Site icon Vistara News

Kannada Serials TRP: ಟಾಪ್‌ 5ನಲ್ಲಿ ‘ಭಾಗ್ಯಲಕ್ಷ್ಮೀ’; ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Kannada Serials TRP TOP 5 bhagyalakshmi puttakkana makkalu number 1

ಬೆಂಗಳೂರು: 30ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದೆ. ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಎನ್ನುವುದು ವಿಶೇಷ.ಈ ಧಾರಾವಾಹಿಯ ಸಮಯದಲ್ಲಿ ಬದಲಾವಣೆ ಆಗೋ ಸಾಧ್ಯತೆ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರ ನಟನೆ ಗಮನ ಸೆಳೆದಿದೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ದೇ ಆಗಸ್ಟ್ 12ರಿಂದ ಆರಂಭ ಆಗಲಿದೆ. ಈ ಧಾರಾವಾಹಿ ಸಂಜೆ 7:30ಕ್ಕೆ ಪ್ರಸಾರ ಕಾಣಲಿದೆ. ಇದೇ ಸಮಯದಲ್ಲಿ ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಹೀಗಾಗಿ, ಈ ಧಾರಾವಾಹಿಯ ಸಮಯ ಬದಲಾಗಲಿದೆ.

ಇದನ್ನೂ ಓದಿ: Kannada Serials TRP: ಟಾಪ್‌ 3ಯಲ್ಲಿ ʻಲಕ್ಷ್ಮೀ ನಿವಾಸʼ: ಐದನೇ ಸ್ಥಾನದಲ್ಲಿ ʻಲಕ್ಷ್ಮೀ ಬಾರಮ್ಮʻ ಧಾರಾವಾಹಿ

‘ಲಕ್ಷ್ಮೀ ನಿವಾಸ’

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಜನ ಮೆಚ್ಚುಗೆ ಪಡೆದಿದೆ. ವಿಶೇಷ ಎಂದರೆ ನಗರ ಭಾಗದ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್​ಪಿಯನ್ನು ಹಿಂದಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆಯುತ್ತಿದೆ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

‘ಸೀತಾ ರಾಮ’ ಧಾರಾವಾಹಿ

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈಗಾಗಲೇ ಸೀತಾ ಹಾಗೂ ರಾಮ್ ಮದುವೆ ನೆರವೇರಿದೆ. ಈ ಕಾರಣಕ್ಕೆ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ಮುನ್ನುಗ್ಗುತ್ತಿದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ.

ʻಭಾಗ್ಯಲಕ್ಷ್ಮೀ’

ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಕಲರ್ಸ್ ಕನ್ನಡದ ಧಾರಾವಾಹಿಗಳ ಪೈಕಿ ಸ್ಥಾನ ಪಡೆದ ಏಕೈಕ ಧಾರಾವಾಹಿ ಇದಾಗಿದೆ.

Exit mobile version