನು ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನ್ನು ಒಬ್ಬರು ಗೌರವಿಸುತ್ತೇವೆ. ಸೂಕ್ಷ್ಮ ಪರಿಗಣೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ನಿವೇದಿತಾ ಗೌಡ ಬರೆದುಕೊಂಡಿದ್ದರು.

ವಿದೇಶಕ್ಕೆ ಹೋಗುವ ಸಾರ್ಧಯತೆ

ಫ್ಯಾಮಿಲಿ ಕೋರ್ಟ್‌ನಲ್ಲಿ ಜೂನ್ 6ರಂದು ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಮಿಡಿಯೆಟರ್ ಸಂಧಾನಕ್ಕೆ ಕೊನೆಗೂ ದಂಪತಿ ಒಪ್ಪಿಲ್ಲ. ಡಿವೋರ್ಸ್‌ ಪಡೆದುಕೊಂಡರೂ ಜೀವನಾಂಶ ಬೇಡ ಎಂದಿದ್ದಾರೆ ನಿವೇದಿತಾ. ಡಿವೋರ್ಸ್ ಸಿಕ್ಕ ನಂತರ ನಿವೇದಿತಾ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

Continue Reading

ಸ್ಯಾಂಡಲ್ ವುಡ್

Anirudh Jatkar: ʻಜೊತೆ ಜೊತೆಯಲಿ’ ಧಾರಾವಾಹಿಯ ವಿವಾದದ ಬಗ್ಗೆ ಬೇಸರ ಹೊರ ಹಾಕಿದ ಅನಿರುದ್ಧ್!

Anirudh Jatkar: ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಜನಪ್ರಿಯರಾಗಿರುವ ಅನಿರುದ್ಧ್ (Kannada New Movie)​ ಜತ್ಕರ್ ನಾಯಕನಾಗಿ ನಟಿಸಿರುವ, ರೂಪ ಡಿ.ಎನ್ ನಿರ್ಮಾಣದ ಹಾಗೂ ಆನಂದರಾಜ್ ಎಂ ನಿರ್ದೇಶಿಸಿರುವ “Chef ಚಿದಂಬರ” ಚಿತ್ರ ಜೂನ್ 14ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ಧ್​ ಜತ್ಕರ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ.

VISTARANEWS.COM


on

Anirudh Jatkar again rise on voice jote joteyali serial issue
Koo

ಬೆಂಗಳೂರು: ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಜನಪ್ರಿಯರಾಗಿರುವ ಅನಿರುದ್ಧ್ (Kannada New Movie)​ ಜತ್ಕರ್ ನಾಯಕನಾಗಿ ನಟಿಸಿರುವ, ರೂಪ ಡಿ.ಎನ್ ನಿರ್ಮಾಣದ ಹಾಗೂ ಆನಂದರಾಜ್ ಎಂ ನಿರ್ದೇಶಿಸಿರುವ “Chef ಚಿದಂಬರ” ಚಿತ್ರ ಜೂನ್ 14ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂದರ್ಶನವನ್ನು ನೀಡುತ್ತಿದ್ದಾರೆ ಅನಿರುದ್ಧ್. ಈ ವೇಳೆ ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿದ್ದ ಅವರ ‘ಜೊತೆ ಜೊತೆಯಲಿ’ ಧಾರಾವಾಹಿ ವಿವಾದದ ಕುರಿತು ಮತ್ತೆ ಧ್ವನಿ ಎತ್ತಿದ್ದಾರೆ. ಯಶಸ್ವಿ ಧಾರಾವಾಹಿಯ ನಿರ್ದೇಶಕ ಹೀಗೆಲ್ಲ ಹೇಗೆ ಹೇಳುವುದಕ್ಕೆ ಸಾಧ್ಯ ಎಂದು ಅನಿರುದ್ಧ್ ಬೇಸರ ಹೊರ ಹಾಕಿದ್ದಾರೆ.

