Site icon Vistara News

Kannada Serials TRP: ಈ ಬಾರಿಯೂ ‘ಸೀತಾ ರಾಮ’ ಟಾಪ್‌; ಸುಧಾರಿಸಿದ ‘ಅಮೃತಧಾರೆ’ ಧಾರಾವಾಹಿ!

Kannada Serials TRP

ʻಸೀತಾ ರಾಮ’ ಧಾರಾವಾಹಿ (Kannada Serials TRP) ಇದೀಗ ಪುಟ್ಟಕ್ಕನ ಮಕ್ಕಳು ಧಾರಾವಾಹಿಗೆ ದಿನೇದಿನೆ ಹೆಚ್ಚು ಪೈಪೋಟಿ ನೀಡಲು ಶುರು ಮಾಡಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ (Puttakkana Makkalu Serial) ಮೊದಲ ಸ್ಥಾನದಲ್ಲಿದೆ. ‘ಸೀತಾ ರಾಮ’ ಧಾರಾವಾಹಿ (Seetha Raama) ಎರಡನೇ ಸ್ಥಾನ ಪಡೆದುಕೊಂಡಿದೆ. ಈಗ 35ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ.

ಪುಟ್ಟಕ್ಕನ ಮಕ್ಕಳು

ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನವನ್ನು ಉಳಿಸಿಕೊಂಡು ಬರುತ್ತಲೇ ಇದೆ. ಈಗಲೂ ಒಳ್ಳೆಯ ಟಿಆರ್​ಪಿಯೊಂದಿಗೆ ಈ ಧಾರಾವಾಹಿ ಮುನ್ನುಗ್ಗುತ್ತಿದೆ. ಸದ್ಯ ಪುಟ್ಟಕ್ಕನ ಮೆಸ್‌ಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ. ಬಂಗಾರಮ್ಮನ ಕಡೆಯವರೇ ಈ ಕೃತ್ಯ ಎಸೆಗಿದ್ದಾರೆ ಎಂದು ಊರಿನವರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಧಾರಾವಾಹಿಯಲ್ಲಿ ಹೊಸ ಪಾತ್ರ ಎಂಟ್ರಿ ಕೊಟ್ಟಿದೆ. ರಮೇಶ್ ಪಂಡಿತ್, ಉಮಾಶ್ರೀ, ಅಕ್ಷರಾ, ಸಂಜನಾ ಬುರ್ಲಿ, ಮಂಜು ಭಾಷಿಣಿ, ಹಂಸ, ಧನುಷ್, ಸೂರಜ್ ಹೊಳ್ಳ, ಪವನ್ ಕುಮಾರ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಎರಡಂಕಿ ಟಿಆರ್​ಪಿ ಪಡೆಯುತ್ತಿರುವ ಕನ್ನಡದ ಏಕೈಕ ಧಾರಾವಾಹಿ ಇದು. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿ ಕಳೆದ ವಾರವೂ ಎರಡನೇ ಸ್ಥಾನದಲ್ಲಿ ಇತ್ತು. ಈ ವಾರವೂ ಎರಡನೇ ಸ್ಥಾನ ಪಡೆದುಕೊಂಡಿದೆ. ಸಿಹಿ ಮುಖದಲ್ಲಿ ಮೂಡಿದ ನಗು.. ರಾಮನ ಬದುಕಿಗೆ ಹೊಸ ಖುಷಿ ತಂದಿದೆ. ರಾಮ ಹಾಗೂ ಸೀತಾ (ವೈಷ್ಣವಿ-ಗಗನ್) ಮಧ್ಯೆ ಈಗ ತಾನೇ ಆಪ್ತತೆ ಮೂಡುತ್ತಿದೆ. ವೈಷ್ಣವಿ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ರೀತು ಸಿಂಗ್ ಹೆಸರಿನ ಬಾಲಕಿ ವೈಷ್ಣವಿ ಗೌಡ ಮಗಳಾಗಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾಳೆ. ಈಕೆಯ ನಟನೆ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಸೀತಾ ರಾಮ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ನಗರ ವಿಭಾಗದಲ್ಲಿ ಈ ಧಾರಾವಾಹಿ ಮೊದಲ ಸ್ಥಾನದಲ್ಲಿದೆ ಅನ್ನೋದು ವಿಶೇಷ.

ಇದನ್ನೂ ಓದಿ: Kannada Serials TRP: ಟಾಪ್‌ 5ರಲ್ಲಿಲ್ಲ ʻಶ್ರೀರಸ್ತು ಶುಭಮಸ್ತುʼ; ಸೀತಾ ರಾಮ ಧಾರಾವಾಹಿಗೆ ಹೆಚ್ಚಾಯ್ತು ಬೇಡಿಕೆ!

ಗಟ್ಟಿಮೇಳ

 ‘ಸೀತಾ ರಾಮ’ ಬರುವುದಕ್ಕೂ ಮೊದಲು ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇತ್ತು. ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿಗಳ ನಗರ ಹಾಗೂ ಗ್ರಾಮೀಣ ಭಾಗದ ಟಿಆರ್​ಪಿ ಒಂದೇ ಇದ್ದರೂ ನಗರದ ಟಿಆರ್​ಪಿ ಆಧಾರಾದಲ್ಲಿ ‘ಗಟ್ಟಿಮೇಳ’ಕ್ಕೆ ಮೂರನೇ ಸ್ಥಾನ ನೀಡಬಹುದು. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿದ್ದಾರೆ.ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ಅಮೃತಧಾರೆ

ಅಮೃತಧಾರೆ ಧಾರಾವಾಹಿಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಗೌತಮ್-ಭೂಮಿಕಾ ಸಪ್ತಪದಿ ತುಳಿದಾಗಿದೆ. ಈ ಧಾರಾವಾಹಿ ಹಿಂದಿನ ವಾರ ಐದನೇ ಸ್ಥಾನ ಅಲಂಕರಿಸಿತ್ತು. ಈ ವಾರ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: Kannada Serials TRP: ʻಗೀತಾʼ ಧಾರಾವಾಹಿಯ ಓಟ ಶುರು; ಎರಡನೇ ಸ್ಥಾನದಲ್ಲಿ ʻಸೀತಾ ರಾಮʼ!

ಸತ್ಯ

‘ಸತ್ಯ’ ಧಾರಾವಾಹಿ ಮೊದಲಿನಿಂದಲೂ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿರುವ ಧಾರಾವಾಹಿ. ಈ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ಹಿಂದಿನ ವಾರ ನಾಲ್ಕನೇ ಸ್ಥಾನದಲ್ಲಿತ್ತು. ‘ಸತ್ಯ’ ಧಾರಾವಾಹಿ ಕೂಡ ಭರ್ಜರಿ ಟಿಆರ್​ಪಿ ಪಡೆದು ಮುಂದೆ ಸಾಗುತ್ತಿದೆ. ಅಷ್ಟೇ ಅಲ್ಲದೇ ಸತ್ಯ ಅತ್ತೆಯ ಮನವೊಲಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಅತ್ತೆ ಕೂಡ ಸತ್ಯಳನ್ನು ಪ್ರೀತಿಸಲು ಶುರು ಮಾಡಿದಂತಿದೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

Exit mobile version