ಬೆಂಗಳೂರು: ಈ ವಾರದ ಕನ್ನಡ ಕಿರುತೆರೆಯ ಟಿಆರ್‌ಪಿ (Kannada Serials TRP) ಹೊರಬಿದ್ದಿದೆ. ‘ಸೀತಾ ರಾಮ’ ಧಾರಾವಾಹಿ ಕಳೆದ ವಾರವಷ್ಟೇ ಪ್ರಸಾರ ಕಾಣುತ್ತಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಸಖತ್ ಅದ್ಧೂರಿಯಾಗಿ ಓಪನಿಂಗ್ ಕಂಡ ಈ ಧಾರಾವಾಹಿ ಬಗ್ಗೆ ಮೆಚ್ಚುಗೆ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಈ ಧಾರಾವಾಹಿಯ ಟಿಆರ್‌ಪಿ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಈ ಬಾರಿಯೂ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನದಲ್ಲಿದೆ.
ಪುಟ್ಟಕ್ಕನ ಮಕ್ಕಳು
ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನವನ್ನು ಉಳಿಸಿಕೊಂಡು ಬರುತ್ತಲೇ ಇದೆ. ಈಗಲೂ ಒಳ್ಳೆಯ ಟಿಆರ್ಪಿಯೊಂದಿಗೆ ಈ ಧಾರಾವಾಹಿ ಮುನ್ನುಗ್ಗುತ್ತಿದೆ. ರಮೇಶ್ ಪಂಡಿತ್, ಉಮಾಶ್ರೀ, ಅಕ್ಷರಾ, ಸಂಜನಾ ಬುರ್ಲಿ, ಮಂಜು ಭಾಷಿಣಿ, ಹಂಸ, ಧನುಷ್, ಸೂರಜ್ ಹೊಳ್ಳ, ಪವನ್ ಕುಮಾರ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.
‘ಗಟ್ಟಿಮೇಳ’
ಇತ್ತೀಚಿನ ತಿಂಗಳಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಒಂದೇ ರೀತಿಯ ಟಿಆರ್‌ಪಿ ಕಾಯ್ದುಕೊಂಡು ಹೋಗುತ್ತಿತ್ತು. ಆದರೆ ಈ ಬಾರಿ ಧಾರಾವಾಹಿ ಟಿಆರ್‌ಪಿ ಏರಿಕೆ ಕಂಡಿದೆ. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿದ್ದಾರೆ. ‘ಗಟ್ಟಿಮೇಳ’ ಧಾರಾವಾಹಿ ಮಧ್ಯಮ ವರ್ಗದ ಮನೆಯ ಹೆಣ್ಣು ಮಕ್ಕಳನ್ನು ಹೇಗೆ ಪರಿಮಳಾ ಹಾಗೂ ಮಂಜುನಾಥ್ ದಂಪತಿ ಮದುವೆ ಮಾಡುತ್ತಾರೆ ಎಂಬುದು ಒನ್‌ಲೈನ್ ಸ್ಟೋರಿ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.
ಇದನ್ನೂ ಓದಿ:Kannada Serials TRP: ಹತ್ತನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀʼ: ಟಿಆರ್‌ಪಿ ಕಣಕ್ಕೆ ಹೊಸ ಧಾರಾವಾಹಿಗಳು ಎಂಟ್ರಿ!
ಅಮೃತಧಾರೆ
ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಶೀಘ್ರದಲ್ಲೇ ಇವರ ಮದುವೆ ನೆರವೇರಲಿದ್ದು, ಆ ಸಂದರ್ಭದಲ್ಲಿ ಟಿಆರ್‌ಪಿ ಹೆಚ್ಚಬಹುದು. ಈ ಧಾರಾವಾಹಿ ಟಿಆರ್‌ಪಿ ರೇಸ್ನಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ರಿಚ್ ಆಗಿ ಮೂಡಿ ಬರುತ್ತಿದೆ. ಈ ಕಾರಣಕ್ಕೂ ಪ್ರೇಕ್ಷಕರಿಗೆ ಇಷ್ಟ ಆಗುತ್ತಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಪ್ರಬುದ್ಧ ನಟನೆಯ ಗಮನ ಸೆಳೆಯುತ್ತಿದೆ. ಅಮೃತಧಾರೆ ಧಾರಾವಾಹಿ ʻಬಡೆ ಅಚ್ಚೆ ಲಗತೆ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್ ಆಗಿದೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.