ಅನಿರುದ್ಧ್‌ ಮಾತನಾಡಿ ʻʻಪ್ರತಿ ಮನೆಯಲ್ಲೂ ಜಗಳ ಆಗುತ್ತದೆ. ಭಿನ್ನಾಭಿಪ್ರಾಯ ಬಂದೇ ಬರುತ್ತದೆ. ಹಾಗೇ ಕಿರುತೆರೆಯಲ್ಲಿಯೂ ಇದ್ದಿದ್ದೆ. ಆದರೆ ನಮಗಿಂತ ದೊಡ್ಡದು ಪ್ರಾಜೆಕ್ಟ್‌. ಆಗಿದ್ದು ಆಗೋಯ್ತು. ಮತ್ತೆ ಧಾರಾವಾಹಿಗೆ ಕರೀರಿ ಎಂದೆ. ನಿರ್ದೇಶನ ಕೂಡ ಅವರೇ ಮಾಡಲಿ ಎಂದೆ. ಆ ನಿರ್ದೇಶಕರ ಮುಂದೆ ಮಾಡಬೇಡಿ ಎಂದರು ತುಂಬ ಜನ. ಆದರೂ ನಾನು ಅದೆಲ್ಲ ಮರೆತು ಮುಂದೆ ಸಾಗಬೇಕು ಎಂದಿದ್ದೆ. ಆದರೆ ನನ್ನ ಬಗ್ಗ ಹೀಗೆ ಎಲ್ಲ ಕಡೆ ಅಪ್ರಪಚಾರ ಮಾಡಿಕೊಂಡು ಬಂದರು. ನಿರ್ದೇಶಕರು ಮಾಧ್ಯಮಗಳ ಮುಂದೆ ಏನೆಲ್ಲ ಮಾತನಾಡಿದ್ರೂ ನಾನು ನೋಡೇ ಇಲ್ಲ. ನನಗೆ ಬೇಕಾಗಿರಿಲ್ಲ. ಕ್ಲೈ ಮ್ಯಾಕ್ಸ್‌ ಕೂಡ ಆಗ ಶೂಟ್‌ ಆಗಿತ್ತು. ಇಷ್ಟೆಲ್ಲ ಆದಮೇಲೆ ಇದೆಲ್ಲ ಬೇಕಾಗಿತ್ತ ಅನ್ನಿಸತು. ಯಶಸ್ಸಿನ ಬೆಲೆ ನಿರ್ದೇಶಕರಿಗೆ ಗೊತ್ತಿರಲಿಲ್ಲ. ಇದನ್ನು ನಾನು ಬಹಳಷ್ಟು ಬಾರಿ ಗಮನಿಸಿದ್ದೀನಿ, ಬೇಜಾರು ಮಾಡಿಕೊಂಡಿದ್ದೀನಿ. ಅವರಿಗೆ ಹೇಳಿದ್ದೀನಿ ಕೂಡ. ಹಿಂದೆ ಒಂದಿಷ್ಟು ಧಾರಾವಾಹಿಗಳನ್ನು ಮಾಡಿದ್ದೀನಿ. ಮುಂದೆ ಒಂದಿಷ್ಟು ಮಾಡುತ್ತೀನಿ ಅನ್ನುವ ಧೋರಣೆ ಅಲ್ಲಿತ್ತು.” ಎಂದಿದ್ದಾರೆ.

