ʻಜೊತೆ ಜೊತೆಯಲಿʼ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ (Megha Shetty) ಆಗಾಗ ರೀಲ್ಸ್ ಮಾಡುವುದರ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಅಷ್ಟೇ ಅಲ್ಲದೇ ಇದೀಗ ಹಲವು ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ.
ನಟಿ ಇತ್ತೀಚೆಗೆ ಬಹುಭಾಷಾ ನಟ ಆರ್. ಮಾಧವನ್ ಅವರನ್ನು ಭೇಟಿ ಮಾಡಿದ್ದಾರೆ. ಆ ಸಂದರ್ಭದಲ್ಲಿ ತೆಗೆದ ಸೆಲ್ಫಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Mahindra Discount Offers: ಎಕ್ಸ್‌ಯುವಿ 700, 400 ಇವಿ ಮತ್ತು ಸ್ಕಾರ್ಪಿಯೋ ಮೇಲೆ ಭರ್ಜರಿ ರಿಯಾಯಿತಿ!
“ಅಂತಹ ಅದ್ಭುತ ನಟನೊಂದಿಗೆ ಚರ್ಚೆ ಮಾಡುತ್ತಾ ಸಮಯ ಕಳೆದೆ. ಒಂದೊಳ್ಳೆಯ ಕಲಿಕೆಯ ಅನುಭವ’ ಎಂದು ಮೇಘಾ ಶೆಟ್ಟಿ ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಾಧವನ್ ಜೊತೆ ಸ್ಮೈಲ್ ಮಾಡಿ ಪೋಸ್ ಕೊಟ್ಟಿದ್ದಾರೆ.
ಸತತ ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿರುವ ಜೋತೆ ಜೊತೆಯಲಿ ಧಾರಾವಾಹಿಯಲ್ಲಿ ಮೇಘಾ ಶೆಟ್ಟಿಯ ಅಭಿನಯಕ್ಕೆ ಫ್ಯಾನ್ಸ್ ಫಿದಾ ಆಗಿದ್ದರು.
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ʻಟ್ರಿಬಲ್ ರೈಡಿಂಗ್ʼ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟರು ಮೇಘಾ ಶೆಟ್ಟಿ. ಧನ್ವೀರ್ ನಟನೆಯ ʻಕೈವʼ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಇತ್ತೀಚೆಗೆ ಮರಾಠಿ ಭಾಷೆಗೂ ಕಾಲಿಟ್ಟಿದ್ದಾರೆ. ‘ಲಂಡನ್ ಕೆಫೆ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ.