ʻಸೀತಾ ರಾಮ’ ಧಾರಾವಾಹಿ (Kannada Serials TRP) ಇದೀಗ ಪುಟ್ಟಕ್ಕನ ಮಕ್ಕಳು ಧಾರಾವಾಹಿಗೆ ದಿನೇದಿನೆ ಹೆಚ್ಚು ಪೈಪೋಟಿ ನೀಡಲು ಶುರು ಮಾಡಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ (Puttakkana Makkalu Serial) ಮೊದಲ ಸ್ಥಾನದಲ್ಲಿದೆ. ‘ಸೀತಾ ರಾಮ’ ಧಾರಾವಾಹಿ (Seetha Raama) ಎರಡನೇ ಸ್ಥಾನ ಪಡೆದುಕೊಂಡಿದೆ.
ಪುಟ್ಟಕ್ಕನ ಮಕ್ಕಳು
ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನವನ್ನು ಉಳಿಸಿಕೊಂಡು ಬರುತ್ತಲೇ ಇದೆ. ಈಗಲೂ ಒಳ್ಳೆಯ ಟಿಆರ್ಪಿಯೊಂದಿಗೆ ಈ ಧಾರಾವಾಹಿ ಮುನ್ನುಗ್ಗುತ್ತಿದೆ. ಸದ್ಯ ಪುಟ್ಟಕ್ಕನ ಮೆಸ್‌ಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ. ಬಂಗಾರಮ್ಮನ ಕಡೆಯವರೇ ಈ ಕೃತ್ಯ ಎಸೆಗಿದ್ದಾರೆ ಎಂದು ಊರಿನವರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಆಘಾತದಿಂದ ಪುಟ್ಟಕ್ಕ ಹೇಗೆ ಹೊರಗೆ ಬರುತ್ತಾರೆ ಎಂಬುದೇ ಪ್ರೇಕ್ಷಕರಿಗೆ ಕುತೂಹಲ. ರಮೇಶ್ ಪಂಡಿತ್, ಉಮಾಶ್ರೀ, ಅಕ್ಷರಾ, ಸಂಜನಾ ಬುರ್ಲಿ, ಮಂಜು ಭಾಷಿಣಿ, ಹಂಸ, ಧನುಷ್, ಸೂರಜ್ ಹೊಳ್ಳ, ಪವನ್ ಕುಮಾರ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ
ಸೀತಾ ರಾಮ
‘ಸೀತಾ ರಾಮ’ ಧಾರಾವಾಹಿ ಕಳೆದ ವಾರವೂ ಎರಡನೇ ಸ್ಥಾನದಲ್ಲಿ ಇತ್ತು. ಈ ವಾರವೂ ಎರಡನೇ ಸ್ಥಾನ ಪಡೆದುಕೊಂಡಿದೆ. ಸಿಹಿ ಮುಖದಲ್ಲಿ ಮೂಡಿದ ನಗು.. ರಾಮನ ಬದುಕಿಗೆ ಹೊಸ ಖುಷಿ ತಂದಿದೆ. ರಾಮ ಹಾಗೂ ಸೀತಾ (ವೈಷ್ಣವಿ-ಗಗನ್) ಮಧ್ಯೆ ಈಗ ತಾನೇ ಆಪ್ತತೆ ಮೂಡುತ್ತಿದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ರೀತು ಸಿಂಗ್ ಹೆಸರಿನ ಬಾಲಕಿ ವೈಷ್ಣವಿ ಗೌಡ ಮಗಳಾಗಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾಳೆ. ಈಕೆಯ ನಟನೆ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಸೀತಾ ರಾಮ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ನಗರ ವಿಭಾಗದಲ್ಲಿ ಈ ಧಾರಾವಾಹಿ ಮೊದಲ ಸ್ಥಾನದಲ್ಲಿದೆ ಅನ್ನೋದು ವಿಶೇಷ.
ಇದನ್ನೂ ಓದಿ: Kannada Serials TRP: ʻಗೀತಾʼ ಧಾರಾವಾಹಿಯ ಓಟ ಶುರು; ಎರಡನೇ ಸ್ಥಾನದಲ್ಲಿ ʻಸೀತಾ ರಾಮʼ!
ಗಟ್ಟಿಮೇಳ
‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿಗಳ ನಗರ ಹಾಗೂ ಗ್ರಾಮೀಣ ಭಾಗದ ಟಿಆರ್ಪಿ ಒಂದೇ ಇದ್ದರೂ ನಗರದ ಟಿಆರ್ಪಿ ಆಧಾರಾದಲ್ಲಿ ‘ಗಟ್ಟಿಮೇಳ’ಕ್ಕೆ ಮೂರನೇ ಸ್ಥಾನ ನೀಡಬಹುದು. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿದ್ದಾರೆ.ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.
ಸತ್ಯ
‘ಸತ್ಯ’ ಧಾರಾವಾಹಿ ಮೊದಲಿನಿಂದಲೂ ಒಳ್ಳೆಯ ಟಿಆರ್ಪಿ ಪಡೆದುಕೊಂಡಿರುವ ಧಾರಾವಾಹಿ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಈ ಸೀರಿಯಲ್ ಎಲ್ಲರ ಗಮನ ಸೆಳೆಯುತ್ತಿದೆ. ಅಷ್ಟೇ ಅಲ್ಲದೇ ಸತ್ಯ ಅತ್ತೆಯ ಮನವೊಲಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಅತ್ತೆ ಕೂಡ ಸತ್ಯಳನ್ನು ಪ್ರೀತಿಸಲು ಶುರು ಮಾಡಿದಂತಿದೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.
ಅಮೃತಧಾರೆ
ಅಮೃತಧಾರೆ ಧಾರಾವಾಹಿಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಗೌತಮ್-ಭೂಮಿಕಾ ಮದುವೆ ನಡೆಯುತ್ತಿದೆ. ಈ ಧಾರಾವಾಹಿ ಈ ಬಾರಿ ಐದನೇ ಸ್ಥಾನ ಅಲಂಕರಿಸಿದೆ. ಮುಂದಿನ ದಿನಗಳಲ್ಲಿ ಧಾರಾವಾಹಿ ಟಿಆರ್ಪಿ ಹೆಚ್ಚುವ ನಿರೀಕ್ಷೆ ಇದೆ.