ʻಜೊತೆ ಜೊತೆಯಲಿ ಧಾರಾವಾಹಿ ಪ್ರತಿ ವಾಕ್ಯ ಜನರಿಗೆ ಗೊತ್ತಿತ್ತು. ಅಷ್ಟೂ ಫೇಮಸ್‌ ಆಗಿತ್ತು. ಜೊತೆ ಜೊತೆಯಲಿ ಧಾರಾವಾಗಿ ಆಗುವಾಗ ನಾನು ತುಂಬ ಪರಫೆಕ್ಷನ್‌ ಅಲ್ಲಿ ಇರುತ್ತಿದ್ದೆ. ನನಗೆ ಅಪ್ರೋಚ್‌ ಕೂಡ ಚೆನ್ನಾಗಿ ಇರಬೇಕು. ಮತ್ತೆ ಸಮಯ ಕೂಡ ಸರಿಯಾಗಿರಬೇಕು. ಆದರೆ ಇದೆಲ್ಲ ನೋಡಿ ನನ್ನ ಗುಣ ಇಗೋ ಥರ ಇದೆ ಎಂದರೆ ಅದಕ್ಕೆ ನಾನೇನು ಮಾಡಲಿಕ್ಕೆ ಆಗಲ್ಲ. ಆ ಸೀರಿಯಲ್‌ನಲ್ಲಿ ಅವರದ್ದೇ ಹೆಸರು ಇರೋದು. ಅವಾರ್ಡ್ ತೆಗೆದುಕೊಳ್ಳುವುದು ಕೂಡ ಅವರೇ. ಡೈರೆಕ್ಷನ್ ಮಾಡುವುದಕ್ಕೆ ಬರೋದಿಲ್ಲ ಅವರು. ಸಂಚಿಕೆ ನಿರ್ದೇಶಕರು ಡೈರೆಕ್ಟ್ ಮಾಡುತ್ತಾರೆ.ನಿರ್ದೇಶನವೇ ಮಾಡದೆ ಅದು ಹೇಗೆ ಅವಾರ್ಡ್ ತೆಗೆದುಕೊಳ್ಳುತ್ತಾರೆ?” ʼʼಎಂದಿದ್ದಾರೆ.

ಶೂಟಿಂಗ್‌ ಸೆಟ್‌ನಲ್ಲಿ ನಿರ್ದೇಶಕರಿಗೆ ಅನಿರುದ್ಧ್‌ ಅವರು ನಿಂದಿಸಿ ಸೆಟ್‌ನಿಂದ ಹೊರಗೆ ನಡೆದಿದ್ದಾರೆ. ಸೆಟ್‌ನಲ್ಲಿ ಸ್ಕ್ರಿಪ್ಟ್‌ ವಿಚಾರಕ್ಕೆ ಅವರು ಪದೇಪದೆ ಜಗಳವಾಡುತ್ತಿದ್ದರು. ಇದರಿಂದಾಗಿ ನಿರ್ಮಾಪಕ ಆರೂರು ಜಗದೀಶ್‌ ತೀವ್ರ ನೊಂದಿದ್ದಾರೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಮುಂದೆ ಅನಿರುದ್ಧ ಬಗ್ಗೆ ದೂರು ದಾಖಲಾಗಿತ್ತು. ಆ ಬಳಿಕ ಕಿರುತೆರೆಯಿಂದ ಅನಿರುದ್ಧ ಅವರನ್ನು ಬ್ಯಾನ್‌ ಕೂಡ ಮಾಡಲಾಯ್ತು.

Continue Reading

ಕಿರುತೆರೆ

Raja Rani Show: ಇಂದಿನಿಂದ ʻರಾಜ ರಾಣಿ ರೀಲೋಡೆಡ್ʼ ರಿಯಾಲಿಟಿ ಶೋ ಶುರು!

Raja Rani Show: ಮೂರನೇ ತೀರ್ಪುಗಾರರಾಗಿ ನಟಿ ಅದಿತಿ ಪ್ರಭುದೇವ ಕಾಣಿಸಿಕೊಳ್ಳುತ್ತಿರುವುದು ಈ ಹೊಸ ಸೀಸನ್ನಿನ ಮತ್ತೊಂದು ಅಚ್ಚರಿ. ಸೃಜನ್ ಲೋಕೇಶ್ ಮತ್ತು ತಾರಾ ಕೂಡ ತೀರ್ಪುಗಾರರು. ಈಗಾಗಲೇ ಹನ್ನೆರಡು ಸೆಲೆಬ್ರೆಟಿ ಜೋಡಿಗಳನ್ನು ಶೋಗೆ ಆಯ್ಕೆ ಮಾಡಲಾಗಿದ್ದು, ಟಿವಿ ಮುಖಗಳಿಂದ ಹಿಡಿದು ಸಾಮಾಜಿಕ ಮಾಧ್ಯಮಗಳ ತನಕ ಬೇರೆ ಬೇರೆ ಹಿನ್ನೆಲೆಯಿಂದ ಬಂದ ಜೋಡಿಗಳನ್ನು ಶೋನಲ್ಲಿ ನೋಡಬಹುದು.

