ಪಾಪ ಪಾಂಡು’ ಹಾಗೂ ‘ಗಿಣಿರಾಮ’ ಧಾರಾವಾಹಿಗಳಲ್ಲಿ ನಾಯಕಿಯಾಗಿ ಮಿಂಚಿದ ನಯನ ನಾಗರಾಜ್ (Nayana Nagaraj) ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಉಂಗುರ ಬದಲಿಸಿಕೊಂಡ ಜೋಡಿ.
ದೀರ್ಘಕಾಲದ ಗೆಳೆಯ ಸುಹಾಸ್ ಶಿವಣ್ಣ ಅವರೊಂದಿಗೆ ನಯನ ನಾಗರಾಜ್ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?
ಕುಟುಂಬಸ್ಥರ ಸಮ್ಮುಖದಲ್ಲಿ ನಯನ ನಾಗರಾಜ್ ಹಾಗೂ ಸುಹಾಸ್ ಶಿವಣ್ಣ ಉಂಗುರ ಬದಲಿಸಿಕೊಂಡಿದ್ದಾರೆ. ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದ್ದು, ಫೋಟೊ ಹಾಗೂ ವಿಡಿಯೊಗಳು ವೈರಲ್ ಆಗಿವೆ.
ಹತ್ತು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ನಯನ ನಾಗರಾಜ್ ಹಾಗೂ ಸುಹಾಸ್ ಶಿವಣ್ಣ .