ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ʻನನ್ನಮ್ಮ ಸೂಪರ್ ಸ್ಟಾರ್ʼ (Nannamma Super Star) ಮತ್ತೆ ಬರುತ್ತಿದೆ. ಮಕ್ಕಳ ಮುದ್ದು ಮಾತುಗಳು , ಅವರ ಆಟಗಳು ನೋಡುರನ್ನು ರಂಜಿಸುತ್ತಲೇ ಬರುತ್ತಿದೆ. ಎರಡು ಸೀಸನ್ ಪ್ರಸಾರವಾದ ಬಳಿಕ ಈಗ ಮೂರನೇ ಸೀಸನ್ ಶುರುವಾಗುತ್ತಿದೆ. ಸದ್ದಿಲ್ಲದೇ ಕಲರ್ಸ್ ಕನ್ನಡ ಮೂರನೇ ಸೀಸನ್ ಬರುತ್ತಿದೆ ಎಂದು ಪ್ರೋಮೊ ಹಂಚಿಕೊಂಡಿದೆ. ಮೊದಲ ಸೀಸನ್‍ನಲ್ಲಿ ವನ್ಷಿಕಾ ಮತ್ತು ಯಶಸ್ವಿನಿ ಭಾಗವಹಿಸಿದ್ದರು. ವಿಜೇತರಾಗಿ ಹೊರಹೊಮ್ಮಿದ್ದರು. ಎರಡನೇ ಸೀಸನ್‌ನಲ್ಲಿ ಗ್ರಾಮೀಣ ಭಾಗದ ಪ್ರತಿಭೆಗೆ ಅಂದರೆ ಚೈತ್ರಾ ಮತ್ತು ಅವರ ಅವಳಿ ಮಕ್ಕಳು ಚಿರಂತ್-ಚಿನ್ಮಯ್ ವಿಜೇತರಾಗಿದ್ದರು.
ಎರಡನೇ ಸೀಸನ್‌ನಲ್ಲಿ ನಮ್ಮಮ್ಮ ಸೂಪರ್ ಸ್ಟಾರ್ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಅಮ್ಮ ಮಕ್ಕಳ ಜತೆಗೆ ಕಿರುತೆರೆಯ ಚಿನಕುರುಳಿ ಎಂತಲೇ ಖ್ಯಾತಿ ಪಡೆದ ವನ್ಷಿಕಾ ನಿರೂಪಕಿಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಅಷ್ಟೇ ಅಲ್ಲದೇ ಎರಡನೇ ಸೀಸನ್‌ನಲ್ಲಿ ನಮ್ಮಮ್ಮ ಸೂಪರ್ ಸ್ಟಾರ್ ಶೋ ಬಹಳ ವಿಶೇಷವಾಗಿತ್ತು. ಏಕೆಂದರೆ ಶೋನಲ್ಲಿ ಸಾಮಾನ್ಯರಿಗೂ ಅವಕಾಶ ನೀಡಲಾಗಿತ್ತು. `ನನ್ನಮ್ಮ ಸೂಪರ್ ಸ್ಟಾರ್’ ಸೀಸನ್ 2 ಗ್ರ್ಯಾಂಡ್ ಫಿನಾಲೆಗೆ 6 ಜೋಡಿಗಳು ಸೆಲೆಕ್ಟ್ ಆಗಿದ್ದರು. ಅದರಲ್ಲಿ ಎಲ್ಲರನ್ನೂ ಹಿಂದಿಕ್ಕಿ ಚೈತ್ರಾ ನನ್ನಮ್ಮ ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದ್ದರು. ನಟಿ ತಾರಾ, ಅನು ಪ್ರಭಾಕರ್ , ರವಿಚಂದ್ರನ್ ಈ ಶೋನ ನಿರೂಪಕರು, ಅನುಪಮಾ ಗೌಡ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಇದೀಗ ‘ನನ್ನಮ್ಮ ಸೂಪರ್ ಸ್ಟಾರ್’ ಸೀಸನ್- 3ರ ಪ್ರೋಮೊ ಹೊರ ಬಂದಿದೆ. ಕಾರ್ಯಕ್ರಮ ಯಾವಾಗಿನಿಂದ ಪ್ರಸಾರವಾಗುತ್ತದೆ ಎಂಬುದನ್ನು ವಾಹಿನಿ ಬಹಿರಂಗಪಡಿಸಿಲ್ಲ. ಇಷ್ಟರಲ್ಲೇ ‘ನನ್ನಮ್ಮ ಸೂಪರ್ ಸ್ಟಾರ್’ ಶೋ ಮಕ್ಕಳೊಂದಿಗೆ ತಾಯಂದಿರಿರುವ ವೀಕ್ಷಕರನ್ನು ವೀಕೆಂಡ್‌ಗಳಲ್ಲಿ ರಂಜಿಸಲು ಬರುತ್ತಿದ್ದಾರೆ.