ಬೆಂಗಳೂರು: ಕನ್ನಡ ಕಿರುತೆರೆಯ ಕಡಲಲ್ಲಿ ʻಸ್ಟಾರ್ ಸುವರ್ಣ ವಾಹಿನಿʼಯು (Star Suvarna Kannada) ಹೊಸ ಯೋಜನೆಗಳ ಜತೆ ವಿನೂತನ ಪರಿಕಲ್ಪನೆಗಳೊಂದಿಗೆ ಮನರಂಜನೆಯ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ ‘ಜಾನಕಿ ಸಂಸಾರ'(Janaki Samsara Serial).
ಇದೊಂದು ತುಂಬು ಕುಟುಂಬದ ಕಥೆ. ಈ ಮನೆಯ ಹಿರಿ ಸೊಸೆ ಜಾನಕಿ, ಇಡೀ ಸಂಸಾರದ ಹೊಣೆ ಹೊತ್ತವಳು. ಎಷ್ಟೇ ಕಷ್ಟ ಬಂದರು ಎದುರಿಸುವ ಛಲಗಾರ್ತಿ. ವಿದ್ಯಾವಂತೆಯಾಗಿರುವ ಜಾನಕಿ ತನ್ನ ಸಂಸಾರದ ಜತೆ ಉದ್ಯೋಗವನ್ನು ಸರಿ ಸಮಾನಾಗಿ ನಿಭಾಯಿಸುತ್ತಿರುತ್ತಾಳೆ. ಸದಾಕಾಲ ಮನೆ ಮಂದಿಯನ್ನು ಒಗ್ಗಟ್ಟಾಗಿಡಲು ಬಯಸುವ ಜಾನಕಿಯ ಸಂಸಾರಕ್ಕೆ ಮನೆಯೊಡೆಯುವ ವ್ಯಕ್ತಿಯ ಆಗಮನವಾದರೆ, ಮುಂದೆ ಜಾನಕಿ ತನ್ನ ಸಂಸಾರವನ್ನು ಹೇಗೆ ಕಾಪಾಡ್ತಾಳೆ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.
ʻಜಾನಕಿ ಸಂಸಾರ’ ಧಾರಾವಾಹಿಯು ಸುಂದರ ತಾರಾಗಣವನ್ನು ಹೊಂದಿದ್ದು, ಕನ್ನಡಿಗರ ಮನಸು ಕದ್ದ ಕಣ್ಮಣಿ, ‘ಕೃಷ್ಣರುಕ್ಮಿಣಿ’ ಧಾರಾವಾಹಿ ಖ್ಯಾತಿಯ ರುಕ್ಮಿಣಿ ಅಲಿಯಾಸ್ ಅಂಜನಾ ಶ್ರೀನಿವಾಸ್ ಇದ್ದಾರೆ. ಅಂಜನಾ ಶ್ರೀನಿವಾಸ್ ಅವರು 13 ವರ್ಷಗಳ ಬಳಿಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ‘ಜಾನಕಿ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜತೆಗೆ ಸೂರಜ್ ಹೊಳಲು, ಕಾವ್ಯ ಶಾಸ್ತ್ರೀ, ಬಾಲ ನಟಿ ಶ್ರೀ ದಿಶಾ, ಮರೀನ ತಾರಾ, ರವಿ ಭಟ್, ಚಂದನ್ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಹೊಸ ಧಾರಾವಾಹಿ “ಜಾನಕಿ ಸಂಸಾರ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.
ಇದನ್ನೂ ಓದಿ: Puttakkana Makkalu Serial: ಅವ್ವನಂತೆ ಯಾರ ಹಂಗಿಲ್ಲದೆ ಬದುಕಲು ಮನೆ ಬಿಟ್ಟು ಹೊರಟೇ ಬಿಟ್ಟಳು ಸಹನಾ!
ಸ್ಟಾರ್ ಸುವರ್ಣವಾಹಿನಿಯಲ್ಲಿ (Star Suvarna) ಪ್ರಸಾರವಾಗುತ್ತಿದ್ದ ʻನಮ್ಮ ಲಚ್ಚಿ’ (Namma Lacchi) ಧಾರಾವಾಹಿ ಅಂತ್ಯ ಕಂಡ ಬೆನ್ನಲ್ಲೇ ಹೊಸ ಧಾರಾವಾಹಿಗಳು ಬರುತ್ತಿವೆ. 2023ರ ಫೆಬ್ರವರಿ 6ಕ್ಕೆ ಧಾರಾವಾಹಿ ಶುರು ಆಗಿತ್ತು. ಬಂಗಾಳಿ ಭಾಷೆಯ ʻಪೋಟಲ್ ಕುಮಾರ್ ಗಾನಾವಾಲʼ (Potol Kumar Gaanwala) ಧಾರಾವಾಹಿಯ ಅಧಿಕೃತ ರೀಮೆಕ್ ಈ ʻನಮ್ಮ ಲಚ್ಚಿʼ.
ʼನಮ್ಮ ಲಚ್ಚಿ’ ಧಾರಾವಾಹಿಯಲ್ಲಿ ಮೂವರು ಮಕ್ಕಳು ಸಾಕಷ್ಟು ಗಮನ ಸೆಳೆಯುತ್ತಾರೆ. ಅದರಲ್ಲಿ ಲಚ್ಚಿ ಮುಖ್ಯ ಪಾತ್ರಧಾರಿಯಾದರೆ, ರಿಯಾ ಕೂಡ ಪ್ರಾಮುಖ್ಯತೆ ಪಡೆದಿದ್ದಾರೆ. ಇನ್ನು ಸುಗ್ಗಿ, ಲಚ್ಚಿಗೆ ತಂಗಿಯಾಗಿ ಗಮನ ಸೆಳೆದಿದ್ದಳು.