VISTARANEWS.COM


on

Raja Rani Show started Today onwards
Koo

ಬೆಂಗಳೂರು: ಕಲರ್ಸ್ ಕನ್ನಡದ ಜನಪ್ರಿಯ ಶೋಗಳಲ್ಲೊಂದಾದ (Raja Rani Show) ‘ರಾಜ-ರಾಣಿ’ಯ ಮೂರನೇ ಸೀಸನ್ ಇದೀಗ ವೀಕ್ಷಕರನ್ನು ರಂಜಿಸಲು ತಯಾರಾಗಿದೆ. ‘ರಾಜ ರಾಣಿ ರೀಲೋಡೆಡ್- ಸೀಸನ್ 3’ ಇದೇ ಜೂನ್ 8ರಿಂದ (ಇಂದು) ಆರಂಭಗೊಳ್ಳಲಿದ್ದು, ಸಂಚಿಕೆಗಳು ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರಗೊಳ್ಳಲಿವೆ. 

ಕಳೆದ ಸೀಸನ್ನುಗಳ ಯಶಸ್ಸು ತಂಡದ ಉತ್ಸಾಹವನ್ನು ಹೆಚ್ಚಿಸಿದ್ದು, ‘ರಾಜ ರಾಣಿ’ಯ ಮೂರನೇ ಸೀಸನ್ನಿನಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಹನ್ನೆರೆಡು ಸೆಲೆಬ್ರಿಟಿ ದಂಪತಿಗಳು ಪಾಲ್ಗೊಳ್ಳಲಿರುವ ‘ರಾಜ ರಾಣಿ ರೀಲೋಡೆಡ್’ ನ ಹೊಸ ಸೀಸನ್ ಜೋಡಿಗಳ ಡಾನ್ಸಿನ ಮೇಲೆ ಹೆಚ್ಚು ಒತ್ತು ನೀಡಲಿದೆ. ಎಂದಿನಂತೆ ತಮಾಷೆ, ಹರಟೆ, ಆಟ, ಭಾವನೆಗಳೆಲ್ಲಾ ಇರುತ್ತವಾದರೂ ಈ ಸಲ ಜೋಡಿಗಳ ನರ್ತನ ಸಾಮರ್ಥ್ಯ ಹಿಂದಿನ ಸೀಸನ್ನುಗಳಿಗಿಂತ ಆದ್ಯತೆ ಪಡೆಯಲಿದೆ. 

ಮೂರನೇ ತೀರ್ಪುಗಾರರಾಗಿ ನಟಿ ಅದಿತಿ ಪ್ರಭುದೇವ ಕಾಣಿಸಿಕೊಳ್ಳುತ್ತಿರುವುದು ಈ ಹೊಸ ಸೀಸನ್ನಿನ ಮತ್ತೊಂದು ಅಚ್ಚರಿ. ಸೃಜನ್ ಲೋಕೇಶ್ ಮತ್ತು ತಾರಾ ಕೂಡ ತೀರ್ಪುಗಾರರು. ಈಗಾಗಲೇ ಹನ್ನೆರಡು ಸೆಲೆಬ್ರೆಟಿ ಜೋಡಿಗಳನ್ನು ಶೋಗೆ ಆಯ್ಕೆ ಮಾಡಲಾಗಿದ್ದು, ಟಿವಿ ಮುಖಗಳಿಂದ ಹಿಡಿದು ಸಾಮಾಜಿಕ ಮಾಧ್ಯಮಗಳ ತನಕ ಬೇರೆ ಬೇರೆ ಹಿನ್ನೆಲೆಯಿಂದ ಬಂದ ಜೋಡಿಗಳನ್ನು ಶೋನಲ್ಲಿ ನೋಡಬಹುದು. ಡಾನ್ಸ್ ಮತ್ತು ಗೇಮ್‌ಗಳ ಮೂಲಕ ಈ ಜೋಡಿಗಳು ತಮ್ಮ ನಡುವಿನ ಸಾಮರಸ್ಯವನ್ನು ಪರೀಕ್ಷೆಗೊಳಪಡಿಸಲಿದ್ದಾರೆ.