ಸೀತಾ ರಾಮ
ಕಳೆದ ವಾರ ಪ್ರಸಾರ ಆರಂಭಿಸಿದ ‘ಸೀತಾ ರಾಮ’ ಧಾರಾವಾಹಿಯ ಟಿಆರ್‌ಪಿ ಹೊರ ಬಿದ್ದಿದೆ. ಈ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಧಾರಾವಾಹಿ ಟಿಆರ್‌ಪಿ ಹೆಚ್ಚುವ ನಿರೀಕ್ಷೆ ಇದೆ. ರೀತು ಸಿಂಗ್ ಹೆಸರಿನ ಬಾಲಕಿ ವೈಷ್ಣವಿ ಗೌಡ ಮಗಳಾಗಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾಳೆ.
ಇದನ್ನೂ ಓದಿ: Kannada Serials TRP: ಟಿಆರ್‌ಪಿ ಅಖಾಡಕ್ಕೆ ಹೊಸ ಧಾರಾವಾಹಿ ಎಂಟ್ರಿ; ಅಕ್ಕ-ತಂಗಿ ಕಥೆಗೆ 5ನೇ ಸ್ಥಾನವೂ ಇಲ್ಲ!
ಶ್ರೀರಸ್ತು ಶುಭಮಸ್ತು
ಪತಿಯನ್ನು ಕಳೆದುಕೊಂಡ ಮಹಿಳೆ ಹಾಗೂ ಪತ್ನಿಯನ್ನು ಕಳೆದುಕೊಂಡ ಪುರುಷ. ಇವರಿಬ್ಬರಿಗೂ ಮಕ್ಕಳಿದ್ದಾರೆ. ಅವರು ದೊಡ್ಡವರಾಗಿದ್ದಾರೆ. ಹೀಗಿರುವಾಗ ಈ ಪುರುಷ ಹಾಗೂ ಮಹಿಳೆ ಮಧ್ಯೆ ಪ್ರೀತಿ ಮೂಡಿದರೆ ಏನಾಗುತ್ತದೆ? ಈ ಕಥೆಯನ್ನು ‘ಶ್ರೀರಸ್ತು ಶುಭಮಸ್ತು’ ಹೊಂದಿದೆ. ಈ ಧಾರಾವಾಹಿ ಟಿಆರ್‌ಪಿ ಸ್ಪರ್ಧೆಯಲ್ಲಿ ಐದನೇ ಸ್ಥಾನದಲ್ಲಿದೆ.
ಆರನೇ ಸ್ಥಾನದಲ್ಲಿ ‘ಉಧೋ ಉಧೋ ಶ್ರೀ ರೇಣುಕಾ ಯೆಲ್ಲಮ್ಮ’, ಇದೆ ಇದು ಸುವರ್ಣದಲ್ಲಿ ಪ್ರಸಾರ ಕಾಣುತ್ತಿದೆ. ಏಳನೇ ಸ್ಥಾನದಲ್ಲಿ ‘ಸತ್ಯ ಇದ್ದು ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಎಂಟನೇ ಸ್ಥಾನದಲ್ಲಿ ‘ಹಿಟ್ಲರ್ ಕಲ್ಯಾಣ’ ಇದೆ. ಈ ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಒಂಭತ್ತನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’, ಇದೆ. ಇದು ಕಲರ್ಸ್ ಕನ್ನಡದಲ್ಲಿ ಇದೆ. ಹತ್ತನೇ ಸ್ಥಾನದಲ್ಲಿ ‘ನೀನಾದೆ ನಾ’ ಇದೆ. ಇದು ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣುತ್ತಿದೆ.