ಬೆಂಗಳೂರು: ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ಈ ವಾರ ಈ ವಾರ ʻಪುಟ್ಟಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಕಲರ್ಸ್ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್ 5ನಲ್ಲಿ ಇದೆ.
‘ಪುಟ್ಟಕ್ಕನ ಮಕ್ಕಳು’
ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್ಪಿ ಕುಸಿಯುತ್ತಿತ್ತು. ಪಾಯಿಂಟ್ ಒಂದು ಅಂಕಗಳ ಅಂತರದಲ್ಲಿ ಈ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.
ಲಕ್ಷ್ಮೀ ನಿವಾಸ
ಸಾಯಿ ನಿರ್ಮಲ ಪ್ರೊಡಕ್ಷನ್ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ (Kannada Serials TRP) ತೋರಿಸಲಾಗಿದೆ. ಸದ್ಯ ಜಯಂತ್‌ನ ಅಸಲಿ ಮುಖ ಜಾಹ್ನವಿ ತಿಳಿಯಬೇಕಿದೆ. ಈ ಧಾರಾವಾಹಿ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ಧೂರಿ ಬಜೆಟ್ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.
ಇದನ್ನೂ ಓದಿ: Kannada Serials TRP: ಐಪಿಎಲ್ ಎಫೆಕ್ಟ್: ಯಾವ ಧಾರಾವಾಹಿ ಈ ವಾರ ಟಾಪ್?
ಸೀತಾ ರಾಮ
‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್‌ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.
‘ರಾಮಾಚಾರಿ’
ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಈ ಧಾರಾವಾಹಿಯ ಟಿಆರ್‌ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ಇದು ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.
ಐದನೇ ಸ್ಥಾನದಲ್ಲಿ ಈ ಬಾರಿ ಎರಡು ಧಾರಾವಾಹಿಗಳು ಸ್ಥಾನ ಪಡೆದಿವೆ. ಇತ್ತೀಚೆಗೆ ಆರಂಭ ಆಗಿರುವ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ‘ಅಮೃತಧಾರೆ’ ಧಾರಾವಾಹಿ ಇದೆ. ಎರಡೂ ಧಾರಾವಾಹಿಗಳಿಗೆ ಈ ಬಾರಿ ಐದನೇ ಸ್ಥಾನ ಸಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್ ಮತ್ತು ಬಾಲರಾಜ್ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.