ಇದನ್ನೂ ಓದಿ: Raja Rani Show: ‘ರಾಜಾ ರಾಣಿ’ ಶೋನಲ್ಲಿ ಕುಣಿದು ಕುಪ್ಪಳಿಸಿದ ‘ಕರ್ನಾಟಕ ಜೋಡಿ’; ಹುಣಸೆ ಮರ ಮುಪ್ಪಾದರೆ, ಹುಳಿ ಮುಪ್ಪಾ?

 

‘ರಾಜ ರಾಣಿ ರೀಲೋಡೆಡ್’ ಶುರುವಾಗುತ್ತಿರುವ ಬಗ್ಗೆ ಮಾತನಾಡಿದ ವಯಾಕಾಮ್ 18 ಪ್ರಾದೇಶಿಕ ಮನರಂಜನೆಯ ಕ್ಲಸ್ಟರ್ ಹೆಡ್ ಸುಷ್ಮಾ ರಾಜೇಶ್, ‘ರಾಜ ರಾಣಿ ರೀಲೋಡೆಡ್ ಹಲವು ಹೊಸ ಪ್ರಯೋಗಗಳ ಜತೆಗೆ ಪ್ರಾದೇಶಿಕತೆಯ ಸೊಗಡನ್ನು ಮೈಗೂಡಿಸಿಕೊಂಡು ರಸಭರಿತವಾಗಿ ಮೂಡಿಬರಲಿದೆ’ ಎಂದು ಹೇಳಿದರು. 

ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ ಕೂಡ ಈ ಹೊಸ ಸೀಸನ್ನಿನ ಬಗ್ಗೆ ಉತ್ಸಾಹದ ಮಾತುಗಳನ್ನಾಡಿ, ‘ಡಾನ್ಸ್ ಕೇಂದ್ರಿತ ಹೊಸ ಫಾರ್ಮ್ಯಾಟ್ ಮತ್ತು ಹೊಸ ತೀರ್ಪುಗಾರರಾಗಿ ಅದಿತಿ ಸೇರ್ಪಡೆಯಾಗಿರುವುದು ಈ ಸಲದ ರಾಜರಾಣಿಗೆ ಹೊಸ ಚೈತನ್ಯ ತಂದುಕೊಟ್ಟಿದೆ’ ಎಂದು ಹೇಳಿದರು.

ಲೋಕೇಶ್ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ರಾಜ ರಾಣಿ ಶೋ ನಿರ್ಮಾಣಗೊಳ್ಳುತ್ತಿದೆ. ವೈಟ್ ಗೋಲ್ಡ್ ಅರ್ಪಿಸುವ ಈ ಶೋನ ಸಹ ಪ್ರಾಯೋಜಕರು ಅಮೃತ್ ನೋನಿ. ಜತೆಗೆ ಸ್ಪೆಷಲ್ ಪಾರ್ಟ್ನರ್ ಆಗಿ ಸ್ವಸ್ತಿಕ್ ತುಪ್ಪ, ಭೀಮಾ ಜ್ಯೂಯೆಲ್ಲರ್ಸ್, ಸದ್ಗುರು ಆಯುರ್ವೇದ ಗ್ರಾಮ್ ಫ್ಲೋರ್ ಸೋಪು, ಸಂಗೀತ ಮೊಬೈಲ್ಸ್ ಈ ಜನಪ್ರಿಯ ಕಾರ್ಯಕ್ರಮದ ಜತೆ ಕೈ ಜೋಡಿಸಿವೆ. 

ಜೂನ್ 8ರ ರಾತ್ರಿ ಏಳೂವರೆಗೆ ಮೊದಲ ಸಂಚಿಕೆಯನ್ನು ಆರಂಭಿಸಲಿರುವ ರಾಜರಾಣಿ ರೀಲೋಡೆಡ್ ಅನ್ನು ಕಲರ್ಸ್ ಕನ್ನಡ ಚಾನೆಲ್ ಹಾಗೂ ಜಿಯೊ ಸಿನಿಮಾದಲ್ಲಿಯೂ ವೀಕ್ಷಿಸಬಹುದು.

Continue Reading

ಕಿರುತೆರೆ

Niveditha Gowda: ದಸರಾ ವೇದಿಕೆ ಮೇಲೆ ಪ್ರಪೋಸ್‌ ಮಾಡಿದ್ದೇ ವಿಚ್ಛೇದನಕ್ಕೆ ಕಾರಣವೇ? ʻಕ್ಯೂಟ್‌ ಕಪಲ್‌ʼ ಬಾಳಲ್ಲಿ ಬಿರುಗಾಳಿ!

Niveditha Gowda:  ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಕನ್ನಡದ ‘ಬಿಗ್‌ ಬಾಸ್-5’ರ ಸ್ಪರ್ಧಿಗಳು. ಈ ಕಾರ್ಯಕ್ರಮದಲ್ಲಿ ಜೊತೆಯಾದ ಇಬ್ಬರ ಪರಿಚಯ ನಂತರ ಸ್ನೇಹ ಹಾಗೂ ಪ್ರೀತಿಯಾಗಿ ಬದಲಾಗಿತ್ತು. ಯುವ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಂದನ್ ಶೆಟ್ಟಿ, ಅದೇ ವೇದಿಕೆ ಮೇಲೆ ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿದ್ದರು. ನಿವೇದಿತಾ ಗೌಡ ಅವರಿಗೆ ಪ್ರಪೋಸ್‌ ಮಾಡಲು ಮುಂದಾಗಿದ್ದ ಚಂದನ್, ಮೊದಲು ಫಾರಿನ್ ಲೊಕೇಷನ್‌ ಆರಿಸಿಕೊಂಡಿದ್ರಂತೆ.

VISTARANEWS.COM


on

Niveditha Gowda chandan divorce whats the reason
Koo

ಬೆಂಗಳೂರು: ಬಿಗ್‌ ಬಾಸ್‌ ಜೋಡಿ, ಕ್ಯೂಟ್‌ ಕಪಲ್‌ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ ವಿಚ್ಛೇದನ ಪಡೆದುಕೊಂಡಿದೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಲವ್ ಪ್ರೊಪೋಸಲ್ ಮಾಡಿ ಸುದ್ದಿಯಾಗಿದ್ದರು. ಚಂದನ್ ವರ್ತನೆಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ʻಕ್ಯಾಂಡಿ ಕ್ರಶ್ʼ ಜೋಡಿ ಒಟ್ಟಿಗೆ ಕಾಣಿಸಿಕೊಂಡಿತ್ತು. ಮೂರು ತಿಂಗಳ ಹಿಂದೆ ಚಿತ್ರದ ಶೂಟಿಂಗ್ ನಡೆದಿತ್ತು. ಸದ್ಯ ಸಿನಿಮಾ ರಿಲೀಸ್‌ ಆಗಬೇಕಿದೆ.

ಯುವ ದಸರಾ ಕಾರ್ಯಕ್ರಮದಲ್ಲಿ ಪ್ರಪೋಸ್‌ ಮಾಡಿದ್ದ ಚಂದನ್‌

ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಕನ್ನಡದ ‘ಬಿಗ್‌ ಬಾಸ್-5’ರ ಸ್ಪರ್ಧಿಗಳು. ಈ ಕಾರ್ಯಕ್ರಮದಲ್ಲಿ ಜೊತೆಯಾದ ಇಬ್ಬರ ಪರಿಚಯ ನಂತರ ಸ್ನೇಹ ಹಾಗೂ ಪ್ರೀತಿಯಾಗಿ ಬದಲಾಗಿತ್ತು. ಯುವ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಂದನ್ ಶೆಟ್ಟಿ, ಅದೇ ವೇದಿಕೆ ಮೇಲೆ ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿದ್ದರು. ನಿವೇದಿತಾ ಗೌಡ ಅವರಿಗೆ ಪ್ರಪೋಸ್‌ ಮಾಡಲು ಮುಂದಾಗಿದ್ದ ಚಂದನ್, ಮೊದಲು ಫಾರಿನ್ ಲೊಕೇಷನ್‌ ಆರಿಸಿಕೊಂಡಿದ್ರಂತೆ. ಆದರೆ ಆ ನಂತರ ದೇವಿ ಚಾಮುಂಡೇಶ್ವರಿ ಆಶೀರ್ವಾದದೊಂದಿಗೆ ಮೈಸೂರು ಯುವ ದಸರಾ ವೇದಿಕೆ ಮೇಲೆ ಪ್ರೇಮ ನಿವೇದನೆ ಮಾಡಲು ಮುಂದಾಗಿದ್ದರು ಎಂದು ವರದಿಯಾಗಿತ್ತು.

