ಬಿಗ್ ಬಾಸ್ ಸೀಸನ್ 10ನಲ್ಲಿ ಡ್ರೋನ್ ಪ್ರತಾಪ್ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್ ಪ್ರತಾಪ್.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್ ಪ್ರತಾಪ್ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ವಿಶೇಷ ಗಿಫ್ಟ್ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.
ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್ ಪಾತ್ರ ಡಿಫರೆಂಟ್!
ಬಿಗ್ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.