ಇದನ್ನೂ ಓದಿ: Niveditha Gowda: ನಿವೇದಿತಾ- ಚಂದನ್‌ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಕೊಟ್ರಾ ಬಾರ್ಬಿ ಡಾಲ್‌?

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ  ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

ಇದೀಗ ಜೋಡಿಗೆ ಬೇರೆಯಾಗಿದ್ದು ಕಂಡು ಅವರ ಫ್ಯಾನ್ಸ್‌ ಬೇಸರ ಹೊರ ಹಾಕುತ್ತಿದ್ದಾರೆ. ಮತ್ತೆ ಒಂದಾಗಿ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಈ ಬಗ್ಗೆ ದಂಪತಿ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಕರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಂಡಿದ್ದಾರೆ. ಇಂದು ಶಾಂತಿನಗರ ಕೋರ್ಟ್‌ನಲ್ಲಿ ದಂಪತಿ ವಿಚ್ಛೇದನ ಪಡೆದುಕೊಂಡಿದೆ.

Continue Reading
Advertisement
Physical Abuse
ಮೈಸೂರು14 mins ago

Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

Election Commission
ಪ್ರಮುಖ ಸುದ್ದಿ18 mins ago

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

bhavani revanna prajwal revanna case
ಪ್ರಮುಖ ಸುದ್ದಿ21 mins ago

Prajwal Revanna Case: ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ! ಅಲ್ಲೇ ಇದ್ದರೂ ಮುಖಾಮುಖಿಯಾಗದ ಅಮ್ಮ- ಮಗ

Niveditha Gowda Chandan Shetty Joint Pressmeet For The First Time
ಕಿರುತೆರೆ38 mins ago

Niveditha Gowda : ಡಿವೋರ್ಸ್‌ ಬಳಿಕ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ!

Narendra Modi 3.0
ಪ್ರಮುಖ ಸುದ್ದಿ46 mins ago

Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

8th Pay Commission
ರಾಜಕೀಯ51 mins ago

8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

Physical Abuse
ಕ್ರೈಂ51 mins ago

Physical Abuse : ನಗ್ನ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿದ ತಂದೆ ಬಳಿಕ ಮಗಳು ಮೃತ್ಯು, ಮತ್ತಿಬ್ಬರ ಸ್ಥಿತಿ ಗಂಭೀರ

Sonakshi Sinha to marry boyfriend Zaheer Iqbal on June 23
ಬಾಲಿವುಡ್1 hour ago

Sonakshi Sinha: ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಸೋನಾಕ್ಷಿ ಸಿನ್ಹಾ ಅದ್ಧೂರಿ ಮದುವೆ?

Reasi Terror Attack
ದೇಶ1 hour ago

Reasi Terror Attack : ಜಮ್ಮು – ಕಾಶ್ಮೀರ ಬಸ್ ದಾಳಿಯ ಹೊಣೆ ಹೊತ್ತುಕೊಂಡ ಪಾಕ್ ಲಷ್ಕರ್ ಬೆಂಬಲಿತ ಉಗ್ರ ಸಂಘಟನೆ

Viral Video
ವೈರಲ್ ನ್ಯೂಸ್2 hours ago

Viral Video: ಮೆಕ್ಕಾದಲ್ಲಿ ಬುರ್ಖಾಧಾರಿ ಮಹಿಳೆಯ ಡ್ಯಾನ್ಸ್! ಮುಸ್ಲಿಂ ಸಮುದಾಯದ ಆಕ್ರೋಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